AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ನಡೆಯುವ ಕೇಂದ್ರ ಮತ್ತು ರಾಜ್ಯ ಸರ್ಕಾರದ ಕಾರ್ಯಕ್ರಮಗಳಲ್ಲಿ ಕನ್ನಡ ಬಳಕೆ‌ ಕಡ್ಡಾಯ

ಇನ್ನು ಮುಂದೆ ರಾಜ್ಯದಲ್ಲಿ ನಡೆಯುವ ಕೇಂದ್ರ ಮತ್ತು ರಾಜ್ಯ ಸರ್ಕಾರದ ಕಾರ್ಯಕ್ರಮಗಳ ಆಯೋಜನೆಯಲ್ಲಿ ಕನ್ನಡ ಬಳಕೆ‌ಯನ್ನು ಕಡ್ಡಾಯಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. 

ರಾಜ್ಯದಲ್ಲಿ ನಡೆಯುವ ಕೇಂದ್ರ ಮತ್ತು ರಾಜ್ಯ ಸರ್ಕಾರದ ಕಾರ್ಯಕ್ರಮಗಳಲ್ಲಿ ಕನ್ನಡ ಬಳಕೆ‌ ಕಡ್ಡಾಯ
ಪ್ರಾತಿನಿಧಿಕ ಚಿತ್ರ
TV9 Web
| Updated By: ವಿವೇಕ ಬಿರಾದಾರ|

Updated on:Sep 06, 2022 | 8:45 PM

Share

ಬೆಂಗಳೂರು: ಇನ್ನು ಮುಂದೆ ರಾಜ್ಯದಲ್ಲಿ ನಡೆಯುವ ಕೇಂದ್ರ ಮತ್ತು ರಾಜ್ಯ ಸರ್ಕಾರದ ಕಾರ್ಯಕ್ರಮಗಳ ಆಯೋಜನೆಯಲ್ಲಿ ಕನ್ನಡ ಬಳಕೆ‌ಯನ್ನು ಕಡ್ಡಾಯಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.

Letter

ಸುತ್ತೋಲೆ 

ಕನ್ನಡವನ್ನು ಕರ್ನಾಟಕ ರಾಜ್ಯದ ಆಡಳಿತ ಭಾಷೆಯಾಗಿ ಇರತಕ್ಕದೊಂದು ಕರ್ನಾಟಕ ಭಾಷಾ ಅಧಿನಿಯಮ, 1953ರಲ್ಲಿ, ನಿರ್ದಿಷ್ಟಪಡಿಸಲಾಗಿರುತ್ತದೆ. ಕರ್ನಾಟಕದಲ್ಲಿ ಕನ್ನಡವು ಅಡಳಿತ ಭಾಷೆಯ ಜೊತೆಗೆ ಸಾರ್ವಭೌಮ ಭಾಷೆಯಾಗಿದೆ ಕನ್ನಡವನ್ನು ರಾಜ್ಯದಲ್ಲಿ ಆಡಳಿತ ಭಾಷೆಯಾಗಿ ಅನುಷ್ಠಾನಗೊಳಿಸುವ ಸಂಬಂಧ ಕನ್ನಡ ಭಾಷೆ ಮತ್ತು ಕನ್ನಡಿಗರ ಹಿತಾಸಕ್ತಿಯನ್ನು ಕಾನೂನಿನನ್ವಯ ಸಂರಕ್ಷಿಸುವ ಸಲುವಾಗಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ರಚನೆಯಾಗಿದೆ.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ದಿನಾಂಕ: 06.09.2022ರಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಕಾರ್ಯಕ್ರಮಗಳಲ್ಲಿ ಕನ್ನಡ ಭಾಷೆಯನ್ನು ಬಳಸದಿರುವ ಬಗ್ಗೆ ಪ್ರಸ್ತಾಪಿಸಿರುತ್ತಾರೆ. ಈ ಬಗ್ಗೆ ವೇದಿಕೆ ಮೇಲೆ ಆಳವಡಿಸಲಾಗುವ ಪರದೆಗಳಲ್ಲಿ ಫಲಕಗಳಲ್ಲಿ ಹಾಗೂ ಒಟ್ಟಾರೆಯಾಗಿ ಕಾರ್ಯಕ್ರಮದಲ್ಲಿ ಕನ್ನಡವನ್ನು ಕಡ್ಡಾಯವಾಗಿ ಬಳಸುವಂತೆ ಸರ್ಕಾರದ ಎಲ್ಲಾ ಇಲಾಖೆಗಳ ಮುಖ್ಯಸ್ಥರಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ.

ಕನ್ನಡ ಬಾಷೆ ನಮಗೆ ಆದ್ಯತೆ ಆಗಬೇಕೇ ಹೊರತು ಆಯ್ಕೆಯಾಗಬಾರದು, ಈ ಹಿನ್ನೆಲೆಯಲ್ಲಿ ಕನ್ನಡ ಅಭಿವೃದ್ಧಿ, ಪ್ರಾಧಿಕಾರದ ಅಧ್ಯಕ್ಷರ ಪ್ರಸ್ತಾವನೆಯನ್ವಯ, ಇನ್ನು ಮುಂದೆ ರಾಜ್ಯದಲ್ಲಿ ಜರುಗುವ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಸಂಬಂಧಿಸಿದ ಕಾರ್ಯಕ್ರಮಗಳ ಆಯೋಜನೆಯಲ್ಲಿ ಕನ್ನಡವನ್ನು ಕಡ್ಡಾಯವಾಗಿ ಬಳಸತಕ್ಕದೆಂದು  ಸುತ್ತೋಲೆ ಹೊರಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:37 pm, Tue, 6 September 22

ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ