AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಮವಾರದಿಂದ ಕರ್ನಾಟಕ ವಿಧಾನಮಂಡಲ ಜಂಟಿ ಅಧಿವೇಶನ ಆರಂಭ, ರಾಜ್ಯಪಾಲರ ಸ್ವಾಗತಕ್ಕೆ ಸಿದ್ಧತೆ

ಅಧಿವೇಶನದಲ್ಲಿ ಎರಡು ವಿಧೇಯಕಗಳು ಮಂಡನೆಯಾಗಲಿವೆ. ಜೊತೆಗೆ ಇನ್ನೂ ಕೆಲ ವಿಧೇಯಕಗಳ ಮಂಡನೆಗೆ ಸರ್ಕಾರದ ವತಿಯಿಂದ ಸಿದ್ಧತೆ ನಡೆದಿದೆ. ಸುಮಾರು 2,000 ಕ್ಕೂ ಹೆಚ್ಚು ಪ್ರಶ್ನೆಗಳು ಸರ್ಕಾರದಿಂದ ಉತ್ತರ ಬಯಸಿ ಬಂದಿವೆ. ಅಧಿವೇಶನ ವೀಕ್ಷಿಸಲು ಈ ಬಾರಿ ಸಾರ್ವಜನಿಕರಿಗೂ ಅವಕಾಶ ಕಲ್ಪಿಸಲಾಗಿದೆ.

ಸೋಮವಾರದಿಂದ ಕರ್ನಾಟಕ ವಿಧಾನಮಂಡಲ ಜಂಟಿ ಅಧಿವೇಶನ ಆರಂಭ, ರಾಜ್ಯಪಾಲರ ಸ್ವಾಗತಕ್ಕೆ ಸಿದ್ಧತೆ
ಸೋಮವಾರದಿಂದ ಕರ್ನಾಟಕ ವಿಧಾನಮಂಡಲ ಜಂಟಿ ಅಧಿವೇಶನ ಆರಂಭ, ರಾಜ್ಯಪಾಲರ ಸ್ವಾಗತಕ್ಕೆ ಸಿದ್ಧತೆ
TV9 Web
| Updated By: ಸಾಧು ಶ್ರೀನಾಥ್​|

Updated on:Feb 12, 2022 | 1:39 PM

Share

ಬೆಂಗಳೂರು: ಕರ್ನಾಟಕ ರಾಜ್ಯ ವಿಧಾನಮಂಡಲ ಜಂಟಿ ಅಧಿವೇಶನ (karnataka legislature joint session) ಸೋಮವಾರದಿಂದ ಫೆಬ್ರವರಿ 14ರಿಂದ ಆರಂಭವಾಗಲಿದೆ. ರಾಜ್ಯಪಾಲರ ಸ್ವಾಗತಕ್ಕೆ ಪೊಲೀಸ್ ಬ್ಯಾಂಡ್, ಅಶ್ವ ದಳದಿಂದ ತಾಲೀಮು ಸಹ ನಡೆದಿದೆ. ಕರ್ನಾಟಕದ 19ನೇ ರಾಜ್ಯಪಾಲದರಾದ ಥಾವರ್ ಚಂದ್ ಗೆಹ್ಲೋಟ್ (Thaawar Chand Gehlot) ಜಂಟಿ ಅಧಿವೇಶನವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜಭವನದಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಿದ ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಮತ್ತು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರುಗಳು ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡುವಂತೆ ಆಹ್ವಾನಿಸಿದರು.

ಸೋಮವಾರದಿಂದ ವಿಧಾನಮಂಡಲ ಅಧಿವೇಶನ ಆರಂಭವಾಗಲಿದೆ. ಈವರೆಗೆ 2 ವಿಧೇಯಕಗಳು ನನ್ನ ಕಚೇರಿಗೆ ಬಂದಿವೆ. ಕರ್ನಾಟಕ ಕ್ರಿಮಿನಲ್ ತಿದ್ದುಪಡಿ ವಿಧೇಯಕ ಮತ್ತು ಕರ್ನಾಟಕ ಸ್ಟ್ಯಾಂಪ್ ವಿಧೇಯಕ ನನ್ನ ಕಚೇರಿಗೆ ಬಂದಿದೆ. ಇಲ್ಲಿಯವರೆಗೆ 2 ಸಾವಿರಕ್ಕೂ ಹೆಚ್ಚು ಪ್ರಶ್ನೆಗಳು ಬಂದಿವೆ. ಕೊವಿಡ್ ನಿಯಮದಂತೆ ಜಂಟಿ ಅಧಿವೇಶನ ನಡೆಯಲಿದೆ ಎಂದು ವಿಧಾನಸೌಧದಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.

15ನೇ ಅಸೆಂಬ್ಲಿ ಚಾಲ್ತಿಯಲ್ಲಿದ್ದು, 12ನೇ ಅಧಿವೇಶನ ಇದಾಗಿದೆ. ಸೋಮವಾರದಿಂದ 10 ದಿನಗಳ ಕಾಲ (ಫೆಬ್ರವರಿ 25ವರೆಗೂ) ನಡೆಯಲಿರುವ ಜಂಟಿ ಅಧಿವೇಶನದ ಅಂಗವಾಗಿ ವಿಧಾನಸೌಧದಲ್ಲಿ ಸಿದ್ಧತಾ ಕಾರ್ಯ ನಡೆದಿದೆ. ವಿಧಾನಸೌಧದ ಮೊಗಸಾಲೆಯನ್ನು ಸಿಬ್ಬಂದಿ ಸ್ವಚ್ಛಗೊಳಿಸುತ್ತಿದ್ದಾರೆ. ಕೊವಿಡ್ ಮಾರ್ಗಸೂಚಿ ಕಟ್ಟುನಿಟ್ಟಾಗಿ ಪಾಲಿಸಲು ಆದ್ಯತೆ ನೀಡಲಾಗಿದೆ.

ಅಧಿವೇಶನದಲ್ಲಿ ಎರಡು ವಿಧೇಯಕಗಳು ಮಂಡನೆಯಾಗಲಿವೆ. ಜೊತೆಗೆ ಇನ್ನೂ ಕೆಲ ವಿಧೇಯಕಗಳ ಮಂಡನೆಗೆ ಸರ್ಕಾರದ ವತಿಯಿಂದ ಸಿದ್ಧತೆ ನಡೆದಿದೆ. ಸುಮಾರು 2,000 ಕ್ಕೂ ಹೆಚ್ಚು ಪ್ರಶ್ನೆಗಳು ಸರ್ಕಾರದಿಂದ ಉತ್ತರ ಬಯಸಿ ಬಂದಿವೆ. ಅಧಿವೇಶನ ವೀಕ್ಷಿಸಲು ಈ ಬಾರಿ ಸಾರ್ವಜನಿಕರಿಗೂ ಅವಕಾಶ ಕಲ್ಪಿಸಲಾಗಿದೆ.

12ನೇ ಅಧಿವೇಶನ ಮುಗಿದ ಬಳಿಕ ಬಜೆಟ್​ ಅಧಿವೇಶನ ಮಾರ್ಚ್ ಮೊದಲ ವಾರದಲ್ಲಿ ನಡೆಯಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಚೊಚ್ಚಲ ಬಜೆಟ್​ ಅನ್ನು ಮಾರ್ಚ್​ ಮೊದಲ ವಾರದಲ್ಲಿ ಮಂಡಿಸಲಿದ್ದಾರೆ. 2023 ಸಾರ್ವತ್ರಿಕ ಚುನಾವಣೆಗೂ ಮುನ್ನ ಆಡಳಿತಾರೂಢ ಬಿಜೆಪಿ ಸರಕಾರದ ಕೊನೆಯ ಬಜೆಟ್​ ಇದಾಗಲಿದೆ. Also Read: ಸಿಡಿ ಪ್ರಕರಣ ಕೈಜಾರುವ ಆತಂಕ -ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಬಾಧಿತ ಯುವತಿ, ಶಾಸಕ ರಮೇಶ್ ಜಾರಕಿಹೊಳಿಗೆ ಮತ್ತೆ ಸಂಕಷ್ಟ Also Read: Hijab row: ಬೆಂಗಳೂರು ನಗರಕ್ಕೂ ಲಗ್ಗೆಯಿಟ್ಟ ಹಿಜಾಬ್​ ಫೈಟ್? ವಿದ್ಯಾಸಾಗರ್ ಶಾಲೆಯಲ್ಲಿ ಸಂಘರ್ಷ, ಶಿಕ್ಷಕಿ ಕೆಲಸದಿಂದ ವಜಾ

Published On - 1:28 pm, Sat, 12 February 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ