AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BPL cards: 21 ಸಾವಿರ ಸರ್ಕಾರಿ ನೌಕರರ ಬಳಿ ಬಿಪಿಎಲ್ ಕಾರ್ಡ್​​; 11 ಕೋಟಿ ದಂಡ ಸಂಗ್ರಹ

ಕರ್ನಾಟಕ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯು 4.6 ಲಕ್ಷ ನಕಲಿ ಬಿಪಿಎಲ್ ಕಾರ್ಡ್ ಹೊಂದಿರುವವರಿಂದ 13.5 ಕೋಟಿ ರೂಪಾಯಿ ದಂಡವನ್ನು ಸಂಗ್ರಹಿಸಿದೆ.

BPL cards: 21 ಸಾವಿರ ಸರ್ಕಾರಿ ನೌಕರರ ಬಳಿ ಬಿಪಿಎಲ್ ಕಾರ್ಡ್​​; 11 ಕೋಟಿ ದಂಡ ಸಂಗ್ರಹ
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on: May 31, 2023 | 6:27 PM

Share

ಮುಖ್ಯಾಂಶಗಳು

  • ಭಾರೀ ಅವ್ಯವಹಾರ ಪತ್ತೆಹಚ್ಚಿದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ
  • ಬರೋಬ್ಬರಿ 11.2 ಕೋಟಿ ರೂ. ದಂಡ ಸಂಗ್ರಹ
  • 12,583 ಬಿಪಿಎಲ್ ಫಲಾನುಭವಿಗಳ ಬಳಿ ಐಷಾರಾಮಿ 4 ಚಕ್ರ ವಾಹನಗಳು

ಬೆಂಗಳೂರು: ಕರ್ನಾಟಕ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯು (Food and Civil Supplies and Consumer Affairs Department) 4.6 ಲಕ್ಷ ನಕಲಿ ಬಿಪಿಎಲ್ ಕಾರ್ಡ್ (BPL cards) ಹೊಂದಿರುವವರಿಂದ 13.5 ಕೋಟಿ ರೂಪಾಯಿ ದಂಡವನ್ನು ಸಂಗ್ರಹಿಸಿದೆ. ವಿಪರ್ಯಾಸವೆಂದರೆ 21,232 ಸರ್ಕಾರಿ ನೌಕರರೇ (Karnataka Government Employees) ಬಿಪಿಎಲ್ ಕಾರ್ಡ್ ಪಡೆದಿದ್ದರು ಎಂಬುದು ಬೆಳಕಿಗೆ ಬಂದಿದ್ದು, ಅವರಿಂದ 11.2 ಕೋಟಿ ರೂ. ದಂಡ ಸಂಗ್ರಹಿಸಲಾಗಿದೆ. ನಕಲಿ ಬಿಪಿಎಲ್​ ಕಾರ್ಡ್​​​ ಹೊಂದಿರುವವರ ವಿರುದ್ಧ 2021ರ ಫೆಬ್ರವರಿ ತಿಂಗಳಿನಿಂದಲೇ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿತ್ತು. ಈಗಲೂ ಕಾರ್ಯಾಚರಣೆ ಮುಂದುವರಿಸಲಾಗಿದ್ದು, ಆಧಾರ್ ಸಂಖ್ಯೆಗಳನ್ನು ಬಳಸಿಕೊಂಡು ವಿವಿಧ ಇಲಾಖೆಗಳಿಂದ ಅಂತಹ ಅನರ್ಹ ಫಲಾನುಭವಿಗಳ ಡೇಟಾವನ್ನು ಸಂಗ್ರಹಿಸಲಾಗುತ್ತಿದೆ ಎಂದು ಹೆಚ್ಚುವರಿ ನಿರ್ದೇಶಕ (ವಿಜಿಲೆನ್ಸ್ ಮತ್ತು ಸಾರ್ವಜನಿಕ ವಿತರಣೆ) ಜ್ಞಾನೇಂದ್ರ ಕುಮಾರ್ ಗಂಗ್ವಾರ್ ಮಾಹಿತಿ ನೀಡಿರುವುದಾಗಿ ವರದಿಯಾಗಿದೆ.

ಕಾರ್ಯಾಚರಣೆಗೆ ಸಾರಿಗೆ ಇಲಾಖೆಯಿಂದಲೂ ಸಹಾಯವನ್ನು ಕೋರಿದ್ದೇವೆ. 12,583 ಬಿಪಿಎಲ್ ಫಲಾನುಭವಿಗಳು ಐಷಾರಾಮಿ 4 ಚಕ್ರ ವಾಹನಗಳನ್ನು ಹೊಂದಿರುವುದು ತಿಳಿದುಬಂದಿದೆ. ಮೂರು ಹೆಕ್ಟೇರ್‌ಗಿಂತ ಹೆಚ್ಚು ಕೃಷಿ ಭೂಮಿ ಹೊಂದಿರುವ 2.9 ಲಕ್ಷ ರೈತರು ಸಹ ಬಿಪಿಎಲ್ ಕಾರ್ಡ್‌ಗಳನ್ನು ಪಡೆದಿರುವುದನ್ನು ನಾವು ಕಂಡುಕೊಂಡಿದ್ದೇವೆ. ನಮ್ಮ ಅಧಿಕಾರಿಗಳು 2,679 ಅನರ್ಹ ಫಲಾನುಭವಿಗಳನ್ನು ಪತ್ತೆಹಚ್ಚಿದ್ದಾರೆ. ವಾರ್ಷಿಕ 1.2 ಲಕ್ಷ ರೂ.ಗಿಂತ ಹೆಚ್ಚು ಆದಾಯ ಹೊಂದಿರುವ 50,000 ಜನರನ್ನು ಆದಾಯ ತೆರಿಗೆ ಇಲಾಖೆಯ ದತ್ತಾಂಶಗಳಿಂದ ನಾವು ಪತ್ತೆಹಚ್ಚಿದ್ದೇವೆ ಎಂದು ಅವರು ಹೇಳಿದ್ದಾರೆ.

ಸರ್ಕಾರಿ ನೌಕರರನ್ನು ಶಿಕ್ಷಿಸಲು ಕೇವಲ ದಂಡ ವಿಧಿಸುವುದಷ್ಟೇ ಸಾಕೇ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಇದು ಮೊದಲ ನಿದರ್ಶನವಾಗಿರುವುದರಿಂದ ಹಾಗೆ ಮಾಡಲಾಗಿದೆ. ಭಾರೀ ದಂಡ ವಿಧಿಸಿದ ನಂತರವಷ್ಟೇ ಅವರನ್ನು ಕ್ಷಮಿಸಲಾಗಿದೆ ಎಂದು ಹೇಳಿದ್ದಾರೆ. ಅಂತಹ 21,232 ನೌಕರರ ಪೈಕಿ 17,521 ಮಂದಿ ಈಗಾಗಲೇ ತಮ್ಮ ಪಡಿತರ ಚೀಟಿಯನ್ನು ಎಪಿಎಲ್ ವರ್ಗಕ್ಕೆ ಪರಿವರ್ತಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಬಿಪಿಎಲ್ ಕಾರ್ಡ್​ಗೆ ಫುಲ್​ ಡಿಮ್ಯಾಂಡ್: ಕಾಂಗ್ರೆಸ್​ನ ಗ್ಯಾರಂಟಿ ಯೋಜನೆಗಳ ಲಾಭ​ ಪಡೆಯಲು ಮುಂದಾದ ಜನ

ದಂಡವನ್ನು ವಿಧಿಸುವಾಗ, ನಾವು ಅವರ ಆರ್ಥಿಕ ಸ್ಥಿತಿಯನ್ನು ಪರಿಗಣಿಸಿದ್ದೇವೆ. ಸರ್ಕಾರಿ ನೌಕರರು, ಸಿಬ್ಬಂದಿಗೆ ಭಾರೀ ಮೊತ್ತದ ದಂಡ ವಿಧಿಸಲಾಗುತ್ತದೆ ಎಂದು ಅವರು ಹೇಳಿರುವುದಾಗಿ ವರದಿ ಉಲ್ಲೇಖಿಸಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More