Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿ.ಪಿ.ರಾಜರತ್ನಂ ಪ್ರಶಸ್ತಿಗೆ ಅಪ್ಪಟ ಕನ್ನಡ ಪ್ರೇಮಿ ಸಯ್ಯದ್ ಇಸಾಕ್ ಆಯ್ಕೆ

ಬೆಂಗಳೂರಿನಲ್ಲಿ ಪ್ರಾಧಿಕಾರದ ಅಧ್ಯಕ್ಷ ಡಾ.ನಂದೀಶ್ ಅಧ್ಯಕ್ಷತೆಯಲ್ಲಿ ನಡೆದಿದ್ದ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಂಡಿದ್ದು ಕನ್ನಡ ಪುಸ್ತಕ ಪ್ರಾಧಿಕಾರದ ಕಡೆಯಿಂದ ನೀಡಲಾಗುವ ವಾರ್ಷಿಕ ಜಿ.ಪಿ.ರಾಜರತ್ನಂ ಪರಿಚಾರಕ ಪ್ರಶಸ್ತಿಗೆ ಕನ್ನಡ ಪ್ರೇಮಿ ಸಯ್ಯದ್ ಇಸಾಕ್ ಆಯ್ಕೆಯಾಗಿದ್ದಾರೆ.

ಜಿ.ಪಿ.ರಾಜರತ್ನಂ ಪ್ರಶಸ್ತಿಗೆ ಅಪ್ಪಟ ಕನ್ನಡ ಪ್ರೇಮಿ ಸಯ್ಯದ್ ಇಸಾಕ್ ಆಯ್ಕೆ
ಅಪ್ಪಟ ಕನ್ನಡ ಪ್ರೇಮಿ ಸಯ್ಯದ್ ಇಸಾಕ್
Follow us
TV9 Web
| Updated By: ಆಯೇಷಾ ಬಾನು

Updated on:Jun 30, 2021 | 12:48 PM

ಮೈಸೂರು: ಮೈಸೂರಿನ ರಾಜೀವ್‌ ನಗರದಲ್ಲಿರುವ ಅಪ್ಪಟ ಕನ್ನಡ ಪ್ರೇಮಿ ಸಯ್ಯದ್ ಇಸಾಕ್ರನ್ನು ಜಿ.ಪಿ.ರಾಜರತ್ನಂ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಪ್ರಾಧಿಕಾರದ ಅಧ್ಯಕ್ಷ ಡಾ.ನಂದೀಶ್ ಅಧ್ಯಕ್ಷತೆಯಲ್ಲಿ ನಡೆದಿದ್ದ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಂಡಿದ್ದು ಕನ್ನಡ ಪುಸ್ತಕ ಪ್ರಾಧಿಕಾರದ ಕಡೆಯಿಂದ ನೀಡಲಾಗುವ ವಾರ್ಷಿಕ ಜಿ.ಪಿ.ರಾಜರತ್ನಂ ಪರಿಚಾರಕ ಪ್ರಶಸ್ತಿಗೆ ಕನ್ನಡ ಪ್ರೇಮಿ ಸಯ್ಯದ್ ಇಸಾಕ್ ಆಯ್ಕೆಯಾಗಿದ್ದಾರೆ. ಇನ್ನು ಈ ಪ್ರಶಸ್ತಿಯು 1 ಲಕ್ಷ ರೂ. ನಗದು ಒಳಗೊಂಡಿದ್ದು ಮೊದಲ ಬಾರಿಗೆ ಅಲ್ಪಸಂಖ್ಯಾತರೊಬ್ಬರು ಈ ಪ್ರಶಸ್ತಿಗೆ ಆಯ್ಕೆಯಾಗಿರುವುದು ವಿಶೇಷ.

ಮೈಸೂರಿನ ರಾಜೀವ್‌ ನಗರದಲ್ಲಿರುವ ಅಪ್ಪಟ ಕನ್ನಡ ಪ್ರೇಮಿ ಸಯ್ಯದ್ ಇಸಾಕ್ ಅವರ ಗ್ರಂಥಾಲಯದ 11 ಸಾವಿರ ಪುಸ್ತಕಗಳು ಇತ್ತೀಚೆಗೆ ಸುಟ್ಟು ಕರಕಲಾಗಿದ್ದವು. ಇಸಾಕ್ರ ಗ್ರಂಥಾಲಯಕ್ಕೆ ಬೆಂಕಿ ತಗುಲಿ ಪುಸ್ತಕಗಳು ಸುಟ್ಟು ಹೋಗಿದ್ದವು. ಈ ಜ್ಞಾನ ದೇಗುಲವನ್ನು 2011ರಲ್ಲಿ ಸ್ಥಾಪನೆ ಮಾಡಲಾಗಿದೆ. ಸಯ್ಯದ್ ಇಸಾಕ್ ತಮ್ಮ ಉಳಿತಾಯದ ಹಣದಲ್ಲಿ ಗುಡಿಸಿಲಿನಲ್ಲೇ ಗ್ರಂಥಾಲಯ ನಿರ್ಮಿಸಿದ್ದರು. ತನಗೆ ಅಕ್ಷರ ಜ್ಞಾನ ಇಲ್ಲದಿದ್ದರೇನಂತೆ ಇತರರಿಗೆ ಅಕ್ಷರ ಜ್ಞಾನ ನೀಡಲು ಮುಂದಾಗಿದ್ದ ಸಯ್ಯದ್ರ ಗ್ರಂಥಾಲಯ ಹಾಗೂ ಅವರ ಈ ಪ್ರೀತಿ ಮೈಸೂರಿನಲ್ಲಿ ಅಪಾರ ಜನ ಮೆಚ್ಚುಗೆಗೆ ಪಾತ್ರವಾಗಿತ್ತು. ಆದರೆ ದುಷ್ಕರ್ಮಿಗಳು ಗ್ರಂಥಾಲಯಕ್ಕೆ ಬೆಂಕಿ ಇಟ್ಟು ಪರಾರಿಯಾಗಿದ್ದರು.

ಇನ್ನು ಸಯ್ಯದ್ ತಮ್ಮ ಗ್ರಂಥಾಲಯದಲ್ಲಿ ಭಗವದ್ಗೀತೆ, ಕುರಾನ್, ಬೈಬಲ್‌ನ ಕನ್ನಡ ಪುಸ್ತಕಗಳನ್ನ ಓದಲು ಇಟ್ಟಿದ್ದರು. ಚರಂಡಿ ಸ್ವಚ್ಛತೆ, ಮ್ಯಾನ್‌ಹೋಲ್ ಕ್ಲೀನಿಂಗ್ ಮಾಡುವ ಕಾಯಕದ ಸಯ್ಯದ್ ಬೆಂಕಿಗಾಹುತಿಯಾಗಿರುವ ಪುಸ್ತಕಗಳ ನೋಡಿ ಮಮ್ಮಲಮರುಗಿದ್ದರು. ಈ ಘಟನೆಯ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದ್ದರು.

syed esakh

ಅಪ್ಪಟ ಕನ್ನಡ ಪ್ರೇಮಿ ಸಯ್ಯದ್ ಇಸಾಕ್

ಇದನ್ನೂ ಓದಿ: ಮನದಲ್ಲಿ ಅಷ್ಟು ನೋವಿದ್ದರೂ ಯುಗಾದಿಯ ಶುಭಾಶಯ ತಿಳಿಸಿದ ಕನ್ನಡ ಪ್ರೇಮಿ ಸಯ್ಯದ್ ಇಸಾಕ್‌

 ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕನ್ನಡ ಪ್ರೇಮಿ ಸಯ್ಯದ್ ಗ್ರಂಥಾಲಯಕ್ಕೆ ಬೆಂಕಿ, 11 ಸಾವಿರ ಪುಸ್ತಕಗಳು ಭಸ್ಮ

ಅಪ್ಪಟ ಕನ್ನಡ ಪ್ರೇಮಿ ಸಯ್ಯದ್ ಇಸಾಕ್ ಜಿ.ಪಿ.ರಾಜರತ್ನಂ ಪ್ರಶಸ್ತಿಗೆ ಆಯ್ಕೆ

Published On - 12:41 pm, Wed, 30 June 21

ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ