Karnataka Dam Water Level: ಮಾ.20ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ

|

Updated on: Mar 20, 2024 | 7:13 AM

ಕರ್ನಾಟಕದ ಜಲಾಶಯಗಳ ಮಾರ್ಚ 20ರ ನೀರಿನ ಮಟ್ಟ: ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಫಾ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

Karnataka Dam Water Level: ಮಾ.20ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ
ಕಬಿನಿ ಡ್ಯಾಂ
Follow us on

ರಾಜ್ಯದಲ್ಲಿ ಬೀಕರ ಬರಗಾಲ ಆವರಿಸಿದೆ. ಮುಂಗಾರು ಮತ್ತು ಹಿಂಗಾರು ಮಳೆ ಆಗದ ಪರಿಣಾಮ ಜಲ ಮೂಲಗಳು ಬತ್ತುತ್ತಿವೆ. ರಾಜ್ಯದ ಪ್ರಮುಖ ಜಲಾಶಯಗಳಲ್ಲಿನ ನೀರು ದಿನದಿಂದ ದಿನಕ್ಕೆ ಕಡಿಮೆಯಾಗುತ್ತಾ ಬರುತ್ತಿದೆ. ಈ ಪರಿಸ್ಥಿತಿ ಹೀಗೆ ಮುಂದುವರೆದರೆ ಮುಂದಿನ ದಿನಗಳಲ್ಲಿ ಸಾಕಷ್ಟು ತೊಂದರೆಯಾಗಲಿದೆ. ಹಾಗಾದರೆ ಕೆಆರ್​ಎಸ್​ ಸೇರಿದಂತೆ ರಾಜ್ಯದ ಪ್ರಮುಖ ಜಲಾಶಯಗಳಾದ ಆಲಮಟ್ಟಿ, ಭದ್ರಾ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ 12 ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಮಾರ್ಚ್ ​20 ರಂದು ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.60 123.08 41.97 43.45 300 1864
ತುಂಗಭದ್ರಾ ಜಲಾಶಯ (Tungabhadra Dam) 497.71 105.79 5.78 15.56 0 859
ಮಲಪ್ರಭಾ ಜಲಾಶಯ (Malaprabha Dam) 633.80 37.73 10.88 12.85 0 194
ಕೆ.ಆರ್.ಎಸ್ (KRS Dam) 38.04 49.45 14.48 24.72 132 747
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 33.45 55.72 83 3151
ಕಬಿನಿ ಜಲಾಶಯ (Kabini Dam) 696.13 19.52 10.34 07.92 64 500
ಭದ್ರಾ ಜಲಾಶಯ (Bhadra Dam) 657.73 71.54 24.63 44.94 154 628
ಘಟಪ್ರಭಾ ಜಲಾಶಯ (Ghataprabha Dam) 662.91 51.00 25.97 16.12 0 106
ಹೇಮಾವತಿ ಜಲಾಶಯ (Hemavathi Dam) 890.58 37.10 11.78 20.57 36 2010
ವರಾಹಿ ಜಲಾಶಯ (Varahi Dam) 594.36 31.10 6.93 7.70 0 0
ಹಾರಂಗಿ ಜಲಾಶಯ (Harangi Dam)​​ 871.38 8.50 3.32 3.19 195 200
ಸೂಫಾ (Supa Dam) 564.00 145.33 53.00 70.51 179 1871

ರಾಯಚೂರು ಜಿಲ್ಲೆಯ ಹಡಗನಹಾಳ್ ಹೋಬಳಿಯಲ್ಲಿ ಮಾರ್ಚ್​ 19 ರಂದು ಅತ್ಯಧಿಕ 42.1°C ತಾಪಮಾನ ದಾಖಲಾಗಿತ್ತು. ರಾಯಚೂರು, ಬಳ್ಳಾರಿ ಮತ್ತು ಕೊಪ್ಪಳ ಜಿಲ್ಲೆಯ ಕೆಲವು ಸ್ಥಳಗಳಲ್ಲಿ ನಿನ್ನೆ 40°C ನಿಂದ 42.1°C ನಡುವೆ ಗರಿಷ್ಠ ತಾಪಮಾನ ದಾಖಲಾಗಿತ್ತು. ಮಂಗಳವಾರ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ವಾಡಿಕೆಗಿಂತಾ (1.6°C to 3.0°C) ನಷ್ಟು ಅಧಿಕ ತಾಪಮಾನವು ದಾಖಲಾಗಿತ್ತು. ಉಳಿದ ಭಾಗಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯವಾಗಿದೆ.

ಮುಂದಿನ 48 ಗಂಟೆಗಳ ತಾಪಮಾನದ ಮುನ್ಸೂಚನೆ:

ರಾಜ್ಯದ ಒಳನಾಡಿನ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗರಿಷ್ಠ ತಾಪಮಾನವು ವಾಡಿಕೆಗಿಂತ 2 ರಿಂದ 3°C ವರೆಗೆ ಹೆಚ್ಚು ಇರುವ ಸಾಧ್ಯತೆಯಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ