ಕೋಲಿ, ಕುರುಬ ಸಮುದಾಯವನ್ನು ಎಸ್​ಟಿಗೆ ಸೇರಿಸುವಂತೆ ಲೋಕಸಭೆಯಲ್ಲಿ ಒತ್ತಾಯಿಸಿದ ಸಂಸದ ಉಮೇಶ್ ಜಾಧವ್

ಈಗಾಗಲೇ ಕೋಲಿ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ಬೇಡಿಕೆ ಇದ್ದು, ಸಂಸದ ಡಾ. ಉಮೇಶ್ ಜಾಧವ್ ಲೋಕಸಭೆಯಲ್ಲಿ ಆಗ್ರಹಿಸಿರುವುದು ಮಹತ್ವ ಪಡೆದಿದೆ. 

ಕೋಲಿ, ಕುರುಬ ಸಮುದಾಯವನ್ನು ಎಸ್​ಟಿಗೆ ಸೇರಿಸುವಂತೆ ಲೋಕಸಭೆಯಲ್ಲಿ ಒತ್ತಾಯಿಸಿದ ಸಂಸದ ಉಮೇಶ್ ಜಾಧವ್
ಕಲ್ಬುರ್ಗಿ ಸಂಸದ ಡಾ.ಉಮೇಶ್ ಜಾಧವ್
Follow us
guruganesh bhat
|

Updated on:Mar 20, 2021 | 2:56 PM

ದೆಹಲಿ: ಕೋಲಿ, ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕೆಂದು ಲೋಕಸಭೆಯಲ್ಲಿ ಸಂಸದ ಡಾ.ಉಮೇಶ್ ಜಾಧವ್ ಮನವಿ ಮಾಡಿದ್ದಾರೆ. ಕಲಬುರ್ಗಿ ಕ್ಷೇತ್ರದ ಸಂಸದರಾಗಿರುವ ಅವರು ಇಂದಿನ ಲೋಕಸಭಾ ಕಲಾಪದಲ್ಲಿ ಕೋಲಿ, ಕುರುಬ ಸಮುದಾಯ ಪರ ಬ್ಯಾಟಿಂಗ್ ಮಾಡಿದ್ದಾರೆ.

ಈಗಾಗಲೇ ಕೋಲಿ ಸಮುದಾಯದ ಕುಲಶಾಸ್ತ್ರ ಅಧ್ಯಯನ ಆಗಿದೆ. ಕೋಲಿ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸನ್ನೂ ಮಾಡಲಾಗಿದೆ ಎಂಬುದನ್ನು ಇಲ್ಲಿ ಸ್ಮರಿಸಬಹುದು. ಈಗಾಗಲೇ ಕೋಲಿ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ಬೇಡಿಕೆ ಇದ್ದು, ಕಲ್ಬುರ್ಗಿ ಕ್ಷೇತ್ರದ ಸಂಸದ ಡಾ. ಉಮೇಶ್ ಜಾಧವ್ ಲೋಕಸಭೆಯಲ್ಲಿ ಆಗ್ರಹಿಸಿರುವುದು ಮಹತ್ವ ಪಡೆದಿದೆ.

ರಾಜ್ಯದಲ್ಲಿನ ಕೋಲಿ- ಕುರುಬ ಸಮುದಾಯವನ್ನು ಪರಿಶಿಷ್ಟ ಜಾತಿಗೆ ಸೇರಿಸಬೇಕೆಂದು 2014ರಲ್ಲಿ ಸಮಾಜದ ಪ್ರಮುಖರು ಆಗ್ರಹಿಸಿದ್ದರು. ಅವರ ಆಗ್ರಹಕ್ಕೆ ಮಣಿದ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಕೋಲಿ- ಕುರುಬ ಸಮಯದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದರು.ಅಲ್ಲದೇ ಈ ಶಿಫಾರಸು ಸಂಪೂರ್ಣ ಕುಲಶಾಸ್ತ್ರೀಯ ಅಧ್ಯಯನವನ್ನು ಸಹ ಒಳಗೊಂಡಿತ್ತು. ಮುಂಬರುವ ಮಾರ್ಚ್ 27ರಂದು ಈ ಎರಡು ಸಮುದಾಯವನ್ನು ಪರಿಶಿಷ್ಟ ಜಾತಿಗೆ ಸೇರಿಸುವಂತೆ ಕೋರಿ ಕಲಬುರ್ಗಿಯಲ್ಲಿ ಬೃಹತ್ ಸಮಾವೇಶ ಆಯೋಜಿಸಲಾಗಿದೆ.

ಕುರುಬ ಮೀಸಲಾತಿಗೂ ಆಗ್ರಹ ಕುರುಬರಿಗೆ ಎಸ್​ಟಿ ಮೀಸಲಾತಿ ನೀಡಬೇಕೆಂದು ದೇವರಾಜ ಅರಸು ಕೇಂದ್ರಕ್ಕೆ ಶಿಫಾರಸು ಮಾಡಿದ್ದರು. ಮುಂದಿನ ದಿನಗಳಲ್ಲಿಯಾದರೂ ಸಮುದಾಯದ ಸಚಿವರು ಈ ಬಗ್ಗೆ ಗಮನಹರಿಸಿ, ಸಚಿವ ಸಂಪುಟದಲ್ಲಿ ಒತ್ತಾಯ ಮಾಡಬೇಕು. ಈಗಾಗಲೇ ಸುಮಾರು 340 ಕಿ.ಮೀ ಪಾದಯಾತ್ರೆ ಮಾಡಲಾಗಿದೆ ಎಂದು ಮಾಜಿ ಸಚಿವ ಬಂಡೆಪ್ಪ ಕಾಶಂಪುರ  ಇತ್ತೀಚಿಗೆ ಆಗ್ರಹಿಸಿದ್ದರು.

ಬೆಂಗಳೂರಿನ ಬಿಐಇಸಿ ಮೈದಾನದಲ್ಲಿ ನಡೆದ ಕುರುಬರ ಬೃಹತ್​ ಸಮಾವೇಶದಲ್ಲಿ ಮಾತನಾಡಿದ್ದ ಅವರು, ಎಸ್​ಟಿ ಮೀಸಲಾತಿಗೆ ಒತ್ತಾಯಿಸಿ ರಾಜ್ಯದ ಮೂಲೆಮೂಲೆಗಳಿಂದ ಸಮುದಾಯದ ಜನರು ಬಂದಿದ್ದಾರೆ. ಕಾಡು ಕುರುಬ, ಜೇನು ಕುರುಬರು ಈಗಾಗಲೇ ಎಸ್​ಟಿ ಪ್ರವರ್ಗದಲ್ಲಿದ್ದಾರೆ. ಕುರುಬರಿಗೆ ಎಸ್​ಟಿ ಮೀಸಲಾತಿ ನೀಡಬೇಕೆಂದು ದೇವರಾಜ ಅರಸು ಕೇಂದ್ರಕ್ಕೆ ಶಿಫಾರಸು ಮಾಡಿದ್ದರು. ಮುಂದಿನ ದಿನಗಳಲ್ಲಿಯಾದರೂ ಸಮುದಾಯದ ಸಚಿವರು ಈ ಬಗ್ಗೆ ಗಮನಹರಿಸಿ, ಸಚಿವ ಸಂಪುಟದಲ್ಲಿ ಒತ್ತಾಯ ಮಾಡಬೇಕು. ಈಗಾಗಲೇ ಸುಮಾರು 340 ಕಿ.ಮೀ ಪಾದಯಾತ್ರೆ ಮಾಡಲಾಗಿದೆ ಎಂದಿದ್ದರು.

ಇದೀಗ ಕೋಲಿ ಮತ್ತು ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕೆಂಬ ಕೂಗು ಡಾ.ಉಮೇಶ ಜಾಧವ್ ಮೂಲಕ ಲೋಕಸಭೆಯಲ್ಲಿ ಪ್ರತಿಧ್ವನಿಸಿದೆ.

ಇದನ್ನೂ ಓದಿ: ಬ್ರಾಹ್ಮಣರಿಂದ ಹಿಡಿದು ಕುರುಬರವರೆಗೆ ಮೀಸಲಾತಿ ಕೇಳ್ತಾರೆ, ದೊಡ್ಡ ಮೀನು ಸಣ್ಣ ಮೀನನ್ನು ನುಂಗಬಾರದು: ಸಿದ್ದರಾಮಯ್ಯ

ಖಾಸಗಿ ವಲಯದಲ್ಲೂ ಎಸ್​ಸಿ, ಎಸ್​ಟಿ ಸಮುದಾಯಕ್ಕೆ ಮೀಸಲಾತಿ ಬೇಕು: ವಿಪಕ್ಷ ನಾಯಕ ಸಿದ್ದರಾಮಯ್ಯ, ಶಾಸಕ ಎನ್​.ಮಹೇಶ್​ ಆಗ್ರಹ

Published On - 7:51 pm, Fri, 19 March 21

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್