ಪದ್ಮಶ್ರೀ ಪುರಸ್ಕೃತ ಹೆಚ್. ಆರ್. ಕೇಶವಮೂರ್ತಿ ವಿಧಿವಶ. ಕರ್ನಾಟಕ ವಿಧಾನ ಪರಿಷತ್ ಅಧ್ಯಕ್ಷರಾಗಿ ಬಸವರಾಜ ಹೊರಟ್ಟಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ನಾಯಕರು ಸೋನಿಯಾ ಗಾಂಧಿಯ ದರ್ಬಾರ್ನ ನಾಯಿ ಎಂದು ಭೋಪಾಲದ ಬಿಜೆಪಿ ಶಾಸಕ ಹೇಳಿದ್ದಾರೆ.
ಗಮಕ ಗಂಧರ್ವ ಪದ್ಮಶ್ರೀ ಪುರಸ್ಕೃತ ಹೆಚ್. ಆರ್. ಕೇಶವಮೂರ್ತಿ ವಿಧಿವಶ
ಶಿವಮೊಗ್ಗ: ಗಮಕ ಗಂಧರ್ವ ಪದ್ಮಶ್ರೀ ಪುರಸ್ಕೃತ ಹೆಚ್. ಆರ್. ಕೇಶವಮೂರ್ತಿ (89) ವಿಧಿವಶರಾಗಿದ್ದಾರೆ. ಶಿವಮೊಗ್ಗ ಸಮೀಪದ ಹೊಸಹಳ್ಳಿ ಗ್ರಾಮದ ಹೆಚ್. ಆರ್. ಕೇಶವಮೂರ್ತಿ ಅವರು ಮೂರುದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಈ ಸಂಬಂಧ ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದರು. ಇಂದು (ಡಿ.21) ಸ್ವಗೃಹದಲ್ಲಿ ನಿಧನರಾಗಿದ್ದಾರೆ.
ಬೆಳಗಾವಿ: ಎಂಟು ಬಾರಿ ವಿಧಾನಪರಿಷತ್ ಸದಸ್ಯರಾಗಿರುವ ಬಸವರಾಜ ಹೊರಟ್ಟಿ ಅವರು ಪರಿಷತ್ತಿನ ಸಭಾಪತಿಯಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅವರ ಹಿರಿತನವನ್ನು ಪರಿಗಣಿಸಿ ಜೆಡಿಎಸ್ ಮತ್ತು ಕಾಂಗ್ರೆಸ್ ಎರಡೂ ಪಕ್ಷಗಳು ಅವರ ವಿರುದ್ಧ ಅಭ್ಯರ್ಥಿಗಳನ್ನು ನಿಲ್ಲಿಸದ ಕಾರಣ ಸುಮಾರು ಮೂರು ದಶಕಗಳ ನಂತರ ಹೊರಟ್ಟಿ ಮೇಲ್ಮನೆ ಸಭಾಪತಿಯಾಗಿ ಆಯ್ಕೆಯಾಗಿದ್ದಾರೆ.
ಬೆಳಗಾವಿ: ಚೀನಾ ಸೇರಿದಂತೆ ಹಲವು ದೇಶಗಳಲ್ಲಿ ಕೊರೊನಾ ಕೇಸ್ ಹೆಚ್ಚಳವಾಗಿದೆ. ನಿನ್ನೆ ಕೇಂದ್ರ ಆರೋಗ್ಯ ಸಚಿವರಿಗೆ ಪತ್ರ ಬರೆದಿದ್ದೇನೆ. ಮುಂಜಾಗ್ರತಾ ಕ್ರಮವಾಗಿ ಸಿಎಂ ನೇತೃತ್ವದಲ್ಲಿ ಸಭೆ ಮಾಡುತ್ತೇವೆ ಎಂದು ಆರೋಗ್ಯ ಇಲಾಖೆ ಸಚಿವ ಕೆ.ಸುಧಾಕರ್ ಹೇಳಿದರು. ಸುವರ್ಣಸೌಧದಲ್ಲಿ ಅವರು ಮಾತನಾಡಿ, ಚೀನಾ, ಜಪಾನ್ ಸೇರಿ ಹಲವು ದೇಶಗಳಲ್ಲಿ ಕೊವಿಡ್ ಹೆಚ್ಚಾಗುತ್ತಿದೆ. ವಿಶೇಷವಾಗಿ ಚೀನಾದಲ್ಲಿ ಆಸ್ಪತ್ರೆ ದಾಖಲಾಗುವವರ ಸಂಖ್ಯೆ ಹೆಚ್ಚಾಗ್ತಿದೆ. ರಾಜ್ಯದಲ್ಲಿ 3ನೇ ಡೋಸ್ ನೀಡಲು ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಹೀಗಾಗಿ ಕೊವಿಡ್ ಪಾಸಿಟಿವ್ ಬರುವವರ ಮೇಲೆ ಹೆಚ್ಚಿನ ನಿಗಾ ಇಡಲಾಗುವುದು. ಮುಖ್ಯ ಕಾರ್ಯದರ್ಶಿಗಳ ಜೊತೆ ಸಭೆ ಮಾಡಿದ್ದೇನೆ ಎಂದು ಡಾ. ಸುಧಾಕರ್ ತಿಳಿಸಿದರು.
2023 ರ ವಿಧಾನಸಭಾ ಚುನಾವಣೆಯ ಕಾಂಗ್ರೆಸ್ ಟಿಕೆಟ್ ಹಂಚಿಕೆಗೆ ಮತ್ತಷ್ಟು ವೇಗ ದೊರೆತಿದೆ. ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಅದರ ಮಧ್ಯೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಪಕ್ಷವನ್ನು ಚುನಾವಣೆಗೆ ಅಣಿಗೊಳಿಸುವ ಕಾರ್ಯದಲ್ಲಿ ಮಗ್ನರಾಗಿದ್ದಾರೆ. ಜಿಲ್ಲಾವಾರು ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಗೆ ಮಾರ್ಗಸೂಚಿ ನೀಡಿರುವ ಡಿಕೆಶಿ, ಮುಂದಿನ ಹಂತದ ಪ್ರಕ್ರಿಯೆಗಳ ಬಗ್ಗೆ ಸ್ಪಷ್ಟ ಮಾರ್ಗಸೂಚಿಯನ್ನೂ ನಿಗದಿಪಡಿಸಿದ್ದಾರೆ. (ಹೆಚ್ಚಿನ ವಿವಿರ ಓದಲು ಇಲ್ಲಿ ಕ್ಲಿಕ್ ಮಾಡಿ)
ನವದೆಹಲಿ: ಚೀನಾದ ರೀತಿಯೇ ನಾವು ಕರ್ನಾಟಕಕ್ಕೆ ಪ್ರವೇಶಿಸುತ್ತೇವೆ. ನಮಗೆ ಯಾರ ಒಪ್ಪಿಗೆ ಬೇಕಾಗಿಲ್ಲ ಎಂದು ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ವಿಚಾರವಾಗಿ ಶಿವಸೇನೆ ನಾಯಕ ಸಂಜಯ್ ರಾವತ್ ಉದ್ಧಟತನದ ಮಾತುಗಳನ್ನು ಆಡಿದ್ದಾರೆ.
ದೇಶಕ್ಕಾಗಿ ನಿಮ್ಮ ನಾಯಿಯಾದರೂ ಸತ್ತಿದೆಯೇ ಎಂಬ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ಖಂಡಿಸುವ ಭರದಲ್ಲಿ ಭೋಪಾಲದ ಹುಜೂರ್ ಕ್ಷೇತ್ರದ ಬಿಜೆಪಿ ಶಾಸಕ ರಾಮೇಶ್ವರ್ ಶರ್ಮಾ, ಕಾಂಗ್ರೆಸ್ ನಾಯಕರನ್ನು ದರ್ಬಾರಿ ಕುತ್ತೇ (ದರ್ಬಾರ್ನ ನಾಯಿಗಳು) ಎಂದು ಕರೆದಿದ್ದಾರೆ. ಸೋನಿಯಾ ಗಾಂಧಿಯವರ ದರ್ಬಾರಿ ನಾಯಿಯಂತೆ ಸುತ್ತುತ್ತಿರುತ್ತಾರೆ ಎಂದು ಹೇಳಿದ್ದಾರೆ.
ಮಣಿಪುರದ ನೋನಿ ಜಿಲ್ಲೆಯ ಲಾಂಗ್ಸಾಯ್ ತುಬುಂಗ್ ಗ್ರಾಮ ಬಳಿ ಬುಧವಾರ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಎರಡು ಬಸ್‌ಗಳು ನಿಯಂತ್ರಣ ಕಳೆದುಕೊಂಡು ಸಂಭವಿಸಿದ ಅಪಘಾತದಲ್ಲಿ ಕನಿಷ್ಠ 15 ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ. ಮಣಿಪುರದ ನೋನಿ ಜಿಲ್ಲೆಯ ಬಿಸ್ನುಪುರ್-ಖೌಪುಮ್ ರಸ್ತೆಯಲ್ಲಿ ಈ ದುರ್ಘಟನೆ ನಡೆದಿದೆ.
ಫಿಫಾ ವಿಶ್ವಕಪ್ ಮೇಲೆ ಭಾರತೀಯರು ತೋರಿರುವ ಆಸಕ್ತಿಯನ್ನು ಮನಗಂಡಿರುವ ಪ್ರಧಾನಿ ಮೋದಿಯವರು ಮುಂದೊಂದು ದಿನ ಭಾರತದಲ್ಲಿಯೇ ಫಿಫಾ ವಿಶ್ವಕಪ್ ಆಯೋಜನೆಯಾಗಲಿದೆ ಎಂದಿದ್ದಾರೆ. ಹಾಗೆಯೇ ಈ ವಿಶ್ವಕಪ್ನಲ್ಲಿ ನಮ್ಮ ತಂಡವೂ ಆಡಲಿದೆ ಎಂದಿದ್ದಾರೆ.
ಮಂಗಳೂರು: ಅಯ್ಯಪ್ಪ ಮಾಲಾಧಾರಿ ವಿದ್ಯಾರ್ಥಿ ಮೇಲೆ ನಾಲ್ವರು ಅನ್ಯಕೋಮಿನ ವಿದ್ಯಾರ್ಥಿಗಳಿಂದ ಹಲ್ಲೆ ಮಾಡಿರುವಂತಹ ಘಟನೆ ನಗರದಲ್ಲಿ ನಡೆದಿದೆ. ಗಾಯಾಳು ವಿದ್ಯಾರ್ಥಿಗೆ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಮಂಗಳೂರು ನಗರದ ಕಪಿತಾನಿಯೋ ಶಾಲೆಯ ವಿದ್ಯಾರ್ಥಿಗೆ ಹಲ್ಲೆ ಆರೋಪ ಮಾಡಲಾಗಿದೆ. ಅದೇ ಶಾಲೆಯ ನಾಲ್ವರು ಹಿರಿಯ ವಿದ್ಯಾರ್ಥಿಗಳು ಹಲ್ಲೆ ಮಾಡಿದ್ದಾರೆ ಎಂದು ಆರೋಪ ಕೇಳಿಬಂದಿದೆ. ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಶಾರುಖ್ ಖಾನ್ ನಟನೆಯ ‘ಪಠಾಣ್’ ಸಿನಿಮಾದ ‘ಬೇಷರಂ ರಂಗ್..’ ಹಾಡು ಸೃಷ್ಟಿ ಮಾಡಿರುವ ವಿವಾದ ದೊಡ್ಡ ಮಟ್ಟದಲ್ಲಿ ಚರ್ಚೆ ಆಗುತ್ತಿದೆ. ದೀಪಿಕಾ ಪಡುಕೋಣೆ ಕೇಸರಿ ಬಣ್ಣದ ಬಿಕಿನಿ ಧರಿಸಿ ‘ಬೇಷರಂ ರಂಗ್..’ (ನಾಚಿಕೆ ಇಲ್ಲದ ಬಣ್ಣ) ಎಂದು ಹೇಳಿದ್ದೇ ಈ ವಿವಾದ ಹುಟ್ಟಿಕೊಳ್ಳಲು ಕಾರಣ. ಅನೇಕರು ಈ ಸಿನಿಮಾ ಬ್ಯಾನ್ ಮಾಡಬೇಕು ಎಂದು ಆಗ್ರಹಿಸುತ್ತಿದ್ದಾರೆ. ಹೀಗಿರುವಾಗಲೇ ಅಯೋಧ್ಯೆಯ ಸ್ವಾಮೀಜಿ ಒಬ್ಬರು ನೀಡಿದ ಹೇಳಿಕೆ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಶಾರುಖ್ ಖಾನ್ ಅವರನ್ನು ಜೀವಂತವಾಗಿ ಸುಡುತ್ತೇನೆ ಎಂಬುದಾಗಿ ಅವರು ಎಚ್ಚರಿಕೆ ನೀಡಿದ್ದಾರೆ.
ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:30 pm, Wed, 21 December 22