AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಳದಿ-ಕೆಂಪು ಧ್ವಜದಲ್ಲಿ ಮತ್ತೊಂದು ಬಣ್ಣ, ಖಾಸಗಿ ಕಂಪನಿ-ಸರ್ಕಾರಿ ಕಚೇರಿಗಳಲ್ಲಿ ಕನ್ನಡ ಬಾವುಟ: ಡಿಕೆಶಿ ಘೋಷಣೆ

ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿಆಯೋಜಿಸಿರುವ 71 ಕನ್ನಡ ರಾಜ್ಯೋತ್ಸವದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಧ್ವಜಾರೋಹಣ ಮಾಡಿದರು. ಈ ವೇಳೆ ಡಿಕೆ ಶಿವಕುಮಾರ್ ಅವರು ಕರ್ನಾಟಕವನ್ನುದ್ದೇಶಿಸಿ ಮಾತನಾಡಿದ್ದು, ಈ ವೇಳೆ ಕನ್ನಡ ಧ್ವಜ ಹಾಗೂ ಕನ್ನಡ ನಾಡಿನ ಸಂಸ್ಕೃತಿ ಬಗ್ಗೆ ಮಾತನಾಡಿದರು. ಅಲ್ಲದೇ ಪ್ರಮುಖವಾಗಿ ಕನ್ನಡ ಧ್ವಜ ಹಳದಿ-ಕೆಂಪು ಧ್ವಜದಲ್ಲಿ ಮತ್ತೊಂದು ಬಣ್ಣ ಸೇರಿಸುವ ಬಗ್ಗೆಯೂ ಹೇಳಿದ್ದಾರೆ.

ಹಳದಿ-ಕೆಂಪು ಧ್ವಜದಲ್ಲಿ ಮತ್ತೊಂದು ಬಣ್ಣ, ಖಾಸಗಿ ಕಂಪನಿ-ಸರ್ಕಾರಿ ಕಚೇರಿಗಳಲ್ಲಿ ಕನ್ನಡ ಬಾವುಟ: ಡಿಕೆಶಿ ಘೋಷಣೆ
Dk Shivakumar
ರಮೇಶ್ ಬಿ. ಜವಳಗೇರಾ
|

Updated on:Nov 01, 2026 | 10:31 AM

Share

ಬೆಂಗಳೂರು, (ನವೆಂಬರ್ 01):  ಕಂಠೀರವ ಕ್ರೀಡಾಂಗಣದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 71ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಆಯೋಜಿಸಿದ್ದು, ಸಿಎಂ ಡಿ.ಕೆ.ಶಿವಕುಮಾರ್​​ ಧ್ವಜಾರೋಹಣ ನೆರವೇರಿಸಿದರು. ಬಳಿಕ ರಾಜ್ಯವನ್ನುದ್ದೇಶಿಸಿ ಮಾತನಾಡಿದ ಡಿಕೆ ಶಿವಕುಮಾರ್, ಸರ್ಕಾರಿ ಕಚೇರಿಗಳ ಮೇಲೆ ಬಾವುಟವನ್ನ ಹರಿಸುವುದು ಕಡ್ಡಾಯ ಮಾಡಲಾಗುವುದು. ಖಾಸಗಿ ಕಂಪನಿಗಳಲ್ಲೂ ಕನ್ನಡದ ಬಾವುಟವನ್ನು ಹಾರಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ವಿಧಾನಸೌಧದ ಮೇಲೆಯೂ ಈ ಧ್ವಜ ಹಾರಿಸುವ ಬಗ್ಗೆಯೂ ಚರ್ಚೆಗಳು ನಡೆಯುತ್ತಿವೆ ಎಂದು ಹೇಳಿದರು.

ರ್ಕಾರಿ‌ ಕಚೇರಿ ,‌ ಖಾಸಗಿ ಕಚೇರಿಗಳ ಮೇಲೆ ಕನ್ನಡ ಬಾವುಟ

ಕಂಠೀರವ ಕ್ರೀಡಾಂಗಣದಲ್ಲಿ ಧ್ವಜಾರೋಹಣ ಮಾಡಿದ ಬಳಿಕ ರಾಜ್ಯವನ್ನುದ್ದೇಶಿಸಿ ಮಾತನಾಡಿದ ಡಿಕೆ ಶಿವಕುಮಾರ್, ಕರ್ನಾಟಕದ ಜನತೆಗೆ 71ನೇ ಕನ್ನಡ ರಾಜ್ಯೋತ್ಸವದ ಶುಭಾಶಯ ತಿಳಿಸಿದರು. ಈ‌ ಭಾಷೆಗೆ ಯಾವುದೇ ಗಡಿ ಇಲ್ಲ. ಬ್ರಿಟೀಷರಿಗೆ ನಮ್ಮ‌ಮಾತೃಭಾಷೆ ಯಾವುದು ನಮೂದು‌ ಮಾಡಿ ಅಂತಾ ಬಿಟ್ಟು ಹೋದ‌ ಇತಿಹಾಸ ಇದೆ. ಎಲ್ಲಾ ಸರ್ಕಾರಿ‌ ಕಚೇರಿಗಳ ಮೇಲೆ ,‌ ಖಾಸಗಿ ಕಚೇರಿಗಳ ಮೇಲೆ ಕನ್ನಡ ಬಾವುಟ ಹಾರಿಸಲು ಆದೇಶ ಹೊರಡಿಸಲು ಸಿದ್ಧತೆ ಮಾಡ್ಕೊಂಡಿದೇವೆ. ನಿನ್ನೆ ಮೊನ್ನೆ ಕೂಡ ಕಾನೂನು ತಜ್ಞರ ಜೊತೆ ಚರ್ಚೆ ಮಾಡಿದ್ದೇನೆ. ಈ ಅಧಿವೇಶನದಲ್ಲಿ ಕೆಲವು ವಿಚಾರಗಳನ್ನ ಮಂಡನೆ ಮಾಡುತ್ತೇವೆ. ನಮ್ಮ ಧ್ವಜವನ್ನು ನಾವು ಎಲ್ಲಾ ಕಡೆ ಬಳಸಲು ಬದ್ಧರಾಗಿರಬೇಕು. ಬೇರೆ ಯಾವ ರಾಜ್ಯದಲ್ಲೂ ಹೀಗೆ ಧ್ವಜ ಬಳಕೆ ಇಲ್ಲ. ಸಾರ್ವಜನಿಕ ಚರ್ಚೆ, ಶಾಸಕರ ಚರ್ಚೆಗೆ ಅವಕಾಶ ಮಾಡಿಕೊಡುತ್ತೇವೆ. ಜೊತೆಗೆ ಕೇಂದ್ರಕ್ಕೆ ನಿರ್ಣಯ ಕಳಿಸಿಕೊಡ್ತೇವೆ ಎಂದರು.

ಇದನ್ನೂ ನೋಡಿ: ಬೆಳಗಾವಿಯಲ್ಲಿ ಕಳೆಗಟ್ಟಿದ ಕನ್ನಡ ಹಬ್ಬ:ಮಧ್ಯರಾತ್ರಿಯಿಂದಲೇ ಕನ್ನಡ ರಾಜ್ಯೋತ್ಸವ ಆಚರಣೆ

ಧ್ವಜದಲ್ಲಿ ಹೊಸ ಬಣ್ಣ ಮತ್ತು ರಾಜ್ಯ ಲಾಂಛನ

ಕನ್ನಡ ನಾಡಿನ ಸಾಂಪ್ರದಾಯಿಕ ಹಳದಿ ಮತ್ತು ಕೆಂಪು ಬಣ್ಣದ ಧ್ವಜದಲ್ಲಿ ಮತ್ತೊಂದು ಬಣ್ಣವನ್ನು ಹಾಗೂ ಮಧ್ಯ ಭಾಗದಲ್ಲಿ ಕರ್ನಾಟಕದ ರಾಜ್ಯ ಲಾಂಛನವನ್ನು ಅಳವಡಿಸಲು ನಿರ್ಧರಿಸಲಾಗಿದೆ. ಧ್ವಜ 71-72 ರ ಚೌಕಟ್ಟಿನಲ್ಲಿ ವಿವಿಧ ರೀತಿಯಲ್ಲಿ ಸಂಭ್ರಮಿಸಲು ಮತ್ತು ಆಚರಿಸಲು ಸೂಕ್ತ ಮಾರ್ಗದರ್ಶನಗಳೊಂದಿಗೆ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದೆ. ಈ ಬಗ್ಗೆ ಅಧಿವೇಶನದಲ್ಲಿ ಚರ್ಚೆ ಮಾಡಿ ನಂತರ ಅನುಮತಿಗಾಗಿ ಕೇಂದ್ರಕ್ಕೆ ಕಳಿಸಿಕೊಡಲಾಗುವುದು ಎಂದು ತಿಳಿಸಿದರು.

‘ಭುವನೇಶ್ವರಿ ತಾಯಿ ಕನ್ನಡವನ್ನು ಕಾಪಾಡುವ ದೇವತೆ. ನಾವಿಂದು ತಾಯಿಗೆ ಪೂಜೆ ಸಲ್ಲಿಸಿದ್ದೇವೆ. ಕನ್ನಡ ಭಾಷೆಗೆ ಯಾವುದೇ ಗಡಿಗಳಿಲ್ಲ. ಬ್ರಿಟಿಷರ ಆಡಳಿತ ಕಾಲದಲ್ಲೂ ಮಕ್ಕಳಿಗೆ ಮಾತೃಭಾಷೆಯನ್ನು ಆಯ್ಕೆ ಮಾಡಿಕೊಳ್ಳುವ ಇತಿಹಾಸವಿತ್ತು. ಸಾಂಸ್ಕೃತಿಕವಾಗಿ ಈ ಭಾಷೆಗೆ ಸುದೀರ್ಘ ಇತಿಹಾಸವಿದೆ. ಇಂತಹ ಧ್ವಜ ಮಾದರಿ ಬೇರೆ ಯಾವುದೇ ರಾಜ್ಯದಲ್ಲೂ ಇಲ್ಲ. ನಮ್ಮ ಉಸಿರು, ನಮ್ಮ ಭಾಷೆ, ನೆಲ ಹಾಗೂ ಧ್ವಜವನ್ನು ರಕ್ಷಿಸಲು ನಾವು ಸದಾ ಬದ್ಧರಾಗಿದ್ದೇವೆ. ದೇಶ-ವಿದೇಶಗಳಲ್ಲಿ ಕನ್ನಡ ಭಾಷೆ ಮತ್ತು ಸಂಸ್ಕೃತಿಯನ್ನು ಬೆಳೆಸುತ್ತಿರುವ ಎಲ್ಲಾ ಕನ್ನಡಿಗರಿಗೂ ಹೆಮ್ಮೆಯಿಂದ ಧನ್ಯವಾದಗಳನ್ನು ಅರ್ಪಿಸುವುದಾಗಿ’ ಅವರು ಹೇಳಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:23 am, Sun, 1 November 26

Follow Us
ರಮೇಶ್ ಬಿ. ಜವಳಗೇರಾ
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
ಇಂದು ಈ ರಾಶಿಯವರಿಗೆ ಗಜಕೇಸರಿ ಯೋಗ!
ಇಂದು ಈ ರಾಶಿಯವರಿಗೆ ಗಜಕೇಸರಿ ಯೋಗ!
ಗಾಂಧಿ ಹತ್ಯೆಯ ನಾಟಕದ ವೇಳೆ ನಿರ್ದೇಶಕರಿಗೆ ಮಸಿ ಬಳಿದ ಕೈ ಕಾರ್ಯಕರ್ತರು
ಗಾಂಧಿ ಹತ್ಯೆಯ ನಾಟಕದ ವೇಳೆ ನಿರ್ದೇಶಕರಿಗೆ ಮಸಿ ಬಳಿದ ಕೈ ಕಾರ್ಯಕರ್ತರು
ಉತ್ತರ ಭಾರತದ ಮೊದಲ ಬುಲೆಟ್ ಟ್ರೈನ್ ಕಾರಿಡಾರ್‌ಗೆ ಪ್ರಧಾನಿ ಮೋದಿ ಒಪ್ಪಿಗೆ
ಉತ್ತರ ಭಾರತದ ಮೊದಲ ಬುಲೆಟ್ ಟ್ರೈನ್ ಕಾರಿಡಾರ್‌ಗೆ ಪ್ರಧಾನಿ ಮೋದಿ ಒಪ್ಪಿಗೆ
ಧನುಷ್‌ಗೆ ಮೀಟರ್ ಇಲ್ಲ; ಸೌಂದರ್ಯಾ ಮಾತಿಗೆ ಹೊತ್ತಿ ಉರಿದ ಮನೆ
ಧನುಷ್‌ಗೆ ಮೀಟರ್ ಇಲ್ಲ; ಸೌಂದರ್ಯಾ ಮಾತಿಗೆ ಹೊತ್ತಿ ಉರಿದ ಮನೆ
ಜಿಲ್ಲೆ ಜಿಲ್ಲೆಯಲ್ಲೂ ಕಬ್ಬು ಬೆಳೆಗಾರರ ಕಿಚ್ಚು: ರಾಜ್ಯಾದ್ಯಂತ ಹೋರಾಟ
ಜಿಲ್ಲೆ ಜಿಲ್ಲೆಯಲ್ಲೂ ಕಬ್ಬು ಬೆಳೆಗಾರರ ಕಿಚ್ಚು: ರಾಜ್ಯಾದ್ಯಂತ ಹೋರಾಟ
ಸರ್ದಾರ್ ವಲ್ಲಭಭಾಯಿ ಪಟೇಲ್ ಏಕತಾ ಪ್ರತಿಮೆಗೆ ಪ್ರಧಾನಿ ಮೋದಿ ಪುಷ್ಪ ನಮನ
ಸರ್ದಾರ್ ವಲ್ಲಭಭಾಯಿ ಪಟೇಲ್ ಏಕತಾ ಪ್ರತಿಮೆಗೆ ಪ್ರಧಾನಿ ಮೋದಿ ಪುಷ್ಪ ನಮನ
ಗುಜರಾತ್‌ನಲ್ಲಿ 400 ಕೋಟಿಗೂ ಅಧಿಕ ವೆಚ್ಚದ ಯೋಜನೆಗಳಿಗೆ ಮೋದಿ ಚಾಲನೆ
ಗುಜರಾತ್‌ನಲ್ಲಿ 400 ಕೋಟಿಗೂ ಅಧಿಕ ವೆಚ್ಚದ ಯೋಜನೆಗಳಿಗೆ ಮೋದಿ ಚಾಲನೆ
ದಾಖಲೆ ಇಲ್ಲದ ಜಮೀನಿಗೆ ಇ-ಸ್ವತ್ತು: ಗ್ರಾಮೀಣ ಭಾಗದ ಜನರಿಗೆ ಗುಡ್​ ನ್ಯೂಸ್
ದಾಖಲೆ ಇಲ್ಲದ ಜಮೀನಿಗೆ ಇ-ಸ್ವತ್ತು: ಗ್ರಾಮೀಣ ಭಾಗದ ಜನರಿಗೆ ಗುಡ್​ ನ್ಯೂಸ್
ಬೆನ್ನಹಿಂದೆ ಚಾಕು ಹಾಕಿದ ಯಶಸ್; ಸುದೀಪ್ ಎದುರೇ ಎದ್ದು ನಡೆದ ಸೌಂದರ್ಯಾ
ಬೆನ್ನಹಿಂದೆ ಚಾಕು ಹಾಕಿದ ಯಶಸ್; ಸುದೀಪ್ ಎದುರೇ ಎದ್ದು ನಡೆದ ಸೌಂದರ್ಯಾ
ನದಿ ತಿರುವು ವಿರೋಧಿಸಿ ಸಿಎಂ, ಪ್ರಧಾನಿಗೆ ಪತ್ರ ಬರೆದ ಶಿರಸಿಯ ಶಾಲಾ ಮಕ್ಕಳು
ನದಿ ತಿರುವು ವಿರೋಧಿಸಿ ಸಿಎಂ, ಪ್ರಧಾನಿಗೆ ಪತ್ರ ಬರೆದ ಶಿರಸಿಯ ಶಾಲಾ ಮಕ್ಕಳು