ಆಸ್ಪತ್ರೆ ಹೊರಗೆ ಮಗುವಿಗೆ ಜನ್ಮ, ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ

ಆಸ್ಪತ್ರೆ ಹೊರಗೆ ಮಗುವಿಗೆ ಜನ್ಮ, ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ

ಕಲಬುರಗಿ: ಆಸ್ಪತ್ರೆಯ ಎದುರೇ ಗರ್ಭಿಣಿ ಮಗುವಿಗೆ ಜನ್ಮ ನೀಡಿರುವ ಘಟನೆ ಕಲಬುರಗಿಯ ಜಿಮ್ಸ್‌ ಆಸ್ಪತ್ರೆ ಬಳಿ ನಡೆದಿದೆ. ಇಂದು ಬೆಳಗ್ಗೆ ಗರ್ಭಿಣಿ ಚೆನ್ನಮ್ಮ ಹೊಟ್ಟೆ ನೋವು ಎಂದು ಜಿಮ್ಸ್‌ ಆಸ್ಪತ್ರೆಗೆ ಬಂದಿದ್ದಾರೆ. ಆದರೆ ಸಿಬ್ಬಂದಿ ಆಸ್ಪತ್ರೆಗೆ ದಾಖಲಿಸಿಕೊಳ್ಳಲು ಮೀನಮೇಷ ಎಣಿಸಿದ್ದಾರೆ. ಹೆರಿಗೆ ನೋವಿನಿಂದ ಬಳಲ್ತಿದ್ರೂ ಚಿಕಿತ್ಸೆ ನೀಡಲು ನಿರ್ಲಕ್ಷಿಸಿದ್ದಾರೆ. ಆಸ್ಪತ್ರೆ ಸಿಬ್ಬಂದಿ ಅಮಾನವೀಯ ವರ್ತನೆ ಬೆಳಕಿಗೆ ಬಂದಿದೆ.

ಜೇವರ್ಗಿ ತಾಲೂಕಿನ ತುಂಬು ಗರ್ಭಿಣಿ ಚೆನ್ನಮ್ಮನನ್ನು ಆಸ್ಪತ್ರೆ ದಾಖಲಿಸಿಕೊಳ್ಳದ ಕಾರಣ ಆಸ್ಪತ್ರೆ ಎದುರೇ ಮಗುವಿಗೆ ಜನ್ಮ ನೀಡಿದ್ದಾಳೆ. ನಂತರ ಆಸ್ಪತ್ರೆ ಸಿಬ್ಬಂದಿ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎಚ್ಚೆತ್ತುಕೊಂಡ ಸಿಬ್ಬಂದಿ ಬಳಿಕ ಚೆನ್ನಮ್ಮನನ್ನು ಆಸ್ಪತ್ರೆಗೆ ದಾಖಲಿಸಿಕೊಂಡು ಚಿಕಿತ್ಸೆ ನೀಡುತ್ತಿದ್ದಾರೆ.

Click on your DTH Provider to Add TV9 Kannada