Karnataka Rains: ಕರ್ನಾಟಕದಾದ್ಯಂತ ನಾಳೆಯಿಂದ ಕೊಂಚ ಕಡಿಮೆಯಾಗಲಿದೆ ಮಳೆಯ ಅಬ್ಬರ

ಕರ್ನಾಟಕದಲ್ಲಿ ಮಳೆಯ ಅಬ್ಬರ ಮುಂದುವರೆದಿದೆ, ಜುಲೈ 24ರಿಂದ ಮಳೆ ಸ್ವಲ್ಪ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಬೆಳಗಾವಿ, ಕಲಬುರಗಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

Karnataka Rains: ಕರ್ನಾಟಕದಾದ್ಯಂತ ನಾಳೆಯಿಂದ ಕೊಂಚ ಕಡಿಮೆಯಾಗಲಿದೆ ಮಳೆಯ ಅಬ್ಬರ
ಮಳೆ
Image Credit source: The News Minute

Updated on: Jul 23, 2024 | 7:51 AM

ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ತುಸು ಹೆಚ್ಚಿದೆ. ಆದರೆ ಜುಲೈ 24ರ ಬಳಿಕ ಕೊಂಚ ಕಡಿಮೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದ್ದು, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಕಲಬುರಗಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಹಾವೇರಿ, ಗದಗ, ಧಾರವಾಡ, ಬೀದರ್​ ಜಿಲ್ಲೆಗಳಲ್ಲಿ ಕೂಡ ಮಳೆಯಾಗಲಿದೆ.

ಕ್ಯಾಸಲ್​ರಾಕ್, ಹೊನ್ನಾವರ, ಆಗುಂಬೆ, ಸಿದ್ದಾಪುರ, ಉಡುಪಿ, ಧರ್ಮಸ್ಥಳ, ಲಿಂಗನಮಕ್ಕಿ, ಕಮ್ಮರಡಿ, ಹುಂಚದಕಟ್ಟೆ, ಕೊಟ್ಟಿಗೆಹಾರ, ಕುಂದಾಪುರ, ಕುಮಟಾ, ಲೋಂಡಾ, ಕೊಪ್ಪದಲ್ಲಿ ಭಾರಿ ಮಳೆಯಾಗಿದೆ.
ಗೋಕರ್ಣ, ಕಾರ್ಕಳ, ಕೋಟ, ಭಾಲ್ಕಿ, ಕದ್ರಾ, ಜೋಯಿಡಾ, ಬನವಾಸಿ, ಬೆಳ್ತಂಗಡಿ, ಮಂಕಿ, ಕಿರವತ್ತಿ, ಸೋಮವಾರಪೇಟೆ, ಯಲ್ಲಾಪುರ, ಅಂಕೋಲಾ, ಶಿರಾಲಿ, ನಿಪ್ಪಾಣಿ, ತ್ಯಾಗರ್ತಿ, ಹಳಿಯಾಳ, ಬಾಳೆಹೊನ್ನೂರು, ಮಂಠಾಳ, ಆನವಟ್ಟಿ, ಮುಲ್ಕಿ, ಔರಾದ್, ಪುತ್ತೂರು, ಸೇಡಬಾಳ, ಎನ್​ಆರ್​ಪುರ, ಪೊನ್ನಂಪೇಟೆ, ಕಂಪ್ಲಿ, ಅರಕಲಗೂಡು, ಸುಳ್ಯ, ಸಂಕೇಶ್ವರ, ಗೋಕಾಕ್, ಕಲಘಟಗಿ, ಚಿಂಚೋಳಿ, ಹುಕ್ಕೇರಿ, ಕುಷ್ಟಗಿ, ರಾಯಭಾಗ, ಲಕ್ಷ್ಮೇಶ್ವರ, ಕಕ್ಕೇರಿ, ಸವಣೂರು, ಕಮಲಾಪುರ, ಕುಡತಿನಿ, ಚಿಕ್ಕಮಗಳೂರು, ಭದ್ರಾವತಿ, ಸಂಡೂರು, ತರೀಕೆರೆಯಲ್ಲಿ ಕೂಡ ಮಳೆಯಾಗಿದೆ.

ಮತ್ತಷ್ಟು ಓದಿ: Karnataka Rains: ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಎಷ್ಟು ದಿನ ಮುಂದುವರೆಯುತ್ತೆ ಮಹಾಮಳೆ

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಬೆಳಗ್ಗೆಯಿಂದ ತುಂತುರು ಮಳೆ ಶುರುವಾಗಿದೆ. ಎಚ್​ಎಎಲ್​ನಲ್ಲಿ 27.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ,20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 26.2ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 28.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 27.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 25.8ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 27.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 27.9 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ27.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೆಳಗಾವಿಯಲ್ಲಿ 23.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 25.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 28.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 24.8 ಡಿಗ್ರು ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 28.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
Loading...
Unable to load recommendations.
Follow Us