ಕನ್ನಡ ರಾಜ್ಯೋತ್ಸವಕ್ಕೆ ಕನ್ನಡದಲ್ಲೇ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ
ಸುವರ್ಣ ಕರ್ನಾಟಕ ವರ್ಷಚಾರಣೆಯ ಶುಭ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದ ಜನತೆಗೆ ಕನ್ನಡ ರಾಜ್ಯೋತ್ಸವದ ಶುಭ ಕೋರಿದ್ದಾರೆ. ಕನ್ನಡದಲ್ಲೇ ಸಂದೇಶ ಪ್ರಕಟಿಸುವ ಮೂಲಕ ಮೋದಿ ಶುಭ ಕೋರಿರುವುದು ವಿಶೇಷ. ಕನ್ನಡ ಸಂದೇಶದಲ್ಲಿ ಮೋದಿ ಹೇಳಿದ್ದೇನೆಂಬ ವಿವರ ಇಲ್ಲಿದೆ.
ಬೆಂಗಳೂರು, ನವೆಂಬರ್ 1: ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕದ ಜನತೆಗೆ ಶುಭ ಹಾರೈಸಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಕನ್ನಡದಲ್ಲೇ ಸಂದೇಶ ಪ್ರಕಟಿಸುವ ಅವರು ಕರ್ನಾಟಕದ ಜತೆ ಸದಾ ಸಂತೋಷ, ಯಶಸ್ಸು ಗಳಿಸುವಂತಾಗಲಿ ಎಂದು ಹಾರೈಸಿದ್ದಾರೆ.
‘ಕನ್ನಡ ರಾಜ್ಯೋತ್ಸವವು ಅತ್ಯಂತ ವಿಶೇಷವಾದ ಸಂದರ್ಭವಾಗಿದ್ದು, ಇದು ಕರ್ನಾಟಕದ ಅನುಕರಣೀಯ ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಗುರುತಿಸುತ್ತದೆ. ರಾಜ್ಯವು ಮಹಾನ್ ವ್ಯಕ್ತಿಗಳನ್ನು ಪಡೆದಿದ್ದು, ಅವರು ಎಲ್ಲಾ ಕ್ಷೇತ್ರಗಳಲ್ಲಿ ಅಭಿವೃದ್ಧಿ ಮತ್ತು ನಾವೀನ್ಯತೆಗೆ ಶಕ್ತಿ ತುಂಬುತ್ತಿದ್ದಾರೆ. ಕರ್ನಾಟಕದ ಜನರು ಸದಾ ಸಂತೋಷ ಮತ್ತು ಯಶಸ್ಸಿನಿಂದ ಕೂಡಿರಲಿ’ ಎಂದು ಸಂದೇಶದಲ್ಲಿ ಮೋದಿ ಉಲ್ಲೇಖಿಸಿದ್ದಾರೆ.
ಮೋದಿ ಎಕ್ಸ್ ಸಂದೇಶ
ಕನ್ನಡ ರಾಜ್ಯೋತ್ಸವವು ಅತ್ಯಂತ ವಿಶೇಷವಾದ ಸಂದರ್ಭವಾಗಿದ್ದು, ಇದು ಕರ್ನಾಟಕದ ಅನುಕರಣೀಯ ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಗುರುತಿಸುತ್ತದೆ. ರಾಜ್ಯವು ಮಹಾನ್ ವ್ಯಕ್ತಿಗಳನ್ನು ಪಡೆದಿದ್ದು, ಅವರು ಎಲ್ಲಾ ಕ್ಷೇತ್ರಗಳಲ್ಲಿ ಅಭಿವೃದ್ಧಿ ಮತ್ತು ನಾವೀನ್ಯತೆಗೆ ಶಕ್ತಿ ತುಂಬುತ್ತಿದ್ದಾರೆ. ಕರ್ನಾಟಕದ ಜನರು ಸದಾ ಸಂತೋಷ ಮತ್ತು ಯಶಸ್ಸಿನಿಂದ…
— Narendra Modi (@narendramodi) November 1, 2024
ಕರ್ನಾಟಕದಾದ್ಯಂತ ಕನ್ನಡ ರಾಜ್ಯೋತ್ಸವವನ್ನು ಇಂದು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಸುವರ್ಣ ಕರ್ನಾಟಕ ವರ್ಷಚಾರಣೆಯನ್ನು ಜನೋತ್ಸವವಾಗಿ ಸಂಭ್ರಮದಿಂದ ಆಚರಣೆ ಮಾಡಲಾಗುತ್ತಿದೆ. ರಾಜ್ಯೋತ್ಸವ ಪ್ರಶಸ್ತಿ ಜತೆಗೆ, ಕರ್ನಾಟಕ ಸಂಭ್ರಮದ ಪ್ರಯುಕ್ತ 50 ಮಹಿಳಾ ಸಾಧಕರು, 50 ಪುರುಷ ಸಾಧಕರಿಗೆ ಸುವರ್ಣ ಮಹೋತ್ಸವ ಪ್ರಶಸ್ತಿಯನ್ನು ಕೂಡ ಈ ಬಾರಿ ಘೋಷಣೆ ಮಾಡಲಾಗಿದೆ. ಪ್ರಶಸ್ತಿಯು 1 ಲಕ್ಷ ರೂ. ನಗದನ್ನೂ ಒಳಗೊಂಡಿದೆ.
ಇದನ್ನೂ ಓದಿ: ಸುವರ್ಣ ಮಹೋತ್ಸವ ಪ್ರಶಸ್ತಿ ಮೊತ್ತ 1 ಲಕ್ಷಕ್ಕೆ ಹೆಚ್ಚಳ; ರಾಜ್ಯ ಸರ್ಕಾರ ಘೋಷಣೆ
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ