AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಹನದಿಂದ ಪಂಜರಕ್ಕೆ ಸ್ಥಳಾಂತರಿಸುವ ವೇಳೆ ಕರಡಿ ಪರಾರಿ; ಬನ್ನೇರುಘಟ್ಟ ರಕ್ಷಣಾ ಕೇಂದ್ರದಲ್ಲಿ ಘಟನೆ

ಕರಡಿಯನ್ನು ವಾಹನದಿಂದ ಕೇಜ್​ಗೆ ಶಿಫ್ಟ್ ಮಾಡಲಾಗುತ್ತಿತ್ತು. ಆ ವೇಳೆ ಬೋನ್ ತಳ ಭಾಗದ ಕಬ್ಬಿಣದ ಶೀಟ್ ಮುರಿದು ಕರಡಿ ಪರಾರಿಯಾಗಿದೆ. ತಪ್ಪಿಸಿಕೊಂಡಿರುವ ಕರಡಿ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಹುಚ್ಚನ ಕೆರೆಯಲ್ಲಿ ಅಡಗಿರುವ ಸಾಧ್ಯತೆ ಅಂದಾಜಿಸಲಾಗಿದೆ.

ವಾಹನದಿಂದ ಪಂಜರಕ್ಕೆ ಸ್ಥಳಾಂತರಿಸುವ ವೇಳೆ ಕರಡಿ ಪರಾರಿ; ಬನ್ನೇರುಘಟ್ಟ ರಕ್ಷಣಾ ಕೇಂದ್ರದಲ್ಲಿ ಘಟನೆ
ಕರಡಿ ಪರಾರಿ
TV9 Web
| Edited By: |

Updated on:Apr 05, 2022 | 1:07 PM

Share

ಬೆಂಗಳೂರು: ವಾಹನದಿಂದ ಕೇಜ್​​ಗೆ ಶಿಫ್ಟ್ ಮಾಡುವ ವೇಳೆ ಬನ್ನೇರುಘಟ್ಟ ರಕ್ಷಣಾ ಕೇಂದ್ರದಿಂದ ಕರಡಿ ಪರಾರಿಯಾಗಿದೆ. ಉದ್ಯಾನವನದ ವೈದ್ಯರ ಚಾಲಕನ ಮೇಲೆ ದಾಳಿ ಮಾಡಿ ರೆಸ್ಕ್ಯೂ ಸೆಂಟರ್​ನಿಂದ 8 ವರ್ಷದ ಗಂಡು ಕರಡಿ ಪರಾರಿ‌ಯಾಗಿದೆ. ಘಟನೆಯಲ್ಲಿ ಚಾಲಕನ ಕಿವಿಗೆ ಗಂಭೀರ ಗಾಯವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಬನ್ನೇರುಘಟ್ಟದಲ್ಲಿ ಘಟನೆ ಸಂಭವಿಸಿದೆ. ತುಮಕೂರಿನಿಂದ ರಕ್ಷಣೆ ಮಾಡಿ ತರಲಾಗಿದ್ದ ಕರಡಿ ಪರಾರಿಯಾಗಿದೆ.

ಕರಡಿಯನ್ನು ವಾಹನದಿಂದ ಕೇಜ್​ಗೆ ಶಿಫ್ಟ್ ಮಾಡಲಾಗುತ್ತಿತ್ತು. ಆ ವೇಳೆ ಬೋನ್ ತಳ ಭಾಗದ ಕಬ್ಬಿಣದ ಶೀಟ್ ಮುರಿದು ಕರಡಿ ಪರಾರಿಯಾಗಿದೆ. ತಪ್ಪಿಸಿಕೊಂಡಿರುವ ಕರಡಿ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಹುಚ್ಚನ ಕೆರೆಯಲ್ಲಿ ಅಡಗಿರುವ ಸಾಧ್ಯತೆ ಅಂದಾಜಿಸಲಾಗಿದೆ. ಬನ್ನೇರುಘಟ್ಟ ಜೈವಿಕ ಉದ್ಯಾನವನ ಸಿಬ್ಬಂದಿ ಜೊತೆ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದ ಟೀಮ್ ಕರಡಿಗಾಗಿ ಶೋಧಕಾರ್ಯ ನಡೆಸುತ್ತಿದೆ. ಈ ಬಗ್ಗೆ ಬನ್ನೇರುಘಟ್ಟ ಜೈವಿಕ ಉದ್ಯಾನವನದ ಕಾರ್ಯನಿರ್ವಾಹಕ ನಿರ್ದೇಶಕಿ ವನಶ್ರೀ ಬಿಪಿನ್ ಸಿಂಗ್ ಹೇಳಿಕೆ ನೀಡಿದ್ದಾರೆ.

KARADI PARARI BEAR SEARCH

ಕರಡಿಗಾಗಿ ಶೋಧಕಾರ್ಯ

ಯೂರಿಯಾ ಮಿಶ್ರಿತ ನೀರು ಕುಡಿದು 4 ಎತ್ತು, ಒಂದು ಜಿಂಕೆ ಸಾವು ಯೂರಿಯಾ ಮಿಶ್ರಿತ ನೀರು ಕುಡಿದು 4 ಎತ್ತು ಹಾಗೂ ಒಂದು ಜಿಂಕೆ ಸಾವನ್ನಪ್ಪಿದ ದಾರುಣ ಘಟನೆ ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಆಳುಕುಳಿ ಗ್ರಾಮದ ಬಳಿ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಕಾಡು ಪ್ರಾಣಿ ಬೇಟೆಯಾಡಲು ನೀರಿಗೆ ಯೂರಿಯಾ ಮಿಶ್ರಣ ಮಾಡಲಾಗಿತ್ತು. ಕಿಡಿಗೇಡಿಗಳು ನೀರಿಗೆ ಯೂರಿಯಾ ಮಿಕ್ಸ್ ಮಾಡಿದ್ದರು. ಯೂರಿಯಾ ಮಿಶ್ರಿತ ನೀರನ್ನು ಕುಡಿದ 4 ಎತ್ತುಗಳು, ಒಂದು ಜಿಂಕೆ ಸಾವನ್ನಪ್ಪಿದೆ. ಮಾನವರ ಈ ಕೆಲಸಕ್ಕೆ ಮೂಕಪ್ರಾಣಿಗಳು ಪ್ರಾಣ ಕಳೆದುಕೊಂಡಿವೆ. ಕೋಡಿಹಳ್ಳಿ ವಲಯ ಅರಣ್ಯಾಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ಮಾಡಿ, ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಯೂರಿಯಾ ಮಿಶ್ರಿತ ನೀರು ಕುಡಿದು 4 ಎತ್ತು, ಒಂದು ಜಿಂಕೆ ಸಾವು; ಕಿಡಿಗೇಡಿಗಳ ಕೃತ್ಯಕ್ಕೆ ಮೂಕಪ್ರಾಣಿಗಳು ಬಲಿ

ಮೈಸೂರಿನಲ್ಲಿ ಬೋನಿಗೆ ಬಿತ್ತು 6 ವರ್ಷದ ಗಂಡು ಚಿರತೆ: ಅರಣ್ಯ ಇಲಾಖೆ ಕಾರ್ಯಾಚರಣೆ ಯಶಸ್ವಿ

Published On - 7:49 pm, Sun, 28 March 21

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ