‘ದಸರಾದಲ್ಲಿ ಕಂಬಳ ಆಯೋಜಿಸುವುದು ಬೇಡ’ ಎಂದ ಪ್ರಮೋದಾದೇವಿ ಒಡೆಯರ್
ಮೈಸೂರು ರಾಜಮಾತೆ ಪ್ರಮೋದಾದೇವಿ ಒಡೆಯರ್ ಅವರು ದಸರಾ ಸಂದರ್ಭದಲ್ಲಿ ಕಂಬಳ ಆಯೋಜಿಸುವ ನಿರ್ಧಾರವನ್ನು ವಿರೋಧಿಸಿದ್ದಾರೆ. ದಸರಾದಲ್ಲಿ ಆಯೋಜಿಸಿದರೆ ಕಂಬಳಕ್ಕೆ ಪ್ರಾಮುಖ್ಯತೆ ಸಿಗುವುದಿಲ್ಲ, ತನ್ನದೇ ಆದ ವೈಶಿಷ್ಟ್ಯವಿರುವ ಕಂಬಳವನ್ನು ಪ್ರತ್ಯೇಕವಾಗಿ ಆಯೋಜಿಸಬೇಕು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಈ ಕುರಿತು ಸರ್ಕಾರ ತಮ್ಮ ಸಲಹೆ ಕೇಳಿಲ್ಲ ಎಂದೂ ತಿಳಿಸಿದ್ದಾರೆ.
ಮೈಸೂರು, ಸೆಪ್ಟೆಂಬರ್ 21: ‘ಮೈಸೂರು ದಸರಾ ಮಹೋತ್ಸವದಲ್ಲಿ ಕಂಬಳ ಆಯೋಜಿಸುವುದು ಬೇಡ’ ಎಂದು ರಾಜಮಾತೆ ಪ್ರಮೋದಾದೇವಿ ಒಡೆಯರ್ ಹೇಳಿದ್ದಾರೆ. ಖಾಸಗಿ ದರ್ಬಾರ್ ಬಗ್ಗೆ ಮಾಹಿತಿ ನೀಡಿ ಮಾತನಾಡಿದ ಅವರು, ‘ಮಂಗಳೂರು ಭಾಗದ ಕಂಬಳಕ್ಕೆ ತನ್ನದೇ ಆದ ವೈಶಿಷ್ಟ್ಯ ಹಾಗೂ ಪ್ರಾಮುಖ್ಯತೆ ಇದ್ದು, ಅದನ್ನು ಕಾಪಾಡಬೇಕಿದೆ. ದಸರಾದಲ್ಲಿ ಕಂಬಳ ಆಯೋಜಿಸಿದರೆ ಅದಕ್ಕೆ ಸೂಕ್ತ ಪ್ರಾಮುಖ್ಯತೆ ಸಿಗುವುದಿಲ್ಲ, ಬದಲಾಗಿ ದಸರಾ ಮುಗಿದ ನಂತರ ಪ್ರತ್ಯೇಕವಾಗಿ ಕಂಬಳವನ್ನು ಆಯೋಜಿಸಬಹುದಿತ್ತು. ದಸರಾದಲ್ಲಿ ಕಂಬಳ ಆಯೋಜಿಸುವ ಕುರಿತು ಸರ್ಕಾರ ನಮ್ಮ ಅಭಿಪ್ರಾಯ ಕೇಳಿಲ್ಲ’ ಎಂದು ಹೇಳಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos

