ಕಲಬುರಗಿ: ಆಡಳಿತ ಮಂಡಳಿ ಕಿರುಕುಳಕ್ಕೆ ಬೇಸತ್ತು ಎಎಸಿ ಸಿಮೆಂಟ್ ಕಾರ್ಖಾನೆ ಡೆಪ್ಯುಟಿ ಮ್ಯಾನೇಜರ್ ಆತ್ಮಹತ್ಯೆ
ಆಡಳಿತ ಮಂಡಳಿಯವರ ಕಿರುಕುಳಕ್ಕೆ ಬೇಸತ್ತು ಎಎಸಿ ಸಿಮೆಂಟ್ ಕಾರ್ಖಾನೆ (ACC Cement factory) ಡೆಪ್ಯುಟಿ ಮ್ಯಾನೇಜರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನ ಕಲಬುರಗಿಯಲ್ಲಿ ನಡೆದಿದೆ. ಚಿತ್ತಾಪುರ ಮಾಜಿ ಶಾಸಕ ದಿ.ವಾಲ್ಮಿಕಿ ನಾಯಕ್ ಅಳಿಯ ಆತ್ಮಹತ್ಯೆ ಮಾಡಿಕೊಂಡಿದ್ದು, ಸಾವಿಗೂ ಮುನ್ನ ವಿಡಿಯೋ ಮಾಡಿ ಕೆಲವರ ಹೆಸರು ಉಲ್ಲೇಖಿಸಿದ್ದಾರೆ.
ಕಲಬುರಗಿ, (ಡಿಸೆಂಬರ್ 07): ಆಡಳಿತ ಮಂಡಳಿಯವರ ಕಿರುಕುಳಕ್ಕೆ ಬೇಸತ್ತು ಎಎಸಿ ಸಿಮೆಂಟ್ ಕಾರ್ಖಾನೆ (ACC Cement factory) ಡೆಪ್ಯುಟಿ ಮ್ಯಾನೇಜರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಲಬುರಗಿ (Kalaburagi) ಜಿಲ್ಲೆ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದ ಮನೆಯಲ್ಲಿ ನೇಣು ಬಿಗಿದುಕೊಂಡು ರಮೇಶ್ ಪವಾರ್(47) ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತ ರಮೇಶ್, ಚಿತ್ತಾಪುರ ಮಾಜಿ ಶಾಸಕ ದಿ.ವಾಲ್ಮಿಕಿ ನಾಯಕ್ ಅಳಿಯನಾಗಿದ್ದು, ಅದಾನಿ ಗ್ರೂಪ್ ಮಾಲಿಕತ್ವದಲ್ಲಿರುವ ಎಸಿಸಿ ಸಿಮೆಂಟ್ ಕಾರ್ಖಾನೆಯಲ್ಲಿ ಡೆಪ್ಯುಟಿ ಮ್ಯಾನೇಜರ್ ಆಗಿದ್ದರು ಆದ್ರೆ, ಕಾರ್ಖಾನೆ ಆಡಳಿತ ಮಂಡಳಿಯವರ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇದನ್ನೂ ಓದಿ: ಮೈಸೂರು: ಹಾಸ್ಟೆಲ್ನಲ್ಲಿ ಅನುಮಾನಾಸ್ಪದ ಸ್ಥಿತಿಯಲ್ಲಿ ವಿದ್ಯಾರ್ಥಿಯ ಶವ ಪತ್ತೆ
ಮೃತ ರಮೇಶ್ , ಅದಾನಿ ಗ್ರೂಪ್ ಮಾಲಿಕತ್ವದಲ್ಲಿರುವ ಎಸಿಸಿ ಸಿಮೆಂಟ್ ಕಾರ್ಖಾನೆಯಲ್ಲಿ ಡೆಪ್ಯುಟಿ ಮ್ಯಾನೇಜರ್ ಆಗಿದ್ದರು. ಆದ್ರೆ, ಕಾರ್ಖಾನೆ ಆಡಳಿತ ಮಂಡಳಿಯವರ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೂ ಮುನ್ನ ವಿಡಿಯೋ ರೆಕಾರ್ಡ್ ಮಾಡಿದ್ದು, ಕಾರ್ಖಾನೆ ಹಿರಿಯ ಅಧಿಕಾರಿಗಳ ಹೆಸರು ಉಲ್ಲೇಖಿಸಿದ್ದಾರೆ. ಈ ಬಗ್ಗೆ ವಾಡಿ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ