AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಡಹಗಲೇ ಕತ್ತು ಕೊಯ್ದು ಪತ್ನಿಯನ್ನ ಹತ್ಯೆಗೈದ ಪತಿ: ಬಳಿಕ ಕಾರು ಹಾಯಿಸಿ ವಿಕೃತಿ

ವ್ಯಕ್ತಿಯೋರ್ವ ಹಾಡಹಗಲೇ ಪತ್ನಿಯ ಕತ್ತು ಕೊಯ್ದು ಬಳಿಕ ಕಾರು ಹಾಯಿಸಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಕಾರಿನಲ್ಲಿ ಕರೆದುಕೊಂಡು ಬಂದು ನಡು ರಸ್ತೆಯಲ್ಲೇ ಪತ್ನಿಯ ಕತ್ತು ಕೊಯ್ದಿದ್ದಾನೆ. ಬಳಿಕ ರಕ್ತಸಿಕ್ತದಲ್ಲಿ ತಪ್ಪಿಸಿಕೊಂಡು ಜಮೀನಿನಲ್ಲಿ ಓಡುತ್ತಿದ್ದ ಪತ್ನಿಗೆ ಕಾರಿನಿಂದ ಗುದ್ದಿ ಮೇಲೆ ಹಾಯಿಸಿ ಕೊಂದು ವಿಕೃತಿ ಮೆರೆದಿದ್ದಾನೆ. ಅಷ್ಟಕ್ಕೂ ಈ ರೀತಿ ವಿಕೃತವಾಗಿ ಸಾಯಿಸುವಷ್ಟು ಆಗಿದ್ದೇನು? ಎನ್ನುವ ವಿವರ ಇಲ್ಲಿದೆ.

ಹಾಡಹಗಲೇ ಕತ್ತು ಕೊಯ್ದು ಪತ್ನಿಯನ್ನ ಹತ್ಯೆಗೈದ ಪತಿ: ಬಳಿಕ ಕಾರು ಹಾಯಿಸಿ ವಿಕೃತಿ
Afzalpur Murder
ದತ್ತಾತ್ರೇಯ ಪಾಟೀಲ್​
| Edited By: |

Updated on:Mar 26, 2026 | 6:10 PM

Share

ಕಲಬುರಗಿ, (ಮಾರ್ಚ್ 26): ವ್ಯಕ್ತಿಯೋರ್ವ, ಪತ್ನಿಯ ಕತ್ತು ಕೊಯ್ದು ಬಳಿಕ ಆಕೆ ಮೇಲೆ ಕಾರು ಹಾಯಿಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕಲಬುರಗಿ (Kalaburagi) ಜಿಲ್ಲೆಯ ಅಫಜಲಪುರ (Afzalpur) ತಾಲೂಕಿನ ಬಳೂರಗಿ ಗ್ರಾಮದ ಬಳಿ ನಡೆದಿದೆ. ಶೈಲಾ (28), ಪತಿಯಿಂದಲೇ ಬರ್ಬರವಾಗಿ ಹತ್ಯೆಯಾದ ಮಹಿಳೆ. ಅಕ್ಷಯ್‌ ಕೊಲೆ ಮಾಡಿದ ಆರೋಪಿ.  ಶೈಲಾಳನ್ನ ಕಾರಿನಲ್ಲಿ ಕರೆತಂದು ರಸ್ತೆ ಪಕ್ಕದಲ್ಲಿರುವ ಹೊಲದಲ್ಲಿ ನಿಲ್ಲಿಸಿ ಕುಡುಗೋಲಿನಿಂದ ಆಕೆಯ ಕತ್ತನ್ನು ಕೂಯ್ದಿದ್ದಾನೆ. ಬಳಿಕ ರಕ್ತದ ಮಡುವಿನಲ್ಲಿ ತಪ್ಪಿಸಿಕೊಳ್ಳಲು ಜಮೀನನಲ್ಲಿ ಓಡಿ ಹೋಗಿದ್ದಾಳೆ. ಆದರೂ ಬಿಡಿದ ಪಾಪಿ ಪತಿ ಆಕೆ ಮೇಲೆ ಕಾರು ಹಾಯಿಸಿ ಭೀಕರವಾಗಿ ಕೊಂದಿದ್ದಾನೆ. ಪತಿಯ ಪೈಶಾಚಿಕ ಕೃತ್ಯವು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಎದೆ ಝಲ್ ಎನ್ನಿಸುವಂತಿದೆ.

ಅನೈತಿಕ ಸಂಬಂಧವೇ ಕೊಲೆಗೆ ಕಾರಣನಾ?

ಅಕ್ಷಯ್​, ಶೈಲಾ ಮಹಾರಾಷ್ಟ್ರ ಮೂಲದವರಾಗಿದ್ದಾರೆ. ಪತ್ನಿಯ ಅನೈತಿಕ ಸಂಬಂಧಕ್ಕೆ ರೊಚ್ಚಿಗೆದ್ದು ಅಕ್ಷಯ್, ಶೈಲಾಳನ್ನ ಕೊಲೆ ಮಾಡಲು ಪಕ್ಕಾ ಪ್ಲ್ಯಾನ್ ಮಾಡಿದ್ದ. ಅದರಂತೆ ಗಾಣಗಾಪುರಕ್ಕೆ ಹೋಗೊಣ ಬಾ ಅಂತ ತಂದೆ ತಾಯಿ ಸಮೇತ ಪತ್ನಿಯನ್ನು ಕರೆದುಕೊಂಡು ಹೋಗಿದ್ದಾನೆ. ಬಳಿಕ ಮಾರ್ಗ ಮಧ್ಯೆ ಕಾರು ನಿಲ್ಲಿಸಿ ಪತ್ನಿಯನ್ನು ಹೊರಗೆ ಎಳೆದು ತನ್ನ ತಂದೆ ತಾಯಿ ಸಮ್ಮುಖದಲ್ಲೇ ಆಕೆಯ ಕುತ್ತಿಗೆಯನ್ನು ಕೊಯ್ದಿದ್ದಾನೆ. ಬಳಿಕ ಶೈಲಾ ಪ್ರಾಣ ಉಳಿಸಿಕೊಳ್ಳಲು ರಕ್ತಸಿಕ್ತದಲ್ಲೇ ಜಮೀನಿನಲ್ಲಿ ಓಡಿ ಹೋಗಿದ್ದಾಲೆ. ಆದರೂ ಬಿಡಿದ ಹಂತಕ ಪತಿ ಕಾರಿನಿಂದ ಗುದ್ದಿ ಬಳಿಕ ಆಕೆಯ ಮೇಲೆ ಹಾಯಿಸಿ ಕೊಂದಿದ್ದಾನೆ.

ಇದನ್ನೂ ಓದಿ: ಅಕ್ರಮ ಸಂಬಂಧ ಪ್ರಶ್ನಿಸಲು ಬಂದ ಅಕ್ಕ, ತಮ್ಮನ ಕೊಲೆ: 16 ವರ್ಷದ ಬಾಲಕನಿಂದ ಕೃತ್ಯ

ಕೊಲೆ ಮಾಡುವ ದೃಶ್ಯ ಮೊಬೈಲ್​ನಲ್ಲಿ ಸೆರೆ

ಮಹಿಳೆಯನ್ನ ಕೊಲೆ ಮಾಡುವ ದೃಶ್ಯ ಮೊಬೈಲ್​ನಲ್ಲಿ ಸೆರೆಯಾಗಿದೆ. ಹತ್ಯೆಗೈಯ್ಯುತ್ತಿರುವ ಘೋರ ದೃಶ್ಯವನ್ನು ಜನ ನೋಡುತ್ತಲೇ ನಿಂತಿದ್ದರು. ಆದರೆ ಆಕೆಯನ್ನು ಕಾಪಾಡದ ಸ್ಥಿತಿಯಲ್ಲಿ ಎಲ್ಲರೂ ಗಾಬರಿಯಾಗಿದ್ದರು. ಇನ್ನು ಕೆಲವರು ಹಂತಕನ ಮೇಲೆ ಕಲ್ಲುಗಳನ್ನ ಎಸೆದು ಆಕೆಯ ಪ್ರಾಣವನ್ನು ಉಳಿಸುವ ಪ್ರಯತ್ನಿಸಿದ್ದಾರೆ. ಆದ್ರೆ, ಪ್ರಯೋಜನವಾಗಿಲ್ಲ. ಕೊಲೆಯ ದೃಶ್ಯ ಸ್ಥಳೀಯರೊಬ್ಬರ ಮೊಬೈಲ್‌ನಲ್ಲಿ ಸೆರೆಯಾಗಿದ್ದು, ಎದೆ ಝಲ್ ಎನ್ನಿಸುವಂತಿದೆ.

ಸ್ಥಳಕ್ಕೆ ಕಲಬುರಗಿ ಎಸ್​ಪಿ ಅಡ್ಡೂರು ಶ್ರೀನಿವಾಸುಲು ಭೇಟಿ, ಪರಿಶೀಲನೆ ನಡೆಸಿದ್ದು, ಸದ್ಯ ಶೈಲಾ ಪತಿ ಹಂತಕ ಅಕ್ಷಯ್ ಹಾಗೂ ಆತನ ತಂದೆ ತಾಯಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಸಂಬಂಧ ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಲಬುರಗಿ ಎಸ್ಪಿ ಹೇಳಿದ್ದೇನು?

ಈ ಬಗ್ಗೆ ಕಲಬುರಗಿ ಎಸ್ಪಿ ಅಡ್ಡೂರು ಶ್ರೀನಿವಾಸಲು ಪ್ರತಿಕ್ರಿಯಿಸಿದ್ದು, ಇಂದು (ಮಾರ್ಚ್ 26) ಬೆಳಿಗ್ಗೆ 11 ಗಂಟೆ ಸುಮಾರಿಗೆ ಕೊಲೆ ನಡೆದಿದೆ. ಕೊಲೆ ಮಾಡೋದನ್ನ ಸ್ಥಳೀಯರು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ. ಗಾಣಗಾಪುರಕ್ಕೆ ಹೋಗೊಣ ಅಂತ ಒತ್ನಿಯನ್ನ ಕರೆತಂದಿದ್ದಾರೆ. ಅಲ್ಲಿಗೆ ಹೋಗುವ ಮಾರ್ಗ ಮಧ್ಯ ಕೊಲೆ ಮಾಡಿದ್ದಾರೆ. ಸದ್ಯ ಮೂವರನ್ನ ವಶಕ್ಕೆ ಪಡೆದಿದ್ದೆವೆ. ಮೂವರು ಮಹಾರಷ್ಟ್ರದ ಬಾರಮತಿ ಜಿಲ್ಲೆಯವರು. ಮದುವೆಯಾಗಿ ನಾಲ್ಕು ವರ್ಷ ಆಗಿತ್ತು. ಪತ್ನಿಯ ಅನೈತಿಕ ಸಂಬಂಧದ ಬಗ್ಗೆಯೂ ಮಾಹಿತಿ ಕಲೆ ಹಾಕುತ್ತಿದ್ದೆವೆ‌ ಎಂದು ಹೇಳಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:11 pm, Thu, 26 March 26

Follow Us
ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ
ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್