Karnataka Rajyotsava 2025: ಕನ್ನಡ ರಾಜ್ಯೋತ್ಸವ, ಕರ್ನಾಟಕದಲ್ಲಿ ಶನಿವಾರ ಬ್ಯಾಂಕ್ ರಜೆಯೇ?

Karnataka Rajyotsava 2025 and Bank Holiday: ನವೆಂಬರ್ 1 ರಂದು ಕರ್ನಾಟಕ ರಾಜ್ಯೋತ್ಸವ ಪ್ರಯುಕ್ತ ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಬ್ಯಾಂಕ್​ಗಳಿಗೆ ರಜೆ ಇರಲಿದೆ. ಆರ್​​ಬಿಐ ರಜೆ ವೇಳಾಪಟ್ಟಿ ಪ್ರಕಾರ ರಾಜ್ಯದಲ್ಲಿ ಯಾವೆಲ್ಲ ಬ್ಯಾಂಕ್​ಗಳು ರಜೆ ಇರಲಿವೆ ಎಂಬ ವಿವರ ಇಲ್ಲಿದೆ.

Karnataka Rajyotsava 2025: ಕನ್ನಡ ರಾಜ್ಯೋತ್ಸವ, ಕರ್ನಾಟಕದಲ್ಲಿ ಶನಿವಾರ ಬ್ಯಾಂಕ್ ರಜೆಯೇ?
ಸಾಂದರ್ಭಿಕ ಚಿತ್ರ

Updated on: Oct 31, 2025 | 11:58 AM

ಬೆಂಗಳೂರು, ಅಕ್ಟೋಬರ್ 31: ನವೆಂಬರ್ 1 ರಂದು ಶನಿವಾರ ಕನ್ನಡ ರಾಜ್ಯೋತ್ಸವದ (Kannada Rajyotsava) ಕಾರಣ ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಬ್ಯಾಂಕುಗಳು ರಜೆ ಇರಲಿವೆ. ಭಾರತೀಯ ರಿಸರ್ವ್ ಬ್ಯಾಂಕ್ (RBI) ಬಿಡುಗಡೆ ಮಾಡಿದ ಬ್ಯಾಂಕ್ ರಜಾದಿನಗಳ ಅಧಿಕೃತ ಪಟ್ಟಿಯ ಪ್ರಕಾರ, ನವೆಂಬರ್ 1 ಅನ್ನು ಕರ್ನಾಟಕದ ಎಲ್ಲಾ ಬ್ಯಾಂಕುಗಳಿಗೆ ಸಾರ್ವತ್ರಿಕ ರಜಾದಿನವೆಂದು ಪರಿಗಣಿಸಲಾಗಿದೆ. 1956 ರಂದು ಕರ್ನಾಟಕ ರಾಜ್ಯ ರಚನೆಯಾದ ನೆನಪಿಗಾಗಿ ಪ್ರತಿ ವರ್ಷ ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವ ಆಚರಿಸಲಾಗುತ್ತದೆ.

ದಕ್ಷಿಣ ಭಾರತದ ಕನ್ನಡ ಮಾತನಾಡುವ ಎಲ್ಲಾ ಪ್ರದೇಶಗಳನ್ನು ವಿಲೀನಗೊಳಿಸಿ, ರಾಜ್ಯಗಳ ಪುನರ್ವಿಂಗಡಣಾ ಕಾಯ್ದೆಯಡಿ ಕರ್ನಾಟಕ ಏಕೀಕರಣಗೊಂಡ ದಿನ ಇದಾಗಿದೆ.

ರಾಜ್ಯೋತ್ಸವ ದಿನ ಬೆಂಗಳೂರಿನಲ್ಲಿ ಧ್ವಜಾರೋಹಣ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಅದೇ ರೀತಿ ರಾಜ್ಯಾದ್ಯಂತ ಕಾರ್ಯಕ್ರಮಗಳು ನಡೆಯುತ್ತವೆ. ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳು ಧ್ವಜಾರೋಹಣ ಮಾಡುತ್ತಾರೆ. ರಾಜ್ಯೋತ್ಸವ ಪ್ರಶಸ್ತಿಗಳನ್ನು ಪ್ರದಾನ ಮಾಡುವ ಅದ್ಧೂರಿ ಕಾರ್ಯಕ್ರಮವೂ ನಡೆಯುತ್ತವೆ.

ಕರ್ನಾಟಕದಲ್ಲಿ ನವೆಂಬರ್ 1 ಸಾರ್ವತ್ರಿಕ ರಜಾದಿನವೆಂದು ಘೊಷಿಸಲಾಗಿರುವುದರಿಂದ, ಸರ್ಕಾರಿ ಕಚೇರಿಗಳು, ಶಾಲೆಗಳು ಮತ್ತು ಅನೇಕ ಖಾಸಗಿ ಸಂಸ್ಥೆಗಳು ಸಹ ರಜೆ ಹೊಂದಿರುತ್ತವೆ. ಆದಾಗ್ಯೂ, ಆಸ್ಪತ್ರೆಗಳು, ತುರ್ತು ಸಾರಿಗೆ ಮತ್ತು ಆನ್‌ಲೈನ್ ಬ್ಯಾಂಕಿಂಗ್ ಸೌಲಭ್ಯಗಳಂತಹ ಅಗತ್ಯ ಸೇವೆಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ.

ಯಾವೆಲ್ಲ ಬ್ಯಾಂಕ್​ಗಳಿಂದ ರಜೆ ಘೋಷಣೆ?

ಆರ್‌ಬಿಐ ಕರ್ನಾಟಕಕ್ಕೆ ನಿಗದಿಪಡಿಸಿದ ರಜಾ ವೇಳಾಪಟ್ಟಿಯಂತೆ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ), ಕೆನರಾ ಬ್ಯಾಂಕ್, ಎಚ್‌ಡಿಎಫ್‌ಸಿ ಬ್ಯಾಂಕ್ ಮತ್ತು ಐಸಿಐಸಿಐ ಬ್ಯಾಂಕ್‌ನಂತಹ ಪ್ರಮುಖ ಬ್ಯಾಂಕುಗಳು ನವೆಂಬರ್ 1 ರಂದು ರಜೆ ಘೋಷಿಸಿವೆ. ಗ್ರಾಹಕರು ನಗದು ಅಥವಾ ಚೆಕ್ ವಹಿವಾಟುಗಳನ್ನು ಮುಂಚಿತವಾಗಿ ಪೂರ್ಣಗೊಳಿಸಲು ಮತ್ತು ತುರ್ತು ಅವಶ್ಯಕತೆಗಳಿಗಾಗಿ ಡಿಜಿಟಲ್ ಬ್ಯಾಂಕಿಂಗ್ ಪ್ಲಾಟ್‌ಫಾರ್ಮ್‌ಗಳು, ಎಟಿಎಂಗಳು ಅಥವಾ ಯುಪಿಐ ಸೇವೆಗಳನ್ನು ಬಳಸಲು ಸೂಚಿಸಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:57 am, Fri, 31 October 25

ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
Loading...
Unable to load recommendations.
Follow Us