ಇಸ್ರೋ ಮುಖ್ಯಸ್ಥ ಎಸ್ ಸೋಮನಾಥ ಸೇರಿ ವಿವಿಧ ಕ್ಷೇತ್ರಗಳ 68 ಗಣ್ಯರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ
Kannada Rajyotsava Award Presentation: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶಸ್ತಿ ಪ್ರದಾನ ಮಾಡಿದರು. ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು. ‘ಕರ್ನಾಟಕ ಸಂಭ್ರಮ-50’ರ ಪ್ರಯುಕ್ತ ವಿಶೇಷವಾಗಿ 10 ಸಂಘ ಸಂಸ್ಥೆಗಳಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಬೆಂಗಳೂರು, ನವೆಂಬರ್ 1: ಕರ್ನಾಟಕದಾದ್ಯಂತ ಬುಧವಾರ ಕನ್ನಡ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಇಸ್ರೋ ಮುಖ್ಯಸ್ಥ ಎಸ್ ಸೋಮನಾಥ (S Somanath) ಸೇರಿದಂತೆ ವಿವಿಧ ಕ್ಷೇತ್ರಗಳ 68 ಮಂದಿ ಗಣ್ಯರಿಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ರಾಜ್ಯೋತ್ಸವ ಪ್ರಶಸ್ತಿಯನ್ನು (Kannada Rajyotsava award) ಪ್ರದಾನ ಮಾಡಲಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶಸ್ತಿ ಪ್ರದಾನ ಮಾಡಿದರು. ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು. ‘ಕರ್ನಾಟಕ ಸಂಭ್ರಮ-50’ರ ಪ್ರಯುಕ್ತ ವಿಶೇಷವಾಗಿ 10 ಸಂಘ ಸಂಸ್ಥೆಗಳಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಯಿತು.
100 ವರ್ಷ ವಯಸ್ಸು ದಾಟಿದ ಇಬ್ಬರಿಗೆ ಈ ಬಾರಿ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಈ ಪೈಕಿ ಒಬ್ಬರು ದಾವಣಗೆರೆ ಹಾಗೂ ಒಬ್ಬರು ಉತ್ತರ ಕನ್ನಡ ಜಿಲ್ಲೆಯವರು. 13 ಮಹಿಳೆಯರು ಮತ್ತು 54 ಪುರುಷರು ಹಾಗೂ ಒಬ್ಬರು ಮಂಗಳ ಮುಖಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಲಾಯಿತು.
ಪ್ರಶಸ್ತಿಯು 5 ಲಕ್ಷ ರೂ. ನಗದು, 25 ಗ್ರಾಂ ಚಿನ್ನದ ಮೆಡಲ್ ಒಳಗೊಂಡಿರಲಿದೆ.
ಇದೇ ವೇಳೆ ಮಾತನಾಡಿದ ಸಚಿವ ಶಿವರಾಜ್ ತಂಗಡಗಿ, ರಾಜ್ಯಕ್ಕೆ ಹೆಸರು ತಂದಿರುವ 68 ಜನರಿಗೆ ಮತ್ತು ಹತ್ತು ಸಂಸ್ಥೆಗಳಿಗೆ ಪ್ರಶಸ್ತಿ ಪ್ರದಾನ ಮಾಡಿದ್ದೇವೆ. 26 ಜನರ ಸಲಹಾ ಸಮಿತಿಯ ಮೂಲಕ ಪ್ರಶಸ್ತಿಗೆ ಆಯ್ಕೆ ನಡೆದಿದೆ. ಸಿಎಂ ಮತ್ತು ಡಿಸಿಎಂ ಸಲಹೆ ಮೂಲಕ ಸಮೀತಿ ರಚನೆ ಮಾಡಿದ್ದೆವು. ಹೀಗಾಗಿ ಆಯ್ಕೆಯು ಅತ್ಯದ್ಭುತವಾಗಿ ನಡೆದಿದೆ. ನಾಡಿಗೆ ಕೀರ್ತಿ ತಂದವರನ್ನ ಆಯ್ಕೆ ಮಾಡಲಾಗಿದೆ ಎಂದರು.
ಇದನ್ನೂ ಓದಿ: ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತರ ಸಂಪೂರ್ಣ ಪಟ್ಟಿ ಇಲ್ಲಿದೆ
ನಾಳೆ ಹಂಪಿಯಲ್ಲಿ ಕಾರ್ಯಕ್ರಮ ನಡೆಯಲಿದೆ. ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮ ಉದ್ಘಾಟನೆ ಮಾಡಲಿದ್ದಾರೆ. ವರ್ಷಪೂರ್ತಿ 50ನೇ ವರ್ಷದ ರಾಜ್ಯೋತ್ಸವ ಕಾರ್ಯಕ್ರಮ ನಡೆಯಲಿದೆ. ನಾಳೆ ಹಂಪಿಯಲ್ಲಿ ಸಿಎಂ ರಥಕ್ಕೆ ಚಾಲನೆಯನ್ನ ಕೊಡಲಿದ್ದಾರೆ. ರಥ ನಾಡಿನ ಎಲ್ಲಾ ಕಡೆಯೂ ಸಂಚರಿಸಲಿದೆ. ಮುಂದಿನವರ್ಷ ಅಕ್ಟೋಬರ್ 31ಕ್ಕೆ ರಥ ಪುನಃ ವಿಧಾನ ಸೌಧಕ್ಕೆ ಬರಲಿದೆ. ನಾಡಿನೆಲ್ಲಡೆ ಜನ ಅತ್ಯದ್ಭುತವಾಗಿ ರಾಜ್ಯೋತ್ಸವ ಆಚರಿಸುತ್ತಿದ್ದಾರೆ. ತಾಯಂದಿರು ರಂಗೋಲಿ ಬಿಡಿಸಿ ನಾಡಿನ ಹೆಮ್ಮೆಯನ್ನು ವ್ಯಕ್ತಪಡಿಸುತ್ತಿದ್ದಾರೆ ಎಂದು ಶಿವರಾಜ್ ತಂಗಡಗಿ ಹೇಳಿದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ