Karnataka Rains: ರಾಜ್ಯದ ಈ 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​, 3 ದಿನ ಮಹಾ ಮಳೆಯ ಮುನ್ಸೂಚನೆ

ರಾಜ್ಯದ 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದ್ದು, ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಉತ್ತರ ಒಳನಾಡಿನ ಕೆಲವು ಕಡೆ ಅಧಿಕ ಮಳೆಯಾಗಲಿದೆ.

Karnataka Rains: ರಾಜ್ಯದ ಈ 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​,  3 ದಿನ ಮಹಾ ಮಳೆಯ ಮುನ್ಸೂಚನೆ
ಮಳೆ
Image Credit source: Twitter

Updated on: May 24, 2023 | 7:31 AM

ರಾಜ್ಯದ 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದ್ದು, ಭಾರಿ ಮಳೆ(Rain)ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಉತ್ತರ ಒಳನಾಡಿನ ಕೆಲವು ಕಡೆ ಅಧಿಕ ಮಳೆಯಾಗಲಿದೆ. ಗಾಳಿಯ ವೇಗವು ಗಂಟೆಗೆ 40 ಕಿ.ಮೀ ರಿಂದ 50 ಕಿ.ಮೀ ಇರುವ ಸಾಧ್ಯತೆ ಇದೆ. ಬಿರುಗಾಳಿ ಸಹಿತ ಗುಡುಗಿನಿಂದ ಕೂಡಿದ ಮಳೆಯಾಗಲಿದೆ. ಬೆಳ್ಳೂರು, ಮಂಚಿಕೆರೆ, ಕ್ಯಾಸಲ್ ರಾಕ್, ಅಣ್ಣಿಗೆರೆ, ಕುಂದಗೋಳ, ಕಿರವತ್ತಿ, ಅಂಕೋಲಾ, ಬೆಳಗಾವಿ ವಿಮಾನ ನಿಲ್ದಾಣ, ಹಿಡಕಲ್ ಅಣೆಕಟ್ಟು, ಹುಕ್ಕೇರಿ, ಸಕಲೇಶಪುರ, ಗೋಪಾಲ್​ನಗರ, ಬನವಾಸಿ, ಮದ್ದೂರು, ಉತ್ತರಹಳ್ಳಿ, ಹಳಿಯಾಳ, ಕುಮಟಾ, ಮಹಾಲಿಂಗಪುರ, ರಬಕವಿ, ಕೃಷ್ಣರಾಜಪೇಟೆ, ಶಿಡ್ಲಘಟ್ಟ, ನಿಪ್ಪಾಣಿ, ಚಿಕ್ಕಬಳ್ಳಾಪುರ, ಕುಣಿಗಲ್​ನಲ್ಲಿ ಮಳೆಯಾಗಿದೆ.

ವಿಜಯಪುರದಲ್ಲಿ 40.2 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಲ್ಲಿ ಮಧ್ಯಾಹ್ನದ ಬಳಿಕ ಮೋಡಕವಿದ ವಾತಾವರಣ ನಿರ್ಮಾಣವಾಗಲಿದ್ದು, ರಾತ್ರಿ ವೇಳೆಗೆ ಬಹಳಷ್ಟು ಮಳೆಯಾಗುವ ಸಾಧ್ಯತೆ ಇದೆ.

ಮತ್ತಷ್ಟು ಓದಿ:Karnataka Rains: ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಇನ್ನೂ 3 ದಿನ ಮಳೆ, ಹೆಲ್ಪ್ ಲೈನ್ ನಂಬರ್ ಬಿಡುಗಡೆ ಮಾಡಿದ ಬಿಬಿಎಂಪಿ

ಎಚ್​ಎಎಲ್​ನಲ್ಲಿ 32.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 32.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 33.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಉತ್ತರಾಖಂಡದ ಜ್ವಾಲಾಪುರ ಪ್ರದೇಶದಲ್ಲಿ ಮಳೆ ಮತ್ತು ಗುಡುಗು ಸಹಿತ ಮಳೆಯಾಗಿರುವ ಬಗ್ಗೆ ವರದಿಯಾಗಿದೆ. ಹವಾಮಾನ ವೈಪರೀತ್ಯದಿಂದ 200 ವರ್ಷ ಹಳೆಯ ಮರವೊಂದು ಉರುಳಿಬಿದ್ದಿದೆ. ಏಕಾಏಕಿ ಬೃಹತ್‌ ಮರ ಉರುಳಿಬಿದ್ದಿದ್ದು ಅನೇಕರು ಸಿಲುಕಿದ್ದರು.

 

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 7:29 am, Wed, 24 May 23

ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Loading...
Unable to load recommendations.
Follow Us