ಮಂಡ್ಯದಲ್ಲಿ ಕುಮಾರಸ್ವಾಮಿಯವರ ಅಭಿನಂದನಾ ಕಾರ್ಯಕ್ರಮದ ಫ್ಲೆಕ್ಸ್ ಗಳಲ್ಲಿ ರೇವಣ್ಣನ ಫೋಟೋಗೆ ಜಾಗವಿಲ್ಲ!
ಆಫ್ ಕೋರ್ಸ್, ರೇವಣ್ಣ ಸುಮಾರು ಒಂದು ವಾರ ಕಾಲ ಜೈಲಲ್ಲಿದ್ದಿದ್ದು ಗೊತ್ತಿರದ ವಿಷಯವೇನಲ್ಲ. ಈ ಹಿನ್ನೆಲೆಯಲ್ಲಿ ಪಕ್ಷಕ್ಕೆ ಉಂಟಾಗಬಹುದಾದ ಮುಜುಗುರದಿಂದ ತಪ್ಪಿಸಿಕೊಳ್ಳಲು ಜೆಡಿಎಸ್ ಮುಖಂಡರು ರೇವಣ್ಣ ಮತ್ತು ಅವರ ಕುಟುಂಬದ ಸದಸ್ಯರನ್ನು ಫ್ಲೆಕ್ಸ್ ಗಳಿಂದ ದೂರವಿಟ್ಟಿದ್ದಾರೆ.
ಮಂಡ್ಯ: ಇದನ್ನು ನಿರೀಕ್ಷಿಸಲಾಗಿತ್ತು. ಕೇಂದ್ರದಲ್ಲಿ ಉಕ್ಕು ಮತ್ತು ಬೃಹತ್ ಕೈಗಾರಿಕೆ ಖಾತೆ ಸಚಿವರಾದ ಬಳಿಕ ಮೊದಲ ಬಾರಿಗೆ ಮಂಡ್ಯಗೆ ಆಗಮಿಸುತ್ತಿರುವ ಹೆಚ್ ಡಿ ಕುಮಾರಸ್ವಾಮಿಯವರಿಗೆ (HD Kumaraswamy) ನಗರದಲ್ಲಿ ಅಭಿನಂದನಾ ಸಮಾರಂಭವನ್ನು (felicitation) ಇಟ್ಟುಕೊಳ್ಳಲಾಗಿದ್ದು ಇದಕ್ಕೆ ಸಂಬಂಧಪಟ್ಟಂತೆ ಜಿಲ್ಲೆಯಾದ್ಯಂತ ಪ್ಲೆಕ್ಸ್ (flex) ಮತ್ತು ಬ್ಯಾನರ್ ಗಳನ್ನು ಕಟ್ಟಲಾಗಿದೆ. ಪ್ಲೆಕ್ಸ್ ಗಳಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಜೊತೆ ಬೇರೆ ಹಲವಾರು ಪ್ರಮುಖ ಬಿಜೆಪಿ ಮತ್ತು ಜೆಡಿಎಸ್ ಮುಖಂಡರ ಫೋಟೋಗಳಿವೆ. ಆದರೆ ಹೆಚ್ ಡಿ ರೇವಣ್ಣನ ಫೋಟೋ ಮಾತ್ರ ಇಲ್ಲ. ರೇವಣ್ಣ ಕುಟುಂಬದಲ್ಲಿ ಏನು ನಡೆಯುತ್ತಿದೆ ಅಂತ ಎಲ್ಲರಿಗೂ ಗೊತ್ತಿದೆ. ಅವರ ಇಬ್ಬರು ಮಕ್ಕಳು ಜೈಲಲ್ಲಿದ್ದರೆ ಖುದ್ದು ರೇವಣ್ಣ ಮತ್ತು ಅವರ ಪತ್ನಿ ಭವಾನಿ ಜಾಮೀನು ಪಡೆದು ಜೈಲಿಗೆ ಹೋಗುವುದರಿಂದ ತಪ್ಪಿಸಿಕೊಂಡಿದ್ದಾರೆ. ಆಫ್ ಕೋರ್ಸ್, ರೇವಣ್ಣ ಸುಮಾರು ಒಂದು ವಾರ ಕಾಲ ಜೈಲಲ್ಲಿದ್ದಿದ್ದು ಗೊತ್ತಿರದ ವಿಷಯವೇನಲ್ಲ. ಈ ಹಿನ್ನೆಲೆಯಲ್ಲಿ ಪಕ್ಷಕ್ಕೆ ಉಂಟಾಗಬಹುದಾದ ಮುಜುಗುರದಿಂದ ತಪ್ಪಿಸಿಕೊಳ್ಳಲು ಜೆಡಿಎಸ್ ಮುಖಂಡರು ರೇವಣ್ಣ ಮತ್ತು ಅವರ ಕುಟುಂಬದ ಸದಸ್ಯರನ್ನು ಫ್ಲೆಕ್ಸ್ ಗಳಿಂದ ದೂರವಿಟ್ಟಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ರಾಜ್ಯಕ್ಕೆ ಅನ್ಯಾಯವಾಗಿದ್ದರೆ ಸರಿಪಡಿಸುವ ಪ್ರಯತ್ನ ಮಾಡುತ್ತೇನೆ ಅಂತ ಕುಮಾರಸ್ವಾಮಿ ಹೇಳಿದಾಗ ಸಚಿವರು ಮುಗಿಬಿದ್ದರು