ಕಪ್ಪು ಪಟ್ಟಿ ಧರಿಸಿ ಮೌನ ಸತ್ಯಾಗ್ರಹ ಮಾಡಲು ಮುಂದಾದ ಶಿಕ್ಷಕರು.. ಮಾರ್ಚ್ 23ಕ್ಕೆ ಅನುದಾನ ರಹಿತ ಕನ್ನಡ ಮಾಧ್ಯಮ ಶಾಲೆಗಳಿಂದ ಪ್ರತಿಭಟನೆಗೆ ನಿರ್ಧಾರ

ಮಾರ್ಚ್ 22ರಂದು ಅನುದಾನ ರಹಿತ ಕನ್ನಡ ಮಾಧ್ಯಮ ಶಾಲೆಗಳು ಬಂದ್ ಆಗಲಿವೆ. ಶಿಕ್ಷಣ ಸಚಿವರು ಖಾಸಗಿ ಶಾಲೆಗಳ ಬೇಡಿಕೆ ಈಡೇರಿಸಿಲ್ಲ. ಹೀಗಾಗಿ ನಾಳೆ ಪ್ರತಿಭಟನೆಗೆ ಶಿಕ್ಷಕರು ನಿರ್ಧಾರ ಮಾಡಿದ್ದಾರೆ. ಶಿಕ್ಷಣ ಸಚಿವರ ಮನೆ ಮುಂದೆ ಬಾಯಿಗೆ ಕಪ್ಪು ಪಟ್ಟಿ ಧರಿಸಿ ಮೌನ ಸತ್ಯಾಗ್ರಹ ಮಾಡಲು ತೀರ್ಮಾನಿಸಿದ್ದಾರೆ.

ಕಪ್ಪು ಪಟ್ಟಿ ಧರಿಸಿ ಮೌನ ಸತ್ಯಾಗ್ರಹ ಮಾಡಲು ಮುಂದಾದ ಶಿಕ್ಷಕರು.. ಮಾರ್ಚ್ 23ಕ್ಕೆ ಅನುದಾನ ರಹಿತ ಕನ್ನಡ ಮಾಧ್ಯಮ ಶಾಲೆಗಳಿಂದ ಪ್ರತಿಭಟನೆಗೆ ನಿರ್ಧಾರ
6 ರಿಂದ 9ನೇ ತರಗತಿ ಸ್ಥಗಿತ
Follow us
ಆಯೇಷಾ ಬಾನು
|

Updated on:Mar 22, 2021 | 9:08 AM

ಬೆಂಗಳೂರು: ಮಾರ್ಚ್ 22ರಂದು ಅನುದಾನ ರಹಿತ ಕನ್ನಡ ಮಾಧ್ಯಮ ಶಾಲೆಗಳು ಬಂದ್ ಆಗಲಿವೆ. ಶಿಕ್ಷಣ ಸಚಿವರು ಖಾಸಗಿ ಶಾಲೆಗಳ ಬೇಡಿಕೆ ಈಡೇರಿಸಿಲ್ಲ. ಹೀಗಾಗಿ ನಾಳೆ ಪ್ರತಿಭಟನೆಗೆ ಶಿಕ್ಷಕರು ನಿರ್ಧಾರ ಮಾಡಿದ್ದಾರೆ. ಶಿಕ್ಷಣ ಸಚಿವರ ಮನೆ ಮುಂದೆ ಬಾಯಿಗೆ ಕಪ್ಪು ಪಟ್ಟಿ ಧರಿಸಿ ಮೌನ ಸತ್ಯಾಗ್ರಹ ಮಾಡಲು ತೀರ್ಮಾನಿಸಿದ್ದಾರೆ. ಈ ಪ್ರತಿಭಟನೆಯಲ್ಲಿ 10 ಸಾವಿರಕ್ಕೂ ಅಧಿಕ ಶಾಲಾ ಶಿಕ್ಷಕರು ಭಾಗಿಯಾಗಲಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ.

ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ನೌಕರರ ಸಂಘ, ರುಪ್ಸಾ ಕರ್ನಾಟಕ , ಕಲ್ಯಾಣ ಕರ್ನಾಟಕ, ಅನುದಾನರಹಿತ ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟ ಹಾಗೂ ವಿವಿಧ ಶಿಕ್ಷಕರ ಸಮನ್ವಯ ಸಮಿತಿಯಿಂದ ಹೋರಾಟ ಹಮ್ಮಿಕೊಳ್ಳಲಾಗಿದೆ.

ಅನುದಾನ ರಹಿತ ಕನ್ನಡ ಮಾಧ್ಯಮ ಶಾಲೆಗಳ ಬೇಡಿಕೆಗಳೇನು? 1. ಈ ವರ್ಷದ ಶೇ.70 ರಷ್ಟು ಬೋಧನಾ ಶುಲ್ಕ ಕಟ್ಟುವಂತೆ ಪೋಷಕರಿಗೆ ಸೂಚನೆ ನೀಡಬೇಕು 2. 1995 ರಿಂದ 2005ರವರೆಗೆ ಕನ್ನಡ ಮಾಧ್ಯಮ ಶಾಲೆಗಳನ್ನ ಅನುದಾನಕ್ಕೆ ಒಳಪಡಿಸಬೇಕು 3. ಕಟ್ಟಡ ಸುರಕ್ಷತಾ ಪ್ರಮಾಣ ಪತ್ರದ ವಿಷಯದಲ್ಲಿ ಹತ್ತು ಸಾವಿರ ಶಾಲೆಗಳು ಬಂದ್ ಆಗಲಿವೆ. ಈ ವಿಚಾರದಲ್ಲಿ ಸರ್ಕಾರ ಪರಿಶೀಲಿಸುವುದು 4. ಶಿಕ್ಷಕರ ಕಲ್ಯಾಣ ನಿಧಿಯಿಂದ ಖಾಸಗಿ ಶಾಲಾ ಶಿಕ್ಷಕರಿಗೂ ಪರಿಹಾರ ಸಿಗುವಂತೆ ಮಾಡುವುದು 5. ಬಿಸಿಯೂಟ ಕಾರ್ಯಕ್ರಮವನ್ನ ಅನುದಾನರಹಿತ ಶಾಲಾ ಮಕ್ಕಳಿಗೂ ಯೋಜನೆ ವಿಸ್ತರಿಸಬೇಕು 6. ಕರ್ನಾಟಕ ಖಾಸಗಿ ಶಾಲೆಗಳನ್ನ ಅನುದಾನಕ್ಕೆ ಒಳಪಡಿಸಬೇಕೆಂದು ಒತ್ತಾಯ 7. ಸರ್ಕಾರಿ ನೌಕರರಿಗೆ ಸಿಗುವ ಎಲ್ಲಾ ಸೌಲಭ್ಯಗಳನ್ನು ಖಾಸಗಿ ಶಾಲಾ ಶಿಕ್ಷಕರಿಗೂ ನೀಡಬೇಕು

ಕಲ್ಯಾಣ ಕರ್ನಾಟಕದ 7 ಜಿಲ್ಲೆಗಳಲ್ಲಿರುವ ಖಾಸಗಿ ಶಾಲೆಗಳು ಆರ್ಥಿಕ ಸಂಕಷ್ಟದಲ್ಲಿ ಮುಚ್ಚುವ ಹಂತದಲ್ಲಿದೆ. ಆ ಭಾಗದ ಸರ್ಕಾರಿ ಶಾಲೆಗಳಲ್ಲೂ 20 ಸಾವಿರ ಶಿಕ್ಷಕರ ಕೊರತೆ ಇದೆ. ಏಳು ವರ್ಷವಾದ್ರು ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಒಂದು ರೂಪಾಯಿ ಅನುದಾನ ಸಿಕ್ಕಿಲ್ಲ. ಈ ಭಾಗದಲ್ಲಿ ಮಕ್ಕಳ ಮಾರಾಟ ದಂಧೆ ಕೂಡ ಜೋರಾಗಿದ್ದು, ಮಕ್ಕಳು ಬಾಲಕಾರ್ಮಿಕರಾಗ್ತಿದ್ದಾರೆ. ಹೀಗಾಗಿ ಈ ಭಾಗದ ಶೈಕ್ಷಣಿಕ ಅಭಿವೃದ್ದಿಗೆ ಮೀಸಲಿರುವ ಹಣದಲ್ಲಿ ಆ ಮಕ್ಕಳ ಪಾಲನ್ನು ನ್ಯಾಯಯುತವಾಗಿ ಕೊಡಬೇಕು ಅನ್ನೋದು ಕಲ್ಯಾಣ ಕರ್ನಾಟಕ ಭಾಗದ ಖಾಸಗಿ ಶಾಲಾ ಒಕ್ಕೂಟದ ಬೇಡಿಕೆಯಾಗಿದೆ. ಒಂದ್ಕಡೆ ಪೂರ್ಣ ಪ್ರಮಾಣದ ಶಾಲೆ ಆರಂಭ, ಫೀಸ್ ಗೊಂದಲ ಸೇರಿದಂತೆ ಗೊಂದಲಗಳ ಸುಳಿಯಲ್ಲಿಯೇ ಇರೋ ಶಿಕ್ಷಣ ಸಚಿವರಿಗೆ ಕಲ್ಯಾಣ ಕರ್ನಾಟಕ ಖಾಸಗಿ ಶಾಲೆಗಳ ಹೋರಾಟ ಬಿಸಿ ತುಪ್ಪವಾಗಿದೆ. ಎಲ್ಲಾ ಬೇಡಿಕೆಗಳು ಒಂದರ ಮೇಲೊಂದು ಬರುತ್ತಿದ್ದು, ಇದನ್ನ ಶಿಕ್ಷಣ ಇಲಾಖೆ ಹೇಗೆ ನಿಭಾಯಿಸುತ್ತೆ ಅನ್ನೋದೆೇ ದೊಡ್ಡ ಪ್ರಶ್ನೆಯಾಗಿದೆ.

ಇದನ್ನೂ ಓದಿ: ಕಲ್ಯಾಣ ಕರ್ನಾಟಕ ಭಾಗದ ಶಾಲೆಗಳು ಸೋಮವಾರದಿಂದ ‌ಬಂದ್: ಪ್ರತಿಭಟನೆಗೆ ಮುಂದಾದ ಖಾಸಗಿ ಶಾಲಾ ಒಕ್ಕೂಟ

Published On - 9:05 am, Mon, 22 March 21

‘ಪಿನಾಕ’ ಸಿನಿಮಾಗೆ ಪವರ್​ಫುಲ್ ಡೈಲಾಗ್ ಬರೆದ ರಘುಗೆ ಗಣೇಶ್​ ಮೆಚ್ಚುಗೆ
‘ಪಿನಾಕ’ ಸಿನಿಮಾಗೆ ಪವರ್​ಫುಲ್ ಡೈಲಾಗ್ ಬರೆದ ರಘುಗೆ ಗಣೇಶ್​ ಮೆಚ್ಚುಗೆ
ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ