Evening News: ಮೋದಿ ತಮ್ಮನ ಕಾರು ಅಪಘಾತ, ಮೂಗಿನ ಮೂಲಕ ಹಾಕುವ ವ್ಯಾಕ್ಸಿನ್​, ಯುವತಿಯನ್ನು 51 ಬಾರಿ ಇರಿದು ಕೊಂದ ಪ್ರೇಮಿ- ಇಂದಿನ ಪ್ರಮುಖ ಸುದ್ದಿಗಳು

ಕರ್ನಾಟಕದ ನಿಲುವು ಖಂಡಿಸಿ ಗಡಿ ನಿರ್ಣಯ ಮಂಡಿಸಿದ ಮಹಾರಾಷ್ಟ್ರ, ಅವಿವಾಹಿತನ ಜೊತೆ ವಿವಾಹಿತೆಯ ಆಕ್ರಮ ಸಂಬಂಧ, ವಿವಾಹಿತೆಯ ಕಾಟ ತಾಳದೆ ಹತ್ಯೆ ಮಾಡಿದ! ಚಿಲುಮೆ ಸಂಸ್ಥೆಯನ್ನು ಕಪ್ಪು ಪಟ್ಟಿಗೆ ಸೇರಿಸಿ ಬಿಬಿಎಂಪಿ ಆದೇಶ ಹೊರಡಿಸಿದೆ.

Evening News: ಮೋದಿ ತಮ್ಮನ ಕಾರು ಅಪಘಾತ, ಮೂಗಿನ ಮೂಲಕ ಹಾಕುವ ವ್ಯಾಕ್ಸಿನ್​,  ಯುವತಿಯನ್ನು 51 ಬಾರಿ ಇರಿದು ಕೊಂದ ಪ್ರೇಮಿ- ಇಂದಿನ ಪ್ರಮುಖ ಸುದ್ದಿಗಳು
ಪ್ರಧಾನಿ ಮೋದಿ ತಮ್ಮನ ಕಾರು ಅಪಘಾತ, ಯೋಗಿ ಆದಿತ್ಯನಾಥ
Follow us
TV9 Web
| Updated By: ವಿವೇಕ ಬಿರಾದಾರ

Updated on: Dec 27, 2022 | 8:00 PM

ಕರ್ನಾಟಕದ ನಿಲುವು ಖಂಡಿಸಿ ಗಡಿ ನಿರ್ಣಯ ಮಂಡಿಸಿದ ಮಹಾರಾಷ್ಟ್ರ, ಅವಿವಾಹಿತನ ಜೊತೆ ವಿವಾಹಿತೆಯ ಆಕ್ರಮ ಸಂಬಂಧ, ವಿವಾಹಿತೆಯ ಕಾಟ ತಾಳದೆ ಹತ್ಯೆ ಮಾಡಿದ! ಚಿಲುಮೆ ಸಂಸ್ಥೆಯನ್ನು ಕಪ್ಪು ಪಟ್ಟಿಗೆ ಸೇರಿಸಿ ಬಿಬಿಎಂಪಿ ಆದೇಶ ಹೊರಡಿಸಿದೆ.

ಉತ್ತರ ಪ್ರದೇಶ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಒಬಿಸಿ ಮೀಸಲಾತಿ

ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಒಬಿಸಿ ಮೀಸಲಾತಿ ವಿಷಯದ ಬಗ್ಗೆ ನಿರ್ಧರಿಸಲು ರಾಜ್ಯ ಸರ್ಕಾರ ಆಯೋಗವನ್ನು ರಚಿಸಲಿದೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಮಂಗಳವಾರ ಹೇಳಿದ್ದಾರೆ. ಅಲಹಾಬಾದ್ ಹೈಕೋರ್ಟ್‌ನ ಲಕ್ನೋ ಪೀಠವು ನಾಗರಿಕ ಚುನಾವಣೆಯ ಕುರಿತು ರಾಜ್ಯ ಸರ್ಕಾರದ ಕರಡು ಅಧಿಸೂಚನೆಯನ್ನು ತಿರಸ್ಕರಿಸಿ ಒಬಿಸಿಗಳಿಗೆ ಮೀಸಲಾತಿಯಿಲ್ಲದೆ ಚುನಾವಣೆಗಳನ್ನು ನಡೆಸುವಂತೆ ಆದೇಶಿಸಿದ ನಂತರ ಮುಖ್ಯಮಂತ್ರಿಯ ಹೇಳಿಕೆ ಬಂದಿದೆ.

ಕರ್ನಾಟಕದ ನಿಲುವು ಖಂಡಿಸಿ ಗಡಿ ನಿರ್ಣಯ ಮಂಡಿಸಿದ ಮಹಾರಾಷ್ಟ್ರ ಸಿಎಂ

ರಾಜ್ಯದ ಹಿತಾಸಕ್ತಿಗಳನ್ನು ಕಾಪಾಡಲು ಮಹಾರಾಷ್ಟ್ರದೊಂದಿಗಿನ ಗಡಿ ವಿವಾದದ ಕರ್ನಾಟಕ ವಿಧಾನಸಭೆಯು ಸರ್ವಾನುಮತದಿಂದ ಅಂಗೀಕರಿಸಿದ ಕೆಲವೇ ದಿನಗಳ ನಂತರ, ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಕರ್ನಾಟಕದ ಮರಾಠಿ ವಿರೋಧಿ ನಿಲುವನ್ನು ಖಂಡಿಸಿದ್ದು ರಾಜ್ಯ ವಿಧಾನಸಭೆಯಲ್ಲಿ ಇದೇ ರೀತಿಯ ನಿರ್ಣಯವನ್ನು ಮಂಡಿಸಿದ್ದಾರೆ.

ಮೂಗಿನ ಮೂಲಕ ಹಾಕುವ ಕೋವಿಡ್ ಲಸಿಕೆಗೆ ಬೆಲೆ ನಿಗದಿ

ಮೂಗಿನ ಮೂಲಕ ಹಾಕುವ ಲಸಿಕೆಗೆ ಭಾರತ್ ಬಯೋಟೆಕ್ ಬೆಲೆಯನ್ನು ನಿಗದಿಪಡಿಸಿದೆ. ಖಾಸಗಿ ಆಸ್ಪತ್ರೆಗಳಿಗೆ 800 ರೂ, ಹಾಗೂ ಸರ್ಕಾರಿ ಆಸ್ಪತ್ರೆಗಳಲ್ಲಿ 325 ರೂ. ಎಂದು ದರವನ್ನು ನಿಗದಿಪಡಿಸಿದೆ. ಭಾರತ ಸರ್ಕಾರವು ಮೂಗಿನ ಮೂಲಕ ಹಾಕುವ ಲಸಿಕೆಯನ್ನು ಅನುಮೋದಿಸಿದೆ. ಇದನ್ನು ಹೆಟೆರೊಲಾಜಸ್ ಬೂಸ್ಟರ್ ಆಗಿ ಬಳಸಲಾಗುವುದು ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಮೊದಲು ಲಭ್ಯವಿರುತ್ತದೆ. ಇದನ್ನು ಕೋವಿಡ್ ಲಸಿಕೆ ಕಾರ್ಯಕ್ರಮದಲ್ಲಿ ಸೇರಿಸಲಾಗುವುದು ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಮೈಸೂರಿನಲ್ಲಿ ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ಮೋದಿ ಕಾರು ಅಪಘಾತ

ಬೆಂಗಳೂರಿನಿಂದ ಬಂಡೀಪುರಕ್ಕೆ ತೆರಳುತ್ತಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರ ಪ್ರಹ್ಲಾದ್ ಮೋದಿ ಅವರ ಕಾರು ಅಪಘಾತ ಗೊಂಡಿರುವ ಘಟನೆ ಮೈಸೂರು ತಾಲೂಕಿನ ಕಡಕೊಳ ಬಳಿ ನಡೆದಿದೆ. ಮರ್ಸಿಡಿಸ್ ಬೆಂಜ್ ಕಾರಿನಲ್ಲಿದ್ದ ಪ್ರಹ್ಲಾದ್ ಮೋದಿ ಪುತ್ರ ಹಾಗೂ ಸೊಸೆಗೆ ಗಂಭೀರ ಗಾಯಗಳಾಗಿದೆ. ವಿಷಯ ತಿಳಿಯುತ್ತಿದ್ದಂತೆ ಕೂಡಲೇ ಸ್ಥಳಕ್ಕೆ ಭೇಟಿ ನೀಡಿದ್ದ ಮೈಸೂರು ಎಸ್​ಪಿ ಸೀಮಾ ಲಾಟ್ಕರ್, ಗಾಯಾಳುಗಳನ್ನು ತಕ್ಷಣ ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲದೆ ಮುಖ್ಯಮಂತ್ರಿಯವರ ಕಾರ್ಯಾಲಯಕ್ಕೆ ಮಾಹಿತಿ ನೀಡಿದ್ದಾರೆ.

ಚಿಲುಮೆ ಸಂಸ್ಥೆಯನ್ನು ಕಪ್ಪು ಪಟ್ಟಿಗೆ ಸೇರಿಸಿ ಬಿಬಿಎಂಪಿ ಆದೇಶ

ಬೆಂಗಳೂರಿನಲ್ಲಿ ಮತದಾರರ ಖಾಸಗಿ ಮಾಹಿತಿಯನ್ನು ಅಕ್ರಮವಾಗಿ ಸಂಗ್ರಹಿಸಿದ್ದ ಚಿಲುಮೆ ಸಂಸ್ಥೆಯನ್ನು ಕಪ್ಪು ಪಟ್ಟಿಗೆ ಸೇರಿಸಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಆದೇಶ ಹೊರಡಿಸಿದ್ದಾರೆ. ಮತದಾನದ ಬಗ್ಗೆ ಜಾಗೃತಿಗಾಗಿ ಬಿಬಿಎಂಪಿ ನೀಡಿದ್ದ ಒಪ್ಪಿಗೆ ದುರುಪಯೋಗ ಪಡಿಸಿಕೊಂಡ ಹಿನ್ನೆಲೆ ಕಪ್ಪು ಪಟ್ಟಿಗೆ ಸೇರಿಸಲಾಗಿದೆ.

ಅಬ್ದುಲ್ ಜಲೀಲ್ ಹತ್ಯೆಗೆ ಹಿಂದೂ ಮಹಿಳೆ ಜೊತೆಗಿನ ಅನೈತಿಕ ಸಂಬಂಧವೇ ಕಾರಣವಾಯ್ತಾ?

ಸುರತ್ಕಲ್‍ನ ಕಾಟಿಪಳ್ಳದಲ್ಲಿ ನಡೆದ ಅಬ್ದುಲ್​ ಜಲೀಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ. ಆದ್ರೆ, ಇದರ ಮಧ್ಯೆ ಜಲೀಲ್ ಹತ್ಯೆಗೆ ಹಿಂದೂ ಧರ್ಮದ ವಿವಾಹಿತ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಕಾರಣ ಎನ್ನುವ ಸುದ್ದಿ ಹರಿದಾಡುತ್ತಿದೆ. ಜಲೀಲ್ ಮತ್ತು ಸ್ಥಳೀಯ ಹಿಂದೂ ಮಹಿಳೆ ನಡುವೆ ಅಕ್ರಮ ಸಂಬಂಧ ಇತ್ತು ಎನ್ನಲಾಗಿದ್ದು, ಈ ಬಗ್ಗೆ ಎರಡು ವರ್ಷಗಳ ಹಿಂದೆಯೂ ಸ್ಥಳೀಯವಾಗಿ ಗಲಾಟೆ ನಡೆದಿತ್ತಂತೆ. ಬಳಿಕ ಕಳೆದ ಕೆಲ ತಿಂಗಳ ಹಿಂದೆ ಸುಮಾರು 50ರಿಂದ 60 ಜನರು ಗಲಾಟೆ ಮಾಡಿದ್ದರು. ಅಲ್ಲದೇ ಜಲೀಲನಿಗೆ ಎಚ್ಚರಿಕೆ ಸಹ ಕೊಡಲಾಗಿತ್ತು ಎನ್ನಲಾಗಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಬೆಂಗಳೂರಲ್ಲಿ ಮುಂದಿನ 2 ದಿನ ಮಳೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ರಾಜಧಾನಿ ಬೆಂಗಳೂರಲ್ಲಿ ಇಂದು (ಡಿ.27) ಮತ್ತು‌ ನಾಳೆ (ಡಿ.28)‌ ಮಳೆಯಾಗುವ ಸಾಧ್ಯಾತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು (ಡಿ.27) ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಬೆಂಗಳೂರು, ಬೆಂ.ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೊಡಗು, ಹಾಸನ, ಮೈಸೂರು ಮತ್ತು ರಾಮನಗರದಲ್ಲಿ ಇಂದು ಮತ್ತು ನಾಳೆ ಸಾಧಾರಣ ಮಳೆಯಾಗುವ ಸಾಧ್ಯಾತೆ ಇದೆ. ಉತ್ತರ ಒಳನಾಡು ಹಾಗೂ ಕರಾವಳಿಯಲ್ಲಿ ಕೂಡ ಒಣಹಣೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಪಿಪಿಎಫ್​ನಲ್ಲಿ ವಾರ್ಷಿಕ 1.5 ಲಕ್ಷ ರೂಪಾಯಿಗಿಂತ ಹೆಚ್ಚಿನ ಹೂಡಿಕೆಗೆ ಅವಕಾಶ ಇದೆಯೇ?

ಸಾರ್ವಜನಿಕ ಭವಿಷ್ಯ ನಿಧಿ ತೆರಿಗೆ ಪ್ರಯೋಜನಗಳ ಜೊತೆಗೆ ಉತ್ತಮ ರಿಟರ್ನ್ಸ್ ಒದಗಿಸುವ ಸರ್ಕಾರಿ ಉಳಿತಾಯ ಯೋಜನೆಗಳಲ್ಲಿ ಪ್ರಮುಖವಾದದ್ದು. ಆದಾಯ ತೆರಿಗೆ ಕಾಯ್ದೆಯ ಸೆಕ್ಷನ್ 80ಸಿ ಅಡಿ ತೆರಿಗೆ ವಿನಾಯಿತಿ ಪಡೆಯಲು ಇದೊಂದು ಉತ್ತಮ ಹೂಡಿಕೆ ಆಯ್ಕೆಯಾಗಿದೆ. ಪಿಪಿಎಫ್​ ಖಾತೆಯಲ್ಲಿ ಹೂಡಿಕೆ ಮಾಡಿರುವ ಸಂಚಿತ ಮೊತ್ತಕ್ಕೆ ನೀಡಲಾಗುವ ಬಡ್ಡಿಗೆ ತೆರಿಗೆ ವಿನಾಯಿತಿ ಇದ್ದು, ಮೆಚ್ಯೂರಿಟಿ ಅವಧಿಯ ಬಳಿಕ ಹಿಂಪಡೆಯುವ ಬಡ್ಡಿಗೆ ತೆರಿಗೆ ಇರುವುದಿಲ್ಲ. ಆದರೆ, ಒಂದು ಹಣಕಾಸು ವರ್ಷದಲ್ಲಿ ಕನಿಷ್ಠ 500 ರೂ.ಗಳಿಂದ ಗರಿಷ್ಠ 1,50,000 ರೂ.ವರೆಗೆ ಮಾತ್ರ ಹೂಡಿಕೆಗೆ ಅವಕಾಶವಿದೆ.

20 ವರ್ಷದ ಯುವತಿಯ ಬಾಯಿ ಕಟ್ಟಿ, 51 ಬಾರಿ ಇರಿದು ಕೊಂದ ಪಾಗಲ್ ಪ್ರೇಮಿ

ಛತ್ತೀಸ್‌ಗಢದ ಕೊರ್ಬಾ ಜಿಲ್ಲೆಯಲ್ಲಿ ಪಾಗಲ್ ಪ್ರೇಮಿಯೊಬ್ಬ ತನ್ನೊಂದಿಗೆ ಮಾತನಾಡಲು ನಿರಾಕರಿಸಿದ 20 ವರ್ಷದ ಯುವತಿಯನ್ನು ಕಟ್ಟಿ ಹಾಕಿ, ಆಕೆಯ ಬಾಯಿಯನ್ನು ಮುಚ್ಚಿ, 51 ಬಾರಿ ಸ್ಕ್ರೂಡ್ರೈವರ್‌ನಿಂದ ಇರಿದು ಕೊಂದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಅವಿವಾಹಿತನ ಜೊತೆ ವಿವಾಹಿತೆಯ ಆಕ್ರಮ ಸಂಬಂಧ, ವಿವಾಹಿತೆಯ ಕಾಟ ತಾಳದೆ ಹತ್ಯೆ ಮಾಡಿದ!

ಆಕೆ ಈಗಾಗಲೇ ಮದುವೆಯಾಗಿದ್ದರು ಕೂಡ, ಅದೊಬ್ಬ ಅವಿವಾಹಿತನ ಜೊತೆ ಆಕ್ರಮ ಸಂಬಂಧ ಹೊಂದಿದ್ದಳು. ಪದೇ ಪದೇ ಆತನಿಗೆ ಮಾನಸಿಕನವಾಗಿ ಕಿರುಕುಳ ನೀಡುತ್ತಿದ್ದ ಆಕೆ, ಆತನ ಮದುವೆಗೂ ಕೂಡ ವಿರೋಧ ವ್ಯಕ್ತಪಡಿಸಿ ಕೆಲವೊಂದು ಫೋಟೊಗಳನ್ನ ಫೇಸ್ ಬುಕ್ ನಲ್ಲಿ ಅಪ್ಲೋಡ್ ಮಾಡಿದ್ದಳು. ಆಕೆಯ ವರ್ತನೆಗೆ ಬೇಸತ್ತು ಆತ ದೂರವಾಗಲು ಮುಂದಾದರೂ, ಆಕೆ ಮಾತ್ರ ಆತನನ್ನ ಬಿಡುತ್ತಿರಲಿಲ್ಲ. ಇದರಿಂದ ರೋಸಿಹೋದ ಆತ, ಆಕೆಯ ಕಥೆಯನ್ನೇ ಮುಗಿಸಿದ್ದಾನೆ.

ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ