AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲ್ಯಾಣ ಕರ್ನಾಟಕದಲ್ಲಿ ಅಪೌಷ್ಟಿಕತೆ: 5 ವರ್ಷದೊಳಗಿನ ಶೇ 40ಕ್ಕೂ ಹೆಚ್ಚು ಮಕ್ಕಳ ತೂಕ ಕಡಿಮೆ

ಕಲ್ಯಾಣ ಕರ್ನಾಟಕದಲ್ಲಿ ಮಕ್ಕಳ ಅಪೌಷ್ಟಿಕತೆ ಆತಂಕಕಾರಿ ಮಟ್ಟ ತಲುಪಿದೆ. ಐದು ವರ್ಷದೊಳಗಿನ ಮಕ್ಕಳಲ್ಲಿ ಶೇ 40ಕ್ಕೂ ಹೆಚ್ಚು ಮಂದಿ ಕಡಿಮೆ ತೂಕ ಹೊಂದಿದ್ದಾರೆ. ರಾಯಚೂರು ಜಿಲ್ಲೆಯಲ್ಲಿ ಈ ಪ್ರಮಾಣ ಶೇ 49.5ರಷ್ಟಿದ್ದು, ಸರ್ಕಾರದ ಪೌಷ್ಟಿಕ ಆಹಾರ ಯೋಜನೆಗಳ ಪರಿಣಾಮದ ಬಗ್ಗೆ ಪ್ರಶ್ನೆ ಮೂಡಿದೆ.

ಕಲ್ಯಾಣ ಕರ್ನಾಟಕದಲ್ಲಿ ಅಪೌಷ್ಟಿಕತೆ: 5 ವರ್ಷದೊಳಗಿನ ಶೇ 40ಕ್ಕೂ ಹೆಚ್ಚು ಮಕ್ಕಳ ತೂಕ ಕಡಿಮೆ
ಸಾಂದರ್ಭಿಕ ಚಿತ್ರImage Credit source: Indianexpress
ಗಣಪತಿ ಶರ್ಮಾ
|

Updated on:Sep 17, 2026 | 11:54 AM

Share

ಮುಖ್ಯಾಂಶಗಳು

  • ಕಲ್ಯಾಣ ಕರ್ನಾಟಕದಲ್ಲಿ ಶೇ 40ಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕ
  • ರಾಯಚೂರಿನಲ್ಲಿ ಮಕ್ಕಳ ಅಪೌಷ್ಟಿಕತೆ ಪ್ರಮಾಣ ಶೇ 49.5
  • ಶಿಕ್ಷಣ ಕ್ಷೇತ್ರದಲ್ಲೂ ಶಿಕ್ಷಕರ ಕೊರತೆ ಕಾಡುತ್ತಿದೆ

ಕಲಬುರಗಿ, ಸೆಪ್ಟೆಂಬರ್ 17: ಕಲ್ಯಾಣ ಕರ್ನಾಟಕ ಭಾಗದಲ್ಲಿ ಐದು ವರ್ಷದೊಳಗಿನ ಮಕ್ಕಳ ಅಪೌಷ್ಟಿಕತೆ ಆತಂಕಕಾರಿ ಪ್ರಮಾಣದಲ್ಲಿರುವುದು ಇತ್ತೀಚಿನ ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ (NFHS 2023–24) ವರದಿಯಿಂದ ಬಹಿರಂಗವಾಗಿದೆ. ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳ ಪೈಕಿ ಬೀದರ್ ಹೊರತುಪಡಿಸಿ ಉಳಿದ ಎಲ್ಲ ಜಿಲ್ಲೆಗಳಲ್ಲೂ ಶೇ 40ಕ್ಕೂ ಹೆಚ್ಚು ಮಕ್ಕಳು ಕಡಿಮೆ ತೂಕ ಹೊಂದಿದ್ದಾರೆ ಎಂದು ವರದಿಯಾಗಿದೆ. ‘ಕಲ್ಯಾಣ ಕರ್ನಾಟಕ ಉತ್ಸವ’ದ ಸಂದರ್ಭದಲ್ಲೇ ಈ ಮಾಹಿತಿ ಬೆಳಕಿಗೆ ಬಂದಿರುವುದು ಗಮನಾರ್ಹ.

ರಾಯಚೂರು ಜಿಲ್ಲೆಯಲ್ಲಿ ಐದು ವರ್ಷದೊಳಗಿನ ಮಕ್ಕಳ ಪೈಕಿ ಶೇ 49.5ರಷ್ಟು ಮಕ್ಕಳು ಕಡಿಮೆ ತೂಕ ಹೊಂದಿದ್ದಾರೆ. ಜಿಲ್ಲೆಯ ಅಂಗನವಾಡಿಗಳಲ್ಲಿರುವ 2,38,903 ಮಕ್ಕಳ ಪೈಕಿ ಈ ಪ್ರಮಾಣ ದಾಖಲಾಗಿದೆ. ರಾಜ್ಯದ ಸರಾಸರಿ ಶೇ 27.8ರಷ್ಟಿದೆ. ಈ ಮೂಲಕ ರಾಜ್ಯದಲ್ಲೇ ಅತಿ ಹೆಚ್ಚು ಕಡಿಮೆ ತೂಕದ ಮಕ್ಕಳಿರುವ ಜಿಲ್ಲೆ ಎಂಬ ಸ್ಥಾನವನ್ನು ರಾಯಚೂರು ಉಳಿಸಿಕೊಂಡಿದೆ.

ಕಲಬುರಗಿಯಲ್ಲಿ ಶೇ 44.6 ರಷ್ಟು ಮಕ್ಕಳು ಕಡಿಮೆ ತೂಕ

ಕಲಬುರಗಿ ಜಿಲ್ಲೆಯಲ್ಲಿ 3,16,899 ಮಕ್ಕಳ ಪೈಕಿ ಶೇ 44.6ರಷ್ಟು ಮಕ್ಕಳು ಕಡಿಮೆ ತೂಕ ಹೊಂದಿದ್ದಾರೆ. ಕೊಪ್ಪಳದಲ್ಲಿ 1,65,363 ಮಕ್ಕಳ ಪೈಕಿ ಶೇ 44.1, ಯಾದಗಿರಿಯಲ್ಲಿ 1,59,293 ಮಕ್ಕಳ ಪೈಕಿ ಶೇ 43.1, ಬಳ್ಳಾರಿಯಲ್ಲಿ 1,23,441 ಮಕ್ಕಳ ಪೈಕಿ ಶೇ 42.7 ಮತ್ತು ಬೀದರ್‌ನಲ್ಲಿ 1,79,116 ಮಕ್ಕಳ ಪೈಕಿ ಶೇ.31.7ರಷ್ಟು ಮಕ್ಕಳು ಕಡಿಮೆ ತೂಕ ಹೊಂದಿದ್ದಾರೆ. ಕಿತ್ತೂರು ಕರ್ನಾಟಕ ವ್ಯಾಪ್ತಿಯ ವಿಜಯಪುರದಲ್ಲಿ ಶೇ 45.3ರಷ್ಟು ಮಕ್ಕಳಲ್ಲಿ ಇದೇ ಸಮಸ್ಯೆ ಕಂಡುಬಂದಿದ್ದು, ರಾಜ್ಯದಲ್ಲಿ ಎರಡನೇ ಅತಿ ಹೆಚ್ಚು ಪ್ರಮಾಣ ದಾಖಲಾಗಿದೆ.

ಅಂಗನವಾಡಿಯಲ್ಲಿ ಪೌಷ್ಟಿಕ ಆಹಾರ ನೀಡಿದರೂ ಸಮಸ್ಯೆ

ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ 2023–24 ಪ್ರಕಾರ ಕಲಬುರಗಿ ವಿಭಾಗದಲ್ಲಿ ಐದು ವರ್ಷದೊಳಗಿನ ಮಕ್ಕಳಲ್ಲಿ ಶೇ 43ರಷ್ಟು ಮಕ್ಕಳು ಕಡಿಮೆ ತೂಕ ಹೊಂದಿದ್ದಾರೆ. ಬೆಳಗಾವಿ ವಿಭಾಗದಲ್ಲಿ ಈ ಪ್ರಮಾಣ ಶೇ 33.8, ಮೈಸೂರು ವಿಭಾಗದಲ್ಲಿ ಶೇ 22.36 ಮತ್ತು ಬೆಂಗಳೂರು ವಿಭಾಗದಲ್ಲಿ ಶೇ 24.28ರಷ್ಟಿದೆ. 2024ರ ಫೆಬ್ರವರಿ 23ರಿಂದ ಅಕ್ಟೋಬರ್ 24ರವರೆಗೆ ಸಮೀಕ್ಷೆಯ ಕ್ಷೇತ್ರಕಾರ್ಯ ನಡೆದಿದ್ದು, ಬೆಂಗಳೂರಿನ ಇನ್‌ಸ್ಟಿಟ್ಯೂಟ್ ಆಫ್ ಸೋಶಿಯಲ್ ಅಂಡ್ ಎಕನಾಮಿಕ್ ಚೇಂಜ್ ಹಾಗೂ ವೋನ್ ಇಂಡಿಯಾ ಸರ್ವಿಸಸ್ ಪ್ರೈವೇಟ್ ಲಿಮಿಟೆಡ್ ಸಮೀಕ್ಷೆ ನಡೆಸಿವೆ ಎಂದು ‘ದಿ ನ್ಯೂ ಇಂಡಿಯನ್ ಎಕ್ಸ್​​ಪ್ರೆಸ್’ ವರದಿ ಉಲ್ಲೇಖಿಸಿದೆ.

ಕೆಲ ವರ್ಷಗಳ ಹಿಂದೆ ರಾಯಚೂರು ಜಿಲ್ಲೆಯ ಅಪೌಷ್ಟಿಕತೆ ಕುರಿತು ಅಧ್ಯಯನ ನಡೆಸಲು ಕರ್ನಾಟಕ ಸರ್ಕಾರ ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿ ದಿವಂಗತ ಎನ್.ಕೆ. ಪಾಟೀಲ್ ನೇತೃತ್ವದಲ್ಲಿ ಅಧ್ಯಯನ ಕೈಗೊಂಡಿತ್ತು. ಮಧ್ಯಾಹ್ನದ ಊಟಕ್ಕೆ ಮೊಟ್ಟೆ ಮತ್ತು ಬಾಳೆಹಣ್ಣು ಸೇರಿಸುವಂತೆ ವರದಿ ಶಿಫಾರಸು ಮಾಡಿತ್ತು. ಸದ್ಯ ಅಂಗನವಾಡಿ ಮಕ್ಕಳಿಗೆ ಮೊಟ್ಟೆ ಸೇರಿದಂತೆ ಪೌಷ್ಟಿಕ ಆಹಾರ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದು, ವಾರಕ್ಕೆ ಎರಡು ಬಾರಿ ಮೊಟ್ಟೆ ನೀಡಲಾಗುತ್ತಿದೆ. ಕಡಿಮೆ ತೂಕ ಹೊಂದಿರುವ ಮಕ್ಕಳಿಗೆ ವಾರದಲ್ಲಿ 3ರಿಂದ 4 ದಿನ ಮೊಟ್ಟೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶಿಕ್ಷಣದಲ್ಲೂ ಹಿಂದುಳಿದಿರುವ ಕಲ್ಯಾಣ ಕರ್ನಾಟಕ

ಅಪೌಷ್ಟಿಕತೆ ಮಾತ್ರವಲ್ಲದೆ ಶಿಕ್ಷಣ ಕ್ಷೇತ್ರದಲ್ಲೂ ಕಲ್ಯಾಣ ಕರ್ನಾಟಕದ ಹಲವು ಜಿಲ್ಲೆಗಳು ಹಿಂದುಳಿದಿವೆ. ಶಿಕ್ಷಕರ ಕೊರತೆಯಿಂದಾಗಿ ಈ ಭಾಗದ ಬಹುತೇಕ ಜಿಲ್ಲೆಗಳು ಎಸ್‌ಎಸ್‌ಎಲ್‌ಸಿ ಶ್ರೇಯಾಂಕದಲ್ಲಿ ಕೊನೆಯ ಸ್ಥಾನಗಳಲ್ಲಿವೆ. ಗುಲ್ಬರ್ಗಾ ವಿಶ್ವವಿದ್ಯಾಲಯದಲ್ಲಿ ಸುಮಾರು 30 ವಿಭಾಗಗಳಿದ್ದು, ಕೇವಲ 25 ಕಾಯಂ ಬೋಧಕ ಸಿಬ್ಬಂದಿ ಇರುವುದಾಗಿ ತಿಳಿಸಲಾಗಿದೆ.

LIVE TV

ಪ್ರತಿ ವಿಭಾಗದ ಅಗತ್ಯಕ್ಕೆ ಅನುಗುಣವಾಗಿ ವಿಶೇಷ ಅನುದಾನ ನೀಡಬೇಕು ಹಾಗೂ ಯೋಜನೆಗಳ ಅನುಷ್ಠಾನವನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡಬೇಕು ಎಂದು ಶಿಕ್ಷಣ ತಜ್ಞೆ ಸಂಗೀತಾ ಕಾಟಿಮನಿ ಒತ್ತಾಯಿಸಿದ್ದಾರೆ. ಕಲ್ಯಾಣ ಕರ್ನಾಟಕದ ಅಭಿವೃದ್ಧಿಗಾಗಿ 371ಜೆ ವಿಧಿಯ ಅನುಷ್ಠಾನದ ಸಂಪುಟ ಉಪಸಮಿತಿ ಅಧ್ಯಕ್ಷರೂ ಆಗಿರುವ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್, ಈ ಭಾಗದ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:53 am, Thu, 17 September 26

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ಹಿಂಡಲಗಾ ಜೈಲಿಗೆ ಹೋಗ್ತಿದ್ದ ಪ್ರಜ್ವಲ್ ಇದ್ದ ವಾಹನ ಅರ್ಧಕ್ಕೆ ವಾಪಸ್
ಹಿಂಡಲಗಾ ಜೈಲಿಗೆ ಹೋಗ್ತಿದ್ದ ಪ್ರಜ್ವಲ್ ಇದ್ದ ವಾಹನ ಅರ್ಧಕ್ಕೆ ವಾಪಸ್
ಬೃಹತ್ ಪ್ರತಿಭಟನೆ ಬಳಿಕ ಸುಪ್ರೀಂ ಕೋರ್ಟ್ ತಲುಪಿದ ರಾಹುಲ್ ಗಾಂಧಿ, ಖರ್ಗೆ
ಬೃಹತ್ ಪ್ರತಿಭಟನೆ ಬಳಿಕ ಸುಪ್ರೀಂ ಕೋರ್ಟ್ ತಲುಪಿದ ರಾಹುಲ್ ಗಾಂಧಿ, ಖರ್ಗೆ
ಮಂಜನಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ: ಸಂಗೀತಾ ಭಟ್ ಅಚ್ಚರಿಯ ಹೇಳಿಕೆ
ಮಂಜನಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ: ಸಂಗೀತಾ ಭಟ್ ಅಚ್ಚರಿಯ ಹೇಳಿಕೆ
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ
ವಿ. ಸೋಮಣ್ಣ ಕಾರು ಮುತ್ತಿಗೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಯತ್ನ
ವಿ. ಸೋಮಣ್ಣ ಕಾರು ಮುತ್ತಿಗೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಯತ್ನ
ಯುವತಿ ದೂರಿನ ಮೇರೆಗೆ ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿ ಬಂಧನ
ಯುವತಿ ದೂರಿನ ಮೇರೆಗೆ ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿ ಬಂಧನ