AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Evening News: ಬಿಜೆಪಿ ಹಿಂದೂ-ಮುಸ್ಲಿಂ ದ್ವೇಷ ಹರಡುತ್ತಿದೆ, ಹಲಾಲ್ ವಿರುದ್ಧ ಬಾಯ್ಕಟ್ ಅಭಿಯಾನ, ಇನ್ಸ್ಟಾಗ್ರಾಂ ಮೂಲಕ‌ ಲವ್ ಜಿಹಾದ್?-ಇಂದಿನ ಪ್ರಮುಖ ಸುದ್ದಿಗಳು

ಕೃಷ್ಣ ಜನ್ಮಸ್ಥಳದ ಸರ್ವೆಗೆ ಮಥುರಾ ಕೋರ್ಟ್ ಆದೇಶ, ಚೀನಾ ಸೇರಿ 5 ದೇಶಗಳ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ RTPCR ಪರೀಕ್ಷೆ ಕಡ್ಡಾಯ. ಎಷ್ಟು ಬೇಕೋ ಅಷ್ಟು ಸಾಲ ಮಾಡಿ, ಕುಮಾರಣ್ಣ ಮನ್ನಾ ಮಾಡ್ತಾರೆ.

Evening News: ಬಿಜೆಪಿ ಹಿಂದೂ-ಮುಸ್ಲಿಂ ದ್ವೇಷ ಹರಡುತ್ತಿದೆ, ಹಲಾಲ್ ವಿರುದ್ಧ ಬಾಯ್ಕಟ್ ಅಭಿಯಾನ, ಇನ್ಸ್ಟಾಗ್ರಾಂ ಮೂಲಕ‌ ಲವ್ ಜಿಹಾದ್?-ಇಂದಿನ ಪ್ರಮುಖ ಸುದ್ದಿಗಳು
ಕುಷ್ಟಗಿ ಪೊಲೀಸ್​ ಠಾಣೆ, ಹಾಲಾಲ್​, ರಾಹುಲ್​ ಗಾಂಧಿ
TV9 Web
| Edited By: |

Updated on: Dec 24, 2022 | 7:33 PM

Share

ಕೃಷ್ಣ ಜನ್ಮಸ್ಥಳದ ಸರ್ವೆಗೆ ಮಥುರಾ ಕೋರ್ಟ್ ಆದೇಶ, ಚೀನಾ ಸೇರಿ 5 ದೇಶಗಳ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ RTPCR ಪರೀಕ್ಷೆ ಕಡ್ಡಾಯ. ಎಷ್ಟು ಬೇಕೋ ಅಷ್ಟು ಸಾಲ ಮಾಡಿ, ಕುಮಾರಣ್ಣ ಮನ್ನಾ ಮಾಡ್ತಾರೆ.

ಕೃಷ್ಣ ಜನ್ಮಸ್ಥಳದ ಸರ್ವೆಗೆ ಮಥುರಾ ಕೋರ್ಟ್ ಆದೇಶ

ಮಥುರಾದಲ್ಲಿರುವ ಕೃಷ್ಣ ದೇಗುಲ ಸಮೀಕ್ಷೆಗೆ ಮಥುರಾ ಸ್ಥಳೀಯ ಕೋರ್ಟ್ ಆದೇಶ ನೀಡಿದೆ. ಜ.20ರಂದು ಸರ್ವೆ ವರದಿ ಸಲ್ಲಿಸಲು ಮಥುರಾ ಕೋರ್ಟ್​ ಆದೇಶ ನೀಡಿದೆ. ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯಿಂದ ಸಮೀಕ್ಷೆ ಮಾಡಲು ಆದೇಶ ನೀಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಈಗಾಗಲೇ ಈ ಬಗ್ಗೆ ವರದಿಯನ್ನು ಕೋರ್ಟ್​​ಗೆ ಸಲ್ಲಿಸಿದೆ.

ಚೀನಾ ಸೇರಿ 5 ದೇಶಗಳ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ RTPCR ಪರೀಕ್ಷೆ ಕಡ್ಡಾಯ

ಕೆಲವು ದೇಶಗಳಲ್ಲಿ ಕೋವಿಡ್-19 ಸಾಂಕ್ರಾಮಿಕ ಮತ್ತೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿರುವ ಕಾರಣ ಎಚ್ಚರಿಕೆಯ ಹೆಜ್ಜೆ ಇಟ್ಟಿರುವ ಕೇಂದ್ರ ಸರ್ಕಾರ ಚೀನಾ ಸೇರಿದಂತೆ 5 ದೇಶಗಳಿಂದ ಬರುವ ಪ್ರಯಾಣಿಕರಿಗೆ ಆರ್​ಟಿಪಿಸಿಆರ್ ಪರೀಕ್ಷೆ ಕಡ್ಡಾಯಗೊಳಿಸಿದೆ. ಈ ವಿಚಾರವಾಗಿ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ಮಾಹಿತಿ ನೀಡಿದ್ದಾರೆ.

ಬಿಜೆಪಿ 24X7 ಹಿಂದೂ-ಮುಸ್ಲಿಂ ದ್ವೇಷ ಹರಡುತ್ತಿದೆ: ರಾಹುಲ್ ಗಾಂಧಿ

ಧಾರ್ಮಿಕ ಭಿನ್ನಾಭಿಪ್ರಾಯಗಳನ್ನು ಅಸ್ತ್ರವನ್ನಾಗಿ ಬಳಸಿಕೊಂಡು ದ್ವೇಷವನ್ನು ಹರಡುತ್ತಿದೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ಇಂದು ಸಂಜೆ ಭಾರತ್ ಜೋಡೋ ಯಾತ್ರೆಯಲ್ಲಿ ದೆಹಲಿ ಸ್ಮಾರಕವನ್ನು ತಲುಪಿದ ನಂತರ ಕೆಂಪು ಕೋಟೆಯಲ್ಲಿ ಮಾಡಿದ ಭಾಷಣದಲ್ಲಿ ರಾಹುಲ್ ಗಾಂಧಿ, ನಿಜವಾದ ಸಮಸ್ಯೆಗಳಿಂದ ನಿಮ್ಮ ಗಮನವನ್ನು ಬೇರೆಡೆಗೆ ತಿರುಗಿಸಲು 24X7ಹಿಂದೂ-ಮುಸ್ಲಿಂ ದ್ವೇಷವನ್ನು ಹರಡಲಾಗುತ್ತಿದೆ ಎಂದು ಹೇಳಿದರು.

ಎಷ್ಟು ಬೇಕೋ ಅಷ್ಟು ಸಾಲ ಮಾಡಿ, ಕುಮಾರಣ್ಣ ಮನ್ನಾ ಮಾಡ್ತಾರೆ: ಅನಿತಾ ಕುಮಾರಸ್ವಾಮಿ

ಸ್ತ್ರೀ ಶಕ್ತಿ ಯೋಜನೆ ಅಡಿ ಸಾಲ ಪಡೆದು ಮರು ಪಾವತಿಸಬೇಡಿ. ನನ್ನ ಪತಿ, ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ ಅವರು ಅಧಿಕಾರಕ್ಕೆ ಬಂದ 24 ಗಂಟೆ ಒಳಗಾಗಿ ಸಾಲ ಮನ್ನಾ ಮಾಡುತ್ತಾರೆ ಎಂದು ರಾಮನಗರದ ಜೆಡಿಎಸ್ ಶಾಸಕಿ ಅನಿತಾ ಕುಮಾರಸ್ವಾಮಿ ಹೇಳಿರುವ ವಿಡಿಯೋ ವೈರಲ್​ ಆಗುತ್ತಿದೆ.

ಹಲಾಲ್ ವಿರುದ್ಧ ಬಾಯ್ಕಟ್ ಅಭಿಯಾನ ಶುರುಮಾಡಿದ ಹಿಂದೂ ಸಂಘಟನೆಗಳು

ಹಲಾಲ್ ಪತ್ರ ಹಂಚಿಕೆ ರಾಜ್ಯದಲ್ಲಿ ಭಾರೀ ಸಂಚಲನ ಸೃಷ್ಟಿಸಿದೆ. ಹಲಾಲ್ ಪತ್ರ ಬೇಕಾ? ಎಂಬುದು ಇದೀಗ ಚರ್ಚೆಗೆ ಗ್ರಾಸವಾಗಿದೆ. ಹಲಾಲ್ ಪತ್ರ ನೀಡುವ ಹೆಸರಲ್ಲಿ ಮುಸ್ಲಿಂ ಧಾರ್ಮಿಕ ಹೆಸರಿನ ಕಂಪನಿಗಳು ವಾರ್ಷಿಕ ಕೋಟ್ಯಾಂತರ ರೂಪಾಯಿ ವ್ಯವಹಾರ ಮಾಡುತ್ತಿವೆ. ಇದರ ವಿರುದ್ಧ ಹಿಂದೂ ಸಂಘಟನೆಗಳು ಪ್ರತಿಭಟನೆ ಹಾಗೂ ಹಲಾಲ್​ಗೆ ಬಾಯ್ಕಟ್ ಅಭಿಯಾನ ಶುರುಮಾಡಿದ್ದು‌ ಇದೀಗ ಹಲಾಲ್ ಸರ್ಟಿಫಿಕೇಟ್ ವಿರುದ್ಧ ಮಸೂದೆ ಜಾರಿಗೊಳಿಸುವ ಹಂತಕ್ಕೆ ಬಂದಿದೆ.

ಲಕ್ಷ್ಮೀ ಸೋಲಿಸಲು ರಣತಂತ್ರ ಬಿಚ್ಚಿಟ್ಟ ರಮೇಶ್ ಜಾರಕಿಹೊಳಿ

ರಾಜಕೀಯ ಬದ್ಧವೈರಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಕ್ಷೇತ್ರದಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಫುಲ್ ಆಕ್ಟೀವ್ ಆಗಿದ್ದು, 2023ರಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಶತಾಯಗತಾಯವಾಗಿ ಲಕ್ಷ್ಮೀ ಹೆಬ್ಬಾಳ್ಕರ್ ಸೋಲಿಸಲು ಈಗಿನಿಂದಲೇ ಭರ್ಜರಿ ತಯಾರಿ ನಡೆಸಿದ್ದಾರೆ.

ಇನ್ಸ್ಟಾಗ್ರಾಂ ಮೂಲಕ‌ ಲವ್ ಜಿಹಾದ್? ಮುಸ್ಲಿಂ ಸಂಪ್ರದಾಯದಂತೆ ಮದುವೆಯಾದ ಹಿಂದೂ ಯುವತಿ

ಇಂದಿನ ಸಾಮಾಜಿಕ ಜಾಲತಾಣ ಜಮಾನಾಗೆ ತಕ್ಕಂತೆ ಇನ್ಸ್ಟಾಗ್ರಾಂ ಮೂಲಕ‌ ನಡೆಯಿತಾ ಲವ್ ಜಿಹಾದ್ ಎಂಬ ಶಂಕೆ ವ್ಯಕ್ತವಾಗಿದೆ. ಇನ್ಸ್ಟಾಗ್ರಾಂನಲ್ಲಿ ಹಿಂದೂ ಯುವತಿ ಮುಸ್ಲಿಂ ಯುವಕ ನಡುವೆ ಪ್ರೀತಿ ಮೊಳಕೆಯೊಡೆದಿದೆ. ಪ್ಪಳ ಜಿಲ್ಲೆ ಕುಷ್ಟಗಿಯಲ್ಲಿ ಈ ಇನ್ಸ್​ಟೆಂಟ್​​ ಇನ್ಸ್ಟಾಗ್ರಾಂ ಲವ್ ಪ್ರಕರಣ ವರದಿಯಾಗಿದೆ. ಹೈದ್ರಾಬಾದ್ ಮೂಲದ ಯುವಕ ಶೇಕ್ ವಹಿದ್ ಹಾಗೂ ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಇಂದಿರಾನಗರದ ಯುವತಿ ಮದುವೆಯಾದ ಜೋಡಿ ಎಂದು ತಿಳಿದುಬಂದಿದೆ.

ಬೆಂಗಳೂರು-ಗೋವಾ ನಡುವೆ ಆಕಾಶ್ ಏರ್ ವಿಮಾನ; ಮುಂದಿನ ತಿಂಗಳು ಆರಂಭ

ದೇಶದ ಹೊಸ ವಿಮಾನಯಾನ ಸಂಸ್ಥೆ ಆಕಾಶ್ ಏರ್​ ಜನವರಿ 11ರಿಂದ ಬೆಂಗಳೂರು ಹಾಗೂ ಗೋವಾ ಮಧ್ಯೆ ವಿಮಾನ ಸೇವೆ ಆರಂಭಿಸಲಿದೆ. ಪ್ರತಿ ದಿನ ಎರಡು ವಿಮಾನಗಳು ಉಭಯ ನಗರಗಳ ಮಧ್ಯೆ ಹಾರಾಟ ನಡೆಸಲಿವೆ. ಫೆಬ್ರವರಿ 1ರಿಂದ ಮತ್ತೊಂದು ವಿಮಾನ ಹಾರಾಟ ನಡೆಸಲಿದೆ. ನಮ್ಮ ವೈಮಾನಿಕ ಜಾಲಕ್ಕೆ ಸೇರ್ಪಡೆಯಾಗುತ್ತಿರುವ 12ನೇ ವಿಮಾನ ನಿಲ್ದಾಣ ಗೋವಾ ಆಗಿದೆ. ಗೋವಾ, ಬೆಂಗಳೂರು ನಡುವೆ ಪ್ರತಿ ದಿನ ಎರಡು ವಿಮಾನಗಳು ಸಂಚರಿಸಲಿದ್ದು, ಫೆಬ್ರವರಿ 1ರಿಂದ ಮೂರು ವಿಮಾನಗಳು ಸಂಚರಿಸಲಿವೆ ಎಂದು ವಿಮಾನಯಾನ ಕಂಪನಿ ಇತ್ತೀಚೆಗೆ ಘೋಷಿಸಿತ್ತು.

ಭ್ರಷ್ಟಾಚಾರ: 10 ಅಧಿಕಾರಿಗಳ ಬಲವಂತದ ನಿವೃತ್ತಿಗೆ ಸಚಿವ ಅಶ್ವಿನಿ ವೃಷ್ಣವ್ ಸೂಚನೆ

ಭ್ರಷ್ಟಾಚಾರದ ವಿರುದ್ಧ ಮತ್ತೊಮ್ಮೆ ಕಠಿಣ ಕ್ರಮದ ಸಂದೇಶ ರವಾನಿಸಿರುವ ಕೇಂದ್ರ ಸರ್ಕಾರ, ದೂರಸಂಪರ್ಕ ಇಲಾಖೆಯ 10 ಮಂದಿ ಉನ್ನತ ಅಧಿಕಾರಿಗಳ ಬಲವಂತದ ನಿವೃತ್ತಿಗೆ ಸೂಚಿಸಿದೆ. ಈ ಕುರಿತ ಪ್ರಸ್ತಾವಕ್ಕೆ ಸಚಿವ ಅಶ್ವಿನಿ ವೈಷ್ಣವ್ ಅನುಮೋದನೆ ನೀಡಿದ್ದಾರೆ. ಬಲವಂತದ ನಿವೃತ್ತಿಯಾಗಲಿರುವ ಅಧಿಕಾರಿಗಳಲ್ಲಿ ಜಂಟಿ ಕಾರ್ಯದರ್ಶಿ ಕೂಡ ಸೇರಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ‘ಉತ್ತಮ ಆಡಳಿತ ದಿನ’ದ ಮುನ್ನಾ ದಿನವೇ ಕೇಂದ್ರ ಸರ್ಕಾರ ಈ ನಿರ್ಧಾರ ಕೈಗೊಂಡಿರುವುದು ಗಮನಾರ್ಹ.

ವಿಮಾನದ ಚಕ್ರದ ಸಂಧಿಯಲ್ಲಿತ್ತು ಮೃತದೇಹ:ನಿಗೂಢತೆ ಬೇಧಿಸಲು ಪೊಲೀಸರ ಹರಸಾಹಸ

ಆಘಾತಕಾರಿ ವಿದ್ಯಮಾನವೊಂದರಲ್ಲಿ ಗ್ಯಾಂಬಿಯಾದಿಂದ ಬ್ರಿಟನ್​ಗೆ ಬಂದ ವಿಮಾನವೊಂದರ ಚಕ್ರದ ಸಂಧಿಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ. ವ್ಯಕ್ತಿಯ ಗುರುತುಪತ್ತೆ ಈಗ ಅಧಿಕಾರಿಗಳಿಗೆ ತಲೆನೋವಾಗಿ ಪರಿಣಿಮಿಸಿದೆ. ಗ್ಯಾಂಬಿಯಾ ಅಧಿಕಾರಿಗಳು ನೀಡಿರುವ ಮಾಹಿತಿ ಪ್ರಕಾರ, ರಾಜಧಾನಿ ಬಂಜುಲ್​ನಿಂದ ಲಂಡನ್​ನ ಗ್ಯಾಟ್​​ವಿಕ್ ವಿಮಾನ ನಿಲ್ದಾಣಕ್ಕೆ ತೆರಳಿದ್ದ ಟಿಯುಐ ಏರ್​ವೇಸ್​ನ ವಿಮಾನದ ಚಕ್ರದ ಸಂಧಿಯಲ್ಲಿ ಅಪರಿಚಿತ ಕಪ್ಪು ವರ್ಣೀಯ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ.

ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ