Karnataka Weather Today: ಕರ್ನಾಟಕದಲ್ಲಿ ಇಂದು, ನಾಳೆ ಅಲ್ಲಲ್ಲಿ ಮಳೆ: ಬಿಹಾರ, ಸಿಕ್ಕಿಂನಲ್ಲಿ ದಟ್ಟ ಮಂಜು
ದೇಶದ ಗರಿಷ್ಠ ತಾಪಮಾನವು ಉತ್ತರ, ಮಧ್ಯ, ಪಶ್ಚಿಮ ಮತ್ತು ಪೂರ್ವ ಭಾರತದಲ್ಲಿ ಸರಾಸರಿಗಿಂತ ತಂಪಾಗಿರುತ್ತದೆ. ಉತ್ತರ ಭಾರತದಲ್ಲಿನ ಶೀತದ ತಾಪಮಾನವು ಕ್ರಮೇಣ ಕಡಿಮೆಯಾಗುವ ಸಾಧ್ಯತೆಯಿದೆ.
ಕರ್ನಾಟಕ ರಾಜ್ಯದಲ್ಲಿ ಚಳಿ ಮುಂದುವರೆದಿದ್ದು, ನಿನ್ನೆ ಹಲವೆಡೆ ಮಳೆಯಾಗಿದೆ. ಇಂದು (ಜ.17) ಮತ್ತು ನಾಳೆ ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಮಂಡ್ಯ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ತುಂತುರು ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದರೊಂದಿಗೆ ಮುಂದಿನ 3-4 ದಿನಗಳಲ್ಲಿ ಉತ್ತರ ಪ್ರದೇಶ, ಬಿಹಾರ, ಉಪ-ಹಿಮಾಲಯನ್ ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ದಟ್ಟ ಮಂಜು ಕವಿದಿರಲಿದೆ. ಇನ್ನೂ ಮೂರು ದಿನ ತಮಿಳುನಾಡು, ಪಂಜಾಬ್, ದೆಹಲಿ, ಉತ್ತರ ಪ್ರದೇಶ, ಆಂಧ್ರಪ್ರದೇಶ, ಪುದುಚೇರಿ, ಕಾರೈಕಲ್, ಕೇರಳ ಮತ್ತು ಮಾಹೆಯಲ್ಲಿ ಸಾಧಾರಣ ಮಳೆ ಬೀಳುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮುಂದಿನ ಎರಡು ದಿನಗಳಲ್ಲಿ ಪಂಜಾಬ್, ಹರಿಯಾಣ, ಚಂಡೀಗಢ ಮತ್ತು ದೆಹಲಿಯಲ್ಲಿ ಮಂಜು ಆವರಿಸಲಿದೆ. ಇದರ ಜತೆಗೆ ಇಂದು ಮತ್ತು ನಾಳೆ ಮಧ್ಯಪ್ರದೇಶ ಮತ್ತು ಪಕ್ಕದ ಪ್ರದೇಶಗಳಲ್ಲಿ ಕನಿಷ್ಠ ತಾಪಮಾನವು ಸರಾಸರಿಗಿಂತ ಸ್ವಲ್ಪ ಕಡಿಮೆ ಅಥವಾ ಸಾಮಾನ್ಯಕ್ಕಿಂತ ಕಡಿಮೆ ಇರುತ್ತದೆ. ಈ ಅವಧಿಯಲ್ಲಿ ಇತರ ಪ್ರದೇಶಗಳು ಸಾಮಾನ್ಯಕ್ಕಿಂತ ಬೆಚ್ಚಗಿರುತ್ತದೆ ಅಥವಾ ಸ್ವಲ್ಪ ಬೆಚ್ಚಗಿರುತ್ತದೆ.
ದೇಶದ 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಇನ್ನೂ ಮುಂದಿನ 3 ದಿನ ಮಳೆಯಾಗುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ. ಆಂಧ್ರಪ್ರದೇಶದಲ್ಲಿ ಜನವರಿ 17ರವರೆಗೆ ಚದುರಿದ ಲಘು ಅಥವಾ ಸಾಧಾರಣ ಮಳೆಯಾಗಲಿದೆ. ತಮಿಳುನಾಡು, ಕೇರಳ, ಆಂಧ್ರಪ್ರದೇಶದ ಮಾಹೆ ಮತ್ತು ರಾಯಲಸೀಮಾದಲ್ಲಿ ಮುಂದಿನ ನಾಲ್ಕೈದು ದಿನ ಮಳೆಯಾಗಲಿದೆ ಎಂದು ಕೇಂದ್ರದ ಹವಾಮಾನ ಇಲಾಖೆ ತಿಳಿಸಿದೆ.
ಇನ್ನು ಕೇರಳದಲ್ಲಿ ಪತ್ತನಂತಿಟ್ಟ, ಆಲಪ್ಪುಳ, ಕೊಟ್ಟಾಯಂ, ಇಡುಕ್ಕಿ, ಕೊಲ್ಲಂ ಮತ್ತು ತಿರುವನಂತಪುರಂನಂತಹ ಜಿಲ್ಲೆಗಳಲ್ಲಿ ನಾಳೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ ಎರಡು ದಿನ ಪಶ್ಚಿಮ ಹಿಮಾಲಯದ ಪ್ರದೇಶದಲ್ಲಿ ವ್ಯಾಪಕವಾದ ಹಿಮ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಹಿಮಾಲಯ, ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಗುಡುಗು ಸಹಿತ ಮಳೆಯಾಗುವ ಸಂಭವವಿದೆ.
ಗರಿಷ್ಠ ತಾಪಮಾನವು ಉತ್ತರ, ಮಧ್ಯ, ಪಶ್ಚಿಮ ಮತ್ತು ಪೂರ್ವ ಭಾರತದಲ್ಲಿ ಸರಾಸರಿಗಿಂತ ತಂಪಾಗಿರುತ್ತದೆ. ಉತ್ತರ ಭಾರತದಲ್ಲಿನ ಶೀತದ ತಾಪಮಾನವು ಕ್ರಮೇಣ ಕಡಿಮೆಯಾಗುವ ಸಾಧ್ಯತೆಯಿದೆ. ದಕ್ಷಿಣ ಭಾರತದ ಈಶಾನ್ಯ ಮತ್ತು ದಕ್ಷಿಣ ಭಾಗಗಳು ಈ ಅವಧಿಯಲ್ಲಿ ಸ್ವಲ್ಪ ಬೆಚ್ಚಗಿರುತ್ತದೆ ಅಥವಾ ಸಾಮಾನ್ಯ ಮಟ್ಟಕ್ಕೆ ಹತ್ತಿರದಲ್ಲಿದೆ ಎಂದು ನಿರೀಕ್ಷಿಸಲಾಗಿದೆ.
Karnataka Weather Today: ಕರ್ನಾಟಕದಲ್ಲಿ ಇನ್ನೆರಡು ದಿನ ತುಂತುರು ಮಳೆ; ಆಂಧ್ರ, ತಮಿಳುನಾಡಿನಲ್ಲೂ ವರುಣನ ಅಬ್ಬರ
Published On - 6:05 am, Mon, 17 January 22