AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೆಡ್ಡಿ ಮೊಮ್ಮಗುವಿಗೂ ಸಿದ್ಧವಾಗಿದೆ ಕಲಘಟಗಿಯ ಬಣ್ಣದ ತೊಟ್ಟಿಲು!

ಧಾರವಾಡ ಜಿಲ್ಲೆಯ ಕಲಘಟಗಿಯ ಬಣ್ಣದ ತೊಟ್ಟಿಲು ದೇಶದಲ್ಲಷ್ಟೇ ಅಲ್ಲದೆ ವಿದೇಶಗಳಲ್ಲಿಯೂ ಹೆಸರುವಾಸಿಯಾಗಿದೆ.‌ ಕಲಘಟಗಿ ಬಣ್ಣದ ತೊಟ್ಟಿಲು ತನ್ನದೇ ಆದ ಮಹತ್ವವನ್ನು ಹೊಂದಿದೆ. ಕಲಘಟಗಿ ತೊಟ್ಟಿಲು ಕಲಾವಿದನ ಕೈ ಚಳಕದಿಂದ ನೋಡುಗರ ಕಣ್ಮನ ಸೆಳೆಯುತ್ತದೆ. ಹೌದು.. ಇಂತಹ ಪ್ರಧಾನ್ಯತೆ ಹೊಂದಿರುವ ಬಣ್ಣದ ತೊಟ್ಟಿಲು ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಪುತ್ರಿ ಬ್ರಹ್ಮಣಿ ಮಗುವಿಗೆ ಸಿದ್ಧವಾಗುತ್ತಿದೆ. ಕಲಘಟಗಿ ಕಲಾವಿದ ಮಾರುತಿ ಅವರು ಸುಮಾರು ಮೂರು ತಿಂಗಳಿನಿಂದ ತೊಟ್ಟಿಲು ತಯಾರಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ತೊಟ್ಟಿಲಿನಲ್ಲಿ ಕೃಷ್ಣನ ಬಾಲಲೀಲೆ ಮೂಡಿಬಂದಿರುವುದು ತೊಟ್ಟಿಲಿನ […]

ರೆಡ್ಡಿ ಮೊಮ್ಮಗುವಿಗೂ ಸಿದ್ಧವಾಗಿದೆ ಕಲಘಟಗಿಯ ಬಣ್ಣದ ತೊಟ್ಟಿಲು!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Aug 07, 2020 | 12:41 PM

Share

ಧಾರವಾಡ ಜಿಲ್ಲೆಯ ಕಲಘಟಗಿಯ ಬಣ್ಣದ ತೊಟ್ಟಿಲು ದೇಶದಲ್ಲಷ್ಟೇ ಅಲ್ಲದೆ ವಿದೇಶಗಳಲ್ಲಿಯೂ ಹೆಸರುವಾಸಿಯಾಗಿದೆ.‌ ಕಲಘಟಗಿ ಬಣ್ಣದ ತೊಟ್ಟಿಲು ತನ್ನದೇ ಆದ ಮಹತ್ವವನ್ನು ಹೊಂದಿದೆ. ಕಲಘಟಗಿ ತೊಟ್ಟಿಲು ಕಲಾವಿದನ ಕೈ ಚಳಕದಿಂದ ನೋಡುಗರ ಕಣ್ಮನ ಸೆಳೆಯುತ್ತದೆ. ಹೌದು.. ಇಂತಹ ಪ್ರಧಾನ್ಯತೆ ಹೊಂದಿರುವ ಬಣ್ಣದ ತೊಟ್ಟಿಲು ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಪುತ್ರಿ ಬ್ರಹ್ಮಣಿ ಮಗುವಿಗೆ ಸಿದ್ಧವಾಗುತ್ತಿದೆ. ಕಲಘಟಗಿ ಕಲಾವಿದ ಮಾರುತಿ ಅವರು ಸುಮಾರು ಮೂರು ತಿಂಗಳಿನಿಂದ ತೊಟ್ಟಿಲು ತಯಾರಿಸುವ ಕಾರ್ಯದಲ್ಲಿ ತೊಡಗಿದ್ದಾರೆ.

ತೊಟ್ಟಿಲಿನಲ್ಲಿ ಕೃಷ್ಣನ ಬಾಲಲೀಲೆ ಮೂಡಿಬಂದಿರುವುದು ತೊಟ್ಟಿಲಿನ ಮೆರಗನ್ನು ಮತ್ತಷ್ಟು ಹೆಚ್ಚಿಸಿದೆ. ಹಾವೇರಿ ಜಿಲ್ಲೆಯ ವನಿತಾ ಗುತ್ತಲ ಎಂಬುವವರು ಜನಾರ್ದನ ರೆಡ್ಡಿ ಮೊಮ್ಮಗುವಿಗೆ ಈ ತೊಟ್ಟಿಲನ್ನು ಉಡುಗರೆಯಾಗಿ ನೀಡುತ್ತಿದ್ದಾರೆ. ಈಗಾಗಲೇ 40,000 ಮುಂಗಡ ಹಣವನ್ನು ನೀಡಲಾಗಿದ್ದು, ಉಳಿದ 50,000 ಹಣವನ್ನು ಇಂದು ಕೊಟ್ಟು ಬೆಂಗಳೂರಿಗೆ ತೆಗೆದುಕೊಂಡು ಹೋಗಲಿದ್ದಾರೆ.

ಕಲಘಟಗಿಯ ಬಣ್ಣದ ತೊಟ್ಟಿಲಿಗೆ ಸಿನಿಮಾ ನಟರು ಕೂಡ ಮಾರು ಹೋಗಿದ್ದಾರೆ. ಯಶ್-ರಾಧಿಕಾ ಪಂಡಿತ್ ಮಗುವಿಗೆ ಅಂಬರೀಷ್ ಅಭಿಮಾನಿಯೊಬ್ಬರು ಇದೇ ತೊಟ್ಟಿಲನ್ನು ಉಡುಗೊರೆಯಾಗಿ ನೀಡಿದ್ದರು. ಮತ್ತು ರಾಜಕುಮಾರ್ ಕುಟುಂಬಕ್ಕೆ ಸಹ ಈ ತೊಟ್ಟಿಲು ತಲುಪಿದೆ! -ದತ್ತಾತ್ರೇಯ ಪಾಟೀಲ್

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು