Karnataka Rains: ಕರ್ನಾಟಕದ ಕರಾವಳಿ, ಮಲೆನಾಡು ಸೇರಿ ಬಹುತೇಕ ಕಡೆ ಜು.21ರವರೆಗೂ ಭಾರಿ ಮಳೆ

ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರಗಳ ಕಾಲ ಮಳೆ ಜೋರಾಗಿರಲಿದೆ. ಮಲೆನಾಡಿನಲ್ಲೂ ಮುಂಗಾರು ಚುರುಕಾಗಿದೆ. ಶಿವಮೊಗ್ಗ, ರಾಮನಗರ, ಮೈಸೂರು, ಕೋಲಾರ, ಕೊಡಗು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.ಕಿರವತ್ತಿ, ಮುಂಡಗೋಡು, ಗೋಕರ್ಣ, ಹಿರೇಕೆರೂರು, ನಾಪೋಕ್ಲು, ಜಗಳೂರು, ತೊಂಡೆಭಾವಿ, ಸೋಮವಾರಪೇಟೆ, ಬರಗೂರು, ಬಾಳೆಹೊನ್ನೂರು, ದೇವನಹಳ್ಳಿ, ಎನ್​ಆರ್​ಪುರ, ಹಗರಿಬೊಮ್ಮನಹಳ್ಳಿಯಲ್ಲಿ ಮಳೆಯಾಗಿದೆ.

Karnataka Rains: ಕರ್ನಾಟಕದ ಕರಾವಳಿ, ಮಲೆನಾಡು ಸೇರಿ ಬಹುತೇಕ ಕಡೆ ಜು.21ರವರೆಗೂ ಭಾರಿ ಮಳೆ
ಮಳೆ
Image Credit source: PTI

Updated on: Jul 15, 2025 | 7:25 AM

ಬೆಂಗಳೂರು, ಜುಲೈ 15: ಕರ್ನಾಟಕದ ಕರಾವಳಿ, ಮಲೆನಾಡು ಸೇರಿ ಬಹುತೇಕ ಕಡೆಗಳಲ್ಲಿ ಜುಲೈ 21ರವರೆಗೂ ಭಾರಿ ಮಳೆ(Rain)ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಶಿವಮೊಗ್ಗ, ರಾಮನಗರ, ಮೈಸೂರು, ಕೋಲಾರ, ಕೊಡಗು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಿತ್ರದುರ್ಗ, ದಾವಣಗೆರೆ, ಹಾಸನ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಲ್ಲೂ ಮಳೆಯಾಗಲಿದೆ.

ಕೋಟಾ, ಮಂಗಳೂರು, ಶಕ್ತಿನಗರ, ಉಡುಪಿ, ಬಂಟವಾಳ, ಸುಳ್ಯ, ಆಗುಂಬೆ, ಪುತ್ತೂರು, ಮೂಡುಬಿದಿರೆ, ಮಾಣಿ, ಮುಲ್ಕಿ, ಕಾರವಾರ, ಮಂಕಿ,ಕ್ಯಾಸಲ್​​ರಾಕ್, ಕಾರ್ಕಳ, ಧರ್ಮಸ್ಥಳ, ಸಿದ್ದಾಪುರ, ಕದ್ರಾ, ಶಿರಾಲಿ, ಬೆಳ್ತಂಗಡಿ, ಬನವಾಸಿ, ಕುಂದಾಪುರ, ಕುಮಟಾ, ಲೋಂಡಾ, ತ್ಯಾಗರ್ತಿ, ಭಾಗಮಂಡಲ, ಆನವಟ್ಟಿ, ಕಳಸ, ಕೊಪ್ಪ, ಶೃಂಗೇರಿ, ಕೊಪ್ಪ, ಹೊನ್ನಾವರ, ಯಲ್ಲಾಪುರ, ಕಿರವತ್ತಿ, ಮುಂಡಗೋಡು, ಗೋಕರ್ಣ, ಹಿರೇಕೆರೂರು, ನಾಪೋಕ್ಲು, ಜಗಳೂರು, ತೊಂಡೆಭಾವಿ, ಸೋಮವಾರಪೇಟೆ, ಬರಗೂರು, ಬಾಳೆಹೊನ್ನೂರು, ದೇವನಹಳ್ಳಿ, ಎನ್​ಆರ್​ಪುರ, ಹಗರಿಬೊಮ್ಮನಹಳ್ಳಿಯಲ್ಲಿ ಮಳೆಯಾಗಿದೆ.

ಮತ್ತಷ್ಟು ಓದಿ: Karnataka Rains: ಕರ್ನಾಟಕದಾದ್ಯಂತ ಮುಂಗಾರು ಚುರುಕು, ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​

 

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ,ಇಂದು ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಎಚ್​​ಎಎಲ್​ನಲ್ಲಿ 29.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 28.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್​​ಪೋರ್ಟ್​​ನಲ್ಲಿ 27.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 27.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಳಗಾವಿಯಲ್ಲಿ 27.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​​ನಲ್ಲಿ32.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 30.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಧಾರವಾಡದಲ್ಲಿ 28.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಗದಗದಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 33.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 28.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ,ಕೊಪ್ಪಳದಲ್ಲಿ 32.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us