ಹೆಡ್ಲೈನ್ ಮಾಸ್ತರ್ ಎಂದೇ ಪರಿಚಿತರಾಗಿದ್ದ ಹಿರಿಯ ಪತ್ರಕರ್ತ ವಸಂತ ನಾಡಿಗೇರ್ ನಿಧನ
ಸಂಯುಕ್ತ ಕರ್ನಾಟಕ ಪತ್ರಿಕೆಯ ಪ್ರಧಾನ ಸಂಪಾದಕರಾಗಿದ್ದ ಕನ್ನಡದ ಹಿರಿಯ ಪತ್ರಕರ್ತ ವಸಂತ ನಾಡಿಗೇರ (59) ಸೋಮವಾರ ಬೆಳಗಿನ ಜಾವ ಬೆಂಗಳೂರಿನಲ್ಲಿ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಇವರು ಪನ್ ಹೆಡ್ಡಿಂಗ್ಗಳ ಮೂಲಕವೇ ಜನಪ್ರಿಯರಾಗಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಅನೇಕ ಗಣ್ಯರು ನಾಡಿಗೇರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
ಬೆಂಗಳೂರು, ಸೆಪ್ಟೆಂಬರ್ 09: ಕನ್ನಡದ ಹಿರಿಯ ಪತ್ರಕರ್ತ ಹಾಗೂ ಸಂಯುಕ್ತ ಕರ್ನಾಟಕ ಪತ್ರಿಕೆ ಸಂಪಾದಕ ವಸಂತ ನಾಡಿಗೇರ (59) ಸೋಮವಾರ ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾಗಿದ್ದಾರೆ. ವಸಂತ್ ನಾಡಿಗೇರ (Vasanth Nadiger) ಅವರು ಕಳೆದ ಮೂರುವರೆ ದಶಕದಿಂದ ಕನ್ನಡ ಪತ್ರಿಕೋದ್ಯಮದಲ್ಲಿ ಕೆಲಸ ಮಾಡಿದ್ದಾರೆ. ವಸಂತ್ ನಾಡಿಗೇರ (Vasanth Nadiger) ಅವರು ಶೀರ್ಷಿಕೆಗಳ ಮೂಲಕವೇ ಮನೆ ಮಾತಾಗಿದ್ದರು. ವಸಂತ ನಾಡಿಗೇರ ಅವರು ಕನ್ನಡ ಪ್ರಭ, ವಿಜಯಕರ್ನಾಟಕ, ವಿಶ್ವವಾಣಿಯಲ್ಲಿ ಕಾರ್ಯ ನಿರ್ವಹಿಸಿದ್ದರು. ಇವರು ಕಳೆದ ಎರಡು ವರ್ಷಗಳಿಂದ ಸಂಯುಕ್ತ ಕರ್ನಾಟಕ ಸಂಪಾದಕರಾಗಿದ್ದರು. ಇವರಿಗೆ ಪತ್ನಿ, ಪುತ್ರಿ ಹಾಗೂ ಪುತ್ರ ಇದ್ದಾರೆ.
ವಸಂತ ನಾಡಿಗೇರ ಅವರು ಮೂಲತಃ ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನವರು. ಪ್ರಾಥಮಿಕ ಮತ್ತು ಪೌಢ ಶಿಕ್ಷಣವನ್ನು ರಾಣೆಬೆನ್ನೂರಿನಲ್ಲಿ ಪೂರ್ಣಗೊಳಿಸಿದರು. ನಂತರ ಧಾರವಾಡದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿಯನ್ನು ಪಡೆದರು. ವಸಂತ ನಾಡಿಗೇರ್ ಅವರು ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ರಸಾಯನ ಶಾಸ್ತ್ರದಲ್ಲಿ ಎಂಎಸ್ಸಿ ಪದವಿ ಪಡೆದರು. ವಸಂತ ನಾಡಿಗೇರ್ ಅವರಿಗೆ ಕರ್ನಾಟಕ ವಿಶ್ವ ವಿದ್ಯಾಲಯದ ಹಳೇ ವಿದ್ಯಾರ್ಥಿಗಳು, ಪ್ರಾಧ್ಯಾಪಕರು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.
ಗಣ್ಯರ ಸಂತಾಪ
ಹಿರಿಯ ಪತ್ರಕರ್ತ ವಸಂತ ನಾಡಿಗೇರ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂತಾಪ ಸೂಚಿಸಿದ್ದಾರೆ. “ಹಿರಿಯ ಪತ್ರಕರ್ತರಾದ ವಸಂತ ನಾಡಿಗೇರ ಅವರ ನಿಧನವಾರ್ತೆ ನೋವುಂಟುಮಾಡಿದೆ. ವಿಜಯ ಕರ್ನಾಟಕದಲ್ಲಿ ಹಿರಿಯ ಸಹಾಯಕ ಸಂಪಾದಕರಾಗಿ, ಸಂಯುಕ್ತ ಕರ್ನಾಟಕದಲ್ಲಿ ಸಂಪಾದಕರಾಗಿ, ಹೀಗೆ ಹಲವು ದಶಕಗಳಿಂದ ಪತ್ರಿಕಾರಂಗದಲ್ಲಿ ಸೇವೆಸಲ್ಲಿಸುತ್ತಿದ್ದ ವಸಂತ ನಾಡಿಗೇರ ಅವರ ಅಗಲಿಕೆಯಿಂದ ಪತ್ರಿಕಾರಂಗಕ್ಕೆ ಬಹುದೊಡ್ಡ ನಷ್ಟವಾಗಿದೆ. ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ. ಅವರ ದುಃಖತಪ್ತ ಕುಟುಂಬ ವರ್ಗಕ್ಕೆ ನನ್ನ ಸಂತಾಪಗಳು.”
ಹಿರಿಯ ಪತ್ರಕರ್ತರಾದ ವಸಂತ ನಾಡಿಗೇರ ಅವರ ನಿಧನವಾರ್ತೆ ನೋವುಂಟುಮಾಡಿದೆ. ವಿಜಯ ಕರ್ನಾಟಕದಲ್ಲಿ ಹಿರಿಯ ಸಹಾಯಕ ಸಂಪಾದಕರಾಗಿ, ಸಂಯುಕ್ತ ಕರ್ನಾಟಕದಲ್ಲಿ ಸಂಪಾದಕರಾಗಿ, ಹೀಗೆ ಹಲವು ದಶಕಗಳಿಂದ ಪತ್ರಿಕಾರಂಗದಲ್ಲಿ ಸೇವೆಸಲ್ಲಿಸುತ್ತಿದ್ದ ವಸಂತ ನಾಡಿಗೇರ ಅವರ ಅಗಲಿಕೆಯಿಂದ ಪತ್ರಿಕಾರಂಗಕ್ಕೆ ಬಹುದೊಡ್ಡ ನಷ್ಟವಾಗಿದೆ.
ಮೃತರ ಆತ್ಮಕ್ಕೆ ಶಾಂತಿ… pic.twitter.com/QZ49ZQGefo
— CM of Karnataka (@CMofKarnataka) September 9, 2024
ವಸಂತ ನಾಡಿಗೇರ ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಅವರು ಸಂತಾಪ ಸೂಚಿಸಿದ್ದಾರೆ. “ಹಿರಿಯ ಪತ್ರಕರ್ತರು ಹಾಗೂ ಸಂಯುಕ್ತ ಕರ್ನಾಟಕ ಪತ್ರಿಕೆಯ ಸಂಪಾದಕರಾಗಿದ್ದ ವಸಂತ ನಾಡಿಗೇರ ಅವರ ನಿಧನದ ಸುದ್ದಿ ಕೇಳಿ ಮನಸ್ಸಿಗೆ ಅತ್ಯಂತ ಆಘಾತವಾಯಿತು. ಸದಾ ಹಸನ್ಮುಖಿಯಾಗಿದ್ದ ಅವರು ನನಗೆ ಅತ್ಯಂತ ಆತ್ಮೀಯರು ಸ್ನೇಹಪರ ವ್ಯಕ್ತಿಯಾಗಿದ್ದರು. ಕನ್ನಡಪ್ರಭ, ವಿಜಯ ಕರ್ನಾಟಕ, ಸಂಯುಕ್ತ ಕರ್ನಾಟಕ ಸೇರಿದಂತೆ ನಾಡಿನ ಪ್ರಮುಖ ಪತ್ರಿಕೆಗಳಲ್ಲಿ ಉನ್ನತ ಹುದ್ದೆಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದರು. ಅವರ ಅಗಲಿಕೆಯಿಂದ ಪತ್ರಿಕಾ ರಂಗಕ್ಕೆ ದೊಡ್ಡ ನಷ್ಟ ಉಂಟಾಗಿದೆ. ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬ ವರ್ಗ ಹಾಗೂ ಅವರ ಅಭಿಮಾನಿಗಳಿಗೆ ನೀಡಲಿ, ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿಃ.”
ಹಿರಿಯ ಪತ್ರಕರ್ತರು ಹಾಗೂ ಸಂಯುಕ್ತ ಕರ್ನಾಟಕ ಪತ್ರಿಕೆಯ ಸಂಪಾದಕರಾಗಿದ್ದ ವಸಂತ ನಾಡಿಗೇರ ಅವರ ನಿಧನದ ಸುದ್ದಿ ಕೇಳಿ ಮನಸ್ಸಿಗೆ ಅತ್ಯಂತ ಆಘಾತವಾಯಿತು. ಸದಾ ಹಸನ್ಮುಖಿಯಾಗಿದ್ದ ಅವರು ನನಗೆ ಅತ್ಯಂತ ಆತ್ಮೀಯರು ಸ್ನೇಹಪರ ವ್ಯಕ್ತಿಯಾಗಿದ್ದರು. ಕನ್ನಡಪ್ರಭ, ವಿಜಯ ಕರ್ನಾಟಕ, ಸಂಯುಕ್ತ ಕರ್ನಾಟಕ ಸೇರಿದಂತೆ ನಾಡಿನ ಪ್ರಮುಖ ಪತ್ರಿಕೆಗಳಲ್ಲಿ ಉನ್ನತ… pic.twitter.com/DcOqMfhci7
— Basavaraj S Bommai (@BSBommai) September 9, 2024
ರಸಾಯನ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದರೂ, ಪತ್ರಿಕೋದ್ಯಮ ಕ್ಷೇತ್ರದತ್ತ ಒಲವು ಹೊಂದಿದ ವಸಂತ ನಾಡಿಗೇರ ಅವರು ಎಂಬತ್ತರ ದಶಕದಲ್ಲಿ ಸಂಯುಕ್ತ ಕರ್ನಾಟಕದಿಂದ ವೃತ್ತಿ ಜೀವನ ಆರಂಭಿಸಿದರು. ವಸಂತ ನಾಡಿಗೇರ ಅವರು ಕನ್ನಡಪ್ರಭ, ವಿಜಯಕರ್ನಾಟಕ ಪತ್ರಿಕೆಗಳಲ್ಲಿ ಕಾರ್ಯ ನಿರ್ವಹಿಸಿದ್ದರು. ವಿಜಯ ಕರ್ನಾಟಕದಲ್ಲಿದ್ದಾಗ ಅವರ ಬಡಿಗೇರ್ ಹಾಗೂ ನಾಡಿಗೇರ್ ಎನ್ನುವ ಹಾಸ್ಯ ಅಂಕಣ ಜನಪ್ರೀಯವಾಗಿತ್ತು. ಸದ್ಯ ಸಂಯುಕ್ತ ಕರ್ನಾಟಕ ಸಂಪಾದಕರಾಗಿ ಕೆಲಸ ಮಾಡುತ್ತಿದ್ದರು. ಇವರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿ, ಖಾದ್ರಿ ಶಾಮಣ್ಣ ಪ್ರಶಸ್ತಿ ಲಭಿಸಿದೆ.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು ಸಂತಾಪ ಸೂಚಿಸಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 8:01 am, Mon, 9 September 24