AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುಬೈಯಲ್ಲಿ ಸಿಲುಕಿದ್ದ ಕನ್ನಡಿಗರು ವಾಪಸ್​​: MLC ಭೋಜೇಗೌಡ, ಬ್ಯಾಡಿಂಟ್ಮನ್ ತಾರೆ​​​ ಪಿವಿ ಸಿಂಧು ಸೇರಿ ಹಲವರು ಬೆಂಗಳೂರಿಗೆ

ಇಸ್ರೇಲ್-ಇರಾನ್ ಸಂಘರ್ಷದಿಂದ ದುಬೈಯಲ್ಲಿ ಸಿಲುಕಿದ್ದ ಹಲವು ಭಾರತೀಯರು (ಕನ್ನಡಿಗರ ಸಹಿತ) ಮೂರು ದಿನಗಳ ನಂತರ ಬೆಂಗಳೂರಿಗೆ ವಾಪಸಾಗಿದ್ದಾರೆ. ಇವರಲ್ಲಿ ಎಂಎಲ್​​ಸಿ ಭೋಜೇಗೌಡ, ಬ್ಯಾಡ್ಮಿಂಟನ್ ಆಟಗಾರ್ತಿ ಪಿವಿ ಸಿಂಧು ಸಹ ಸೇರಿದ್ದಾರೆ. ತಾಯ್ನಾಡಿಗೆ ಮರಳಿದ ನಂತರ ಅವರು ನಿಟ್ಟುಸಿರು ಬಿಟ್ಟಿದ್ದು, ಯುದ್ಧದ ಭೀತಿಯ ವಾತಾವರಣದಿಂದ ಪಾರಾದ ಸಂತಸ ವ್ಯಕ್ತಪಡಿಸಿದ್ದಾರೆ.

ದುಬೈಯಲ್ಲಿ ಸಿಲುಕಿದ್ದ ಕನ್ನಡಿಗರು ವಾಪಸ್​​: MLC ಭೋಜೇಗೌಡ, ಬ್ಯಾಡಿಂಟ್ಮನ್ ತಾರೆ​​​ ಪಿವಿ ಸಿಂಧು ಸೇರಿ ಹಲವರು ಬೆಂಗಳೂರಿಗೆ
ದುಬೈನಲ್ಲಿ ಸಿಲುಕಿದ ಕನ್ನಡಿಗರು ದುಬೈನಿಂದ ಬೆಂಗಳೂರಿಗೆ ವಾಪಸ್Image Credit source: tv9
ನವೀನ್ ಕುಮಾರ್ ಟಿ
| Edited By: |

Updated on:Mar 03, 2026 | 7:09 AM

Share

ಬೆಂಗಳೂರು, ಮಾರ್ಚ್ 3: ಇರಾನ್-ಇಸ್ರೇಲ್ ಯುದ್ಧದ (Israel-Iran War) ಕಾರಣ ವಿಮಾನಗಳು ರದ್ದಾಗಿದ್ದರಿಂದ ದುಬೈಯಿಂದ ವಾಪಸ್ ಬರಲಾಗದೆ ಸಿಕ್ಕಿಹಾಕಿಕೊಂಡಿದ್ದ ಭಾರತೀಯರು, ಅದರಲ್ಲೂ ಕನ್ನಡಿಗರು ಇದೀಗ ನಿರಾಳರಾಗಿದ್ದಾರೆ. ದುಬೈನಿಂದ (Dubai)  ಸೋಮವಾರ ರಾತ್ರಿ ಹೊರಟ ವಿಮಾನ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIAB) ಸುರಕ್ಷಿತವಾಗಿ ಬಂದಿಳಿಯಿತು. MLC ಭೋಜೇಗೌಡ, ಬ್ಯಾಡಿಂಟ್ಮನ್ ತಾರೆ​​​ ಪಿವಿ ಸಿಂಧು ಸೇರಿ ಅನೇಕರು ಬೆಂಗಳೂರಿಗೆ ಆಗಮಿಸಿದರು.

ಈ ವೇಳೆ ಎಂಎಲ್‌ಸಿ ಭೋಜೇಗೌಡ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, ‘ನಾನು ದಕ್ಷಿಣ ಆಫ್ರಿಕಾಕ್ಕೆ ಹೋಗಿದ್ದೆ. ಅಲ್ಲಿಂದ ದುಬೈ ಮೂಲಕ ಬೆಂಗಳೂರಿಗೆ ಬರುತ್ತಿದ್ದೆ. ಆದರೆ ದುಬೈನಲ್ಲಿ ಸಮಸ್ಯೆ ಉಂಟಾಗಿದೆ ಎಂಬುದು ಅಲ್ಲಿ ತಲುಪಿದ ಬಳಿಕವೇ ಗೊತ್ತಾಯಿತು. ಮೊದಲು ವಿಮಾನ ಹೊರಡುವುದರಲ್ಲಿ ವಿಳಂಬವಾಯಿತು. ಬಳಿಕ ವಿಮಾನ ರದ್ದುಪಡಿಸಲಾಗಿದೆ ಎಂಬ ಮಾಹಿತಿ ನೀಡಲಾಯಿತು. ದುಬೈ ವಿಮಾನ ನಿಲ್ದಾಣದಲ್ಲಿ ಜಾಗವೇ ಇಲ್ಲದಷ್ಟು ಜನಸಂದಣಿ ಇತ್ತು’ ಎಂದು ವಿವರಿಸಿದರು.

ಈ ಸಂದರ್ಭದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ದೂರವಾಣಿ ಮೂಲಕ ಸಂಪರ್ಕಿಸಿ ಧೈರ್ಯ ನೀಡಿದರು. ನಮಗೆ ದುಬೈನಲ್ಲಿ ಹೋಟೆಲ್‌ನಲ್ಲಿ ವಾಸ್ತವ್ಯ ವ್ಯವಸ್ಥೆ ಮಾಡಿಕೊಟ್ಟರು. ಆದರೂ ಭದ್ರತೆಯ ಆತಂಕ ಕಾಡುತ್ತಲೇ ಇತ್ತು ಎಂದು ಭೋಜೇಗೌಡ ಹೇಳಿದರು.

ತಾಯ್ನಾಡಿಗೆ ಮರಳಿದವರು ಏನಂತಾರೆ? ವಿಡಿಯೋ ನೋಡಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಕರೆ ಮಾಡಿ ವಿಚಾರಿಸಿದರು. ಸಚಿವರಾದ ಕೃಷ್ಣ ಭೈರೇಗೌಡ ಮತ್ತು ಎಚ್.ಕೆ. ಪಾಟೀಲ್ ಕೂಡ ಸಂಪರ್ಕಿಸಿ ಪರಿಸ್ಥಿತಿ ಕುರಿತು ಮಾಹಿತಿ ಪಡೆದುಕೊಂಡರು. ಕೃಷ್ಣ ಭೈರೇಗೌಡ ಜೊತೆ ಮಾತಾಡುವಾಗಲೇ ಬಾಂಬ್ ಸ್ಫೋಟದ ಶಬ್ದ ಕೇಳಿಬಂದಿತು ಎಂದು ಆತಂಕದ ಕ್ಷಣಗಳನ್ನು ಅವರು ನೆನಪಿಸಿಕೊಂಡರು.

ಬುರ್ಜ್ ಖಲೀಫಾ ಪಕ್ಕದಲ್ಲಿ ಬಾಂಬ್ ಬಿದ್ದಿದೆ ಎಂಬ ಮಾಹಿತಿ ಸಿಕ್ಕಿತು. ಆದರೆ ಅದು ಅಷ್ಟು ಪರಿಣಾಮಕಾರಿ ರೀತಿಯಲ್ಲಿ ಸ್ಫೋಟಗೊಂಡಿಲ್ಲ ಎಂದು ಬಳಿಕ ತಿಳಿದುಬಂತು ಎಂದು ಹೇಳಿದರು. ದುಬೈ ಸರ್ಕಾರ ನಮ್ಮ ನೆರವಿಗೆ ಬಂದು ಉತ್ತಮ ವ್ಯವಸ್ಥೆ ಮಾಡಿಕೊಟ್ಟಿತ್ತು. ದುಬೈ ಸೇರಿ ಹಲವೆಡೆ ಯುದ್ಧದ ವಾತಾವರಣ ಕಂಡುಬಂದಿತ್ತು. ನಾವು ಇಷ್ಟು ಬೇಗ ಸ್ವದೇಶಕ್ಕೆ ವಾಪಸ್ಸಾಗುತ್ತೇವೆಂದು ಊಹಿಸಿರಲಿಲ್ಲ ಎಂದು ಭೋಜೇಗೌಡ ಹೇಳಿದರು.

ಇದನ್ನೂ ಓದಿ: ದುಬೈನಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗಾಗಿ ಸಿದ್ದರಾಮಯ್ಯ ಆಗ್ರಹ: ಪ್ರಧಾನಿ ಮೋದಿಗೆ ಬರೆದ 2 ಪುಟಗಳ ಪತ್ರದಲ್ಲಿರೋದೇನು?

ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ಕನ್ನಡಿಗರು, ಸುರಕ್ಷಿತವಾಗಿ ಮರಳಿದ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ. ವ್ಯಾಪಾರ, ವೈಯಕ್ತಿಕ ಪ್ರವಾಸ ಅಥವಾ ಕೆಲಸದ ನಿಮಿತ್ತ ಅಬುಧಾಬಿಗೆ ತೆರಳಿದ್ದ ಹಲವರು ಅಲ್ಲಿ ಸಿಲುಕಿಕೊಂಡಿದ್ದರು. ದುಬೈ ಮತ್ತು ಅಬುಧಾಬಿಯಲ್ಲಿ ಯುದ್ಧದ ಭೀತಿಯು ಸಾಕಷ್ಟು ಜನರಲ್ಲಿ ಭಯ ಮೂಡಿಸಿತ್ತು.

ದುಬೈಗೆ ತೆರಳಿದ್ದ ವಿಮಾನ ವಾಪಸ್

ಸೋಮವಾರ ಮುಂಜಾನೆ 4.30ಕ್ಕೆ ದುಬೈಗೆ ತೆರಳಿದ್ದ‌‌ ವಿಮಾನ ಅರ್ಧದಿಂದಲೇ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿದೆ. 113 ಪ್ರಯಾಣಿಕರನ್ನು ಹೊತ್ತು ತೆರಳಿದ್ದ ಎಮಿರೇಟ್ಸ್​ ವಿಮಾನ ಭಾರತದ ಗಡಿ ದಾಟುವಷ್ಟರಲ್ಲೇ ದುಬೈ ವಾಯುನೆಲೆ ಬಂದ್ ಮಾಡಲಾಗಿದೆ. ಹೀಗಾಗಿ ವಿಮಾನ ವಾಪಸ್ ಆಯಿತು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:08 am, Tue, 3 March 26

Follow Us
ಪ್ರಪೋಸ್ ಮಾಡಿದ ಯುವಕನ ಮೇಲೆ ಟೀ ಟ್ರೇ ಎಸೆದ ಯುವತಿ ಆಮೇಲೇನಾಯ್ತು ನೋಡಿ
ಪ್ರಪೋಸ್ ಮಾಡಿದ ಯುವಕನ ಮೇಲೆ ಟೀ ಟ್ರೇ ಎಸೆದ ಯುವತಿ ಆಮೇಲೇನಾಯ್ತು ನೋಡಿ
ಜಾತಕದ ಪ್ರಕಾರ ಸಿಹಿ ಹಾಗೂ ಖಾರ ಹೇಗೆ ಸೇವಿಸಬೇಕು?
ಜಾತಕದ ಪ್ರಕಾರ ಸಿಹಿ ಹಾಗೂ ಖಾರ ಹೇಗೆ ಸೇವಿಸಬೇಕು?
ಇಂದು ಈ ರಾಶಿಯವರಿಗೆ ದೂರದ ಪ್ರಯಾಣ ಯೋಗ
ಇಂದು ಈ ರಾಶಿಯವರಿಗೆ ದೂರದ ಪ್ರಯಾಣ ಯೋಗ
ಕೊಲಂಬಿಯಾದಲ್ಲಿ ಭಾರೀ ದುರಂತ; 110 ಸೈನಿಕರಿದ್ದ ಮಿಲಿಟರಿ ವಿಮಾನ ಪತನ
ಕೊಲಂಬಿಯಾದಲ್ಲಿ ಭಾರೀ ದುರಂತ; 110 ಸೈನಿಕರಿದ್ದ ಮಿಲಿಟರಿ ವಿಮಾನ ಪತನ
ಟಿವಿ9 ವಾರ್ಷಿಕ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಸ್ಫೂರ್ತಿದಾಯಕ ಭಾಷಣ
ಟಿವಿ9 ವಾರ್ಷಿಕ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಸ್ಫೂರ್ತಿದಾಯಕ ಭಾಷಣ
ಪ್ರಧಾನಿ ಮೋದಿಗೆ ಮೈ ಹೋಮ್ ಗ್ರೂಪ್ ಚೇರ್ಮನ್ ರಾಮೇಶ್ವರ ರಾವ್ ಸನ್ಮಾನ
ಪ್ರಧಾನಿ ಮೋದಿಗೆ ಮೈ ಹೋಮ್ ಗ್ರೂಪ್ ಚೇರ್ಮನ್ ರಾಮೇಶ್ವರ ರಾವ್ ಸನ್ಮಾನ
ಪ್ರಧಾನಿ ಮೋದಿ ನಾಯಕತ್ವದಿಂದ ಇಡೀ ಜಗತ್ತು ಭಾರತವನ್ನ ಗೌರವದಿಂದ ಕಾಣುತ್ತಿದೆ
ಪ್ರಧಾನಿ ಮೋದಿ ನಾಯಕತ್ವದಿಂದ ಇಡೀ ಜಗತ್ತು ಭಾರತವನ್ನ ಗೌರವದಿಂದ ಕಾಣುತ್ತಿದೆ
ಒಂದು ಕ್ಷಿಪಣಿ ಜಾಗತಿಕ ಮಾರುಕಟ್ಟೆಗಳನ್ನೇ ಅಸ್ತವ್ಯಸ್ತಗೊಳಿಸುತ್ತಿದೆ
ಒಂದು ಕ್ಷಿಪಣಿ ಜಾಗತಿಕ ಮಾರುಕಟ್ಟೆಗಳನ್ನೇ ಅಸ್ತವ್ಯಸ್ತಗೊಳಿಸುತ್ತಿದೆ
ಅಥಣಿಯಿಂದ ಶಿವಣ್ಣನ ನೋಡಲು ಬೆಂಗಳೂರಿಗೆ ಬಂದ ವಿಶೇಷ ಚೇತನ ಅಭಿಮಾನಿ
ಅಥಣಿಯಿಂದ ಶಿವಣ್ಣನ ನೋಡಲು ಬೆಂಗಳೂರಿಗೆ ಬಂದ ವಿಶೇಷ ಚೇತನ ಅಭಿಮಾನಿ
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು