ರಾಜ್ಯದ ಪ್ರಮುಖ 11 ಜಲಾಶಯಗಳಲ್ಲಿ ಪ್ರಸ್ತುತ ಶೇ40 ಕ್ಕಿಂತ ಕಡಿಮೆ ನೀರು ಸಂಗ್ರಹ

ರಾಜ್ಯದಲ್ಲಿ ಸಮರ್ಪಕವಾಗಿ ಮಳೆಯಾಗದೆ ಬರಗಾಲ ಆವರಿಸಿದೆ. ಇದು ಕಳೆದ 125 ವರ್ಷಗಳಲ್ಲೇ ಅತ್ಯಂತ ಭೀಕರ ಬರಗಾಲವಾಗಿದೆ. ಕರ್ನಾಟಕದ ಜಲಾಶಯಗಳಲ್ಲಿ ನೀರಿನ ಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಿದೆ. ಮುಂಬರುವ ಬೇಸಿಗೆಯ ತಿಂಗಳುಗಳಲ್ಲಿ ಕುಡಿಯುವ ನೀರಿಗೆ ಪರದಾಡುವ ಸ್ಥಿತಿ ಉದ್ಭವಿಸುವ ಸಾಧ್ಯತೆ ಇದೆ.

ರಾಜ್ಯದ ಪ್ರಮುಖ 11 ಜಲಾಶಯಗಳಲ್ಲಿ ಪ್ರಸ್ತುತ ಶೇ40 ಕ್ಕಿಂತ ಕಡಿಮೆ ನೀರು ಸಂಗ್ರಹ
ತುಂಗಭದ್ರಾ ಡ್ಯಾಂ
Follow us
ವಿವೇಕ ಬಿರಾದಾರ
|

Updated on:Jan 15, 2024 | 7:16 AM

ಬೆಂಗಳೂರು, ಜನವರಿ 15: ರಾಜ್ಯದಲ್ಲಿ ಸಮರ್ಪಕವಾಗಿ ಮಳೆಯಾಗದೆ ಬರಗಾಲ (Drought) ಆವರಿಸಿದೆ. ಇದು ಕಳೆದ 125 ವರ್ಷಗಳಲ್ಲೇ ಅತ್ಯಂತ ಭೀಕರ ಬರಗಾಲವಾಗಿದೆ. ಕರ್ನಾಟಕದ ಜಲಾಶಯಗಳಲ್ಲಿ (Karanataka Dam) ನೀರಿನ ಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಿದೆ. ಮುಂಬರುವ ಬೇಸಿಗೆಯ ತಿಂಗಳುಗಳಲ್ಲಿ ಕುಡಿಯುವ ನೀರಿಗೆ ಪರದಾಡುವ ಸ್ಥಿತಿ ಉದ್ಭವಿಸುವ ಸಾಧ್ಯತೆ ಇದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣಾ ಕೇಂದ್ರ (KSNDMC) ಒದಗಿಸಿದ ಮಾಹಿತಿಯ ಪ್ರಕಾರ, ಕಾವೇರಿ ಮತ್ತು ಕೃಷ್ಣಾ ಜಲಾನಯನ ಪ್ರದೇಶಗಳ 11 ಪ್ರಮುಖ ಜಲಾಶಯಗಳಲ್ಲಿ ಪ್ರಸ್ತುತ ಶೇ40ಕ್ಕಿಂತ ಕಡಿಮೆ ನೀರು ಸಂಗ್ರಹವಾಗಿದೆ.

ಬೆಂಗಳೂರು ಸೇರಿದಂತೆ ಹಳೆ ಮೈಸೂರು ಭಾಗದ ಪ್ರಮುಖ ನಗರಗಳು ಮತ್ತು ಪಟ್ಟಣಗಳಿಗೆ ಕುಡಿಯುವ ನೀರು ಪೂರೈಸುವಲ್ಲಿ ಪ್ರಮುಖ ಪಾತ್ರ ವಹಿಸುವ ಹಾರಂಗಿ, ಹೇಮಾವತಿ, ಕಬಿನಿ ಮತ್ತು ಕೃಷ್ಣರಾಜ ಸಾಗರ (KRS) ನಂತಹ ಪ್ರಮುಖ ಜಲಾಶಯಗಳಲ್ಲಿ 51 ಟಿಎಂಸಿ ಮಾತ್ರ ನೀರು ಇದೆ. ಇವುಗಳ ಒಟ್ಟು ಸಾಮರ್ಥ್ಯದ ಸಂಗ್ರಹ 115 ಟಿಎಂಸಿ ಆಗಿದೆ.

ಅದೇ ರೀತಿ ಕೃಷ್ಣಾ ಜಲಾನಯನ ಪ್ರದೇಶದ ಭದ್ರಾ, ವಾಣಿ ವಿಲಾಸ, ತುಂಗಭದ್ರಾ, ಘಟಪ್ರಭಾ, ಮಲಪ್ರಭಾ, ಆಲಮಟ್ಟಿ ಮತ್ತು ನಾರಾಯಣಪುರ ಸೇರಿದಂತೆ ಏಳು ಜಲಾಶಯಗಳಲ್ಲೂ ನೀರು ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ. ಇವುಗಳ ಒಟ್ಟು ಸಾಮರ್ಥ್ಯ 422 ಟಿಎಂಸಿ ಇದ್ದು, ಇದೀಗ ಕೇವಲ 173 ಟಿಎಂಸಿ ನೀರಿದೆ. ಕಳೆದ ವರ್ಷ ಕಾವೇರಿ ಮತ್ತು ಕೃಷ್ಣಾ ಜಲಾನಯನ ಪ್ರದೇಶಗಳ ಜಲಾಶಯಗಳಲ್ಲಿ ಕ್ರಮವಾಗಿ 81 ಟಿಎಂಸಿ ನೀರಿತ್ತು. ಇನ್ನು ಭದ್ರಾ, ವಾಣಿ ವಿಲಾಸ, ತುಂಗಭದ್ರಾ, ಘಟಪ್ರಭಾ, ಮಲಪ್ರಭಾ, ಆಲಮಟ್ಟಿ ಮತ್ತು ನಾರಾಯಣಪುರ ಜಲಾಶಯಗಳಲ್ಲಿ 331 ಟಿಎಂಸಿ ಅಡಿ ನೀರು ಸಂಗ್ರಹವಾಗಿತ್ತು.

ಇದನ್ನೂ ಓದಿ: ಉತ್ತರ ಕನ್ನಡ ಜಿಲ್ಲೆಯ ಜಲಾಶಯಗಳಲ್ಲಿ ಕುಸಿದ ನೀರಿನ ಮಟ್ಟ, ವಿದ್ಯುತ್ ಉತ್ಪಾದನೆಗೆ ಹಿನ್ನಡೆ

ಕೆಎಸ್​​ಎನ್​ಡಿಎಮ್​ಎನ್​ಸಿ ಅಧಿಕಾರಿಗಳ ಪ್ರಕಾರ, ಬೇಸಿಗೆ ಕಾಲ ಸಮೀಪಿಸುತ್ತಿದ್ದಂತೆ ನೀರಿನ ಮಟ್ಟದಲ್ಲಿ ಮತ್ತಷ್ಟು ಕುಸಿತವಾಗುವ ಸಾಧ್ಯತೆ ಇದೆ. ಆವಿಯಾಗುವುದರಿಂದ ಜಲಾಶಯಗಳಲ್ಲಿ ನೀರು ಕಡಿಮೆಯಾಗುತ್ತದೆ.ಬೇಸಿಗೆಯಲ್ಲಿ ಸರಾಸರಿ ಒಂದು ಟಿಎಂಸಿ ನೀರು ಎರಡೂ (ಕಾವೇರಿ ಮತ್ತು ಕೃಷ್ಣ) ಜಲಾನಯನ ಪ್ರದೇಶಗಳಿಂದ ಆವಿಯಾಗುತ್ತದೆ ಎಂದು ಹೇಳಿದರು. ಕಳವಳಕಾರಿ ಸಂಗತಿಯೆಂದರೆ ಕೆಆರ್‌ಎಸ್ ಜಲಾಶಯವು ಬೆಂಗಳೂರಿನ ಕುಡಿಯುವ ನೀರಿನ ಮೂಲವಾಗಿದ್ದು, ಪ್ರಸ್ತುತ 19.5 ಟಿಎಂಸಿ ಅಡಿ ನೀರು ಮಾತ್ರ ಇದೆ. ಇದು ಮುಂಬರುವ ಕುಡಿಯುವ ನೀರಿನ ಬಿಕ್ಕಟ್ಟಿನ ಬಗ್ಗೆ ಆತಂಕವನ್ನು ಉಂಟುಮಾಡುತ್ತದೆ. ಆದರೆ ಈಗಿರುವ ಸಂಗ್ರಹವು ನಗರದ ಅಗತ್ಯವನ್ನು ಪೂರೈಸಲು ಸಾಕಾಗುತ್ತದೆ ಎಂದು ಅಧಿಕಾರಿಗಳು ಹೇಳಿದರು.

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಮುಖ್ಯ ಇಂಜಿನಿಯರ್ ಸುರೇಶ್ ಬಿ ಮಾತನಾಡಿ, “ಜೂನ್ ಅಂತ್ಯದವರೆಗೆ ಬೆಂಗಳೂರಿನ ಕುಡಿಯುವ ನೀರಿನ ಅಗತ್ಯವನ್ನು ಪೂರೈಸಲು ನಮಗೆ ಸುಮಾರು 12 ಟಿಎಂಸಿ ಅಡಿ ನೀರು ಬೇಕು, ಆದ್ದರಿಂದ ಈಗಿರುವ ಸಂಗ್ರಹದಿಂದ ನಾವು ಬೇಸಿಗೆಯನ್ನು ಸುಲಭವಾಗಿ ಎದುರಿಸಬಲ್ಲೆವು ಎಂದರು.

ಕೆಎಸ್‌ಎನ್‌ಎಂಡಿಸಿಯ ಸಲಹೆಗಾರ ಶ್ರೀನಿವಾಸ್ ರೆಡ್ಡಿ ಮಾತನಾಡಿ, ಮುಂದಿನ ಮಾನ್ಸೂನ್ ಆಗಮನದವರೆಗೆ ಎಲ್ಲಾ ಪ್ರಾದೇಶಿಕ ಆಯುಕ್ತರು ತಮ್ಮ ವ್ಯಾಪ್ತಿಯಲ್ಲಿರುವ ಜಲಾಶಯಗಳಲ್ಲಿ ನೀರಿನ ಸಂಗ್ರಹವನ್ನು ಮೇಲ್ವಿಚಾರಣೆ ಮಾಡಲು ಮತ್ತು ಕುಡಿಯುವ ಉದ್ದೇಶಕ್ಕೆ ಪ್ರತ್ಯೇಕವಾಗಿ ನೀರನ್ನು ಬಳಸಿಕೊಳ್ಳಲು ಸೂಚಿಸಲಾಗಿದೆ ಎಂದು ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:16 am, Mon, 15 January 24

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ