ಸೆ.26ರ ಬೆಂಗಳೂರು ಬಂದ್​​​ ಹಿಂಪಡೆಯಲು ಕರವೇ ಮನವಿ, ಒಂದೇ ಬಾರಿ ರಾಜ್ಯ ಬಂದ್​ಗೆ ಪ್ಲಾನ್

ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ಕರ್ನಾಟಕ ಸರ್ಕಾರದ ವಿರುದ್ಧ ರೈತರು ಹಾಗೂ ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಅಲ್ಲದೆ, ಸೆ.26 ರಂದು ಬೆಂಗಳೂರು ಬಂದ್​ಗೆ ಕರೆ ನೀಡಲಾಗಿದೆ. ಇನ್ನೊಂದೆಡೆ, ಕರ್ನಾಟಕ ಬಂದ್​ ನಡೆಸಲು ಯೋಜಿಸಲಾಗುತ್ತಿದೆ. ನಾಳೆ ವಾಟಾಳ್ ನಾಗರಾಜ್ ಅವರು ಇದರ ದಿನಾಂಕ ಘೋಷಣೆ ಮಾಡಲಿದ್ದಾರೆ.

ಸೆ.26ರ ಬೆಂಗಳೂರು ಬಂದ್​​​ ಹಿಂಪಡೆಯಲು ಕರವೇ ಮನವಿ, ಒಂದೇ ಬಾರಿ ರಾಜ್ಯ ಬಂದ್​ಗೆ ಪ್ಲಾನ್
ಕರವೇ ಅಧ್ಯಕ್ಷ ಪ್ರವೀಣ್ ಶೆಟ್ಟಿ (ಎಡಚಿತ್ರ)
Follow us
TV9 Web
| Updated By: Rakesh Nayak Manchi

Updated on: Sep 24, 2023 | 3:52 PM

ಬೆಂಗಳೂರು, ಸೆ.24: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ಕರ್ನಾಟಕ ಸರ್ಕಾರದ ವಿರುದ್ಧ ರೈತರು ಹಾಗೂ ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಅಲ್ಲದೆ, ಸೆ.26 ರಂದು ಬೆಂಗಳೂರು ಬಂದ್​ಗೆ(Bangalore Bandh) ಕರೆ ನೀಡಲಾಗಿದೆ. ಆದರೆ ಎಲ್ಲರೂ ಒಟ್ಟು ಸೇರಿ ಸರ್ಕಾರಕ್ಕೆ ಬಿಸಿ ಮುಟ್ಟಿಸುವ ನಿಟ್ಟಿನಲ್ಲಿ ಎಲ್ಲಾ ಸಂಘಟನೆಗಳು ಸೇರಿಕೊಂಡು ಕರ್ನಾಟಕ ಬಂದ್ (Karnataka Bandh) ನಡೆಸಲು ಕರ್ನಾಟಕ ರಕ್ಷಣಾ ವೇದಿಕೆ ತೀರ್ಮಾನಿಸಿದೆ. ಹೀಗಾಗಿ ಬೆಂಗಳೂರು ಬಂದ್ ಹಿಂಪಡೆಯಲು ಮನವಿ ಮಾಡಿದೆ.

ಈ ಬಗ್ಗೆ ಟಿವಿ9 ಜೊತೆ ಮಾತನಾಡಿದ ಕರವೇ ಅಧ್ಯಕ್ಷ ಪ್ರವೀಣ್ ಶೆಟ್ಟು, ಸೆ.26ರ ಬೆಂಗಳೂರು ಬಂದ್​​​ ಹಿಂಪಡೆಯುವಂತೆ ಮನವಿ ಮಾಡಿದ್ದೇವೆ. ಬೆಂಗಳೂರು ಬಂದ್​, ಕರ್ನಾಟಕ ಬಂದ್​ ಪ್ರತ್ಯೇಕವಾಗಿ ಬೇಡ ಅಂತ ಮನವಿ ಮಾಡಲಾಗಿದೆ. ಎರಡು ಬಾರಿ ಬಂದ್ ಮಾಡುವ ಬದಲು ಒಂದೇ ಬಾರಿ ರಾಜ್ಯ ಬಂದ್ ಮಾಡೋಣ. ಈ ಬಗ್ಗೆ ವಾಟಾಳ್ ನಾಗರಾಜ್ ಸೇರಿ ಎಲ್ಲ ಸಂಘಟನೆಗಳ ಜತೆ ಚರ್ಚಿಸುತ್ತೇವೆ ಎಂದರು.

ತಮಿಳುನಾಡಿಗೆ ಕಾವೇರಿ ನೀರು ಬಿಡುವ ವಿಚಾರಕ್ಕೆ ಸಂಬಂಧಿಸಿದಂತೆ ರೈತರು, ಸಂಘಟನೆಗಳು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದು, ಸೆ.26 ರಂದು ಬೆಂಗಳೂರು ಬಂದ್ ನಿಶ್ಚಿತವಾಗಿದೆ. ಬಹುತೇಕ ಸಂಘಟನೆಗಳು ಬೆಂಬಲ ಸೂಚಿಸಿವೆ.

ಇದನ್ನೂ ಓದಿ: ಸೆ.26 ರಂದು ಬೆಂಗಳೂರು ಬಂದ್​: ನಿರ್ಮಾಪಕರ ಸಂಘ ಸೇರಿದಂತೆ ಹಲವು ಸಂಘಗಳಿಂದ ಬೆಂಬಲ

ಇನ್ನೊಂದೆಡೆ, ಅಖಂಡ ಕರ್ನಾಟಕ ಬಂದ್ ನಡೆಸಲು ಒಂದಷ್ಟು ಕನ್ನಡ ಪರ ಸಂಘಟನೆಗಳು ಮುಂದಾಗಿವೆ. ವಾಟಾಳ್ ನಾಗರಾಜ್, ಸೋಮವಾರದಂದು ಬಂದ್ ದಿನಾಂಕ ಘೋಷಣೆ ಮಾಡಲಿದ್ದಾರೆ. ಸೆ. 28 ಅಥವಾ 29 ಅಥವಾ 30 ರಂದು ಅಖಂಡ ಕರ್ನಾಟಕ ಬಂದ್ ನಡೆಸುವ ಸಾಧ್ಯತೆ ಇದೆ. ಈ ಬಗ್ಗೆ ಮಾತನಾಡಿದ ವಾಟಾಳ್, 26 ರಂದು ಬಂದ್​ಗೆ ಕರೆ ನೀಡಿರುವುದಕ್ಕೆ ನನ್ನ ವಿರೋಧ ವಿಲ್ಲ. ಅವರ ಜೊತೆಗೆ ಮಾತಾಡುತ್ತೇವೆ, ಎಲ್ಲರೂ ಒಟ್ಟಿಗೆ ಸೇರಿ ಅಖಂಡ ಕರ್ನಾಟಕ ಬಂದ್ ಮಾಡೋಣ ಅಂತ ಮನವಿ ಮಾಡುವುದಾಗಿ ಹೇಳಿದ್ದರು.

ವಾಟಾಳ್​ ನಾಗರಾಜ್ ಪೊಲೀಸರ ವಶಕ್ಕೆ

ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವುದನ್ನು ಖಂಡಿಸಿ ಬೆಂಗಳೂರಿನಲ್ಲಿ ವಾಟಾಳ್ ನಾಗರಾಜ್​ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದೆ. ಮೈಸೂರು ಬ್ಯಾಂಕ್​ ಸರ್ಕಲ್​​ ಬಳಿ ಕನ್ನಡ ಒಕ್ಕೂಟದಿಂದ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸಲಾಗುತ್ತಿದೆ.

ನಾಳೆ ಮಹತ್ವದ ಸಭೆ

ಕರ್ನಾಟಕ ಬಂದ್​​ಗೆ ಕರೆ ನೀಡುವ ಸಂಬಂಧ ಬೆಂಗಳೂರಿನ ಖಾಸಗಿ ಹೊಟೇಲ್​ನಲ್ಲಿ ನಾಳೆ ಮಹತ್ವದ ಸಭೆ ನಡೆಯಲಿದೆ. ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ನಡೆಯುವ ಈ ಸಭೆಯಲ್ಲಿ ಎಲ್ಲಾ ಸಂಘಟನೆಗಳ ಜೊತೆ ಚರ್ಚಿಸಿ ಕರ್ನಾಟಕ ಬಂದ್​ ದಿನಾಂಕ ನಿಗದಿ ಮಾಡಲಾಗುತ್ತಿದೆ.

ಡಾ.ರಾಜ್‌ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ.ಗೋವಿಂದು, ಕರವೇ ರಾಜ್ಯಾಧ್ಯಕ್ಷರಾದ ಶಿವರಾಮೇಗೌಡ, ಪ್ರವೀಣ್ ಕುಮಾರ್ ಶೆಟ್ಟಿ, ವಿವಿಧ ಕನ್ನಡಪರ ಸಂಘಟನೆಗಳ ಕಾರ್ಯಕರ್ತರಿಂದ ಪ್ರತಿಭಟನೆ ನಡೆಸಲಾಗಿದ್ದು, ಪ್ರತಿಭಟನಾನಿರತ ವಾಟಾಳ್​ ನಾಗರಾಜ್, ಸಾ.ರಾ.ಗೋವಿಂದು ಸೇರಿದಂತೆ ಹಲವು ಕನ್ನಡ ಪರ ಸಂಘಟನೆಗಳ ಮುಖಂಡರನ್ನು ಪೊಲೀಸ್ ವಶಕ್ಕೆ ಪಡೆದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ