AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kannada Rajyotsava Speech: ಕನ್ನಡ ರಾಜ್ಯೋತ್ಸವಕ್ಕೆ ನಿಮ್ಮ ಭಾಷಣ ಹೀಗಿರಲಿ

ಕನ್ನಡ ರಾಜ್ಯೋತ್ಸವ ದಿನದಂದು ಶಾಲೆಗಳಲ್ಲಿ ಭಾಷಣ ಮಾಡಲು ಬಯಸುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಕೆಲವು ಟಿಪ್ಸ್. ಈ ಲೇಖನದಲ್ಲಿ ನೀಡಲಾದ ಮಾಹಿತಿಯನ್ನು ಬಳಸಿಕೊಂಡು ನಿಮ್ಮ ಭಾಷಣ ಸಿದ್ದಗೊಳಿಸಿ ಕನ್ನಡಾಂಬೆಯ ಈ ದಿನವನ್ನು ಹಾಡಿ ಕೊಂಡಾಡಿ. ಕನ್ನಡ ಭಾಷೆಯನ್ನು ಮೆರೆಸಿ. ಇಲ್ಲಿ ನೆರೆದಿರುವ ಎಲ್ಲ ನನ್ನ ಗುರು ಹಿರಿಯರು, ಸ್ನೇಹಿತರು, ಗಣ್ಯರು ಸೇರಿದಂತೆ ಎಲ್ಲ ಸಮಸ್ತ ಕನ್ನಡಿಗರಿಗೆ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು ಎಂದು ಭಾಷಣ ಆರಂಭಿಸಿ.

Kannada Rajyotsava Speech: ಕನ್ನಡ ರಾಜ್ಯೋತ್ಸವಕ್ಕೆ ನಿಮ್ಮ ಭಾಷಣ ಹೀಗಿರಲಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Oct 31, 2023 | 1:13 PM

Share

ಪ್ರತಿ ವರ್ಷ ನವೆಂಬರ್ 1 ರಂದು ಇಡೀ ರಾಜ್ಯದಲ್ಲಿ ಕನ್ನಡದ ಕಂಪು ಹಬ್ಬಿರುತ್ತೆ (Kannada Rajyotsava). ಪ್ರತಿ ಏರಿಯಾ, ಗ್ರಾಮ, ಜಿಲ್ಲೆಗಳಲ್ಲಿ ಅದ್ಧೂರಿಯಾಗಿ ಕನ್ನಡ ರಾಜ್ಯೋತ್ಸವನ್ನು ಆಚರಿಸಲಾಗುತ್ತೆ. ಶಾಲೆ, ಕಾಲೇಜುಗಳಲ್ಲಿ ದಿನದ ಮಹತ್ವ ತಿಳಿಸಲು ಪ್ರಬಂಧ ಸ್ಪರ್ಧೆ, ಚರ್ಚೆ, ಕ್ವಿಜ್, ಭಾಷಣದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತೆ. ವಿಶೇಷ ಭಾಷಣಗಳು, ಕನ್ನಡ ನೆಲದ ಸಂಸ್ಕೃತಿಯನ್ನು ಬಿಂಬಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಕನ್ನಡದ ಶ್ರೇಷ್ಠತೆಯನ್ನು ಜನರಿಗೆ ತಿಳಿಸುವ ಕಾರ್ಯಗಳಾಗುತ್ತವೆ. ಹೀಗಾಗಿ ನಾವಿಂದು ಕನ್ನಡ ರಾಜ್ಯೋತ್ಸವದಂದು ಭಾಷಣ ಹೇಗಿರಬೇಕು ಎಂಬ ಬಗ್ಗೆ ತಿಳಿಸಿಕೊಡುತ್ತಿದ್ದೇವೆ.

ಇಲ್ಲಿ ನೆರೆದಿರುವ ಎಲ್ಲ ನನ್ನ ಗುರು ಹಿರಿಯರು, ಸ್ನೇಹಿತರು, ಗಣ್ಯರು ಸೇರಿದಂತೆ ಎಲ್ಲ ಸಮಸ್ತ ಕನ್ನಡಿಗರಿಗೆ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು. ಸ್ನೇಹಿತರೆ ನಮ್ಮ ಕನ್ನಡ ನಾಡು ಶ್ರೀಗಂಧದ ನಾಡು, ಕರುನಾಡು, ಕನ್ನಡಾಂಭೆಯ ನಾಡು. ರಾಷ್ಟ್ರಕವಿ ಕುವೆಂಪುರವರು ಹೇಳಿದಂತೆ, ನಮ್ಮ ಕರುನಾಡು ಸುಂದರ ನದಿ ವನಗಳ ನಾಡು. ರಸಋಷಿಗಳ ಬೀಡು. ಗಂಧದ ಚಂದದ ಹೊನ್ನಿನ ಗಣಿ. ಶಂಕರ ರಾಮಾನುಜ ವಿದ್ಯಾರಣ್ಯ, ಬಸವೇಶ್ವರ ಮಧ್ವರ, ರನ್ನ ಷಡಕ್ಷರಿ ಪೊನ್ನ, ಪಂಪ ಜನ್ಮಿಸಿದ ನಾಡು. ಕರುನಾಡಿನ ಬಗ್ಗೆ ಹೇಳಲು ಸಮಯವೇ ಸಾಲದು.

ಕರ್ನಾಟಕ ರಾಜ್ಯಕ್ಕೆ ಮೊದಲು ಇದ್ದ ಹೆಸರು ಮೈಸೂರು ರಾಜ್ಯ. 1905ರಲ್ಲಿ ಕರ್ನಾಟಕ ಏಕೀಕರಣ ಚಳುವಳಿ ಆರಂಭವಾಯಿತು. 1950 ರಲ್ಲಿ ಭಾರತವು ಗಣರಾಜ್ಯವಾಯಿತು. ಬಳಿಕ ಅಲ್ಲಲ್ಲಿ ಚದುರಿದ್ದ ನಿರ್ದಿಷ್ಟ ಪ್ರದೇಶದಲ್ಲಿ ಮಾತನಾಡುವ ಭಾಷೆಯ ಆಧಾರದ ಮೇಲೆ ವಿವಿಧ ರಾಜ್ಯಗಳನ್ನು ರಚನೆ ಮಾಡಲಾಯಿತು. ಕನ್ನಡ ಮಾತನಾಡುವ ಪ್ರಾಂತ್ಯಗಳು ಸೇರಿ, ಮೈಸೂರು ರಾಜ್ಯವು ಉದಯವಾಯಿತು. 1956 ರ ನವೆಂಬರ್ 1 ರಂದು, ಮದ್ರಾಸ್, ಬಾಂಬೆ, ಹೈದರಬಾದ್ ಪ್ರಾಂತ್ಯದ ಕನ್ನಡ ಮಾತನಾಡುವ ಪ್ರದೇಶಗಳು ವಿಲೀನಗೊಂಡು ಮೈಸೂರು ರಾಜ್ಯವಾಯಿತು ಹಾಗೂ ಉತ್ತರ ಕರ್ನಾಟಕ, ಮಲೆನಾಡು ಮತ್ತು ಹಳೆಯ ಮೈಸೂರು ಎಂಬುದಾಗಿ ಹೊಸದಾಗಿ ರೂಪು ಗೊಂಡ ಮೈಸೂರು ರಾಜ್ಯವನ್ನು ಮೂರು ಪ್ರದೇಶಗಳಲ್ಲಿ ಗುರುತಿಸಲಾಯಿತು. ಹೊಸದಾಗಿ ಏಕೀಕೃತಗೊಂಡ ರಾಜ್ಯದ ಆರಂಭದಲ್ಲಿ ಹೊಸ ಘಟಕದ ಕೋರ್ ರೂಪುಗೊಂಡು ಮುಂಚಿನ ರಾಜ್ಯದ ಹೆಸರು ಇರಲೆಂದು “ಮೈಸೂರು” ಹೆಸರನ್ನು ಉಳಿಸಿಕೊಂಡರು. 1973ರ ನವೆಂಬರ್‌ 1ರಂದು ರಾಜ್ಯದ ಹೆಸರನ್ನು ಕರ್ನಾಟಕ ಎಂದು ಬದಲಾಯಿಸಲಾಯಿತು. ಕರ್ನಾಟಕ ರಾಜ್ಯ ರೂಪುಗೊಂಡಾಗ ಒಟ್ಟು 19 ಜಿಲ್ಲೆಗಳನ್ನು ಒಳಗೊಂಡಿತ್ತು. ಇದೀಗ ಕರ್ನಾಟಕದಲ್ಲಿ 31 ಜಿಲ್ಲೆಗಳಿವೆ. ಅಂದಿನಿಂದ ನವೆಂಬರ್ 1 ನ್ನು ಕನ್ನಡ ರಾಜ್ಯೋತ್ಸವ / ಕರ್ನಾಟಕ ರಾಜ್ಯೋತ್ಸವವಾಗಿ ಆಚರಿಸಲಾಗುತ್ತದೆ.

ಇದನ್ನೂ ಓದಿ: Kannada Rajyotsava Essay: ಕನ್ನಡ ರಾಜ್ಯೋತ್ಸವಕ್ಕೆ ಪ್ರಬಂಧ ಬರೆಯಲು ಇಲ್ಲಿದೆ ಟಿಪ್ಸ್

ನಮ್ಮ ಕರ್ನಾಟಕವನ್ನು ಕನ್ನಡ ನಾಡು, ಕರುನಾಡು, ಶ್ರಿಗಂಧದ ನಾಡು ಎಂದೂ ಕರೆಯಲಾಗುತ್ತದೆ. ಕರ್ನಾಟಕ ಪದದ ಮೂಲದ ಬಗ್ಗೆ ಹಲವು ಅಭಿಪ್ರಾಯಗಳಿವೆ. “ಕರು” ಮತ್ತು “ನಾಡು” ಸೇರಿ “ಎತ್ತರದ ಭೂಮಿ” ಎಂಬರ್ಥದ ಕರುನಾಡು ಪದದಿಂದ ಉಗಮವಾಗಿದೆ ಎನ್ನಲಾಗಿದೆ. ಕರು ಎಂದರೆ ಕಪ್ಪು, ನಾಡು ಎಂದರೆ ಪ್ರದೇಶ ಎಂದು ಅರ್ಥೈಸಿಕೊಂಡರೆ ಬಯಲು ಸೀಮೆಯ ಕಂಡು ಕಪ್ಪು ಹತ್ತಿ ಮಣ್ಣಿನಿಂದಾಗಿ ಹೆಸರು ಬಂದಿದೆ ಎಂದು ಹೇಳಲಾಗುತ್ತದೆ. ಕೃಷ್ಣಾ ನದಿಯ ದಕ್ಷಿಣಕ್ಕೆ ಎರಡೂ ಕಡೆ ಜಲಾವೃತವಾದ ಪ್ರದೇಶವಾಗಿರುವುದರಿಂದ ಬ್ರಿಟೀಷರ ಕಾಲದಲ್ಲಿ ಕಾರ್ನಾಟಿಕ್ ಅಥವಾ ಕರ್ನಾಟಕ ಹೆಸರು ಬಳಕೆಗೆ ಬಂತು.

ಇತ್ತೀಚಿನ ವರ್ಷಗಳಲ್ಲಿ ಕನ್ನಡದ ಸ್ಥಿತಿ ಬದಲಾಗಿದೆ. ಇತರೆ ಭಾಷಿಕರ ದಬ್ಬಾಳಿಕೆ ನಮ್ಮ ಕನ್ನಡದ ಮೇಲೆ ಹೆಚ್ಚಾಗಿದೆ. ಕನ್ನಡಿಗರಿಗೆ ಉದ್ಯೋಗ ದೊರಕುವುದು ಕಷ್ಟವಾಗಿದೆ. ಒಳ್ಳೆ ಕಡೆ ಉದ್ಯೋಗ ಬೇಕೆಂದರೆ ಇಂಗ್ಲಿಷ್ ಮುಖ್ಯವಾಗಿದೆ. ಇಂದು ನಾವೆಲ್ಲರೂ ಪ್ರತಿಜ್ಞೆ ಮಾಡೋಣ ಕನ್ನಡದ ಉಳಿವಿಗಾಗಿ ಎಲ್ಲರೂ ಹೋರಾಡೋಣ. ಕೇವಲ ಈ ದಿನ ಮಾತ್ರ ಕನ್ನಡ ರಾಜ್ಯೋತ್ಸವ ಆಚರಿಸಿದರೆ ಕನ್ನಡ ಉಳಿಸಿದಂತೆ ಆಗುವುದಿಲ್ಲ. ಕನ್ನಡ ನಮ್ಮ ಉಸಿರಾಗಿರಬೇಕು. ಎಂತಹ ಸಂದರ್ಭದಲ್ಲೂ ಕನ್ನಡ ಭಾಷೆಯನ್ನು ಬಿಟ್ಟುಕೊಡಬಾರದು. ಬೇರೆ ಭಾಷೆಗಳಿಗೂ ಗೌರವ ನೀಡೋಣ.

ಎಲ್ಲಾದರು ಇರು ಎಂತಾದರು ಇರು, ಎಂದೆಂದಿಗೂ ನೀ ಕನ್ನಡವಾಗಿರು. ಕನ್ನಡವೇ ಸತ್ಯ ಕನ್ನಡವೇ ನಿತ್ಯ. ನನ್ನ ಭಾಷಣ ಮುಗಿಸುತ್ತಿದ್ದೇನೆ. ಅವಕಾಶ ಕೊಟ್ಟ ಎಲ್ಲರಿಗೂ ಧನ್ಯವಾದ ಜೈ ಕರ್ನಾಟಕ ಮಾತೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!