ತುಮಕೂರು ಕ್ಷೇತ್ರದಿಂದ ನಾನು ಸ್ಪರ್ಧಿಸಲು ಹೆಚ್ ಡಿ ದೇವೇಗೌಡರೇ ಕಾರಣ: ವಿ ಸೋಮಣ್ಣ

ಅರುಣ್​ ಕುಮಾರ್​ ಬೆಳ್ಳಿ

Updated on: Jun 05, 2024 | 12:00 PM

ರಾಜ್ಯ ರಾಜಕೀಯದಲ್ಲಿ ಒಂದು ಹೊಸ ಅಧ್ಯಾಯ ಆರಂಭವಾಗಿದೆ, ಯಾರಿಗೆ ಗೌರವ ಸಲ್ಲಿಸಬೇಕು ಅನ್ನೋದನ್ನು ಜನ ಚೆನ್ನಾಗಿ ತಿಳಿದುಕೊಂಡಿದ್ದಾರೆ ಎಂದು ಸೋಮಣ್ಣ ಹೇಳಿದರು. ರಾಜಕಾರಣವೇ ಬದುಕಲ್ಲ, ಅದೊಂದು ಅವಕಾಶ, ಬದಲಾದ ರಾಜಕೀಯ ಸನ್ನಿವೇಶದಲ್ಲಿ ತಾನು ಅವಕಾಶವನ್ನು ಉಪಯೋಗಿಸಿಕೊಂಡಿರುವುದಾಗಿ ಅವರು ಹೇಳಿದರು.

ಬೆಂಗಳೂರು: ತಮ್ಮ ಗೆಲುವಿಗೆ ಬಿಜೆಪಿ ಎಷ್ಟು ಕಾರಣವೋ ಜೆಡಿಎಸ್ ಕೂಡ ಅಷ್ಟೇ ಕಾರಣ ಎಂದು ತುಮಕೂರು ಲೋಕಸಭಾ ಕ್ಷೇತ್ರದಿಂದ ಗೆದ್ದಿರುವ ಬಿಜೆಪಿ ನಾಯಕ ವಿ ಸೋಮಣ್ಣ (V Somanna) ಹೇಳಿದರು. ನಗರದಲ್ಲಿಂದು ಹೆಚ್ ಡಿ ಕುಮಾರಸ್ವಾಮಿಯವರನ್ನು (HD Kumaraswamy) ಅವರ ನಿವಾಸದಲ್ಲಿ ಭೇಟಿಯಾಗಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಸೋಮಣ್ಣ ತಾವು ತುಮಕೂರು ಕ್ಷೇತ್ರದಿಂದ ಸ್ಪರ್ಧಿಸಲು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ (HD Devegowda) ಮತ್ತು ಕುಮಾರಸ್ವಾಮಿಯವರೇ ಕಾರಣ, ಅವರ ಪ್ರಸ್ತಾಪವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ರಾಜ್ಯ ಬಿಜೆಪಿ ನಾಯಕರು ಒಪ್ಪಿದರು, ಅವರೆಲ್ಲರಿಗೆ ತಾನು ಋಣಿಯಾಗಿರುವುದಾಗಿ ಸೋಮಣ್ಣ ಹೇಳಿದರು. ರಾಜ್ಯ ರಾಜಕೀಯದಲ್ಲಿ ಒಂದು ಹೊಸ ಅಧ್ಯಾಯ ಆರಂಭವಾಗಿದೆ, ಯಾರಿಗೆ ಗೌರವ ಸಲ್ಲಿಸಬೇಕು ಅನ್ನೋದನ್ನು ಜನ ಚೆನ್ನಾಗಿ ತಿಳಿದುಕೊಂಡಿದ್ದಾರೆ ಎಂದು ಸೋಮಣ್ಣ ಹೇಳಿದರು. ರಾಜಕಾರಣವೇ ಬದುಕಲ್ಲ, ಅದೊಂದು ಅವಕಾಶ, ಬದಲಾದ ರಾಜಕೀಯ ಸನ್ನಿವೇಶದಲ್ಲಿ ತಾನು ಅವಕಾಶವನ್ನು ಉಪಯೋಗಿಸಿಕೊಂಡಿರುವುದಾಗಿ ಅವರು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ನಾಮಪತ್ರ ಸಲ್ಲಿಸುವ ಮೊದಲು ಪೊಲೀಸರೊಂದಿಗೆ ತುಮಕೂರು ಬಿಜೆಪಿ ಅಭ್ಯರ್ಥಿ ವಿ ಸೋಮಣ್ಣ ಕಿರಿಕ್!

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.