ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 16 ಐಎಎಸ್ ಅಧಿಕಾರಿಗಳ ವರ್ಗಾವಣೆ
ಕರ್ನಾಟಕ ಸರ್ಕಾರವು 16 ಐಎಎಸ್ ಅಧಿಕಾರಿಗಳನ್ನು ವರ್ಗಾಯಿಸಿದೆ. ಜಾನಕಿ ಕೆ.ಎಂ ಅವರನ್ನು ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿಯಾಗಿ, ಸತ್ಯಭಾಮಾ ಅವರನ್ನು ಸಮಗ್ರ ಶಿಕ್ಷಣ ಅಭಿಯಾನದ ರಾಜ್ಯ ಯೋಜನಾ ನಿರ್ದೇಶಕಿಯಾಗಿ ನೇಮಿಸಲಾಗಿದೆ. ಈ ಮೂಲಕ ರಾಜ್ಯ ಸರ್ಕಾರ ಆಡಳಿತ ಯಂತ್ರದಲ್ಲಿ ಮೇಜರ್ ಸರ್ಜರಿ ಮಾಡಿದೆ.
ಬೆಂಗಳೂರು, ಜೂನ್ 17: ಐಎಎಸ್ (IAS) ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಶಾಕ್ ನೀಡಿದೆ. 16 ಜನ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ (Karnataka Government) ಆದೇಶ ಹೊರಡಿಸಿದೆ. ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿಯಾಗಿ ಜಾನಕಿ ಕೆ ಎಂ ಅವರನ್ನು ವರ್ಗಾವಣೆ ಮಾಡಲಾಗಿದೆ. ಹಾಸನ ಜಿಲ್ಲಾಧಿಕಾರಿಯಾಗಿದ್ದ ಸತ್ಯಭಾಮಾ ಅವರನ್ನು ಸಮಗ್ರ ಶಿಕ್ಷಣ ಅಭಿಯಾನ ರಾಜ್ಯ ಯೋಜನಾ ನಿರ್ದೇಶಕಿಯಾಗಿ ವರ್ಗಾವಣೆ ಮಾಡಲಾಗಿದೆ.
ಎಲ್ಲಿಂದ ಎಲ್ಲಿಗೆ ವರ್ಗ
ಬಾಗಲಕೋಟೆ ಜಿಲ್ಲಾಧಿಕಾರಿಯಾಗಿದ್ದ ಜಾನಕಿ ಕೆ.ಎಂ ಅವರು ರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿಯಾಗಿ ವರ್ಗ
ಹಾಸನ ಜಿಲ್ಲಾಧಿಕಾರಿಯಾಗಿದ್ದ ಸತ್ಯಭಾಮಾ ಅವರು ಸಮಗ್ರ ಶಿಕ್ಷಣ ಅಭಿಯಾನ ರಾಜ್ಯ ಯೋಜನಾ ನಿರ್ದೇಶಕಿಯಾಗಿ ವರ್ಗ
ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿದ್ದ ಲತಾ ಕುಮಾರಿ ಅವರು ಹಾಸನ ಜಿಲ್ಲಾಧಿಕಾರಿಯಾಗಿ ವರ್ಗ
ಆರ್‌ಡಿಪಿಆರ್ ಇ ಆಡಳಿತದ ನಿರ್ದೇಶಕರಾಗಿದ್ದ ಸ್ವರೂಪ ಟಿಕೆ ಅವರು ಉಡುಪಿ ಜಿಲ್ಲಾಧಿಕಾರಿಯಾಗಿ ವರ್ಗ
ಬಿಬಿಎಂಪಿಯ ವಿಶೇಷ ಆಯುಕ್ತರಾಗಿದ್ದ ಅವಿನಾಶ್ ಮೆನನ್ ರಾಜೇಂದ್ರ ಅವರು ರಾಷ್ಟ್ರೀಯ ಆರೋಗ್ಯ ಮಿಷನ್ ಮತ್ತು ಆರೋಗ್ಯ ನಿರ್ದೇಶನಾಲಯದ ಮಿಷನ್ ನಿರ್ದೇಶಕರಾಗಿ ವರ್ಗ
ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಮುಲ್ಲೈ ಮುಘಲನ್ ಅವರು ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಐಜಿಯಾಗಿ ನೇಮಕ
ಕೊಪ್ಪಳ ಜಿಲ್ಲಾಧಿಕಾರಿಯಾಗಿದ್ದ ನಳಿನಿ ಅತುಲ್- ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಕಾರ್ಯದರ್ಶಿಯಾಗಿ ನೇಮಕ
ವಾಣಿಜ್ಯ ತೆರಿಗೆಗಳ (ಸೇವಾ ವಿಶ್ಲೇಷಣಾ ವಿಭಾಗ) ಹೆಚ್ಚುವರಿ ಆಯುಕ್ತರಾಗಿದ್ದ ದರ್ಶನ್ ಹೆಚ್ ವಿ ಅವರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ವರ್ಗ
ಬಾಗಲಕೋಟೆ ಜಿಲ್ಲಾಧಿಕಾರಿಯಾಗಿ ಐಎಎಸ್ ಅಧಿಕಾರಿ ಸಂಗಪ್ಪ ನೇಮಕ
ದಾವಣಗೆರೆ ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿದ್ದ ಸುರೇಶ್ ಬಿ ಇಟ್ನಾಳ್ ಅವರು ಕೊಪ್ಪಳ ಜಿಲ್ಲಾಧಿಕಾರಿಯಾಗಿ ವರ್ಗ
ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ನವೀನ್ ಭಟ್ ನೇಮಕ
ಕೊಪ್ಪಳ ಡಿಸಿ ನಳಿನಿ ಅತುಲ್ ವರ್ಗಾವಣೆ
ಕೈಮಗ್ಗ ಅಭಿವೃದ್ಧಿ ನಿಗಮ ವ್ಯವಸ್ಥಾಪಕ ನಿರ್ದೇಶಕರಾಗಿ ಗರಿಮಾ ಪನ್ವರ್ ನೇಮಕ
ಸ್ಮಾರ್ಟ್ ಗವರ್ನೆನ್ಸ್ ಕಾರ್ಯನಿರ್ವಾಹಕ ನಿರ್ದೇಶಕರಾಗಿ ರಾಹುಲ್ ರತ್ನಂ ಪಾಂಡೆ ನೇಮಕ
ಮಧ್ಯಾಹ್ನ ಬಿಸಿ ಊಟದ ಸಾರ್ವಜನಿಕ ಶಿಕ್ಷಣ ನಿರ್ದೇಶಕರಾಗಿ ಪ್ರಕಾಶ್ ಜಿ ಟಿ ನಿಟ್ಟಾಲಿ ವರ್ಗ
ಕೊಪ್ಪಳ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ವರ್ಣಿತ ನೇಗಿ ವರ್ಗ
ದಾವಣಗೆರೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಗೆಟ್ಟಿ ಮಹಾದೇವ ವಿಠಲ್ ರಾವ್ ಅವರನ್ನು ನೇಮಕ ಮಾಡಲಾಗಿದೆ.