Amazon Kannada Insult: ಮಹಿಳೆಯರ ಒಳ ಉಡುಪುಗಳ ಮೇಲೆ ಕನ್ನಡ ಬಾವುಟ, ಲಾಂಛನ ಪ್ರಕರಣ; ಅಮೆಜಾನ್ ವಿರುದ್ಧ ಕಾನೂನು ಕ್ರಮ: ಸಚಿವ ಅರವಿಂದ ಲಿಂಬಾವಳಿ

| Updated By: guruganesh bhat

Updated on: Jun 05, 2021 | 8:15 PM

ಕನ್ನಡ ಮತ್ತು ಸಂಸ್ಕೃತಿ ಸಚಿವನಾಗಿ ನಾನು ಇಂತಹ ಕೃತ್ಯದ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದು ಅವಶ್ಯವೆಂದು ಭಾವಿಸಿ ಅಮೆಜಾನ್ ಕೆನಡಾ ಸಂಸ್ಥೆಯ ವಿರುದ್ಧ ಕೂಡಲೇ ಕಾನೂನು ಕ್ರಮ ಜರುಗಿಸಲು ಸೂಚಿಸುತ್ತೇನೆ ಎಂದು ಸಚಿವ ಅರವಿಂದ ಲಿಂಬಾವಳಿ ಹೇಳಿದ್ದಾರೆ.

Amazon Kannada Insult: ಮಹಿಳೆಯರ ಒಳ ಉಡುಪುಗಳ ಮೇಲೆ ಕನ್ನಡ ಬಾವುಟ, ಲಾಂಛನ ಪ್ರಕರಣ; ಅಮೆಜಾನ್ ವಿರುದ್ಧ ಕಾನೂನು ಕ್ರಮ: ಸಚಿವ ಅರವಿಂದ ಲಿಂಬಾವಳಿ
ಸಚಿವ ಅರವಿಂದ ಲಿಂಬಾವಳಿ
Follow us on

ಬೆಂಗಳೂರು: ಹೆಣ್ಣುಮಕ್ಕಳ ಒಳಉಡುಪಿನ ಮೇಲೆ ಕನ್ನಡದ ಬಾವುಟದ ಬಣ್ಣಗಳನ್ನು ಹಾಗೂ ಕರ್ನಾಟಕದ ರಾಜ್ಯ ಲಾಂಛನವನ್ನು ಬಳಸಿರುವ ಅಮೆಜಾನ್ ಕೆನಡಾ ಸಂಸ್ಥೆಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ,ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಹೇಳಿದ್ದಾರೆ.

ಕನ್ನಡದ ಭಾಷೆ, ಸಂಸ್ಕೃತಿ ಮತ್ತು ಪರಂಪರೆಗೆ ಸಾವಿರಾರು ವರ್ಷಗಳ ಇತಿಹಾಸವಿದೆ. ಕನ್ನಡ ನೆಲದ ಶ್ರೇಷ್ಠತೆಯ ಅರಿವಿಲ್ಲದ ವಿದೇಶಿ ಸಂಸ್ಥೆಗಳು ಕನ್ನಡದ ಅಸ್ಮಿತೆಗೆ ಅವಮಾನ ಮಾಡುವಂತಹ ಯಾವುದೇ ಕೆಲಸ ಮಾಡಿದರೂ ಅದನ್ನು ನಾನು ಪ್ರಬಲವಾಗಿ ಖಂಡಿಸುತ್ತೇನೆ. ಕನ್ನಡ ನೆಲದ ಭಾವನೆಗೆ ಧಕ್ಕೆ ಮಾಡುವಂತಹ ಯಾವುದೇ ಕ್ರಮಕ್ಕೆ ನನ್ನ ತೀವ್ರ ವಿರೋಧವಿದೆ. ಕನ್ನಡ ಮತ್ತು ಸಂಸ್ಕೃತಿ ಸಚಿವನಾಗಿ ನಾನು ಇಂತಹ ಕೃತ್ಯದ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದು ಅವಶ್ಯವೆಂದು ಭಾವಿಸಿ ಅಮೆಜಾನ್ ಕೆನಡಾ ಸಂಸ್ಥೆಯ ವಿರುದ್ಧ ಕೂಡಲೇ ಕಾನೂನು ಕ್ರಮ ಜರುಗಿಸಲು ಸೂಚಿಸುತ್ತೇನೆ ಎಂದು ಸಚಿವ ಅರವಿಂದ ಲಿಂಬಾವಳಿ ಹೇಳಿದ್ದಾರೆ.

Amazon Kannada Insult: ಆ ಗೂಗಲ್ ಆಯ್ತು, ಈಗ ಅಮೆಜಾನ್‌ ಆನ್​ಲೈನ್ ಶಾಪಿಂಗ್​ನಲ್ಲೂ ಕನ್ನಡ ಧ್ವಜ, ಲಾಂಛನಕ್ಕೆ ಅಪಮಾನ

ಬೃಹತ್​ ಸರ್ಚ್​ ಇಂಜಿನ್ ಗೂಗಲ್ ಬಳಿಕ ಇದೀಗ ಮತ್ತೊಂದು ವಿಶ್ವವ್ಯಾಪಿ ಅಮೆಜಾನ್‌ ಆನ್​ಲೈನ್ ಶಾಪಿಂಗ್ ಸಂಸ್ಥೆಯಿಂದಲೂ ಕನ್ನಡಿಗರ ಪ್ರಾಣನುಡಿ, ಸಂಸ್ಕೃತಿಗೆ ಅಪಮಾನ ನಡೆದಿತ್ತು. ಅಮೆಜಾನ್ ಆನ್‌ಲೈನ್ ಶಾಪಿಂಗ್‌ ವೆಬ್​ಸೈಟ್​​ನಲ್ಲಿ ಈ ಅಪಮಾನ ನಡೆದಿತ್ತು. ಆನ್​ಲೈನ್​ ಮೂಲಕ ಮಾರಾಟ ಮಾಡುವ ಮಹಿಳೆಯರ ಒಳಉಡುಪುಗಳ ಮೇಲೆ ಕನ್ನಡ ಬಾವುಟ, ಲಾಂಛನದ ಬಳಕೆಯಾಗಿದೆ. ಅಮೆಜಾನ್ ಆನ್​ಲೈನ್ ಶಾಪಿಂಗ್ ವೆಬ್ ಸೈಟ್ ನಲ್ಲಿ ಕನ್ನಡ ಧ್ವಜ, ಲಾಂಛನಕ್ಕೆ ಹೀಗೆ ಅಪಮಾನ ಆಗಿರುವುದನ್ನು ಖಂಡಿಸಿ, ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಪ್ರವೀಣ್ ಶೆಟ್ಟಿ ತೀವ್ರ ಆಕ್ರೋಶ, ವಿರೋಧ ವ್ಯಕ್ತಪಡಿಸಿದ್ದಾರೆ.

ಅಮೆಜಾನ್ ಕಂಪನಿ ಮಹಿಳೆಯರ ಒಳ ಉಡುಪಿನಲ್ಲಿ ನಮ್ಮ ಕನ್ನಡದ ಬಾವುಟ, ಭಾರತದ ಅಶೋಕ ಚಕ್ರ, ಕರ್ನಾಟಕದ ಲಾಂಛನವನ್ನ ಹಾಕುವ ಮೂಲಕ ಕನ್ನಡಿಗಯರಿಗೆ ಹಾಗೂ ಭಾರತೀಯರಿಗೆ ನೋವುಂಟು ಮಾಡಿದೆ. ರಾಜ್ಯದ ಮುಖ್ಯಮಂತ್ರಿ ಮತ್ತು ಗೃಹ ಸಚಿವರು ಇಂತಹ ದುಷ್ಟ ಶಕ್ತಿಗಳ ಹುನ್ನಾರವನ್ನು ಬಗ್ಗು ಬಡಿಯಬೇಕು ಎಂದು ಎಲ್ಲ ಕನ್ನಡಿಗರ ಪರವಾಗಿ ಅವರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: CET 2021: ಪಿಯು ಪರೀಕ್ಷೆ ರದ್ದುಗೊಂಡರೂ ಸಿಇಟಿ ನಡೆಯಲಿದೆ: ಡಿಸಿಎಂ ಅಶ್ವತ್ಥ್ ನಾರಾಯಣ

Ugliest Language of India: ಕನ್ನಡಿಗರ ಕ್ಷಮೆ ಕೇಳಿದ ಗೂಗಲ್​; ಕನ್ನಡದಲ್ಲೇ ಟ್ವೀಟ್​ ಮಾಡಿ ತಪ್ಪೊಪ್ಪಿಕೊಂಡ ಸಂಸ್ಥೆ

(Kannada flag logo case on womens underwear will take Legal action against Amazon says Minister Arvind Limbavali)