ಪ್ರೀತಿ ವಿರೋಧಿಸಿ ಯುವತಿ ತಂದೆಯಿಂದ ಯುವಕನ ಮೇಲೆ ಹಲ್ಲೆ; ಮನನೊಂದ ಯುವಕ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ

ಅಂತರ್ಜಾತಿ ಪ್ರೀತಿ ವಿರೋಧಿಸಿ ಯುವತಿ ತಂದೆಯಿಂದ ಯುವಕನ ಮೇಲೆ ಹಲ್ಲೆ ಮಾಡಿದ್ದು, ಮನನೊಂದ ಯುವಕ ಆತ್ಮಹತ್ಯೆಗೆ ಶರಣಗಾಗಿರುವ ಘಟನೆ ಕಲಬುರಗಿ ತಾಲೂಕಿನ ಹೊನ್ನಕಿರಣಗಿ ಗ್ರಾಮದ ಮನೆಯಲ್ಲಿ ನಡೆದಿದೆ. ನೇಣುಬಿಗಿದುಕೊಂಡು ಗುರುಲಿಂಗಪ್ಪ ಮುಗಟಿ(26) ಆತ್ಮಹತ್ಯೆ ಮಾಡಿಕೊಂಡ ರ್ದುದೈವಿ.

ಪ್ರೀತಿ ವಿರೋಧಿಸಿ ಯುವತಿ ತಂದೆಯಿಂದ ಯುವಕನ ಮೇಲೆ ಹಲ್ಲೆ; ಮನನೊಂದ ಯುವಕ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ
ಮೃತ ವ್ಯಕ್ತಿ
Follow us
ಕಿರಣ್ ಹನುಮಂತ್​ ಮಾದಾರ್
|

Updated on: Jun 25, 2023 | 2:05 PM

ಕಲಬುರಗಿ: ಅಂತರ್ಜಾತಿ ಪ್ರೀತಿ(Love) ವಿರೋಧಿಸಿ ಯುವತಿ ತಂದೆಯಿಂದ ಯುವಕನ ಮೇಲೆ ಹಲ್ಲೆ ಮಾಡಿದ್ದು, ಮನನೊಂದ ಯುವಕ ಆತ್ಮಹತ್ಯೆಗೆ ಶರಣಗಾಗಿರುವ ಘಟನೆ ಕಲಬುರಗಿ(Kalaburagi) ತಾಲೂಕಿನ ಹೊನ್ನಕಿರಣಗಿ ಗ್ರಾಮದ ಮನೆಯಲ್ಲಿ ನಡೆದಿದೆ. ನೇಣುಬಿಗಿದುಕೊಂಡು ಗುರುಲಿಂಗಪ್ಪ ಮುಗಟಿ(26) ಆತ್ಮಹತ್ಯೆ ಮಾಡಿಕೊಂಡ ರ್ದುದೈವಿ. ಮೃತ ವ್ಯಕ್ತಿ ನೆರೆಮನೆಯ ಯುವತಿಯನ್ನ ಪ್ರೀತಿಸುತ್ತಿದ್ದ. ಈ ವಿಚಾರ ಆಕೆಯ ತಂದೆಗೆ ಗೊತ್ತಾಗಿ, ಮಗಳ ತಂಟೆಗೆ ಬರದಂತೆ ಎಚ್ಚರಿಕೆ ಕೂಡ ನೀಡಿದ್ದ. ಇದಾದ ಬಳಿಕ ಮೃತ ಗುರುಲಿಂಗಪ್ಪ ಊರುಬಿಟ್ಟು ಬೆಂಗಳೂರು ಸೇರಿದ್ದ. ನಂತರ ಆತನಿಗೆ ಕರೆ ಮಾಡಿದ ಯುವತಿ ಕಲಬುರಗಿಗೆ ಬರುವಂತೆ ಹೇಳಿದ್ದಾಳೆ. ಊರಿಗೆ ಬರುತ್ತಿದ್ದಂತೆ ಗುರುಲಿಂಗಪ್ಪ ಮತ್ತು ಆತನ ಸೋದರನ ಮೇಲೆ ಕಲ್ಲು, ಕಬ್ಬಿಣದ ರಾಡ್​ನಿಂದ ಯುವತಿ ತಂದೆ ಹಲ್ಲೆ ಮಾಡಿದ್ದ. ಬಳಿಕ ಕೂಡಿ ಹಾಕಿದ್ದರು. ಇದೇ ಕಾರಣಕ್ಕೆ ಮನನೊಂದು ಯುವಕ ಇದೀಗ ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಕುರಿತು ಫರಹತಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮನೆಗಳ್ಳತನ ಮಾಡುತ್ತಿದ್ದ ಮೂವರು ಆರೋಪಿಗಳ ಬಂಧನ; 27 ಲಕ್ಷ ರೂ ಮೌಲ್ಯದ ಚಿನ್ನಾಭರಣ ವಶಕ್ಕೆ

ರಾಮನಗರ: ಮನೆಗಳ್ಳತನ ಮಾಡುತ್ತಿದ್ದ ಮೂವರು ಆರೋಪಿಗಳನ್ನ ಮಾಗಡಿ ಠಾಣೆ ಪೊಲೀಸರ ಬಂಧಿಸಿದ್ದಾರೆ. ಮಂಜುನಾಥ್, ಗಣೇಶ್, ಸಂದೀಪ್ ಬಂಧಿತ ಆರೋಪಿಗಳು. ಇವರಿಂದ ಬರೊಬ್ಬರಿ 27 ಲಕ್ಷ ರೂ ಮೌಲ್ಯದ ಚಿನ್ನಾಭರಣ ಹಾಗೂ ಬೆಳ್ಳಿ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಈ ವೇಳೆ ಬೆಂಗಳೂರು, ರಾಮನಗರ, ಮಂಡ್ಯ, ಚಾಮರಾಜನಗರ ಜಿಲ್ಲೆಗಳಲ್ಲಿ ಕಳ್ಳತನ‌ ಮಾಡಿದ್ದಾಗಿ ಒಪ್ಪಿಕೊಂಡಿದ್ದಾರೆ.

ಇದನ್ನೂ ಓದಿ:Viral News: ಫಸ್ಟ್​​​ ನೈಟ್​​​ ನಡೆಯುವುದಕ್ಕೂ ಮುನ್ನ, ಶೋಭನದ ಕೋಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಯುವಕ

ಶಾಲೆ ಕಾಲೇಜುಗಳಲ್ಲಿ ಕಳ್ಳತನ ಮಾಡುತ್ತಿದ್ದ ಇಬ್ಬರ ಬಂಧನ

ದಾವಣಗೆರೆ: ಜಿಲ್ಲೆಯ ಹೊನ್ನಾಳಿ ತಾಲೂಕಿನ ಕುಂದೂರ ಕೂಲಂಬಿ ಸರ್ಕಾರಿ ಪಿಯುಸಿ ಕಾಲೇಜಿನಲ್ಲಿ ಕಳ್ಳತ‌ನ ಮಾಡಿದ್ದ ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ. ಕುಂದೂರ ಆಂಜನೇಯ ಟಿ (30) ಹಾಗೂ ಎನ್ ಎಚ್ ಆಕಾಶ ಬಂಧಿತರು. ಇನ್ನು ಈ ಆರೋಪಿಗಳು ಕಾಲೇಜಿನ ಗಣಕ ಯಂತ್ರ ಕೊಠಡಿಯ ಬಾಗಿಲು ಮುರಿದು ಯುಪಿಎಸ್, ಲ್ಯಾಪ್ ಟಾಪ್, ಪ್ರಾಜೆಕ್ಟರ್ ಸೇರಿ 84 ಸಾವಿರ ರೂಪಾಯಿ ಮೌಲ್ಯದ ವಸ್ತುಗಳ ಕಳ್ಳತನ ಮಾಡಿದ್ದರು. ಈ ಹಿಂದೆ ಕೂಡ ಇದೇ ಕಾಲೇಜಿನಲ್ಲಿ 20ಕ್ಕೂ ಹೆಚ್ಚು ಕಂಪ್ಯೂಟರ್​ಗಳ ಕಳ್ಳತನ ಆಗಿತ್ತು. ಈ ಕುರಿತು ಆರೋಪಿಗಳನ್ನ ಪೊಲೀಸರು ಇನ್ನಷ್ಟು ವಿಚಾರಣೆ ಮಾಡುತ್ತಿದ್ದಾರೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್