ಕನ್ನಡ ಸಾಹಿತ್ಯ ಸಮ್ಮೇಳನ ಮುಂದೂಡಿಕೆ, ಮಾರ್ಚ್​ 9ರ ಬಳಿಕ ಹೊಸ ದಿನಾಂಕ ನಿಗದಿ: ಅರವಿಂದ ಲಿಂಬಾವಳಿ

Kannada Sahithya Sammelana ಫೆಬ್ರವರಿ ಅಂತ್ಯಕ್ಕೆ ಕೊವಿಡ್​ ಸಂಬಂಧ ಹೊಸ ಮಾರ್ಗಸೂಚಿ ಪ್ರಕಟವಾಗುವ ನಿರೀಕ್ಷೆ ಇರುವುದರಿಂದ ಮಾರ್ಚ್ 9ಕ್ಕೆ ಮತ್ತೊಂದು ಸಭೆ ನಡೆಸಿ ಸಮ್ಮೇಳನದ ದಿನಾಂಕ ನಿರ್ಧಾರ.

ಕನ್ನಡ ಸಾಹಿತ್ಯ ಸಮ್ಮೇಳನ ಮುಂದೂಡಿಕೆ, ಮಾರ್ಚ್​ 9ರ ಬಳಿಕ ಹೊಸ ದಿನಾಂಕ ನಿಗದಿ: ಅರವಿಂದ ಲಿಂಬಾವಳಿ
ಸಚಿವ ಅರವಿಂದ ಲಿಂಬಾವಳಿ ನೇತೃತ್ವದಲ್ಲಿ ನಡೆದ ಸಭೆ
Follow us
Skanda
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Feb 05, 2021 | 4:36 PM

ಬೆಂಗಳೂರು: ಈ ತಿಂಗಳ ಅಂತ್ಯದಲ್ಲಿ ಹಾವೇರಿಯಲ್ಲಿ ನಡೆಯಬೇಕಿದ್ದ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ತಾತ್ಕಾಲಿಕವಾಗಿ ಮುಂದೂಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಕುರಿತು ಇಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ನೇತೃತ್ವದಲ್ಲಿ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನಡೆದ ಸಭೆಯ ನಂತರ ತೀರ್ಮಾನ ಪ್ರಕಟವಾಯಿತು.

ಸಾಹಿತ್ಯ ಸಮ್ಮೇಳನಕ್ಕೆ ನಡೆದ ಸಿದ್ಧತೆಗಳು ಅಪೂರ್ಣವಾಗಿದೆ. ಜೊತೆಗೆ, ಕೊವಿಡ್ ನಿಯಮಗಳ ಪಾಲನೆ ಕಷ್ಟಕರವಾಗುವ ಕಾರಣ ಕೆಲ ದಿನಗಳ ಕಾಲ ಸಮ್ಮೇಳನವನ್ನು ಮುಂದೂಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ದೊಡ್ಡ ಸಂಖ್ಯೆಯಲ್ಲಿ ಜನ ಸೇರುವುದರಿಂದ ಕೆಲ ಅಗತ್ಯ ಕ್ರಮಗಳನ್ನು ಅನುಸರಿಸಬೇಕಾಗುತ್ತದೆ. ಫೆಬ್ರವರಿ ಅಂತ್ಯಕ್ಕೆ ಕೊವಿಡ್​ ಸಂಬಂಧ ಹೊಸ ಮಾರ್ಗಸೂಚಿ ಪ್ರಕಟವಾಗುವ ನಿರೀಕ್ಷೆ ಇರುವುದರಿಂದ ಮಾರ್ಚ್ 9ಕ್ಕೆ ಮತ್ತೊಂದು ಸಭೆ ನಡೆಸಿ ಸಮ್ಮೇಳನದ ದಿನಾಂಕ ನಿರ್ಧರಿಸಲಾಗುವುದು ಎಂದು ಹೇಳಿದ್ದಾರೆ.

ಸಭೆಯಲ್ಲಿ ಕೃಷಿ ಸಚಿವ ಬಿ.ಸಿ.ಪಾಟೀಲ್, ತೋಟಗಾರಿಕಾ ಸಚಿವ ಆರ್. ಶಂಕರ್, ಶಾಸಕ ನೆಹರು ಓಲೇಕಾರ್, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಮನು ಬಳಿಗಾರ್ ಹಾಗೂ ಹಾವೇರಿ ಜಿಲ್ಲಾಡಳಿತದ ಅಧಿಕಾರಿಗಳು ಭಾಗವಹಿಸಿದ್ದರು.

ಸುದ್ದಿ ವಿಶ್ಲೇಷಣೆ| 86 ನೇ ಸಾಹಿತ್ಯ ಸಮ್ಮೇಳನದ ನಿಯೋಜಿತ ಅಧ್ಯಕ್ಷ ದೊಡ್ಡರಂಗೇಗೌಡರ ಟೀಕೆ ಎಷ್ಟು ಸರಿ?

Published On - 4:35 pm, Fri, 5 February 21