ತಮಿಳುನಾಡಿಗೆ ಬಿಡಲು ನಮ್ಮ ಬಳಿ ನೀರು ಇಲ್ಲ: ಸಿಎಂ ಸಿದ್ದರಾಮಯ್ಯ
ಕಲಬುರಗಿ ನಗರದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸಾಮಾನ್ಯ ವರ್ಷದಲ್ಲಿ 177.25 ಟಿಎಂಸಿ ನೀರು ಕೊಡಬೇಕು. ಈವರೆಗೆ ತಮಿಳುನಾಡಿಗೆ 37.07 ಟಿಎಂಸಿ ನೀರು ಬಿಡಲಾಗಿದೆ. ಬಾಕಿ ತಮಿಳುನಾಡಿಗೆ ಬಿಡಲು ನಮ್ಮ ಬಳಿ ನೀರು ಇಲ್ಲ ಎಂದು ಹೇಳಿದ್ದಾರೆ.
ಕಲಬುರಗಿ, ಸೆಪ್ಟೆಂಬರ್ 17: ಸಾಮಾನ್ಯ ವರ್ಷದಲ್ಲಿ 177.25 ಟಿಎಂಸಿ ನೀರು ಕೊಡಬೇಕು. ಈವರೆಗೆ ತಮಿಳುನಾಡಿಗೆ 37.07 ಟಿಎಂಸಿ ನೀರು ಬಿಡಲಾಗಿದೆ. ಬಾಕಿ ತಮಿಳುನಾಡಿಗೆ ಬಿಡಲು ನಮ್ಮ ಬಳಿ ನೀರು ಇಲ್ಲ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ. ನಗರದಲ್ಲಿ ಆಯೋಜಿಸಿದ್ದಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವಧಿಯಲ್ಲೂ ಸಹ ತಮಿಳುನಾಡಿಗೆ ನೀರು ಬಿಟ್ಟಿದ್ದಾರೆ. CWRC ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೊರೆ ಹೋಗುತ್ತಿದ್ದೇವೆ ಎಂದು ಹೇಳಿದ್ದಾರೆ.
ತಮಿಳುನಾಡಿಗೆ ಕೆಆರ್ಎಸ್ ಡ್ಯಾಮ್ನಿಂದ ನೀರು ಹರಿಸುವ ವಿಚಾರವಾಗಿ ಮಾತನಾಡಿದ್ದು, ಮಳೆಯಿಲ್ಲದೆ ನಮ್ಮ ಡ್ಯಾಮ್ಗಳಲ್ಲಿ ನೀರಿನ ಕೊರತೆ ಇದೆ. ಈ ಸಂಬಂಧ ಸುಪ್ರೀಂಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಲು ನಿರ್ಧಾರ ಮಾಡಲಾಗಿದೆ ಎಂದು ತಿಳಿಸಿದರು.
ಯಡಿಯೂರಪ್ಪ ಯಾವ ನೈತಿಕತೆ ಹೊಂದಿದ್ದಾರೆ
ಯಡಿಯೂರಪ್ಪ ರಾಜ್ಯ ಸರ್ಕಾರದ ವಿರುದ್ಧ ಪಾದಯಾತ್ರೆ ವಿಚಾರಕ್ಕೆ ಪ್ರತಿಕ್ರಿಯಿಸಿದ್ದು, ಐದು ಗ್ಯಾರಂಟಿ ಯೋಜನೆ ಅಭಿವೃದ್ಧಿ ಅಲ್ಲವಾ. ಯಡಿಯೂರಪ್ಪ ಏಳು ಕಿಲೋ ಅಕ್ಕಿಯನ್ನು ಐದು ಕಿಲೋ ಮಾಡಿದ್ದು ಇದೇ ಯಡಿಯೂರಪ್ಪ. ಐದು ಗ್ಯಾರಂಟಿ ಕೊಟ್ಟಿದ್ದೇವೆ ಅಂತ ಪರವಾಗಿ ಪಾದಯಾತ್ರೆ ಮಾಡುತ್ತಿದ್ದಾರೆ. ಯಡಿಯೂರಪ್ಪ ಯಾವ ನೈತಿಕತೆ ಹೊಂದಿದ್ದಾರೆ ಎಂದು ಪ್ರಶ್ನಿಸಿದರು.
ಇದನ್ನೂ ಓದಿ: ಕೊಪ್ಪಳ: ವಂಚಕರಿಗೆ ಅಡ್ಡೆಯಾಗಿದ್ದ ಬೆಂಗಳೂರಿನ ಪ್ರತಿಷ್ಠಿತ ಹೊಟೇಲ್, ಸಿಸಿಬಿ ತನಿಖೆಗೆ ಒತ್ತಾಯಿಸಿದ ಸಚಿವ ತಂಗಡಗಿ
ಮೂವರು ಡಿಸಿಎಂ ವಿಚಾರವಾಗಿ ಪ್ರತಿಕ್ರಿಯಿಸಿ, ಅದನ್ನು ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಅವರು ಯಾವ ನಿರ್ಧಾರ ಮಾಡುತ್ತಾರೆ ಅದನ್ನು ನಾನು ಪಾಲಿಸುತ್ತೇನೆ ಎಂದು ಹೇಳಿದ್ದಾರೆ. ಕೃಷ್ಣಾ ಮೇಲ್ದಂಡೆ ಯೋಜನೆ ಕೇಸ್ ಕೋರ್ಟ್ನಲ್ಲಿದೆ. ಗೆಜೆಟ್ ನೋಟಿಪಿಕೇಶನ್ ಇಲ್ಲದೆ ನಾವು ಯೋಜನೆ ಜಾರಿ ಮಾಡುವುದು ಹೇಗೆ. ನೀರಾವರಿ ಯೋಜನೆಗಳ ಬಗ್ಗೆ ಚರ್ಚೆ ಮಾಡಲು ಕೇಂದ್ರಕ್ಕೆ ನಿಯೋಗ ಹೋಗಲು ಕೇಂದ್ರಕ್ಕೆ ಸಮಯ ಕೇಳಿದ್ದೇವೆ. ಆದರೆ ಇನ್ನು ಸಮಯ ಕೊಟ್ಟಿಲ್ಲ ಎಂದರು.
ಧರ್ಮದಲ್ಲಿ ಕರುಣೆ, ದಯೆ, ಮನುಷ್ಯತ್ವ ಇರಬೇಕು
ಇಂಡಿಯಾ ಒಕ್ಕೂಟ ಯಾವ ಧರ್ಮದ ವಿರುದ್ಧ ಇಲ್ಲಾ. ಎಲ್ಲಾ ಧರ್ಮಗಳನ್ನು ಸಮಾನನಾಗಿ ಕಾಣಲಾಗುತ್ತದೆ. ಧರ್ಮ ಮನುಷ್ಯನ ಒಳತಿಗಾಗಿ ಇರುವುದು. ಧರ್ಮದಲ್ಲಿ ಕರುಣೆ, ದಯೆ, ಮನುಷ್ಯತ್ವ ಇರಬೇಕು. ಕಲ್ಯಾಣ ಕರ್ನಾಟಕ ಭಾಗದಲ್ಲಿರುವ ಖಾಲಿ ಹುದ್ದೆಗಳನ್ನು ಹಂತಹಂತವಾಗಿ ತುಂಬುತ್ತೇವೆ. ರಾಜ್ಯದಲ್ಲಿ ಬಿಜೆಪಿಯವರು ಸರ್ಕಾರದ ಸಮಯದಲ್ಲಿ ಎಂಟು ವಿವಿಗಳ ಆರಂಭ ವಿಚಾರವಾಗಿ ಮಾತನಾಡಿ ಅದು ಜನಪರ ನಿರ್ಣಯ ಅಲ್ಲಾ. ಇರುವ ವಿವಿಗಳಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ಆಗಲ್ಲಾ ಎಂದು ಹೇಳಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.