G.K Govinda Rao: ಕನ್ನಡದ ಹಿರಿಯ ನಟ, ಚಿಂತಕ ಪ್ರೊ.ಜಿ.ಕೆ ಗೋವಿಂದ ರಾವ್ ನಿಧನ

| Updated By: shivaprasad.hs

Updated on: Oct 15, 2021 | 10:16 AM

ಕನ್ನಡದ ಹಿರಿಯ ನಟ ಪ್ರೊ.ಜಿ.ಕೆ ಗೋವಿಂದ ರಾವ್ ನಿಧನ ಹೊಂದಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು.

G.K Govinda Rao: ಕನ್ನಡದ ಹಿರಿಯ ನಟ, ಚಿಂತಕ ಪ್ರೊ.ಜಿ.ಕೆ ಗೋವಿಂದ ರಾವ್ ನಿಧನ
ಪ್ರೊ.ಜಿ.ಕೆ.ಗೋವಿಂದರಾವ್
Follow us on

ಹುಬ್ಬಳ್ಳಿ: ಕನ್ನಡದ ಹಿರಿಯ ನಟ ಪ್ರೊ.ಜಿ.ಕೆ ಗೋವಿಂದ ರಾವ್ ಇಂದು ಮುಂಜಾನೆ ನಿಧನರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು. ಲೇಖಕರಾಗಿ, ಪ್ರಾಧ್ಯಾಪಕರಾಗಿ,  ರಂಗಭೂಮಿ ಕಲಾವಿದರಾಗಿ, ಚಿತ್ರ ನಟರಾಗಿ ಅವರು ಗುರುತಿಸಿಕೊಂಡಿದ್ದರು. ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಬೆಳಗಿನ ಜಾವ ಕೊನೆಯುಸಿರೆಳೆದಿದ್ದಾರೆ ಎಂದು ಟಿವಿ9ಗೆ ಗೋವಿಂದರಾವ್ ಮೊಮ್ಮಗಳು ಡಾ.ಅಪೂರ್ವ ಮಾಹಿತಿ ನೀಡಿದ್ದಾರೆ. ಮುಂಜಾನೆ 4.45ರ ಸುಮಾರಿಗೆ ಅವರು ಕೊನೆಯುಸಿರೆಳೆದಿದ್ದು, ಹುಬ್ಬಳ್ಳಿಯ ಮುಕ್ತಿಧಾಮದಲ್ಲಿ ಬೆಳಗ್ಗೆ 8.30 ಸುಮಾರಿಗೆ ಅಂತ್ಯಕ್ರಿಯೆ ನೆರವೇರಿಸಲಾಗಿದೆ.

ವೃತ್ತಿಯಿಂದ ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದ ಅವರು, ಕಲಾವಿದರಾಗಿಯೂ ಗುರುತಿಸಿಕೊಂಡಿದ್ದರು. ಮಾಲ್ಗುಡಿ ಡೇಸ್, ಮಹಾಪರ್ವ ಧಾರಾವಾಹಿ ಸೇರಿದಂತೆ ಹಲವಾರು ಧಾರವಾಹಿಗಳಲ್ಲಿ, ಚಲನಚಿತ್ರಗಳಲ್ಲಿ ಅವರು ಅಭಿನಯಿಸಿದ್ದರು.  ಜಿ.ಕೆ.ಗೋವಿಂದರಾವ್ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದು, ಜನಪರ ನಿಲುವಿನಿಂದ ಜನಮಾನಸದಲ್ಲಿ ವಿಶಿಷ್ಟ ಸ್ಥಾನ ಗಳಿಸಿದ್ದರು. ಒಬ್ಬ ಅನನ್ಯ ಚಿಂತಕರನ್ನು ನಾಡು ಕಳೆದುಕೊಂಡಂತಾಗಿದೆ. ಮೃತರ ಆತ್ಮಕ್ಕೆ ಆ ದೇವರು ಶಾಂತಿ ನೀಡಲಿ ಎಂದು ನುಡಿದಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರೊ.ಜಿಕೆಜಿ ನಿಧನಕ್ಕೆ ಸಂತಾಪ ಸೂಚಿಸಿದ್ದು, ಅವರ ನಿಧನದ ಸುದ್ದಿ ತಿಳಿದು ಅತೀವ ದುಃಖವಾಗಿದೆ ಎಂದಿದ್ದಾರೆ.

ಬಿ.ಎಸ್.ಯಡಿಯೂರಪ್ಪ ಹಂಚಿಕೊಂಡಿರುವ ಟ್ವೀಟ್:

ವಿಪಕ್ಷ ನಾಯಕ ಸಿದ್ದರಾಮಯ್ಯ ಜಿ.ಕೆ.ಗೋವಿಂದರಾವ್ ನಿಧನದ ಸುದ್ದಿಗೆ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಅವರು ಟ್ವೀಟ್ ಮಾಡಿದ್ದು, ‘‘ಹಿರಿಯ ಲೇಖಕ, ಚಿಂತಕ,‌ ನಟ ಪ್ರೊ.ಜಿ.ಕೆ.ಗೋವಿಂದರಾವ್ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ನನ್ನ ಹಿತೈಷಿ, ಮಾರ್ಗದರ್ಶಕ ಮತ್ತು ಆತ್ಮೀಯ ಸ್ನೇಹಿತರಾಗಿದ್ದ ಪ್ರೊ.ಜಿಕೆಜಿ ಅವರಿಗೆ ಗೌರವದ ನಮನಗಳು.ಅವರನ್ನು ಕಳೆದುಕೊಂಡ ಕುಟುಂಬದ ಸದಸ್ಯರು, ಶಿಷ್ಯರು, ಅಭಿಮಾನಿಗಳ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ.’’ ಎಂದು ಸಂತಾಪ ಸೂಚಿಸಿದ್ಧಾರೆ.

ಸಿದ್ದರಾಮಯ್ಯ ಹಂಚಿಕೊಂಡ ಟ್ವೀಟ್ ಇಲ್ಲಿದೆ:

ಜಿ.ಕೆ.ಗೋವಿಂದರಾವ್ ನಿಧನಕ್ಕೆ ಸಚಿವ ಡಾ. ಅಶ್ವಥ್ ನಾರಾಯಣ ಸಂತಾಪ ಸೂಚಿಸಿದ್ದು, ಪ್ರೊ.ಜಿಕೆಜಿ ಅವರು ಪ್ರಜಾಪ್ರಭುತ್ವದ ಮೌಲ್ಯಗಳು ಮತ್ತು ಸಂವಾದದಲ್ಲಿ ನಂಬಿಕೆ ಇಟ್ಟುಕೊಂಡಿದ್ದರು. ಸಮಾಜದಲ್ಲಿ ಯಾವುದೇ ಸಮಸ್ಯೆ ಕಂಡುಬಂದಾಗ ದನಿ ಎತ್ತುತ್ತಿದ್ದರು. ಅವರ ನಿಧನದಿಂದ ಪ್ರಖರ ಚಿಂತಕರೊಬ್ಬರನ್ನು ಕಳೆದುಕೊಂಡಿದ್ದೇವೆ. ಅವರ ನಿಧನದ ನೋವನ್ನು ತಾಳಿಕೊಳ್ಳುವ ಶಕ್ತಿಯನ್ನು ಭಗವಂತನು ಕುಟುಂಬದ ಸದಸ್ಯರಿಗೆ ನೀಡಲಿ ಎಂದು ನುಡಿದಿದ್ದಾರೆ.

ಇದನ್ನೂ ಓದಿ:

Poonch Terror Attack: ಜಮ್ಮು ಕಾಶ್ಮೀರದ ಪೂಂಚ್​ನಲ್ಲಿ ಉಗ್ರರ ಗುಂಡೇಟಿಗೆ ಸೇನಾಧಿಕಾರಿ, ಯೋಧ ಸಾವು

ಹಾವೇರಿ: ಆಕಸ್ಮಿಕ ಬೆಂಕಿ ಅವಘಡ; ಸುಟ್ಟು ಕರಕಲಾದ ಮನೆ

Published On - 9:22 am, Fri, 15 October 21