ಕಲಬುರಗಿ ಪಾಲಿಕೆ ಆಯುಕ್ತರ ವಿರುದ್ಧ ವಂಚನೆ ಆರೋಪ; ಸಾಮಾಜಿಕ ಜಾಲತಾಣದ ಮೂಲಕ ಯುವತಿಯಿಂದ ಸಿಎಂಗೆ ದೂರು

| Updated By: preethi shettigar

Updated on: Nov 27, 2021 | 10:33 AM

ಸಾಮಾಜಿಕ ಜಾಲತಾಣದ ಮೂಲಕ ಯುವತಿ, ಪಾಲಿಕೆ ಆಯುಕ್ತ ಸ್ನೇಹಲ್ ಲೋಖಂಡೆ ವಿರುದ್ಧ ಸಿಎಂ ಬಸವರಾಜ ಬೊಮ್ಮಾಯಿಗೆ ದೂರು ನೀಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಯುವತಿಯ ಪತ್ರ ಸದ್ಯ ವೈರಲ್ ಆಗಿದೆ.

ಕಲಬುರಗಿ ಪಾಲಿಕೆ ಆಯುಕ್ತರ ವಿರುದ್ಧ ವಂಚನೆ ಆರೋಪ; ಸಾಮಾಜಿಕ ಜಾಲತಾಣದ ಮೂಲಕ ಯುವತಿಯಿಂದ ಸಿಎಂಗೆ ದೂರು
ಪಾಲಿಕೆ ಆಯುಕ್ತ ಸ್ನೇಹಲ್ ಲೋಖಂಡೆ
Follow us on

ಕಲಬುರಗಿ: ಮದುವೆಯಾಗುವುದಾಗಿ ಹೇಳಿ ವಂಚಿಸಿದ್ದಾರೆ ಎಂದು ಕಲಬುರಗಿ ಪಾಲಿಕೆ ಆಯುಕ್ತರ ವಿರುದ್ಧ ಯುವತಿ ದೂರು ನೀಡಿದ್ದಾರೆ. ಸಾಮಾಜಿಕ ಜಾಲತಾಣದ (Social media) ಮೂಲಕ ಯುವತಿ, ಪಾಲಿಕೆ ಆಯುಕ್ತ ಸ್ನೇಹಲ್ ಲೋಖಂಡೆ ವಿರುದ್ಧ ಸಿಎಂ ಬಸವರಾಜ ಬೊಮ್ಮಾಯಿಗೆ ದೂರು ನೀಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಯುವತಿಯ ಪತ್ರ ಸದ್ಯ ವೈರಲ್ ಆಗಿದೆ. ಆದರೆ ಈ ಬಗ್ಗೆ ಅಧಿಕೃತವಾಗಿ ಯಾವುದೇ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿಲ್ಲ.

ಕಲಬುರಗಿ ಪಾಲಿಕೆ ಆಯುಕ್ತರ ವಿರುದ್ಧ ವಂಚನೆ ಆರೋಪ; ತಮ್ಮ ವಿರುದ್ಧದ ಆರೋಪಕ್ಕೆ ಸ್ನೇಹಲ್ ಲೋಖಂಡೆ ಸ್ಪಷ್ಟನೆ
ನನ್ನ ವಿರುದ್ಧ ಆರೋಪಿಸಿರುವ ಯುವತಿ ಯಾರೆಂದು ಗೊತ್ತಿಲ್ಲ. ಈ ಬಗ್ಗೆ ಪೊಲೀಸರಿಗೂ ನಾನು ದೂರು ನೀಡಿದ್ದೇನೆ. ನನ್ನ ಹೆಸರು ಕೆಡಿಸುವುದಕ್ಕೆ ಈ ರೀತಿಯಾಗಿ ಮಾಡುತ್ತಿದ್ದಾರೆ. ಆ ಯುವತಿ ಜತೆ ನಾನು ಯಾವುದೇ ಚಾಟಿಂಗ್ ಮಾಡಿಲ್ಲ. ಮಾನನಷ್ಟ ಮೊಕದ್ದಮೆ ಹಾಕುತ್ತೇನೆ. ಫೋಟೋ ಚಾಟಿಂಗ್ ಬಗ್ಗೆಯೂ ನನಗೆ ಗೊತ್ತಿಲ್ಲ. ಆ ಫೋಟೋಗಳು ಎಲ್ಲಿಂದ ತೆಗೆದುಕೊಂಡರೆಂದು ಗೊತ್ತಿಲ್ಲ. ವಾಟ್ಸಾಪ್ ಚಾಟಿಂಗ್ ಸಂಪೂರ್ಣ ಸುಳ್ಳು ಎಂದು ಟಿವಿ9ಗೆ ಕಲಬುರಗಿ ಪಾಲಿಕೆ ಆಯುಕ್ತ ಸ್ನೇಹಲ್ ಲೋಖಂಡೆ ಹೇಳಿಕೆ ನೀಡಿದ್ದಾರೆ.

ದೆಹಲಿ ಮೂಲದ ಯುವತಿ ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದಾಳೆ. ಈವರೆಗೆ ನನಗೆ ಯಾವುದೇ ರೀತಿ ಬ್ಲ್ಯಾಕ್‌ಮೇಲ್ ಮಾಡಿಲ್ಲ. ಆದರೆ ಆ ಯುವತಿ ನನಗೆ ಬೆದರಿಸಲು ಈ ರೀತಿ ತಂತ್ರ ಮಾಡಿದ್ದಾಳೆ. ಆ ಯುವತಿ ಟ್ವೀಟ್ ಸಂಬಂಧ ನಾನು ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದೇನೆ. ವಾಟ್ಸಾಪ್, ಟ್ವಿಟರ್‌ಗೂ ನಾನು ರಿಪೋರ್ಟ್ ಮಾಡಿದ್ದೇನೆ ಎಂದು ಟಿವಿ9ಗೆ ಕಲಬುರಗಿ ಪಾಲಿಕೆ ಆಯುಕ್ತ ಸ್ನೇಹಲ್ ತಿಳಿಸಿದ್ದಾರೆ.

ಎರಡ್ಮೂರು ದಿನದ ಹಿಂದೆ ದೆಹಲಿ ಮೂಲದ ಯುವತಿ ಪೊಷಕರ ಜೊತೆ ಕಚೇರಿಗೆ ಬಂದಿದ್ದಳು. ಪಾಲಿಕೆ ಆಯುಕ್ತ ಸ್ನೇಹಲ್ ತನಗೆ ಪರಿಚಯ ಇದ್ದಾರೆ. ಮದುವೆಯಾಗೋದಗಿ ಹೇಳಿ ಮೋಸ ಮಾಡಿದ್ದಾರೆ ಎಂದು ಹೇಳಿದ್ದರು. ಯುವತಿ ಮತ್ತು ಯುವತಿ ಹೆತ್ತವರು ಯಾವುದೇ ಲಿಖಿತ ದೂರು ನೀಡಿಲ್ಲಾ. ದೆಹಲಿಯಲ್ಲಿ ಭೇಟಿ ಮಾಡಿದ್ದರಿಂದ ದೆಹಲಿಯಲ್ಲಿ ದೂರು ನೀಡಲು ಯುವತಿಗೆ ಹೇಳಲಾಗಿತ್ತು. ಈ ಕುರಿತು ಪಾಲಿಕೆ ಆಯುಕ್ತ ಸ್ನೇಹಲ್ ಲೋಖಂಡೆ ನಿನ್ನೆ ದೂರು ನೀಡಿದ್ದಾರೆ. ಆ ಬಗ್ಗೆ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  ಸಾಮಾಜಿಕ ಜಾಲತಾಣದಲ್ಲಿ ತನ್ನ ಹೆಸರು ಹಾಳು ಮಾಡುತ್ತಿದ್ದಾಳೆ ಎಂದು ದೂರು ನೀಡಿದ್ದಾರೆ. ನಾವು ಯಾವುದೇ ಲಾಭಿಗೆ ಮಣಿದಿಲ್ಲಾ. ಕಾಂಪ್ರಮೈಸ್ ಮಾಡಿಕೊಳ್ಳುವಂತೆ ಕೂಡಾ ಹೇಳಿಲ್ಲ ಎಂದು ಕಲಬುರಗಿ ನಗರ ಪೊಲೀಸ್ ಆಯುಕ್ತ ವೈ. ಎನ್. ರವಿಕುಮಾರ್ ಹೇಳಿಕೆ ನೀಡಿದ್ದಾರೆ.

ವಾರದ ಹಿಂದೆಯೇ ಜಿಲ್ಲಾಧಿಕಾರಿ ಭೇಟಿ ಮಾಡಿದ್ದ ಯುವತಿ
ವಾರದ ಹಿಂದೆಯೇ ಜಿಲ್ಲಾಧಿಕಾರಿ ವಿ. ವಿ. ಜೋತ್ಸ್ನಾರನ್ನು ಕುಟುಂಬ ಸಮೇತವಾಗಿ ಆಗಮಿಸಿ, ಭೇಟಿ ಮಾಡಿ ಯುವತಿ ತನ್ನ ಅಳಲು ತೋಡಿಕೊಂಡಿದ್ದರು. ಆದರೆ ಯಾರು ಸ್ಪಂಧಿಸಿಲ್ಲ. ಯಾರನ್ನು ಭೇಟಿಯಾದರು ನನಗೆ ನ್ಯಾಯ ಸಿಕ್ಕಿಲ್ಲ. ಎಲ್ಲರೂ ಕಾಂಪ್ರಮೈಸ್ ಮಾಡಿಕೊಳ್ಳಲು ಹೇಳಿದ್ದಾರೆ ಎಂದು ಯುವತಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ:
ಪ್ರೀತಿಸಿ ಮದುವೆಯಾಗಿ ಮೋಸ: ಎಲ್ಲೂ ನ್ಯಾಯ ಸಿಗದ ಹಿನ್ನೆಲೆ; ಹೋರಾಟದಿಂದ ಹಿಂದೆ ಸರಿಯಲು ನಿರ್ಧರಿಸಿದ ಆಸಿಯಾ

ಮ್ಯಾಟ್ರಿಮೋನಿಯಲ್ಲಿ ಮದುವೆಯಾಗುವುದಾಗಿ ನಂಬಿಸಿ ವಂಚನೆ; ಬೆಂಗಳೂರಿನಲ್ಲಿ ಆರೋಪಿ ಸೆರೆ

Published On - 8:48 am, Sat, 27 November 21