Karnataka Breaking Kannada News Live: ಕರ್ನಾಟಕ ಸರ್ಕಾರದ 5 ಗ್ಯಾರೆಂಟಿ ಯೋಜನೆಗಳ ಜಾರಿಗೆ ವಿಚಾರ ರಾಜ್ಯದಲ್ಲಿ ಸಾಕಷ್ಟು ಚರ್ಚೆಯಾಗುತ್ತಿದೆ. ಈಗಾಗಲೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಜನರು ಕರೆಂಟ್ ಬಿಲ್ ಕಟ್ಟುವುದಿಲ್ಲ ಎನ್ನುತ್ತಿದ್ದರೇ, ಮಹಿಳೆಯರು ಸರ್ಕಾರಿ ಬಸ್ಗಳಲ್ಲಿ ಟಿಕೆಟ್ ತೆಗೆದುಕೊಳ್ಳದೆ ತಕರಾರು ಮಾಡುತ್ತಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿನ್ನೆ (ಮೇ.29) ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದರು. ಇದೊಂದಡೆಯಾದರೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಅತಿಯಾದ ಬಿಸಿಲು, ಮಳೆಯಿಂದ ಜನರು ರೋಸಿ ಹೋಗಿದ್ದಾರೆ. ಇದರ ಜೊತೆ ಸರಣಿ ಅಪಘಾತಗಳು ಬೆಚ್ಚಿ ಬೀಳಿಸಿವೆ. ಒಟ್ಟಾರೆಯಾಗಿ ರಾಜ್ಯದಲ್ಲಿ ನಾನಾ ಘಟನೆಗಳು ನಡೆಯುತ್ತಿದ್ದು, ಇದರೊಂದಿಗೆ ಇಂದಿನ ಲೇಟೆಸ್ಟ್ ಅಪ್ಡೇಟ್ಸ್
ರಾಮನಗರ: ಜಿಲ್ಲೆಯಲ್ಲಿ ಗುಡುಗು, ಸಿಡಿಲು, ಗಾಳಿ ಸಹಿತ ಮಳೆಯಾಗಿದೆ. ಮಳೆ ಬಂದಾಗ ಮರದ ಕೆಳಗೆ ನಿಂತಿದ್ದ ವ್ಯಕ್ತಿಗೆ ಸಿಡಿಲು ಬಡಿದಿದ್ದು, ಬಿಡದಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಲ್ಲದೆ, ಸಿಡಿಲು ಬಡಿದು 4 ಮೇಕೆಗಳ ಸಾವನ್ನಪ್ಪಿದ್ದು, 4 ಮನೆಗಳಿಗೆ ಹಾನಿಯಾಗಿದೆ.
ತೀವ್ರ ಮಳೆ ಹಿನ್ನೆಲೆ ಕಟ್ಟೆಚ್ಚರ ವಹಿಸಲು ಬಿಬಿಎಂಪಿ ಅಧಿಕಾರಿಗಳಿಗೆ ಅಧಿಕಾರಿಗಳಿಗೆ ಡಿಸಿಎಂ ಡಿ ಕೆ ಶಿವಕುಮಾರ್ ಸೂಚನೆ ನೀಡಿದ್ದಾರೆ. ಮಳೆ ಅನಾಹುತ ಆಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ಒಂದೊಮ್ಮೆ ಅನಾಹುತಗಳ ಬಗ್ಗೆ ವರದಿಯಾದರೆ ತುರ್ತು ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು. ಇದಕ್ಕಾಗಿ ವಾರ್ ರೂಮ್ ಮೂಲಕ ಕಟ್ಟೆಚ್ಚರ ವಹಿಸಬೇಕು. ಸಂಭವನೀಯ ಮಳೆ ಅನಾಹುತಗಳ ಬಗ್ಗೆಯೂ ನಿಗಾ ವಹಿಸಬೇಕು. ಎಲ್ಲೇ ಏನೇ ಅನಾಹುತವಾದರೂ ಸಮಾರೋಪಾದಿಯಲ್ಲಿ ಪರಿಹಾರ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದ್ದಾರೆ.
ಬೆಳಗಾವಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್, ಮಾಜಿ ಡಿಸಿಎಂ ಲಕ್ಷ್ಮಣ್ ಸವದಿಗೆ ಸಚಿವ ಸ್ಥಾನ ಸಿಗದ ಹಿನ್ನೆಲೆ ಈ ನಾಯಕರನ್ನು ಭೇಟಿಯಾಗುವ ನಿಟ್ಟಿನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರು ಇಂದು ರಾತ್ರಿ 11.30ಕ್ಕೆ ವಿಶೇಷ ವಿಮಾನದಲ್ಲಿ ಬೆಳಗಾವಿಗೆ ಆಗಮಿಸುತ್ತಿದ್ದಾರೆ. ರಾತ್ರಿ ಬೆಳಗಾವಿಯ ಖಾಸಗಿ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಲಿದ್ದು, ನಾಳೆ ಬೆಳಗ್ಗೆ 8ಕ್ಕೆ ಲಕ್ಷ್ಮಣ್ ಸವದಿ ಭೇಟಿಯಾಗಲಿಯಾಗಲಿದ್ದಾರೆ. ಬಳಿಕ ಬೆಳಗಾವಿಯಿಂದ ಹುಬ್ಬಳ್ಳಿಗೆ ತೆರಳಲಿ ಶೆಟ್ಟರ್ ಅವರನ್ನು ಭೇಟಿಯಾಗಲಿದ್ದಾರೆ.
ಚಿಕ್ಕೋಡಿ: ಸುರಿದ ಭಾರೀ ಮಳೆಗೆ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಬಿರಡಿ ಗ್ರಾಮದಲ್ಲಿ ಐದಕ್ಕೂ ಹೆಚ್ಚು ಮನೆಯಗಳಿಗೆ ನೀರು ನುಗ್ಗಿದೆ. ಮನೆಯ ಮೇಲ್ಛಾವಣಿ ಹಾರಿ ಹೋಗಿ ಜನರ ಪರದಾಟ ನಡೆಸುವಂತಾಗಿದೆ. ಅರ್ಧ ಗಂಟೆ ಸುರಿದ ಭಾರಿ ಗಾಳಿ ಮಳೆಗೆ ಬಿರಡಿ ಗ್ರಾಮದಲ್ಲಿ ಆತಂಕ ಉಂಟುಮಾಡಿದೆ.
ಕೊಡಗು: ಜಿಲ್ಲೆಯ ಹಲವೆಡೆ ಧಾರಾಕಾರ ಮಳೆಯಾಗುತ್ತಿದೆ. ವಿರಾಜಪೇಟೆ, ಮಡಿಕೇರಿ ತಾಲೂಕಿನ ಹಲವೆಡೆ ಗುಡುಗು ಸಹಿತ ಮಳೆಯಾಗುತ್ತಿದ್ದು, ಹಲವೆಡೆ ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿವೆ. ವಿರಾಜಪೇಟೆ ನಗರ, ಬೇತ್ರಿ, ಸುಂಕದಕಟ್ಟೆ, ಕಾಕೋಟುಪರಂಬು, ಬಿಟ್ಟಂಗಾಲ ಕಟ್ಟೆಮಾಡು, ಮೂರ್ನಾಡು ವ್ಯಾಪ್ತಿಯಲ್ಲಿ ಮಳೆಯಾಗುತ್ತಿದೆ.
ಪಠ್ಯ ಪರಿಷ್ಕರಣೆಗೆ ಮಾಜಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಆಕ್ರೋಶ ಹೊರಹಾಕಿದ್ದಾರೆ. ಕಾಂಗ್ರೆಸ್ ಎಲ್ಲದರಲ್ಲೂ ವೋಟ್ ಬ್ಯಾಂಕ್ ರಾಜಕಾರಣ ಮಾಡುತ್ತಿದೆ. ಕಾಂಗ್ರೆಸ್ ಪಕ್ಷ ಸುಳ್ಳು ಹೇಳಿ ಮತ ಬ್ಯಾಂಕ್ ಗಟ್ಟಿಮಾಡಿಕೊಳ್ಳುತ್ತದೆ. ನಾವು ಭಾರತೀಯ ಶಿಕ್ಷಣ ಬೇಕು ಅಂತಾ ಪರಿಷ್ಕರಣೆ ಮಾಡಿದ್ದೇವೆ. ಕಾಂಗ್ರೆಸ್ ಇದಕ್ಕೆ ಕೇಸರೀಕರಣ ಅಂತಾ ಹೇಳುತ್ತಿದೆ. ನಾವು ಪಠ್ಯದಲ್ಲಿ ಸೇರಿಸಿರುವ ಯಾವ ಪಾಠ ಕೇಸರೀಕರಣ ಆಗಿದೆ ಅಂತಾ ಕಾಂಗ್ರೆಸ್ನವರು ನನಗೆ ಸ್ಪಷ್ಟೀಕರಣ ಕೊಡುವ ಅವಶ್ಯಕತೆ ಇದೆ ಎಂದರು. ವಿದ್ಯಾರ್ಥಿಗಳು ಆದರ್ಶ ಪುರುಷ ಆಗಲು ಪಠ್ಯ ಅಳವಡಿಸಿದ್ದು ಕೇಸರೀಕರಣನಾ? ಟಿಪ್ಪು ಸುಲ್ತಾನ್ ಪಾಠವನ್ನು ಒಂದಷ್ಟು ಕಡಿತ ಮಾಡಿರುವುದು ನಿಜ. ಟಿಪ್ಪು ಸುಲ್ತಾನ್ ಏನು ಮಾಡಿದ್ದಾನೆ ಅಂತಾ ಎಲ್ಲರಿಗೂ ಗೊತ್ತಿದೆ. ಶ್ರೀರಂಗಪಟ್ಟಣ ಆಂಜನೇಯ ಗದೆ ಒಡೆದು ಮಸೀದಿ ಕಟ್ಟಿದ್ದ, ಮತಾಂತರ ಆಗಿದ್ದಕ್ಕೆ ಹಿಂದೂಗಳ ಕೊಂದಿದ್ದು ಎಲ್ಲರಿಗೂ ಗೊತ್ತಿದೆ. ಅಂತಹ ಪಾಠವನ್ನು ನಮ್ಮ ಮಕ್ಕಳು ಓದಬೇಕಾ ಎಂದು ಪ್ರಶ್ನಿಸಿದರು.
ಅಧಿಕಾರಿಗಳ ಸಭೆ ಬಳಿಕ ಕೃಷಿ ಸಚಿವ ಚೆಲುವರಾಯಸ್ವಾಮಿ ಅವರು ವಿಧಾನಸೌಧದಲ್ಲಿ ಸುದ್ದಿಗೊಷ್ಠಿ ನಡೆಸಿ ಮಾತನಾಡಿ, ಪ್ರಪ್ರಥಮವಾಗಿ ರಾಜ್ಯದ ಕೃಷಿ ಇಲಾಖೆ ಅಧಿಕಾರಿಗಳ ಜೊತೆ ಸಭೆ ಮಾಡಿದ್ದೇನೆ. ಮುಂಗಾರಿಗೆ ಯಾವ ರೀತಿ ಸಿದ್ದತೆ ಬಗ್ಗೆ ಚರ್ಚೆ ಮಾಡಿದ್ದೇವೆ. ಬಿತ್ತನೆಗೆ ಏನೆಲ್ಲಾ ಕ್ರಮ ಕೈಗೊಳ್ಳಬೇಕೋ ಅದಕ್ಕೆಲ್ಲಾ ರೆಡಿ ಇದ್ದೇವೆ, ಗೊಬ್ಬರದ ವಿಷಯದಲ್ಲಿಯೂ ನಾವು ಸಿದ್ದರಿದ್ದೇವೆ. ಜೂನ್ನಲ್ಲಿ ಮುಂಗಾರು ಆರಂಭವಾಗುತ್ತೆ ಅದಕ್ಕೆ ಸಿದ್ದರಿದ್ದೀವೆ. 2 ಹೆಕ್ಟೇರ್ಗೆ ಸೀಮಿವಾದಂತರ 140 ಕೋಟಿ ಅಪ್ರೂವ್ ಆಗಬೇಕಾಗಿದೆ, ನೆಟೆ ರೋಗಕ್ಕೆ ಬಿಡುಗಡೆ ಆಗಬೇಕಾಗಿತ್ತು. ಅವರು ಅನ್ವಸ್ ಮೆಂಟ್ ಮಾಡಿದ್ರು ಕೊಡಲಿಲ್ಲ ನಾವು ಮಾಡಬೇಕಾಗಿದೆ. 1 ಕೋಟಿ ಗಿಡ ಗಳನ್ನು ನೆಡುವುದಕ್ಕೆ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದರು.
ಗ್ಯಾರಂಟಿ ಯೋಜನೆ ವಿಳಂಬಕ್ಕೆ ಮಾಜಿ ಶಾಸಕ ಸಿ.ಟಿ.ರವಿ ಕಿಡಿಕಾರಿದ್ದಾರೆ. ಚುನಾವಣೆಗೂ ಮೊದಲು ನಿನಗೂ ಫ್ರೀ, ನನಗೂ ಫ್ರೀ ಅಂದಿದ್ದರು. ಉಚಿತ, ನಿಶ್ಚಿತ, ಖಂಡಿತಾ, ಖಚಿತ ಹೀಗೆ ಹೇಳುತ್ತಿದ್ದರು. ಮೊದಲು ಯಾವುದೇ ಷರತ್ತು ಇರಲಿಲ್ಲ, ಈಗ ಷರತ್ತು ಬಂದಿದೆ, ಕಾಂಗ್ರೆಸ್ನವರು ಒಳ್ಳೆಯ ಕೆಲಸ ಮಾಡಿದ್ರೆ ಬೆಂಬಲ ಕೊಡುತ್ತೇವೆ. ಅವರು ಅರ್ಬನ್ ನಕ್ಸಲರ ಮಾತು ಕೇಳಿದರೆ ಅನುಭವಿಸುತ್ತಾರೆ. ನಾವೂ ಕೂಡ 36% ಮತಗಳನ್ನ ಪಡೆದಿದ್ದೇವೆ. ಮಹದೇವಪ್ಪ, ಸಿದ್ದರಾಮಯ್ಯ, ಕಾಕಾ ಪಾಟೀಲ್ BPL ಕಾರ್ಡ್ನವರಾ? ಸಿದ್ದರಾಮಯ್ಯ, ಮಹದೇವಪ್ಪ ಯಾರೂ ತೆರಿಗೆ ಕಟ್ಟುವುದಿಲ್ಲವಾ? ಇಂತಹವರಿಗೆ ಫ್ರೀ ಅಂತಾ ಅವರು ಮೊದಲೇ ಹೇಳಬೇಕಿತ್ತು ಎಂದರು.
ಬೆಳಗಾವಿ: ಜಿಲ್ಲಾ ವಿಭಜನೆಗೆ ನಾವು ಬದ್ದ ಎಂದ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಜಿಲ್ಲಾ ವಿಭಜನೆ ಆಗಲೇಬೇಕು ಅದರಲ್ಲಿ ಪ್ರಶ್ನೆ ಇಲ್ಲಾ. ನಾವು ಮುಖ್ಯಮಂತ್ರಿಗೆ ಮನವಿ ಮಾಡುತ್ತೇವೆ, ಒತ್ತಡ ಮಾಡುತ್ತೇವೆ. ಬಹಳದ ದೊಡ್ಡ ಜಿಲ್ಲೆ ಇದು, ಆಡಳಿತ ನಡೆಸುವುದು ಅಷ್ಟು ಸುಲಭ ಅಲ್ಲ. ಜಿಲ್ಲೆ ವಿಭಜನೆಯಾದರೂ ಮೂರು ಜಿಲ್ಲೆ ಒಳಗೆ ಎಂಟ್ರಿ ಇದೆ. ಗೋಕಾಕ್ ಆದ್ರೂ, ಚಿಕ್ಕೋಡಿ ಆದ್ರೂ ಮೂರು ಜಿಲ್ಲೆಯಾದ್ರೂ ನಂದು ಎಂಟ್ರಿ ಇದೆ. ಜಿಲ್ಲಾ ವಿಭಜನೆ ಬೇಡಲು ಎಲ್ಲರಿಗೂ ಹಕ್ಕಿದೆ ಬೇಡಲಿ ಎಂದರು. ಸಭೆಗೆ ಬಿಜೆಪಿ ಶಾಸಕರ ಗೈರು ವಿಚಾರವಾಗಿ ಮಾತನಾಡಿದ ಅವರು, ಎನಾದ್ರೂ ಕೆಲಸ ಇದ್ದಿರಬೇಕು ಅದಕ್ಕೆ ಬಂದಿಲ್ಲ. ಅವರ ಪರವಾಗಿ ನಾನು ಚರ್ಚೆ ಮಾಡುತ್ತೇನೆ ಎಂದರು.
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕೆ ನಮ್ಮ ಮೊದಲ ಆದ್ಯತೆ ಎಂದುವಿಧಾನಸೌಧದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡುತ್ತೇವೆ. ಖಾಲಿಯಿರುವ ಎಲ್ಲಾ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮಕೈಗೊಳ್ಳಲಿದೆ, ಮೇಕೆದಾಟು ಯೋಜನೆಗೆ ಸಿಎಂ ಅನುದಾನ ಮೀಸಲಿಟ್ಟಿದ್ದರು. ಮಹದಾಯಿ ಯೋಜನೆ ಮುಂದುವರಿಸಲು ಕ್ರಮಕೈಗೊಳ್ಳುತ್ತೇವೆ. ಹಿಂದಿನ ಸರ್ಕಾರ ಏನು ಮಾಡಿತ್ತು ಎಂದು ಚರ್ಚೆ ಮಾಡುವುದಿಲ್ಲ. ರಾಜ್ಯದ ಜನತೆ ನಮ್ಮ ಮೇಲಿಟ್ಟಿರುವ ವಿಶ್ವಾಸ ಉಳಿಸಿಕೊಳ್ಳುತ್ತೇವೆ ಎಂದರು.
ಬೆಂಗಳೂರು: ಮಹಾನಗರದ ಹಲವೆಡೆ ಧಾರಾಕಾರ ಮಳೆಯಾಗುತ್ತಿದ್ದು, ಮೆಜೆಸ್ಟಿಕ್, ಶಾಂತಿನಗರ, ಕಾರ್ಪೋರೇಷನ್, ಶಾಂತಿನಗರ
ಲಾಲ್ಬಾಗ್, ವಿಧಾನಸೌಧ, ಕಬ್ಬನ್ಪಾರ್ಕ್ ಸುತ್ತಮುತ್ತ ಮಳೆ ಅಬ್ಬರದ ಮಳೆ ಸುರಿಯುತ್ತಿದೆ. ಈಗಾಗಲೇ ಹವಾಮಾನ ಇಲಾಖೆಯಿಂದ ನಾಳೆ(ಮೇ.31), ನಾಡಿದ್ದು(ಜೂ.1) ಯಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಜಲಸಂಪನ್ಮೂಲ ಇಲಾಖೆ ಅಧಿಕಾರಿಗಳ ಸಭೆ ನಡೆಯುತ್ತಿದೆ. ವಿಕಾಸಸೌಧದಲ್ಲಿ ಸಭೆ ನಡೆಯುತ್ತಿದ್ದು, ಎಲ್ಲರ ಪೋನ್ ಆಫ್ ಮಾಡಿ, ಯಾರು ವಿಡಿಯೋ ಮಾಡಬೇಡಿ. ಯಾವ ಮಷಿನ್ ಹೇಗೆ ಕೆಲಸ ಮಾಡುತ್ತೆ ಅಂತಾ ನನಗೆ ಗೊತ್ತಿದೆ. ಗಂಭೀರತೆ ಕಾಯ್ದುಕೊಳ್ಳುವಂತೆ ಅಧಿಕಾರಿಗಳಿಗೆ ಡಿಕೆ ಶಿವಕುಮಾರ್ ಸೂಚನೆ ನೀಡಿದ್ದಾರೆ.
ಬೆಂಗಳೂರು: ಮಹಿಳೆಯರಿಗೆ ಉಚಿತ ಬಸ್ ಪಾಸ್ ವಿತರಣೆ ಸಂಬಂಧ ಸಾರಿಗೆ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ. ಶಾಂತಿನಗರದ ಕೆಎಸ್ಆರ್ಟಿಸಿ ಕಚೇರಿಯಲ್ಲಿ ಸಭೆ ನಡೆಯುತ್ತಿದೆ. ಪ್ರತಿ ವರ್ಷ ಅಂದಾಜು 3,200 ಕೋಟಿ ಹಣ ಬೇಕಾಗುತ್ತದೆ. ಸಾರಿಗೆ ಇಲಾಖೆಯ ನಾಲ್ಕು ನಿಗಮಗಳು ನಷ್ಟದಲ್ಲಿರುವ ಹಿನ್ನೆಲೆ ಸರ್ಕಾರ ಸಹಾಯಧನ ನೀಡಿದರೇ ಯೋಜನೆ ಜಾರಿಗೆ ಮಾಡಲು ಅನುಕೂಲವಾಗುತ್ತದೆ ಎಂದು ಸಭೆಯಲ್ಲಿ ಅಧಿಕಾರಿಗಳು ಮನವಿ ಮಾಡಿದ್ದಾರೆ.
ಬೆಂಗಳೂರು: ಹಂತ ಹಂತವಾಗಿ ಶಾಲಾ ಪಠ್ಯ ಪರಿಷ್ಕರಣೆ ಮಾಡುತ್ತೇವೆ. ಪಠ್ಯ ಪರಿಷ್ಕರಣೆ ಬಗ್ಗೆ ಈಗಾಗಲೆ ಪ್ರಣಾಳಿಕೆಯಲ್ಲಿ ಹೇಳಿದ್ದೇವೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ಚರ್ಚಿಸಿದ್ದೇವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಲವೊಂದು ಸಲಹೆಗಳನ್ನು ನೀಡಿದ್ದಾರೆ. ಹಿಜಾಬ್ ವಿಚಾರವಾಗಿ ಕೆಲವೊಂದು ಕಾನೂನು ತೊಡಕುಗಳಿವೆ. ಎಲ್ಲಾ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ರೀತಿ ಕ್ರಮ ಕೈಗೊಳ್ಳುತ್ತೇವೆ. ಶಾಲೆಗಳು ಪ್ರಾರಂಭ ಹಿನ್ನೆಲೆ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ. ನಾಳೆ ಶಿವಮೊಗ್ಗ ಗ್ರಾಮಾಂತರ ಶಾಲೆಗೆ ಭೇಟಿ ನೀಡುತ್ತಿದ್ದೇನೆ. ಪಠ್ಯ ಪುಸ್ತಕ, ಸಮವಸ್ತ್ರ ವಿತರಣೆಯಲ್ಲಿ ಯಾವುದೇ ಗೊಂದಲವಿಲ್ಲ ಎಂದು ಬೆಂಗಳೂರಿನಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಬೆಳಗಾವಿ: ತರಬೇತಿ ವಿಮಾನವೊಂದು ಬೆಳಗಾವಿ ತಾಲೂಕಿನ ಹೊನ್ನಿಹಾಳ ಹೊರವಲಯದ ಮೋದಗಾ, ಬಾಗೇವಾಡಿ ರಸ್ತೆ ರಸ್ತೆ ಬದಿಯ ಹೊಲದಲ್ಲಿ ತುರ್ತು ಭೂಸ್ಪರ್ಶವಾಗಿದೆ. ಘಟನೆಯಲ್ಲಿ ತರಬೇತುದಾರನ ಕಾಲಿಗೆ ಗಾಯವಾಗಿದೆ. ಇನ್ನು ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು, ಏರ್ ಫೋರ್ಸ್ ಅಧಿಕಾರಿಗಳು ದೌಡಾಯಿಸಿದ್ದಾರೆ.
ತುಮಕೂರು: ರಾಜಕೀಯ ದ್ವೇಷಕ್ಕಾಗಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿರುವ ಘಟನೆ ಮಧುಗಿರಿ ತಾಲೂಕಿನ ಕಡಗತ್ತೂರು ಗ್ರಾಮದಲ್ಲಿ ನಡೆದಿದೆ. ಮಧುಗಿರಿ ಕ್ಷೇತ್ರದಲ್ಲಿ ಜೆಡಿಎಸ್ ಸೋತಿರುವ ವಿಚಾರಕ್ಕೆ ಜೆಡಿಎಸ್ ಮುಖಂಡ ಮುದ್ದಪ್ಪ ಹಾಗೂ ಕಾಂಗ್ರೆಸ್ ಮುಖಂಡ ಕೃಷ್ಣಪ್ಪ ಮಧ್ಯೆ ವಾಗ್ವಾದ ನಡೆದಿದೆ.
ಹಾಸನ: ಬಿರುಗಾಳಿ ಸಹಿತ ಮಳೆಯಿಂದಾಗಿ ಹಾಸನ ಜಿಲ್ಲೆಯಲ್ಲಿ ಅಪಾರ ಹಾನಿಯಾಗಿದೆ. ನಿನ್ನೆ (ಮೇ.29) ಸುರಿದ ಭಾರಿ ಮಳೆ, ಬಿರುಗಾಳಿಗೆ ಹಲವೆಡೆ ಅವಾಂತರ ಸೃಷ್ಟಿಯಾಗಿದೆ. ಬೇಲೂರು ತಾಲೂಕಿನಲ್ಲಿ ನೆಲಕ್ಕುರುಳಿದ ವಿದ್ಯುತ್ ಕಂಬಗಳು, ಮರಗಳು ಧರೆಗೆ ಉರುಳಿದ್ದರೇ, ಬಿರುಗಾಳಿಗೆ ಮನೆಯ ಮೇಲ್ಛಾವಣಿಗೆ ಹಾಕಿದ್ದ ಶೀಟ್ಗಳು ಹಾರಿಹೋಗಿವೆ. ಅಲ್ಲದೇ ನೂರಾರು ಎಕರೆಯಲ್ಲಿ ಬೆಳೆದಿದ್ದ ಬಾಳೆ ತೋಟ ಸಂಪೂರ್ಣ ನಾಶವಾಗಿದೆ.
Published On - 9:49 am, Tue, 30 May 23