Evening News:ಸೋನಿಯಾ ಗಾಂಧಿ ಅನಾರೋಗ್ಯದಿಂದ ಜಲಮಂಡಳಿ ಭ್ರಷ್ಟ ಅಧಿಕಾರಿಗಳ ಕರ್ಮಕಾಂಡ: ದಿನದ ಪ್ರಮುಖ ಸುದ್ದಿಯ ರೌಂಡಪ್

ದೇಶ, ರಾಜ್ಯ, ವಿದೇಶ, ಅಪರಾಧ, ಶೈಕ್ಷಣಿಕ ಮತ್ತು ವಾಣಿಜ್ಯ ಕುರಿತಾದ ಇಂದಿನ (ಜ.4)ರ ಪ್ರಮುಖ ಸುದ್ದಿಗಳು: ಯುವತಿ ಮೇಲೆ ಅತ್ಯಾಚಾರವಾಗಿಲ್ಲ, ಮೆದುಳು ನಾಪತ್ತೆ, ಮಹಿಳೆ ಮೇಲೆ ಮೂತ್ರ ವಿಸರ್ಜನೆ ಮಾಡಿದ ವ್ಯಕ್ತಿ, ಜನಾರ್ದನ ರೆಡ್ಡಿ ಆಸ್ತಿ ಜಪ್ತಿಗೆ ರಾಜ್ಯ ಸರ್ಕಾರ ಮೀನಾಮೇಷ: ಹೈಕೋರ್ಟ್ ಮೆಟ್ಟಿಲೇರಿದ ಸಿಬಿಐ ಒಳಗೊಂಡ ಪ್ರಮುಖ ಸುದ್ದಿಗಳು ಇಲ್ಲಿವೆ ಓದಿ.

Evening News:ಸೋನಿಯಾ ಗಾಂಧಿ ಅನಾರೋಗ್ಯದಿಂದ ಜಲಮಂಡಳಿ ಭ್ರಷ್ಟ ಅಧಿಕಾರಿಗಳ ಕರ್ಮಕಾಂಡ: ದಿನದ ಪ್ರಮುಖ ಸುದ್ದಿಯ ರೌಂಡಪ್
ಸೋನಿಯಾ ಗಾಂಧಿ, BWSSB
Follow us
TV9 Web
| Updated By: ವಿವೇಕ ಬಿರಾದಾರ

Updated on:Jan 04, 2023 | 8:17 PM

ದೇಶ, ರಾಜ್ಯ, ವಿದೇಶ, ಅಪರಾಧ, ಶೈಕ್ಷಣಿಕ ಮತ್ತು ವಾಣಿಜ್ಯ ಕುರಿತಾದ ಇಂದಿನ (ಜ.4)ರ ಪ್ರಮುಖ ಸುದ್ದಿಗಳು: ಯುವತಿ ಮೇಲೆ ಅತ್ಯಾಚಾರವಾಗಿಲ್ಲ, ಮೆದುಳು ನಾಪತ್ತೆ, ಮಹಿಳೆ ಮೇಲೆ ಮೂತ್ರ ವಿಸರ್ಜನೆ ಮಾಡಿದ ವ್ಯಕ್ತಿ, ಜನಾರ್ದನ ರೆಡ್ಡಿ ಆಸ್ತಿ ಜಪ್ತಿಗೆ ರಾಜ್ಯ ಸರ್ಕಾರ ಮೀನಾಮೇಷ: ಹೈಕೋರ್ಟ್ ಮೆಟ್ಟಿಲೇರಿದ ಸಿಬಿಐ ಒಳಗೊಂಡ ಪ್ರಮುಖ ಸುದ್ದಿಗಳು ಇಲ್ಲಿವೆ ಓದಿ.

ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

ಕಾಂಗ್ರೆಸ್‌ನ ನಾಯಕಿ ಸೋನಿಯಾ ಗಾಂಧಿ ಅವರನ್ನು ಸಾಮಾನ್ಯ ತಪಾಸಣೆಗಾಗಿ ಬುಧವಾರ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಅವರ ಪುತ್ರಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರೊಂದಿಗೆ ಆಸ್ಪತ್ರೆಗೆ ಬಂದಿದ್ದಾರೆ ಎಂದು ಹೇಳಲಾಗಿದೆ. ಸೋನಿಯಾ ಗಾಂಧಿ ಅವರು ಉಸಿರಾಟದ ಸೋಂಕಿನಿಂದ ಬಳಲುತ್ತಿದ್ದಾರೆ ಎಂದು ಹೇಳಲಾಗಿದೆ.

ಯುವತಿ ಮೇಲೆ ಅತ್ಯಾಚಾರವಾಗಿಲ್ಲ, ಮೆದುಳು ನಾಪತ್ತೆ

ಜನವರಿ 1ರಂದು ರಾತ್ರಿ ನವದೆಹಲಿಯ ಸುಲ್ತಾನ್​ಪುರಿ ಪ್ರದೇಶದಲ್ಲಿ ಅಂಜಲಿ ಎನ್ನುವ ಯುವತಿ ಸ್ಕೂಟಿಗೆ ಡಿಕ್ಕಿ ಹೊಡೆದ ಕಾರು ಆಕೆಯನ್ನು ಕಿ.ಮೀ.ಗಟ್ಟಲೆ ದೂರಕ್ಕೆ ಎಳೆದುಕೊಂಡು ಹೋಗಿತ್ತು. ಇದಾದ ಬಳಿಕ ಆಕೆ ಸಾವನ್ನಪ್ಪಿದ್ದಳು. ಆಕೆಯ ಮೇಲೆ ಅತ್ಯಾಚಾರ ಎಸಗಿ ನಂತರ ಎಳೆದೊಯ್ಯುವ ಮುನ್ನ ಕೊಂದು ಹಾಕಿರಬಹುದು ಎಂದು ಶಂಕಿಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದಿಗ ಮೃತ ಯುವತಿ ಅಂಜಲಿ ಮರಣೋತ್ತರ ಪರೀಕ್ಷೆ ವರದಿ ಬಹಿರಂಗವಾಗಿದ್ದು, ಅತ್ಯಾಚಾರ ಮಾಡಿದ ಯಾವುದೇ ಕುರುಹುಗಳು ಪತ್ತೆಯಾಗಿಲ್ಲ ಎಂದು ವರದಿ ತಿಳಿಸಿದೆ.

ಮಹಿಳೆ ಮೇಲೆ ಮೂತ್ರ ವಿಸರ್ಜನೆ ಮಾಡಿದ ವ್ಯಕ್ತಿಗೆ ವಿಮಾನ ನಿರ್ಬಂಧ

ಮದ್ಯಪಾನ ಮಾಡಿ ಏರ್ ಇಂಡಿಯಾದ ಬ್ಯುಸಿನೆಸ್ ಕ್ಲಾಸ್‌ನಲ್ಲಿ ಪ್ರಯಾಣಿಕರೊಬ್ಬರು ಮಹಿಳಾ ಮೇಲೆ ಮೂತ್ರ ವಿಸರ್ಜನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಏರ್ ಇಂಡಿಯಾ ಕಠಿಣ ಕ್ರಮವನ್ನು ಕೈಗೊಂಡಿದೆ. ಈ ಬಗ್ಗೆ ಸಾರ್ವಜನಿಕ ಆಕ್ರೋಶ ವ್ಯಕ್ತವಾದ ನಂತರ, ಪ್ರಕರಣಕ್ಕೆ ಸಂಬಂಧಿಸಿದಂತೆ ಮೂತ್ರ ವಿಸರ್ಜನೆ ಮಾಡಿದ ವ್ಯಕ್ತಿಯನ್ನು ಏರ್‌ಲೈನ್ಸ್ 30 ದಿನಗಳ ಕಾಲ ಏರ್ ಇಂಡಿಯಾದಲ್ಲಿ ಪ್ರಯಾಣಿಸುವುದನ್ನು ನಿಷೇಧಿಸಿದೆ ಎಂದು ವರದಿ ತಿಳಿಸಿದೆ. ವಿಮಾನ ಸಿಬ್ಬಂದಿಯ ಬೇಜಾಬ್ದಾರಿಯ ಬಗ್ಗೆ ತನಿಖೆ ನಡೆಸಲು ಏರ್ ಇಂಡಿಯಾ ಆಂತರಿಕ ಸಮಿತಿಯನ್ನು ರಚಿಸಿದೆ ಎಂದು ಏರ್ ಇಂಡಿಯಾ ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಗಳೂರು ಜಲಮಂಡಳಿಯ ಭ್ರಷ್ಟ ಅಧಿಕಾರಿಗಳ ಕರ್ಮಕಾಂಡ ಬಯಲು

ಗೆಜೆಟೆಡ್‌ ಅಧಿಕಾರಿಗಳ ಅಮಾನತ್ತಿನೊಂದಿಗೆ ಬೆಂಗಳೂರು ಜಲಮಂಡಳಿಯಲ್ಲಿ ನಡೆದಿದೆ ಎನ್ನಲಾದ ಕರ್ಮಕಾಂಡ ಹೊರಗೆ ಬಂತು ಎಂದರೂ, ಇದು ಇಂದಿಗೂ ನಿಂತಿಲ್ಲ. ಅಷ್ಟೇ ಅಲ್ಲ, ಕಳೆದ ಇಪ್ಪತ್ತು ವರ್ಷಗಳಿಂದ ಈ ಸ್ಕ್ಯಾಮ್​ ನಡೆದಿರಬಹುದು ಎಂದು ಬಿಡ್ಲುಎಸ್​ಎಸ್​​ಬಿ ಮೂಲಗಳಿಂದ ತಿಳಿದಿದೆ. ನಿನ್ನೆ (ಜ.3) ರಂದು ಬೆಂಗಳೂರು ಜಲಮಂಡಳಿ ಗುತ್ತಿಗೆ ನೌಕರರ ವಂಚನೆ ಪತ್ತೆಹಚ್ಚಲು ವಿಫಲರಾದ 13 ಗೆಜೆಟೆಡ್‌ ಅಧಿಕಾರಿಗಳನ್ನು ಅಮಾನತು ಮಾಡಿತ್ತು. ಈ ಪ್ರಕರಣದ ಜಾಡನ್ನು ಬೆನ್ನಹತ್ತಿದ ಟಿವಿ9 ಡಿಜಿಟಲ್​​ಗೆ ಬೆಂಗಳೂರು ಜಲಮಂಡಳಿಯಲ್ಲಿನ ಭ್ರಷ್ಟಾಚಾರದ ಕರ್ಮಕಾಂಡ ಬಟಾ ಬಯಲಾಗಿದೆ. ಮೇಲ್​ ಅಧಿಕಾರಿಗಳ ನಿರ್ಲಕ್ಷ್ಯ, ಕೆಳ ಹಂತದ ಕಾರ್ಮಿಕರ ಹಣದ ಚಪಲದಿಂದ ಬೆಂಗಳೂರು ಜನರು ರೋಸಿ ಹೋಗಿದ್ದಾರೆ. (ಹೆಚ್ಚಿನ ಓದುಗಕ್ಕಾಗಿ ಇಲ್ಲಿ ಕ್ಲಿಕ್​ ಮಾಡಿ)

ಜನಾರ್ದನ ರೆಡ್ಡಿ ಆಸ್ತಿ ಜಪ್ತಿಗೆ ರಾಜ್ಯ ಸರ್ಕಾರ ಮೀನಾಮೇಷ: ಹೈಕೋರ್ಟ್ ಮೆಟ್ಟಿಲೇರಿದ ಸಿಬಿಐ

ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸಂಸ್ಥಾಪಕ, ಮಾಜಿ ಸಚಿವ ಮಾಜಿ ಸಚಿವ ಗಾಲಿ ಜನಾರ್ದನ ಆಸ್ತಿ ಜಪ್ತಿಗೆ ಕರ್ನಾಟಕ ಸರ್ಕಾರ ಅನುಮತಿ ನೀಡದ ಹಿನ್ನೆಲೆಯಲ್ಲಿ ಸಿಬಿಐ ಹೈಕೋರ್ಟ್ ಮೆಟ್ಟಿಲೇರಿದೆ. ಅಕ್ರಮ ಹಣದ ಮೂಲದಿಂದ ಖರೀದಿಸಿದ್ದ ಜನಾರ್ದನ ರೆಡ್ಡಿ ಆಸ್ತಿಯನ್ನು ಜಪ್ತಿ ಮಾಡಿ ಎಂದು ಕರ್ನಾಟಕ ಸರ್ಕಾರಕ್ಕೆ ಅರ್ಜಿ ಸಲ್ಲಿಸಿದರೂ ಅನುಮತಿ ನೀಡಿಲ್ಲ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಸಿಬಿಐ ಮನವಿ ಹೈಕೋರ್ಟ್​ಗೆ ಮನವಿ ಮಾಡಿದೆ.

ವಿಜಯಪುರ: ಈ ಗ್ರಾಮಕ್ಕಿಲ್ಲ ಮತಗಟ್ಟೆ, ವೋಟ್​ ಹಾಕಲು 3 ಕಿ.ಮೀ ಹೋಗಬೇಕು

ಕರ್ನಾಟಕದಲ್ಲಿ 2023ರ ಚುನಾವಣೆ ಹತ್ತಿರ ಬರುತ್ತಿದೆ. ಎಲ್ಲ ಪಕ್ಷಗಳು ಈಗಾಗಲೇ ಚುನಾವಣೆ ಘೋಷಣೆಗೆ ಬಕಪಕ್ಷಿಗಳಂತೆ ಕಾಯುತ್ತಿದೆ. ರಾಜಕೀಯ ಪಕ್ಷಗಳು ಹೊಸ ಹೊಸ ತಂತ್ರಗಳನ್ನು ಸಿದ್ಧಗೊಳಿಸುತ್ತಿವೆ, ಜನರ ಬಳಿ ಯಾವ ಯೋಜನೆ, ಅವರ ಅಶೋತ್ತರಗಳು ಏನು? ಎಲ್ಲಿ? ಹೇಗೆ? ಪ್ರಚಾರ ಮಾಡಬೇಕು ಎಂದು ಯೋಜನೆಗಳನ್ನು ಹಾಕಿಕೊಳ್ಳುತ್ತಿದೆ. ಇಷ್ಟೇ ಎಲ್ಲ ಪ್ಲಾನ್ ಮಾಡಿಕೊಳ್ಳುತ್ತಿರುವ ರಾಜಕೀಯ ಪಕ್ಷಗಳಿಗೆ ಹಾಗೂ ಆಡಳಿತರೂಢ ಸರ್ಕಾರಕ್ಕೆ ಜನರಿಗೆ ಮುಖ್ಯವಾಗಿ ಏನು? ಬೇಕು ಎಂಬುದನ್ನು ಕಂಡುಕೊಳ್ಳುತ್ತಿಲ್ಲ. ಈ ಕಾರಣಕ್ಕಾಗಿಯೇ ರಾಜ್ಯದಲ್ಲಿ ಯಾವುದೇ ಪಕ್ಷಗಳು ಸ್ಥಿರವಾಗಿ ನಿಲ್ಲುತ್ತಿಲ್ಲ, ಹೌದು ಇಲ್ಲೊಂದು ಊರಿನಲ್ಲಿ ಮತ ಹಾಕಲು ಮತಗಟ್ಟೆ ಇಲ್ಲ. ಈ ಹಳ್ಳಿಯ ಜನ ಮತ ಹಾಕಲು ಪರದಾಡುತ್ತಿದ್ದಾರೆ. (ಹೆಚ್ಚಿನ ಓದುಗಕ್ಕಾಗಿ ಇಲ್ಲಿ ಕ್ಲಿಕ್​ ಮಾಡಿ)

ಏರ್ ಇಂಡಿಯಾ ವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜಿಸಿದ ಕುಡುಕ ಪ್ರಯಾಣಿಕ

ಕುಡಿದ ಅಮಲಿನಲ್ಲಿ ಪ್ಯಾಂಟ್ ಜಿಪ್ ಬಿಚ್ಚಿ ಅಸಭ್ಯವಾಗಿ ವರ್ತಿಸಿದ ಪ್ರಯಾಣಿಕನೊಬ್ಬ ಮಹಿಳೆಯೊಬ್ಬರ ಮೇಲೆ ಮೂತ್ರ ವಿಸರ್ಜಿಸಿದ ಅಸಹ್ಯಕರ ಘಟನೆ ಏರ್ ಇಂಡಿಯಾ ವಿಮಾನದಲ್ಲಿ ಇತ್ತೀಚೆಗೆ ನಡೆದಿರುವುದು ವರದಿಯಾಗಿದೆ. ನ್ಯೂಯಾರ್ಕ್​​ನಿಂದ ನವದೆಹಲಿಗೆ ಪ್ರಯಾಣಿಸುತ್ತಿದ್ದ ಏರ್​ ಇಂಡಿಯಾ ವಿಮಾನದ ಬ್ಯುಸಿನೆಸ್ ಕ್ಲಾಸ್ ಆಸನ ವಿಭಾಗದಲ್ಲಿ ಈ ವಿಲಕ್ಷಣ ವಿದ್ಯಮಾನ ನಡೆದಿದೆ. ಮಹಿಳೆಯು ತಕ್ಷಣವೇ ಕ್ಯಾಬಿನ್ ಸಿಬ್ಬಂದಿಗೆ ಮಾಹಿತಿ ನೀಡಿದ್ದರು. ಆದರೆ, ಅವರು ಯಾವುದೇ ಕ್ರಮ ಕೈಗೊಳ್ಳಲಿಲ್ಲ. ವಿಮಾನ ದೆಹಲಿ ತಲುಪಿದ ಬಳಿಕ ಏನೂ ಆಗಿಲ್ಲವೆಂಬಂತೆ ಇಳಿದು ಹೊರ ನಡೆದರು ಎಂದು ಆರೋಪಿಸಲಾಗಿದೆ. ಘಟನೆಗೆ ಸಂಬಂಧಿಸಿ ಸುಮಾರು 70 ವರ್ಷ ವಯಸ್ಸಿನ ಸಂತ್ರಸ್ತೆ ಮಹಿಳೆ ಟಾಟಾ ಸಮೂಹದ ಅಧ್ಯಕ್ಷ ಎನ್. ಚಂದ್ರಶೇಖರನ್ ಅವರಿಗೆ ಪತ್ರ ಬರೆದಿದ್ದಾರೆ.

Phone pay ಮುಖ್ಯ ಕಚೇರಿ ಬೆಂಗಳೂರಿಗೆ ವರ್ಗಾವಣೆ, ವಾಲ್ಮಾರ್ಟ್​​ಗೆ 8 ಸಾವಿರ ಕೋಟಿ ರೂ. ತೆರಿಗೆ

ಭಾರತದ ಪ್ರಮುಖ ಪೇಮೆಂಟ್ ಪ್ಲಾಟ್​​ಫಾರ್ಮ್ ಎನಿಸಿರುವ ಫೋನ್ ಪೇ ಕಂಪನಿಯ ಮುಖ್ಯ ಕಚೇರಿ ಸಿಂಗಾಪುರದಿಂದ ಬೆಂಗಳೂರಿಗೆ ವರ್ಗಾವಣೆ ಆಗುತ್ತಿದೆ. ಅದರ ಪರಿಣಾಮವಾಗಿ ಈಗ ವಾಲ್ಮಾರ್ಟ್, ಫ್ಲಿಪ್ ಕಾರ್ಟ್ ಇತ್ಯಾದಿ ಫೋನ್ ಪೇ ಷೇರುದಾರರಿಗೆ 1 ಬಿಲಿಯನ್ ಡಾಲರ್ (ಸುಮಾರು 8,200 ಕೋಟಿ ರೂ) ಮೊತ್ತದಷ್ಟು ತೆರಿಗೆ ಹೊರೆ ಬಿದ್ದಿದೆ ಎಂಬ ವಿಚಾರ ಬೆಳಕಿಗೆ ಬಂದಿದೆ. ಅಷ್ಟೇ ಅಲ್ಲ, ಹೊಸ ದರದಲ್ಲಿ ಷೇರುಗಳನ್ನು ಮಾರುವ ಮೂಲಕ ಫೋನ್ ಪೇ 12 ಬಿಲಿಯನ್ ಡಾಲರ್​​ನಷ್ಟು ಹೂಡಿಕೆ ಸಂಗ್ರಹಿಸುತ್ತಿದೆ. ಜನರಲ್ ಅಟ್ಲಾಂಟಿಕ್, ಕತಾರ್ ಇನ್ವೆಸ್ಟ್ಮೆಂಟ್ ಅಥಾರಿಟಿ ಮತ್ತಿತರ ಕಂಪನಿಗಳು ಹೂಡಿಕೆ ಮಾಡುತ್ತಿವೆ. ಟೈಗರ್ ಗ್ಲೋಬಲ್ ಮ್ಯಾನೇಜ್ಮೆಂಟ್ ಸಂಸ್ಥೆ ಕೂಡ ಹೊಸ ದರದಲ್ಲಿ ಫೋನ್ ಪೇ ಷೇರುಗಳನ್ನು ಖರೀದಿಸಿದೆ. ಇಲ್ಲಿ ಫೋನ್ ಪೇ ಕಂಪನಿ ಹೂಡಿಕೆಗೆ ತೆರೆದುಕೊಳ್ಳುವ ಮುನ್ನ ಇದ್ದ ಬೆಲೆಯ ಆಧಾರದಲ್ಲಿ ಹೊಸ ದರ ನಿಗದಿ ಮಾಡಲಾಗಿದೆ. ಇದರಿಂದಾಗಿ ಫೋನ್ ಪೇ ಷೇರುದಾರರಿಗೆ ಅಂದಾಜು 8 ಸಾವಿರ ಕೋಟಿ ರೂ ತೆರಿಗೆ ಹೊರೆ ಬರಬಹುದು ಎಂದು ‘ಬ್ಲೂಂಬರ್ಗ್’ ಸುದ್ದಿ ಸಂಸ್ಥೆಯ ವರದಿಯಲ್ಲಿ ತಿಳಿಸಲಾಗಿದೆ.

ಚೇತರಿಕೆಯ ನಡುವೆಯೂ ರಿಷಬ್ ಪಂತ್ ಡೆಹ್ರಾಡೂನ್​ನಿಂದ ಮುಂಬೈಗೆ ಶಿಫ್ಟ್..!

ರಿಷಬ್ ಪಂತ್​ಗೆ ಹೆಚ್ಚಾಗಿ ಕಾಡುತ್ತಿರುವ ನೋವೆಂದರೆ ಅದು ಕಾಲಿನ ಇಂಜುರಿ. ಹೀಗಾಗಿ ಉತ್ತಮ ಚಿಕಿತ್ಸೆಗಾಗಿ ಅವರನ್ನು ಬೇರೆ ಆಸ್ಪತ್ರೆಗೆ ಸ್ಥಳಾಂತರಿಸಲು ಯೋಜನೆ ರೂಪಿಸಲಾಗಿದೆ ಎಂಬ ಮಾತು ಕೇಳಲಾರಂಭಿಸಿದೆ. ಡಿಸೆಂಬರ್ 30 ರಂದು ರಸ್ತೆ ಅಪಘಾತದಲ್ಲಿ ಗಾಯಗೊಂಡು ಡೆಹ್ರಾಡೂನ್​ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ರಿಷಬ್ ಪಂತ್ ಟೀಂ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಡೆಹ್ರಾಡೂನ್​ನಿಂದ ಮುಂಬೈಗೆ ಶಿಫ್ಟ್ ಮಾಡಲಾಗುತ್ತದೆ ಎಂಬ ಮಾಹಿತಿ ಸಿಕ್ಕಿದೆ.

ಮತ್ತೆ ಬಂತು ಕೊರೊನಾ: ತೀವ್ರತೆಯೂ ಬೇರೆ, ಲಕ್ಷಣಗಳೂ ಬದಲು

ಕೋವಿಡ್ ತಳಿಗಳು ಬದಲಾದಂತೆ ಸೋಂಕಿನ ಲಕ್ಷಣಗಳು ಕೂಡ ಬದಲಾಗುತ್ತಿವೆ. ಹೀಗಾಗಿ ಕೊರೊನಾವನ್ನು ಗುರುತಿಸುವುದು ಸ್ವಲ್ಪ ಕಷ್ಟದ ಕೆಲಸವಾಗಿ ಮಾರ್ಪಾಟಾಗಿದೆ. ರೋಗಲಕ್ಷಣಗಳು ಈಗ ತುಲನಾತ್ಮಕವಾಗಿ ಸೌಮ್ಯವಾಗಿದ್ದರೂ, ಅದರ ದೀರ್ಘಕಾಲೀನ ಪರಿಣಾಮಗಳು ಇನ್ನೂ ಕಳವಳಕಾರಿ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಅಲ್ಲದೆ, ಕೋವಿಡ್ ನಿಮ್ಮ ಹೃದಯ ಮತ್ತು ನರಮಂಡಲ ಸೇರಿದಂತೆ ನಿಮ್ಮ ಎಲ್ಲಾ ಅಂಗಗಳ ಮೇಲೆ ಪರಿಣಾಮ ಬೀರಬಹುದು, ಇದು ತೀವ್ರವಾದ ಕಾಯಿಲೆಗಳನ್ನು ಉಂಟುಮಾಡುತ್ತದೆ. (ಹೆಚ್ಚಿನ ಓದುಗಕ್ಕಾಗಿ ಇಲ್ಲಿ ಕ್ಲಿಕ್​ ಮಾಡಿ)

ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:12 pm, Wed, 4 January 23

ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ