Karnataka Rains: ಕರ್ನಾಟಕದಾದ್ಯಂತ ಮುಂಗಾರು ಪೂರ್ವ ಮಳೆ ಅಬ್ಬರ ಜೋರು, ಬೆಂಗಳೂರಿಗೆ ಯೆಲ್ಲೋ ಅಲರ್ಟ್
ಕರ್ನಾಟಕದಾದ್ಯಂತ ಮಳೆಯ ಪ್ರಮಾಣ ಹೆಚ್ಚಾಗಿದೆ. ಚಂಡಮಾರುತದ ಪರಿಣಾಮ ಹಲವು ರಾಜ್ಯಗಳ ಮೇಲಾಗಿದೆ. ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಪ್ರಮಾಣದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಮತ್ತು ನಾಳೆ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು ಒಣಹವೆ ಮುಂದುವರೆಯಲಿದೆ.

ಬೆಂಗಳೂರು, ಮೇ 18: ಕರ್ನಾಟಕದಾದ್ಯಂತ ಮುಂಗಾರು ಪೂರ್ವ ಮಳೆ(Rain)ಯ ಅಬ್ಬರ ಜೋರಾಗಿದೆ. ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದರೆ ಇನ್ನೂ ಹಲವು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮೇ 19ರಿಂದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಜೋರಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮೇ 21ರಂದು ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ತುಮಕೂರು ಜಿಲ್ಲೆಗಳಲ್ಲಿ ವಿಪರೀತ ಮಳೆ ಸುರಿಯಲಿದ್ದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇಂದು ಮತ್ತು ನಾಳೆ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು ಒಣಹವೆ ಮುಂದುವರೆಯಲಿದೆ.
ಎಲ್ಲೆಲ್ಲಿ ಮಳೆಯಾಗಿದೆ? ಗುಂಡ್ಲುಪೇಟೆ, ಗುತ್ತಲ್, ಕೋಲಾರ, ಹರಪನಹಳ್ಳಿ, ಧರ್ಮಸ್ಥಳ, ಬೆಂಗಳೂರು ಎಚ್ಎಎಲ್, ಬೆಂಗಳೂರು ನಗರ, ಮಂಕಿ, ವಿಜಯಪುರ, ಬೆಳ್ಳೂರು, ನಾಗಮಂಗಲ, ಗದಗ, ಕುಮಟಾ, ಕದ್ರಾ, ಪುತ್ತೂರು, ಎಲ್ಟ್ರಾನಿಕ್ ಸಿಟಿ, ಯಗಟಿ, ಸೋಮವಾರಪೇಟೆ, ಶಿವಮೊಗ್ಗ, ಬರಗೂರು, ಹೊಸಕೋಟೆ, ಟಿಜಿ ಹಳ್ಳಿ, ದಾವಣಗೆರೆ, ಹೊಸಕೋಟೆ, ನಾಪೋಕ್ಲು, ಎಂಎಂ ಹಿಲ್ಸ್, ಮಸ್ಕಿ, ಬಾದಾಮಿ, ಅಂಕೋಲಾ, ಆನವಟ್ಟಿಯಲ್ಲಿ ಮಳೆಯಾಗಿದೆ.
ರಾಯಚೂರಿನಲ್ಲಿ 35.8 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ.ಬೆಂಗಳೂರಿನ ಎಚ್ಎಎಲ್ನಲ್ಲಿ 32.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 30.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 32.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಮತ್ತಷ್ಟು ಓದಿ: Karnataka Rain: ಕರ್ನಾಟಕ, ಕೇರಳ, ತಮಿಳುನಾಡಿನಲ್ಲಿ 5 ದಿನ ಭಾರೀ ಮಳೆ; ಬೆಂಗಳೂರಿನಲ್ಲಿ ಮೇ 22ರವರೆಗೆ ಹಳದಿ ಅಲರ್ಟ್ ಘೋಷಣೆ
ಹೊನ್ನಾವರದಲ್ಲಿ 33.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 35.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 35.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 33.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೀದರ್ನಲ್ಲಿ 35.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 34.5ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 32.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಗದಗದಲ್ಲಿ 35.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 35.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 30.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 33.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 35.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕರ್ನಾಟಕದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ








