ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು : ತುರ್ತು ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಕೇಂದ್ರ ಆರೋಗ್ಯ ಇಲಾಖೆ ಸೂಚನೆ

| Updated By: ವಿವೇಕ ಬಿರಾದಾರ

Updated on: Aug 06, 2022 | 3:07 PM

ಕರ್ನಾಟಕದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ರಾಜ್ಯ ಸರ್ಕಾರಕ್ಕೆ ಕೇಂದ್ರ ಆರೋಗ್ಯ ಇಲಾಖೆ ಪತ್ರ ಬರೆದಿದೆ.

ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು : ತುರ್ತು ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಕೇಂದ್ರ ಆರೋಗ್ಯ ಇಲಾಖೆ ಸೂಚನೆ
ಸಾಂಧರ್ಬಿಕ ಚಿತ್ರ
Follow us on

ಬೆಂಗಳೂರು: ರಾಜ್ಯದಲ್ಲಿ ಕೊರೊನಾ (Covid) ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ರಾಜ್ಯ ಸರ್ಕಾರಕ್ಕೆ ಕೇಂದ್ರ ಆರೋಗ್ಯ ಇಲಾಖೆ ಪತ್ರ ಬರೆದಿದೆ. ರಾಜ್ಯ ಆರೋಗ್ಯ ಇಲಾಖೆ (Health Department) ಪ್ರಧಾನ ಕಾರ್ಯದರ್ಶಿ ಟಿ.ಕೆ. ಅನಿಲ್ ಕುಮಾರ್  ಅವರಿಗೆ, ಕೇಂದ್ರ ಆರೋಗ್ಯ ಇಲಾಖೆ ಕಾರ್ಯದರ್ಶಿ ರಾಜೇಶ್ ಭೂಷಣ್  ಕಳೆದ ಒಂದು ತಿಂಗಳಿನಲ್ಲಿ ಕರ್ನಾಟಕದಲ್ಲಿ ಹೈ ಎವರೇಜ್ ಹೊಸ ಪ್ರಕರಣಗಳು ವರದಿಯಾಗಿವೆ. ದೇಶದ ವಾರದ ಹೊಸ ಪ್ರಕರಣಗಳ ಪೈಕಿ ಕರ್ನಾಟಕದಲ್ಲಿ 10.1% ವರದಿಯಾಗಿದೆ ಎಂದು ಪತ್ರದಲ್ಲಿ ಹೇಳಿದ್ದಾರೆ.

ಕರ್ನಾಟಕದಲ್ಲಿ ವಾರದ ಪಾಸಿಟಿವಿಟಿ ರೇಟ್ ನಿನ್ನೆಗೆ 6.28% ಇದೆ. ಸೋಂಕು ಹರದಡಂತೆ ತಡೆಯಲು ಕ್ರಮಗಳ ತುರ್ತು ಕ್ರಮ ಕೈಗೊಳ್ಳಿ. 24 ಜಿಲ್ಲೆಗಳಲ್ಲಿ ಸೋಂಕಿನ ಪ್ರಮಾಣ ಜಾಸ್ತಿ ಇದೆ. ಮುಂದಿನ ತಿಂಗಳುಗಳಲ್ಲಿ ಹಬ್ಬಗಳ ಕಾರಣದಿಂದ ಸಾಮೂಹಿಕ ಜನ ಸೇರುವ ಸಂಭವ ಇರುತ್ತದೆ. ಹೀಗಾಗಿ ಎಲ್ಲಾ ಜಿಲ್ಲೆಗಳಲ್ಲಿ ಸರಿಯಾದ ಟೆಸ್ಟಿಂಗ್ ಬಗ್ಗೆ ರಾಜ್ಯ ಗಮನ ಹರಿಸಬೇಕು ಎಂದು ತಿಳಿಸಿದ್ದಾರೆ.

ಹೆಚ್ಚು ಪ್ರಕರಣ ವರದಿಯಾಗುವ ಜಿಲ್ಲೆಗಳು, ಪಾಸಿಟಿವಿಟಿ ರೇಟ್, ಕ್ಲಸ್ಟರ್​ಗಳ ಮೇಲೆ ಸೂಕ್ತ ನಿಗಾ ಇಡಬೇಕು. ಐಎಲ್ಐ ಮತ್ತು ಸಾರಿ ಪ್ರಕರಣಗಳ ಮೇಲೆ ಸೂಕ್ಷ್ಮ ನಿಗಾ ಇಡಬೇಕು. ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಜೀನೋಮ್ ಸೀಕ್ವೆನ್ಸಿಂಗ್ ಅಗತ್ಯ ಪಾಲಿಸಬೇಕು ಎಂದು ಸೂಚಿಸಿದ್ದಾರೆ.

ಮಾರುಕಟ್ಟೆ, ಅಂತಾರಾಜ್ಯ ಬಸ್ ನಿಲ್ದಾಣಗಳು, ಶಾಲೆಗಳು, ಕಾಲೇಜುಗಳು, ರೈಲ್ವೇ ನಿಲ್ದಾಣಗಳು ಗಳಲ್ಲಿ ಸೂಕ್ತ ಕೋವಿಡ್ ಮಾರ್ಗಸೂಚಿ ಪಾಲನೆಯಾಗುವಂತೆ ನೋಡಿಕೊಳ್ಳಬೇಕು. ಲಸಿಕೆ ಪ್ರಮಾಣ ಹೆಚ್ಚಳದತ್ತ ಗಮನ ಇರಿಸಬೇಕು ಎಂದು ಪ್ರತದಲ್ಲಿ ಸೂಚನೆ ನಿಡಿದ್ದಾರೆ.