AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Local Body Elections: 10 ನಗರ ಸ್ಥಳೀಯ ಸಂಸ್ಥೆಗಳ ಅರ್ಹ ಮತದಾರ ನೌಕರರಿಗೆ ಏಪ್ರಿಲ್ 27ರಂದು ವೇತನ ಸಹಿತ ರಜೆ ಘೋಷಣೆ

ಏಪ್ರಿಲ್ 27ರಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದ್ದು,  ಅಗತ್ಯ ಬಿದ್ದಲ್ಲಿ ಏಪ್ರಿಲ್ 29ರಂದು ಮರು ಮತದಾನ ನಡೆಸುವುದಾಗಿ ಚುನಾವಣಾ ಆಯೋಗ ತಿಳಿಸಿದೆ. ಏಪ್ರಿಲ್ 30ರಂದು ಮತ ಎಣಿಕೆ ನಡೆಯಲಿದೆ. 

Karnataka Local Body Elections: 10 ನಗರ ಸ್ಥಳೀಯ ಸಂಸ್ಥೆಗಳ ಅರ್ಹ ಮತದಾರ ನೌಕರರಿಗೆ ಏಪ್ರಿಲ್ 27ರಂದು ವೇತನ ಸಹಿತ ರಜೆ ಘೋಷಣೆ
ಚುನಾವಣೆ (ಪ್ರಾತಿನಿಧಿಕ ಚಿತ್ರ)
guruganesh bhat
|

Updated on:Apr 23, 2021 | 9:44 PM

Share

ಬೆಂಗಳೂರು: 10 ನಗರ ಸ್ಥಳೀಯ ಸಂಸ್ಥೆಗಳಿಗೆ ಮತದಾನ ನಡೆಯಲಿರುವ ಏಪ್ರಿಲ್ 27ರಂದು ಚುನಾವಣೆ ನಡೆಯುವ ಕ್ಷೇತ್ರಗಳ ವ್ಯಾಪ್ತಿಯಲ್ಲಿನ‌ ಸರ್ಕಾರಿ ಮತ್ತು ಖಾಸಗಿ‌ ಅರ್ಹ ಮತದಾರ ನೌಕರರಿಗೆ ವೇತನ ಸಹಿತ ರಜೆ ಘೋಷಿಸಿ ರಾಜ್ಯ ಸರ್ಕಾರದ ಆದೇಶ ಹೊರಡಿಸಿದೆ. ಏಪ್ರಿಲ್ 27ರಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದ್ದು,  ಅಗತ್ಯ ಬಿದ್ದಲ್ಲಿ ಏಪ್ರಿಲ್ 29ರಂದು ಮರು ಮತದಾನ ನಡೆಸುವುದಾಗಿ ಚುನಾವಣಾ ಆಯೋಗ ತಿಳಿಸಿದೆ. ಏಪ್ರಿಲ್ 30ರಂದು ಮತ ಎಣಿಕೆ ನಡೆಯಲಿದೆ. 

ಬಳ್ಳಾರಿ ಮಹಾನಗರ ಪಾಲಿಕೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿಜಯಪುರ, ಹಾಸನ ಜಿಲ್ಲೆಯ ಬೇಲೂರು, ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಮತ್ತು ತೀರ್ಥಹಳ್ಳಿ, ಕೊಡಗು ಜಿಲ್ಲೆಯ ಮಡಿಕೇರಿ, ರಾಮನಗರ ಜಿಲ್ಲೆಯ ರಾಮನಗರ, ಚನ್ನಪಟ್ಟಣ, ಬೀದರ್ ನಗರಸಭೆ, ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಪಟ್ಟಣ ಪಂಚಾಯತಿಗಳಿಗೆ ಸಾರ್ವತ್ರಿಕ ಚುನಾವಣೆ ಘೋಷಣೆಯಾಗಿದೆ. ಅಭ್ಯರ್ಥಿಗಳ ಚುನಾವಣಾ ವೆಚ್ಚದ ಮೇಲೆ ಚುನಾವಣಾ ಆಯೋಗ ಹದ್ದಿನ ಕಣ್ಣಿಟ್ಟಿದ್ದು, ವೆಚ್ಚದ ಮಿತಿಯನ್ನು ನಿಗದಿಗೊಳಿಸಿ ಈಗಾಗಲೇ ಆದೇಶ ಹೊರಡಿಸಿದೆ. ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮೂರು ಲಕ್ಷ ರೂ, ನಗರ ಸಭೆ ವ್ಯಾಪ್ತಿಯಲ್ಲಿ ಎರಡು ಲಕ್ಷ ರೂ, ಪುರಸಭೆ ವ್ಯಾಪ್ತಿಯಲ್ಲಿ ಸ್ಪರ್ಧಿಸಿದ ಅಭ್ಯರ್ಥಿಗಳಿಗೆ 1.50 ಲಕ್ಷ ರೂ ಮತ್ತು ಪಟ್ಟಣ ಪಂಚಾಯತಿ ಚುನಾವಣೆಗಳಿಗೆ ಸ್ಪರ್ಧಿಸಿದ ಅಬ್ಯರ್ಥಿಗಳಿಗೆ 1 ಲಕ್ಷ ರೂ ಚುನಾವಣಾ ವೆಚ್ಚ ನಿಗದಿ ಮಾಡಲಾಗಿದೆ.

ಕರ್ನಾಟಕ ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಅಬ್ಬರದ ಪ್ರಚಾರಕ್ಕೆ ರಾಜ್ಯ ಚುನಾವಣೆ ಆಯೋಗ ಬ್ರೇಕ್ ಹಾಕಿದೆ. ನಗರ ಸ್ಥಳೀಯ ಸಂಸ್ಥೆಗಳ ಸಾರ್ವತ್ರಿಕ ಹಾಗೂ ಉಪ ಚುನಾವಣೆಗಳ ದಿನಾಂಕ ಘೋಷಣೆಯಾಗಿದ್ದು ಅಭ್ಯರ್ಥಿಗಳು ಚುನಾವಣೆ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ. ಆದ್ರೆ ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಾಗಿದ್ದು ಘೋಷಣೆಯಾಗಿರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ರಾಜ್ಯ ಚುನಾವಣೆ ಆಯೋಗ ಕಠಿಣ ನಿಯಮ ಜಾರಿ ಮಾಡಿದೆ.

ರಾಜ್ಯ ಚುನಾವಣೆ ಆಯೋಗ ಜಾರಿ ಮಾಡಿದ ನಿಯಮಗಳು -ಅಭ್ಯರ್ಥಿ ಸೇರಿ ಗರಿಷ್ಠ 5 ಜನರು ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡುವ ಮೂಲಕ ಮನೆ ಮನೆಗೆ ತೆರಳಿ ಪ್ರಚಾರ ನಡೆಸಬಹುದು -ಪ್ರಚಾರಕ್ಕೆ ಯಾವುದೇ ವಾಹನಗಳನ್ನು ಬಳಸುವುದು ಹಾಗೂ ಗುಂಪು ಸೇರಿ ಚುನಾವಣೆ ಪ್ರಚಾರ ನಡೆಸುವಂತಿಲ್ಲ -ಅಭ್ಯರ್ಥಿಗಳು ಪ್ರಚಾರದ ವೇಳೆ ಕಡ್ಡಾಯವಾಗಿ ಫೇಸ್ ಮಾಸ್ಕ್ ಧರಿಸಬೇಕು -ಎಲೆಕ್ಟ್ರಾನಿಕ್ ಮೀಡಿಯಾದಲ್ಲಿ ಪ್ರಚಾರ ಕೈಗೊಳ್ಳಬಹುದು -ಅಭ್ಯರ್ಥಿಗಳು ಪ್ರಚಾರಕ್ಕಾಗಿ ನಿಯಮಾನುಸಾರ ಮುದ್ರಿಸಿದ ಕರಪತ್ರಗಳನ್ನು ಹಂಚುಬಹುದು. ಈ ವೇಳೆ ಫೇಸ್ ಮಾಸ್ಕ್ ಮತ್ತು ಕೈ ಗವಸು ಧರಿಸುವುದು ಕಡ್ಡಾಯ

ಇದನ್ನೂ ಓದಿ: Explainer: ಕೊವಿಡ್ ನಿರ್ವಹಣೆ ಕೈಪಿಡಿ, ನಿಮ್ಮ ಮನೆಯಲ್ಲಿಯೂ ಇರಲಿ ಈ ಆಪ್ತಮಿತ್ರ

Covid 19 Treatment in Bengaluru: ಬೆಂಗಳೂರಿನಲ್ಲಿ ತುರ್ತು ಕೊರೊನಾ ಆರೋಗ್ಯ ಸೇವೆಗಳಿಗಾಗಿ ಈ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಿ

(Karnataka 10 local body elections on April 27 govt and private employees get paid holidays)

Published On - 9:42 pm, Fri, 23 April 21