Kangana Ranaut ಕಂಗನಾ ವಿರುದ್ಧ ದೂರು ದಾಖಲಿಸಿ, ಟ್ವಿಟರ್ ಖಾತೆ ರದ್ದು ಮಾಡಿ: ಬೆಳಗಾವಿ ವಕೀಲ ಒತ್ತಾಯ

| Updated By: ganapathi bhat

Updated on: Apr 06, 2022 | 8:10 PM

Complaint against Kangana Ranaut ನಟಿ ಕಂಗನಾ ರಣಾವತ್ ಟ್ವೀಟ್ ವಿಚಾರಕ್ಕೆ ಸಂಬಂಧಿಸಿ ಬೆಳಗಾವಿಯ ನ್ಯಾಯವಾದಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಕಂಗನಾ ಟ್ವೀಟ್ ಖಾತೆ ರದ್ದುಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.

Kangana Ranaut ಕಂಗನಾ ವಿರುದ್ಧ ದೂರು ದಾಖಲಿಸಿ, ಟ್ವಿಟರ್ ಖಾತೆ ರದ್ದು ಮಾಡಿ: ಬೆಳಗಾವಿ ವಕೀಲ ಒತ್ತಾಯ
Follow us on

ಬೆಳಗಾವಿ: ಪ್ರತಿಭಟನಾ ನಿರತ ರೈತರನ್ನು ಭಯೋತ್ಪಾದಕರು ಎಂದು ಕರೆದು ನಟಿ ಕಂಗನಾ ರಣಾವತ್ ಟ್ವೀಟ್ ಮಾಡಿರುವ ವಿಚಾರಕ್ಕೆ ನಗರದ ವಕೀಲರೊಬ್ಬರು ವಿರೋಧ ವ್ಯಕ್ತಪಡಿಸಿದ್ದಾರೆ. ನಗರದ ಪೊಲೀಸ್ ಠಾಣೆಯಲ್ಲಿ ಕಂಗನಾ ರಣಾವತ್ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳುವಂತೆ ಒತ್ತಾಯಿಸಿದ್ದಾರೆ. ಕಂಗನಾ ರಣಾವತ್ ಅಧಿಕೃತ ಟ್ವಿಟರ್ ಖಾತೆಯನ್ನು ರದ್ದುಗೊಳಿಸುವಂತೆಯೂ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಕಂಗನಾ ವಿರುದ್ಧ ದೂರು ದಾಖಲಿಸಿ. ಒಂದುವೇಳೆ ಪೊಲೀಸರು ದೂರು ದಾಖಲಿಸಿಕೊಳ್ಳದಿದ್ದರೆ ತಾನೇ ಕೋರ್ಟ್‌ನಲ್ಲಿ ಖಾಸಗಿ ದೂರು ದಾಖಲಿಸುತ್ತೇನೆ ಎಂದು ನ್ಯಾಯವಾದಿ ಹರ್ಷವರ್ಧನ್ ಪಾಟೀಲ್ ಟಿಳಕವಾಡಿ ಪೊಲೀಸ್ ಠಾಣೆಯಲ್ಲಿ ಎಚ್ಚರಿಕೆ ನೀಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಪೊಲೀಸರು, ತನಿಖೆ ನಂತರವೇ ದೂರು ದಾಖಲಿಸಿಕೊಳ್ಳುವುದಾಗಿ ಹೇಳಿಕೆ ನೀಡಿದ್ದಾರೆ. ಆದರೂ ದೂರು ದಾಖಲಿಸಿಕೊಳ್ಳುವಂತೆ ವಕೀಲರು ಒತ್ತಾಯಿಸಿದ್ದಾರೆ.

ಐಪಿಸಿ ಸೆಕ್ಷನ್ 153, 153(A), 503, 504, 505(1), 505(B), 505(c), 505(2), 506ರ ಅಡಿಯಲ್ಲಿ ದೂರು ದಾಖಲಿಸಿ ಎಂದು ಹರ್ಷವರ್ಧನ್ ಹೇಳಿದ್ದಾರೆ. ಕಂಗನಾ ರಣಾವತ್ ಟ್ವಿಟರ್ ಖಾತೆ ರದ್ದು ಮಾಡಬೇಕು ಎಂದೂ ವಕೀಲ ಹರ್ಷವರ್ಧನ್ ಪಾಟೀಲ್ ಆಗ್ರಹಿಸಿದ್ದಾರೆ. 24 ಗಂಟೆಯಲ್ಲಿ ದೂರು ದಾಖಲಿಸಿಕೊಳ್ಳಬೇಕು ಎಂದು ಪೊಲೀಸರನ್ನು ನ್ಯಾಯವಾದಿ ಒತ್ತಾಯಿಸಿದ್ದಾರೆ.

ರೈತರ ಪ್ರತಿಭಟನೆಗೆ ಬೆಂಬಲ ಸೂಚಿಸಿದ ಸೆಲೆಬ್ರಿಟಿಗಳ ವಿರುದ್ಧ ಟ್ವೀಟ್ ಪ್ರಹಾರ ಮಾಡಿದ್ದ ಬಾಲಿವುಡ್ ನಟಿ ಕಂಗನಾ ರಣಾವತ್, ಕೃಷಿ ಕಾನೂನು ರೈತರಿಗೆ ಸಹಕಾರಿ ಆಗಿರುವಾಗ ರೈತರು ಪ್ರತಿಭಟನೆ ನಡೆಸುತ್ತಿರುವುದೇಕೆ. ಈ ರೀತಿ ಗಲಭೆ ಮಾಡುವವರು ಭಯೋತ್ಪಾದಕರು.. ಅದನ್ನು ಹೇಳಲು ಭಯವಾಗುತ್ತಿದೆಯೇ? ಎಂದು ಟ್ವೀಟ್ ಮಾಡಿದ್ದರು.

ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ವಿರೋಧಿಸಿ ದೆಹಲಿ ಗಡಿಭಾಗದಲ್ಲಿ ಪ್ರತಿಭಟನೆ ನಿರತರಾಗಿರುವ ರೈತರ ಬಗ್ಗೆ ನಾವು ಯಾಕೆ ಚರ್ಚಿಸುತ್ತಿಲ್ಲ ಎಂದು ಅಮೆರಿಕದ ಪಾಪ್ ತಾರೆ ರಿಹಾನ್ನಾ ಟ್ವೀಟ್ ಮಾಡಿದ್ದರು. ರಿಹಾನ್ನಾ ಟ್ವೀಟ್ ಬೆನ್ನಲ್ಲೇ ಸ್ವೀಡನ್ ನ ಪರಿಸರ ಹೋರಾಟಗಾರ್ತಿ ಗ್ರೇಟಾ ಥುನ್​ಬರ್ಗ್, ಮಾಜಿ ನೀಲಿಚಿತ್ರ ತಾರೆ ಮಿಯಾ ಖಲೀಫಾ ಕೂಡಾ ರೈತರ ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದರು.

ವಿದೇಶಿ ಸೆಲೆಬ್ರಿಟಿಗಳ ಟ್ವೀಟ್ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಪರ-ವಿರೋಧ ಚರ್ಚೆ ನಡೆಯುತ್ತಿರುವಾಗಲೇ ಪಂಜಾಬಿ ಗಾಯಕ, ನಟ ದಿಲ್ಜಿತ್ ದೊಸಾಂಜ್, ರಿಹಾನ್ನಾ ಅವರಿಗೆ ‘ರಿರಿ’ ಹಾಡನ್ನು ಅರ್ಪಿಸಿರುವುದಾಗಿ ಟ್ವೀಟಿಸಿದ್ದರು. ಈ ಟ್ವೀಟ್​ಗೆ ಪ್ರತಿಕ್ರಿಯಿಸಿದ ಕಂಗನಾ, ದಿಲ್ಜಿತ್​ರನ್ನು ಖಾಲಿಸ್ತಾನಿ ಎಂದು ಕರೆದಿದ್ದರು. ಈ ವೇಳೆ ಕಂಗನಾ ರಣಾವತ್ ಮಾಡಿದ್ದ ಎರಡು ಟ್ವೀಟ್ ಗಳನ್ನು ಟ್ವಿಟರ್ ಸಂಸ್ಥೆ ಡಿಲೀಟ್ ಮಾಡಿತ್ತು.

ರೋಹಿತ್ ಶರ್ಮಾ ಟ್ವೀಟ್​ಗೆ ಆಕ್ಷೇಪಾರ್ಹ ಪ್ರತಿಕ್ರಿಯೆ; ಕಂಗನಾ ಟ್ವೀಟ್ ಡಿಲೀಟ್ ಮಾಡಿದ ಟ್ವಿಟರ್

Published On - 5:49 pm, Mon, 8 February 21