AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rains: ರಾಜ್ಯದ ಈ 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​, 3 ದಿನ ಮಹಾ ಮಳೆಯ ಮುನ್ಸೂಚನೆ

ರಾಜ್ಯದ 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದ್ದು, ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಉತ್ತರ ಒಳನಾಡಿನ ಕೆಲವು ಕಡೆ ಅಧಿಕ ಮಳೆಯಾಗಲಿದೆ.

Karnataka Rains: ರಾಜ್ಯದ ಈ 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​,  3 ದಿನ ಮಹಾ ಮಳೆಯ ಮುನ್ಸೂಚನೆ
ಮಳೆImage Credit source: Twitter
ನಯನಾ ರಾಜೀವ್
|

Updated on:May 24, 2023 | 7:31 AM

Share

ರಾಜ್ಯದ 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದ್ದು, ಭಾರಿ ಮಳೆ(Rain)ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಉತ್ತರ ಒಳನಾಡಿನ ಕೆಲವು ಕಡೆ ಅಧಿಕ ಮಳೆಯಾಗಲಿದೆ. ಗಾಳಿಯ ವೇಗವು ಗಂಟೆಗೆ 40 ಕಿ.ಮೀ ರಿಂದ 50 ಕಿ.ಮೀ ಇರುವ ಸಾಧ್ಯತೆ ಇದೆ. ಬಿರುಗಾಳಿ ಸಹಿತ ಗುಡುಗಿನಿಂದ ಕೂಡಿದ ಮಳೆಯಾಗಲಿದೆ. ಬೆಳ್ಳೂರು, ಮಂಚಿಕೆರೆ, ಕ್ಯಾಸಲ್ ರಾಕ್, ಅಣ್ಣಿಗೆರೆ, ಕುಂದಗೋಳ, ಕಿರವತ್ತಿ, ಅಂಕೋಲಾ, ಬೆಳಗಾವಿ ವಿಮಾನ ನಿಲ್ದಾಣ, ಹಿಡಕಲ್ ಅಣೆಕಟ್ಟು, ಹುಕ್ಕೇರಿ, ಸಕಲೇಶಪುರ, ಗೋಪಾಲ್​ನಗರ, ಬನವಾಸಿ, ಮದ್ದೂರು, ಉತ್ತರಹಳ್ಳಿ, ಹಳಿಯಾಳ, ಕುಮಟಾ, ಮಹಾಲಿಂಗಪುರ, ರಬಕವಿ, ಕೃಷ್ಣರಾಜಪೇಟೆ, ಶಿಡ್ಲಘಟ್ಟ, ನಿಪ್ಪಾಣಿ, ಚಿಕ್ಕಬಳ್ಳಾಪುರ, ಕುಣಿಗಲ್​ನಲ್ಲಿ ಮಳೆಯಾಗಿದೆ.

ವಿಜಯಪುರದಲ್ಲಿ 40.2 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಲ್ಲಿ ಮಧ್ಯಾಹ್ನದ ಬಳಿಕ ಮೋಡಕವಿದ ವಾತಾವರಣ ನಿರ್ಮಾಣವಾಗಲಿದ್ದು, ರಾತ್ರಿ ವೇಳೆಗೆ ಬಹಳಷ್ಟು ಮಳೆಯಾಗುವ ಸಾಧ್ಯತೆ ಇದೆ.

ಮತ್ತಷ್ಟು ಓದಿ:Karnataka Rains: ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಇನ್ನೂ 3 ದಿನ ಮಳೆ, ಹೆಲ್ಪ್ ಲೈನ್ ನಂಬರ್ ಬಿಡುಗಡೆ ಮಾಡಿದ ಬಿಬಿಎಂಪಿ

ಎಚ್​ಎಎಲ್​ನಲ್ಲಿ 32.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 32.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 33.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಉತ್ತರಾಖಂಡದ ಜ್ವಾಲಾಪುರ ಪ್ರದೇಶದಲ್ಲಿ ಮಳೆ ಮತ್ತು ಗುಡುಗು ಸಹಿತ ಮಳೆಯಾಗಿರುವ ಬಗ್ಗೆ ವರದಿಯಾಗಿದೆ. ಹವಾಮಾನ ವೈಪರೀತ್ಯದಿಂದ 200 ವರ್ಷ ಹಳೆಯ ಮರವೊಂದು ಉರುಳಿಬಿದ್ದಿದೆ. ಏಕಾಏಕಿ ಬೃಹತ್‌ ಮರ ಉರುಳಿಬಿದ್ದಿದ್ದು ಅನೇಕರು ಸಿಲುಕಿದ್ದರು.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 7:29 am, Wed, 24 May 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ