ವಿವಿಧ ಇಲಾಖೆ, ನಿಗಮ ಮಂಡಳಿಗಳಲ್ಲಿ ಅಕ್ರಮ ಆರೋಪ: ತನಿಖಾಧಿಕಾರಿಯಾಗಿ ಸುಧೀರ್ ಕುಮಾರ್ ನೇಮಕ

| Updated By: ಗಂಗಾಧರ​ ಬ. ಸಾಬೋಜಿ

Updated on: Nov 11, 2024 | 8:53 PM

ವಿವಿಧ ಇಲಾಖೆ, ನಿಗಮ ಮಂಡಳಿಗಳಲ್ಲಿ ಅಕ್ರಮ ಆರೋಪ ಹಿನ್ನೆಲೆ ಪ್ರಕರಣ ಸಂಬಂಧ ತನಿಖಾಧಿಕಾರಿಯಾಗಿ ನಿವೃತ್ತ ಐಎಎಸ್​ ಅಧಿಕಾರಿ‌ ಸುಧೀರ್ ಕುಮಾರ್​ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಇಂದು ಆದೇಶ ಹೊರಡಿಸಿದೆ. 6 ತಿಂಗಳ ಒಳಗೆ ತನಿಖಾ ವರದಿ ಸಲ್ಲಿಸುವಂತೆ ಸರ್ಕಾರ ಸೂಚಿಸಿದೆ.

ವಿವಿಧ ಇಲಾಖೆ, ನಿಗಮ ಮಂಡಳಿಗಳಲ್ಲಿ ಅಕ್ರಮ ಆರೋಪ: ತನಿಖಾಧಿಕಾರಿಯಾಗಿ ಸುಧೀರ್ ಕುಮಾರ್ ನೇಮಕ
ವಿವಿಧ ಇಲಾಖೆ, ನಿಗಮ ಮಂಡಳಿಗಳಲ್ಲಿ ಅಕ್ರಮ ಆರೋಪ: ತನಿಖಾಧಿಕಾರಿಯಾಗಿ ಸುಧೀರ್ ಕುಮಾರ್ ನೇಮಕ
Follow us on

ಬೆಂಗಳೂರು, ನವೆಂಬರ್​ 11: ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಮತ್ತು ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕೃತಿಕ ಸಂಘದಲ್ಲಿ ಅಕ್ರಮ (scam) ಆರೋಪದ ಕುರಿತು ತನಿಖೆಗೆ ಆದೇಶಿಲಾಗಿದೆ. ಇದೀಗ ನಿವೃತ್ತ ಐಎಎಸ್​ ಅಧಿಕಾರಿ‌ ಸುಧೀರ್ ಕುಮಾರ್ ಅವರನ್ನು ತನಿಖಾಧಿಕಾರಿಯಾಗಿ ನೇಮಕ ಮಾಡಿ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ.

ನಿವೃತ್ತ ಐಎಎಸ್​ ಅಧಿಕಾರಿ‌ ಸುಧೀರ್ ಕುಮಾರ್​ ಅವರಿಗೆ 6 ತಿಂಗಳಲ್ಲಿ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರ ಸೂಚನೆ ನೀಡಿದೆ. ಹಿಂದಿನ ಎಸಿಎಸ್ ಡಾ.ಇ.ವಿ.ರಮಣರೆಡ್ಡಿ ವರದಿ ಪರಿಶೀಲಿಸಿ ತನಿಖೆಗೆ ಆದೇಶ ನೀಡಿದೆ.

ಇದನ್ನೂ ಓದಿ: ದೇಗುಲದ ಹಣ ಬೇರೆ ಇಲಾಖೆಗಳಿಗೆ ವರ್ಗಾಯಿಸುವುದಿಲ್ಲ: ಸರ್ಕಾರಿಂದ ಗ್ಯಾರಂಟಿ ಬೋರ್ಡ್

ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಅನುದಾನದಲ್ಲಿ ನಡೆದಿದೆ ಎನ್ನಲಾದ ಅಕ್ರಮದ ತನಿಖೆಗೆ ಸಿಎಂ ಸಿದ್ದರಾಮಯ್ಯ ಈಗಾಗಲೇ ಆದೇಶಿಸಿದ್ದಾರೆ. ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯಲ್ಲಿ ಎರಡ್ಮೂರು ವರ್ಷಗಳಿಂದ 3000 ಕೋಟಿ ರೂ. ಅನುದಾನದಲ್ಲಿ ವ್ಯಾಪಕ ಅಕ್ರಮಗಳು ನಡೆದಿರುವ ಆರೋಪಗಳು ಕೇಳಿಬಂದಿತ್ತು. ಈ ಬಗ್ಗೆ ಇಲಾಖಾ ತನಿಖೆ ಸಚಿವ ಪ್ರಿಯಾಂಕ್ ಖರ್ಗೆ ಸಿದ್ದರಾಮಯ್ಯಗೆ ಮನವಿ ಮಾಡಿದ್ದರು.

ಅದರಂತೆ ಸಿಎಂ ಸಿದ್ದರಾಮಯ್ಯ ಇತ್ತೀಚೆಗೆ ನಿರ್ದಾಕ್ಷಿಣವಾಗಿ ಇಲಾಖಾ ತನಿಖೆ ನಡೆಸಲು ಆದೇಶ ಹೊರಡಿಸಿದ್ದರು. ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯಲ್ಲಿ ಎಲ್ಲೆಲ್ಲಿ ನಿಯಮಬಾಹಿರವಾಗಿ ಅನುದಾನಗಳನ್ನು ವಿನಿಯೋಗಿಸಲಾಗಿದೆ? ಯಾವ ಕಾಮಗಾರಿಗಳಲ್ಲಿ ಅಕ್ರಮ ನಡೆದಿದೆ ಎಂಬುದರ ಕುರಿತು ಗಂಭೀರವಾಗಿ ಪರಿಗಣಿಸಿ 15 ದಿನಗಳ ಒಳಗೆ ತಪ್ಪಿತಸ್ಕರ ವಿವರಗಳೊಂದಿಗೆ ವರದಿಯನ್ನು ಸಲ್ಲಿಸುವಂತೆ ಸಿಎಂ ಸೂಚಿಸಿದ್ದರು.

ಇದನ್ನೂ ಓದಿ: ಮುಜರಾಯಿ ಇಲಾಖೆಯ ದೇವಸ್ಥಾನದ ಹುಂಡಿ ಹಣ ಆ ದೇಗುಲಕ್ಕೇ ಬಳಕೆಯಾಗಬೇಕು: ರಾಮಲಿಂಗಾ ರೆಡ್ಡಿ ಮಹತ್ವದ ಘೋಷಣೆ

ಸರ್ಕಾರದ ಅನುಮೋದನೆ ಇಲ್ಲದೆ ಕೊರೋನಾದಿಂದ ಮೃತ ಖಾಸಗಿ ಶಿಕ್ಷಕರಿಗೆ 50 ಸಾವಿರ ರೂ. ಪರಿಹಾರ ನೀಡಲಾಗಿತ್ತು. ಲೋಕೋಪಯೋಗಿ ಬಾಡಿಗೆ ಕಟ್ಟಡಗಳಿಗೆ ನಿಯಮ ಬಾಹಿರವಾಗಿ ಕೋಟ್ಯಾಂತರ ರೂಪಾಯಿ ಖರ್ಚು ಮಾಡಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.