Mysore News: ಹಾಲು ತರಲು ಹೋದವಳು ಶವವಾದಳು: ಮಚ್ಚಿನಿಂದ ಕೊಚ್ಚಿ ಮಹಿಳೆಯ ಬರ್ಬರ ಹತ್ಯೆ
ಡಿವೈಡರ್ಗೆ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ನಗರದ ಹನುಮಂತಪುರ ಬ್ರಿಡ್ಜ್ ಬಳಿ ನಡೆದಿದೆ.
ಮೈಸೂರು: ನಗರದಲ್ಲಿ ಓರ್ವ ಮಹಿಳೆಯನ್ನು ಕೊಚ್ಚಿ ಬರ್ಬರವಾಗಿ ಹತ್ಯೆ (murder) ಮಾಡಿರುವಂತಹ ಘಟನೆ ನಂಜನಗೂಡು ತಾಲ್ಲೂಕು ಹಳೇಪುರ ಗ್ರಾಮದಲ್ಲಿ ನಡೆದಿದೆ. ಮಿಣುಕಮ್ಮ( 45) ಕೊಲೆಯಾದ ಮಹಿಳೆ. ಅದೇ ಗ್ರಾಮದ ಮಹದೇವನಾಯಕ ಕೊಲೆ ಆರೋಪಿ. ಇಂದು ಬೆಳಿಗ್ಗೆ ಹಾಲು ತರಲು ಮಿಣುಕಮ್ಮ ಹೊರಗಡೆ ಬಂದಾಗ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿ ಆರೋಪಿ ಪರಾರಿಹಯಾಗಿದ್ದ. ಕೌಲಂದೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಇನ್ನೂ ನಂಜನಗೂಡು ತಾಲೂಕಿನ ಕೊತ್ತಳ್ಳಿ ಗ್ರಾಮದ ಬಳಿ ಸಾಲಬಾಧೆ ತಾಳಲಾರದೇ ನೇಣುಬಿಗಿದುಕೊಂಡು ರೈತ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಡೆದಿದೆ. ಸಿದ್ದನಾಯಕ(38) ಆತ್ಮಹತ್ಯೆ ಮಾಡಿಕೊಂಡ ರೈತ. ಬ್ಯಾಂಕ್ ಸೇರಿ ಹಲವೆಡೆ 3 ಲಕ್ಷ ಸಾಲ ಮಾಡಿದ್ದ. ಕಾಡು ಪ್ರಾಣಿಗಳು ಬೆಳೆ ನಾಶಗೊಳಿಸಿದ್ದಕ್ಕೆ ಕಂಗಾಲಾಗಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗುತ್ತಿದೆ. ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಇದನ್ನೂ ಓದಿ: 6 ಮದುವೆಯಾದ ಖತರ್ನಾಕ್ ಕಿಲಾಡಿ: ಮೊಬೈಲ್ ಸ್ವಿಚ್ ಆಫ್ ಮಾಡಿ ಕೊನೆಗೂ ಸಿಕ್ಕಿಬಿದ್ದ..!
ಡಿವೈಡರ್ಗೆ ಡಿಕ್ಕಿ ಹೊಡೆದ ಬೈಕ್; ಇಬ್ಬರು ಸಾವು
ತುಮಕೂರು: ಡಿವೈಡರ್ಗೆ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ನಗರದ ಹನುಮಂತಪುರ ಬ್ರಿಡ್ಜ್ ಬಳಿ ನಡೆದಿದೆ. ಸಚಿನ್ (21) ಮಲ್ಲಿಕಾರ್ಜುನ್ (24) ಮೃತ ಹಾವೇರಿ ಜಿಲ್ಲೆಯ ಇಬ್ಬರು ಯುವಕರು. ಬೆಂಗಳೂರಿನಿಂದ ಶಿರಾ ಕಡೆಗೆ ತೆರಳುತ್ತಿದ್ದು, ಹನುಮಂತಪುರದ ಬ್ರಿಡ್ಜ್ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ತುಮಕೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ತಲೆ ಮೇಲೆ ಕಲ್ಲು ಎತ್ತಿಹಾಕಿ ವ್ಯಕ್ತಿಯ ಬರ್ಬರ ಕೊಲೆ
ಕಲಬುರಗಿ: ಕೆರೆ ಬೋಸಗಾ ಕ್ರಾಸ್ ಬಳಿ ಜಮೀನಿನಲ್ಲಿ ತಲೆ ಮೇಲೆ ಕಲ್ಲು ಎತ್ತಿಹಾಕಿ ವ್ಯಕ್ತಿಯ ಬರ್ಬರ ಕೊಲೆ ಮಾಡಿರುವಂತಹ ಘಟನೆ ನಡೆದಿದೆ. ನಾಗರಾಜ್ ಮಟಮಾರಿ(28) ಹತ್ಯೆಯಾದ ಕಲಬುರಗಿ ನಗರದ ಗಾಜಿಪುರ ಬಡಾವಣೆ ನಿವಾಸಿ. ದುಷ್ಕರ್ಮಿಗಳು ಹಳೆ ವೈಷಮ್ಯ ಹಿನ್ನೆಲೆಯಲ್ಲಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಕಲಬುರಗಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಿಳೆ ಮೃತ ದೇಹ ಪತ್ತೆ
ಕೋಲಾರ: ತೊಟ್ಲಿ ಗ್ರಾಮದಲ್ಲಿ ಕಲ್ಯಾಣಿಯಲ್ಲಿ ನಾಗವೇಣಿ(45) ಎಂಬುವವರ ಮೃತದೇಹ ಪತ್ತೆಯಾಗಿದೆ. ಕೌಟುಂಬಿಕ ಕಲಹ ಹಿನ್ನೆಲೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಕೋಲಾರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಇದನ್ನೂ ಓದಿ; ಅತ್ಯಾಚಾರ ಪ್ರಕರಣ ದಾಖಲಿಸಿದ್ದಕ್ಕೆ ಶಿಕ್ಷಕಿಯ ಅಪಹರಣ
ಬೈಕ್ ಕಳ್ಳ ಅರೆಸ್ಟ್; 6 ಬೈಕ್ಗಳು ಜಪ್ತಿ
ರಾಯಚೂರು: ಬೈಕ್ ಕಳ್ಳ ರಂಗನಾಥ್ ದೊಡ್ಡಮನಿ ಎಂಬಾತನನ್ನು ಜಾಲಹಳ್ಳಿ ಪೊಲೀಸರು ಬಂಧಿಸಿದ್ದು, ಬಂಧಿತನಿಂದ 6 ಬೈಕ್ಗಳನ್ನು ಜಪ್ತಿ ಮಾಡಲಾಗಿದೆ. ಬೆಂಗಳೂರಿನಲ್ಲಿ ಕದ್ದ ಬೈಕ್ಗಳನ್ನು ಆರೋಪಿ ರಾಯಚೂರಿನಲ್ಲಿ ಮಾರಾಟ ಮಾಡುತ್ತಿದ್ದ. ದೇವದುರ್ಗ ತಾಲೂಕಿನ ತಿಂಥಣಿ ಬ್ರಿಡ್ಜ್ ಬಳಿ ಗಸ್ತಿನಲ್ಲಿದ್ದ ಪೊಲೀಸರನ್ನು ನೋಡಿ ರಾಯಲ್ ಎನ್ಫಿಲ್ಡ್ ಬೈಕ್ನಲ್ಲಿ ಪರಾರಿಯಾಗಲು ಯತ್ನಿಸಿದಾಗ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
Published On - 10:07 am, Fri, 29 July 22