Karnataka Rains: ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ 4 ದಿನ ಮಳೆ, ಉತ್ತರ ಒಳನಾಡಿನಲ್ಲಿ ಒಣಹವೆ
ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ 4 ದಿನ ಮಳೆಯಾಗಲಿದ್ದು, ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ.
ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ 4 ದಿನ ಮಳೆಯಾಗಲಿದ್ದು, ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮುಂದಿನ 4 ದಿನ ಮಳೆಯಾಗಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿಯಲ್ಲಿ ಒಣಹವೆ ಮುಂದುವರೆಯಲಿದೆ.
ಮತ್ತಷ್ಟು ಓದಿ:BBMP: ಮಳೆ ಅವಘಡ ತಪ್ಪಿಸಲು ಕಂಟ್ರೋಲ್ ರೂಮ್ ಸ್ಥಾಪನೆಗೆ ಮುಂದಾದ ಬಿಬಿಎಂಪಿ
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು ಸಂಜೆ ಅಥವಾ ರಾತ್ರಿ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ. ಎಚ್ಎಎಲ್ನಲ್ಲಿ 32.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 33.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 33.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹುಂಚದಕಟ್ಟೆ, ಕಮ್ಮರಡಿ, ಜಯಪುರ, ಶ್ರವಣಬೆಳಗೊಳ, ಧರ್ಮಸ್ಥಳ, ಅರಕಲಗೂಡು, ಬೆಂಗಳೂರು, ಗೋಪಾಲ್ನಗರ, ನಾಪೋಕ್ಲು, ಬೆಳ್ತಂಗಡಿ, ಚನ್ನಗಿರಿ, ಹೊಸದುರ್ಗ, ಹಳಿಯಾಳ, ಮಹಾಲಿಂಗಪುರ, ಲೋಂಡಾ, ದೇವರಹಿಪ್ಪರಗಿ, ಕನಕಪುರ, ಬಾಳೆಹೊನ್ನೂರು, ರಾಮನಗರ, ಬೇಲೂರು, ಕೊಟ್ಟೂರಿನಲ್ಲಿ ಮಳೆಯಾಗಿದೆ.
ವ್ಯಾಪಕ ಮಳೆಯ ಜೊತೆಗೆ ಬಿರುಗಾಳಿ ಸಹ ಬೀಸುತ್ತಿದೆ. ಗಾಳಿಯ ವೇಳೆ ಹೆಚ್ಚಾಗಿದ್ದರಿಂದ ನಗರದಲ್ಲಿ ನೂರಾರು ಮರಗಳು ಮತ್ತು ಮರದ ಕೊಂಬೆಗಳು ಧರೆಗೆ ಉರುಳಿವೆ. ಅತೀ ಕಡಿಮೆ ಅವಧಿಯಲ್ಲಿ ಅತ್ಯಧಿಕ ಮಳೆ ಬರುತ್ತಿದೆ. ಹೀಗಾಗಿ ರಸ್ತೆಗಳು ಕೆರೆಯಂತಾಗಿವೆ. ನಗರದಲ್ಲಿ ಈಗಾಗಲೇ ಎರಡು ಅಮಾಯಕ ಜೀವಗಳು ಬಲಿಯಾಗಿವೆ. ಹೀಗಾಗಿ ಸಾರ್ವಜನಿಕರು ಮಳೆ, ಬಿರುಗಾಳಿ ಬೀಸುವ ಸಂದರ್ಭದಲ್ಲಿ ಸುರಕ್ಷಿತ ಸ್ಥಳದಲ್ಲಿರಬೇಕಿದೆ.
ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ