ನಾಮಫಲಕಗಳಲ್ಲಿ ಶೇ60 ರಷ್ಟು ಕನ್ನಡ ಕಡ್ಡಾಯ: ತಪ್ಪಿದಲ್ಲಿ ಭಾರಿ ದಂಡ, ಟ್ರೇಡ್ ಲೈಸೆನ್ಸ್ ​​ರದ್ದು

ಕರ್ನಾಟಕ ಜಂಟಿ ಅಧಿವೇಶನ ನಡೆದಿದ್ದು, ರಾಜ್ಯಪಾಲರ ಭಾಷಣ ಮೇಲಿನ ವಂದನಾ ನಿರ್ಣಯ ಚರ್ಚೆ ನಡೆಯಿತು. ಈ ವೇಳೆ ಹಲವು ವಿಧೇಯಕಗಳನ್ನು ಮಂಡಿಸಲಾಯಿತು. ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ವಿಧೇಯಕ-2024 ಕೂಡ ಮಂಡನೆಯಾಗಿದ್ದು, ವಿಧಾನಸಭೆಯಲ್ಲಿ ಅಂಗೀಕಾರಗೊಂಡಿದೆ.

ನಾಮಫಲಕಗಳಲ್ಲಿ ಶೇ60 ರಷ್ಟು ಕನ್ನಡ ಕಡ್ಡಾಯ: ತಪ್ಪಿದಲ್ಲಿ ಭಾರಿ ದಂಡ, ಟ್ರೇಡ್ ಲೈಸೆನ್ಸ್ ​​ರದ್ದು
ಸಚಿವ ಶಿವರಾಜ್​ ತಂಗಡಗಿ
Follow us
|

Updated on: Feb 16, 2024 | 8:20 AM

ಬೆಂಗಳೂರು, ಫೆಬ್ರವರಿ 16: ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ವಿಧೇಯಕ-2024 (Kannada Language Comprehensive Development (Amendment) Bill, 2024) ಅನ್ನು ಕರ್ನಾಟಕ ವಿಧಾನಸಭೆಯಲ್ಲಿ (Karnataka Legislative Assembly) ಅಂಗೀಕಾರವಾಗಿದೆ. ಈ ಮೂಲಕ ನಾಮಫಲಕಗಳ ಒಟ್ಟಾರೆ ವಿಸ್ತೀರ್ಣದಲ್ಲಿ ಕನ್ನಡ ಭಾಷೆಯನ್ನು (Kannada Language) ಮೇಲ್ಭಾಗದಲ್ಲಿ ಶೇ 60 ರಷ್ಟು ಪ್ರದರ್ಶಿಸುವುದು ಕಡ್ಡಾಯ ಮಾಡಲಾಗಿದೆ. ನಾಮಫಲಕಗಳಲ್ಲಿ ಶೇ60 ರಷ್ಟು ಕನ್ನಡ ಭಾಷೆ ಪ್ರದರ್ಶಿಸಲು ವಿಫಲವಾದರೆ ದಂಡ ವಿಧಿಸಲಾಗುವುದು ಮತ್ತು ಟ್ರೇಡ್ ಲೈಸೆನ್ಸ್ ರದ್ದುಗೊಳಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ (Shivaraj Tangadagi) ವಿಧಾನಸಭೆಗೆ ತಿಳಿಸಿದರು.

ನಿಯಮ ರೂಪಿಸಲು ಒಂದು ಸಮಿತಿ ರಚನೆ ಮಾಡಿ, ಹಲವು ಸುತ್ತಿನ ಚರ್ಚೆಗಳನ್ನು ಮಾಡಿದ್ದೇವೆ. ಒಂದು ಎನ್ಫೋರ್ಸ್ಮೆಂಟ್​ ವಿಂಗ್​ (ಜಾರಿ ಘಟಕ) ಅನ್ನು ಮಾಡಲಾಗುತ್ತದೆ. ಜಾರಿ ಅಧಿಕಾರಿಗಳ ಜೊತೆ ಪೊಲೀಸ್​ ಅಧಿಕಾರಿಗಳು ಇದರಲ್ಲಿರುತ್ತಾರೆ. ಕಾನೂನು ಮತ್ತು ನಿಯಮಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಎಲ್ಲ ಎಂಟು ವಲಯ ಆಯುಕ್ತರಿಗೆ ಪೂರ್ಣ ಅಧಿಕಾರ ನೀಡಲಾಗಿದೆ ಎಂದು ಎಂದು ಸಚಿವರು ಹೇಳಿದರು.

ಕನ್ನಡ ಕಣ್ಗಾವಲು ಆ್ಯಪ್​

ಕನ್ನಡ ಭಾಷೆಯ ಬಳಕೆ ಕುರಿತು ಯಾವುದೇ ವ್ಯಕ್ತಿ ದೂರು ನೀಡಲು ಕನ್ನಡ ಕಣ್ಗಾವಲು ಎಂಬ ಆ್ಯೊ್​ ಅನ್ನು ರೂಪಿಸಲಾಗುತ್ತಿದೆ. ಇಲ್ಲಿಗೆ ಬರುವ ದೂರುಗಳನ್ನು ಸಂಬಂಧಪಟ್ಟ ಸಮಿತಿಗಳಿಗೆ ಕಳುಹಿಸಿ, ಅವರು ಆ ದೂರುಗಳ ಬಗ್ಗೆ ಕ್ರಮವಹಿಸುವಂತೆ ವ್ಯವಸ್ಥೆ ರೂಪಿಸಲಾಗುತ್ತದೆ ಎಂದು ಸಚಿವರು ದನಕ್ಕೆ ವಿವರಿಸಿದರು.

ಇದನ್ನೂ ಓದಿ: ಮಕ್ಕಳಿಲ್ಲದೆ ಮುಚ್ಚುತ್ತಿವೆ ತೀರ್ಥಹಳ್ಳಿಯ ಸರ್ಕಾರಿ ಶಾಲೆಗಳು, ಸದನದಲ್ಲಿ ಆರಗ ಕಳವಳ: ಶಿಕ್ಷಣ ಸಚಿವರ ಉತ್ತರ ಹೀಗಿದೆ

ಇದಕ್ಕೂ ಮುನ್ನ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಬಿಜೆಪಿಯ ಹಿರಿಯ ಸದಸ್ಯರಾದ ಎಸ್.ಸುರೇಶ್ ಕುಮಾರ್, ಆರಗ ಜ್ಞಾನೇಂದ್ರ, ಸಿ.ಸಿ. ಪಾಟೀಲ್, ಕೆ.ಗೋಪಾಲಯ್ಯ ಮತ್ತಿತರರು ಕಾನೂನು ಉಲ್ಲಂಘಿಸುವ ಮತ್ತು ಕನ್ನಡದಲ್ಲಿ ನಾಮಫಲಕ ಹಾಕಲು ನಿರಾಕರಿಸುವ ಎಂಎನ್‌ಸಿ, ಮಾಲ್‌ಗಳು ಮತ್ತು ಇತರ ದೊಡ್ಡ ಸಂಸ್ಥೆಗಳಿಗೆ ಭಾರಿ ದಂಡ ವಿಧಿಸಬೇಕು ಎಂದು ಒತ್ತಾಯಿಸಿದರು. ವ್ಯಾಪಾರ ಸಂಸ್ಥೆಗಳು ನಿಯಮ ಉಲ್ಲಂಘಿಸಿರುವುದು ಕಂಡು ಬಂದಲ್ಲಿ ಸ್ಥಳದಲ್ಲೇ ದಂಡ ವಿಧಿಸುವಂತೆ ಆರ್​ ಅಶೋಕ್ ಸೂಚಿಸಿದರು.

ಜನರ ಮತ್ತು ಇಲಾಖೆ ಅಧಿಕಾರಿಗಳು ತಮ್ಮ ಮನಸ್ಥಿತಿಯನ್ನು ಬದಲಾದರೆ ನಾಮಫಲಕಗಳಲ್ಲಿ ಕನ್ನಡದಲ್ಲಿ ತಾನಾಗಿಯೇ ಬರುತ್ತದೆ. ವಾಣಿಜ್ಯ, ಕೈಗಾರಿಕೆ ಮತ್ತು ವ್ಯಾಪಾರ ಸಂಸ್ಥೆಗಳು, ಟ್ರಸ್ಟ್‌ಗಳು, ಸಲಹಾ ಕೇಂದ್ರಗಳು, ಆಸ್ಪತ್ರೆಗಳ ನಾಮಫಲಕಗಳು, ಪ್ರಯೋಗಾಲಯಗಳು, ಮನರಂಜನಾ ಕೇಂದ್ರಗಳು, ಹೋಟೆಲ್‌ಗಳು ಇತ್ಯಾದಿಗಳಲ್ಲಿ ಶೇ.60ರಷ್ಟು ಕನ್ನಡ ಇರಬೇಕು ಎಂದು ಶ್ರೀ ಸುರೇಶ್ ಕುಮಾರ್ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ